Shaikh BigTv
September 12, 2024
Breaking News, ಧಾರವಾಡ
ಧಾರವಾಡ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರು, ಸಂಘಟನೆ ಮತ್ತು ವಿಶೇಷ ಶಾಲೆಗಳ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಜಿದಾರರು ಅಕ್ಟೋಬರ್ 15, 2024 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2744474 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
Shaikh BigTv
September 12, 2024
Breaking News, ಧಾರವಾಡ
ಧಾರವಾಡ :ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ದಲ್ಲಿ ಇಂದಿರಾ ಕ್ಯಾಂಟೀನ್ ಹೊಸ ದರ …
Read More »
Shaikh BigTv
September 12, 2024
Breaking News, ಧಾರವಾಡ
ಧಾರವಾಡ: ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಪುತ್ರ ಕರಣ್ ಲಾಡ್ ಅವರು ತಮ್ಮ 17ನೇ ವಯಸ್ಸಿನಲ್ಲೇ ‘ಎ ಗ್ಲಿಚ್ ಇನ್ ದಿ ಸಿಮ್ಯುಲೇಷನ್’ ಎಂಬ ಪುಸ್ತಕವನ್ನು ಬರೆದಿದ್ದಾರೆ. ಈಗ ಈ ಪುಸ್ತಕವನ್ನು ‘ಪ್ರತ್ಯನುಕರಣೆಯ ನ್ಯೂನತೆಗಳು’ ಎಂಬ ಹೆಸರಿನಲ್ಲಿ ಅನುವಾದ ಮಾಡಲಾಗಿದ್ದು, ಅನುವಾದಿತ ಈ ಪುಸ್ತಕವನ್ನು ಧಾರವಾಡದಲ್ಲಿ ಬಿಡುಗಡೆ ಮಾಡಲಾಯಿತು. ಧಾರವಾಡದ ಸೃಜನಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ಅವರು …
Read More »
Shaikh BigTv
September 12, 2024
Breaking News, ಧಾರವಾಡ
ಧಾರವಾಡ: ಜಾರಕಿಹೊಳಿ ಅವರು ಹಾಗೂ ನಾನು ಭೇಟಿಯಾಗಿ ಕೇವಲ ಕಾಫಿ ಕುಡಿದಿದ್ದೇವೆ. ಹೈಕೋರ್ಟ್ ಕಾರ್ಯಕ್ರಮಕ್ಕೆ ಜಾರಕಿಹೊಳಿ ಅವರು ಬಂದಿದ್ದರು. ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಅವರು ಹೊರಟಿದ್ದರು. ಈ ವೇಳೆ ಧಾರವಾಡದಲ್ಲಿ ಭೇಟಿಯಾಗಿ ಕಾಫಿ ಕುಡಿದಿದ್ದೇವೆ. ರಾಜಕೀಯ ಏನಾದರೂ ಇದ್ದರೆ ಬಹಿರಂಗವಾಗಿಯೇ ನಾನು ಮಾತನಾಡುತ್ತೇನೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಸಚಿವ ಸತೀಶ್ ಜಾರಕಿಹೊಳಿ ಅವರು ಧಾರವಾಡದಲ್ಲಿ ಭೇಟಿ ಮಾಡಿದ ವಿಚಾರಕ್ಕೆ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ, ನಮ್ಮ ಅವರ …
Read More »
Shaikh BigTv
September 12, 2024
Breaking News, ಧಾರವಾಡ
ಧಾರವಾಡ: ಧಾರವಾಡದ ಸೂಪರ್ ಮಾರುಕಟ್ಟೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಮಾರುಕಟ್ಟೆಯಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ವೇಳೆ ಅಲ್ಲಿನ ವ್ಯಾಪಾರಿಗಳಿಂದ ಸಚಿವರು ಅಹವಾಲುಗಳನ್ನು ಸ್ವೀಕರಿಸಿದರು. ಮಾರುಕಟ್ಟೆಯನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಶೆಡ್‌ನ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ವ್ಯಾಪಾರಿಗಳಿಗೆ ಭರವಸೆ ನೀಡಿದರು. ಮಾರುಕಟ್ಟೆಯಲ್ಲಿ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗುವುದು. ಶೌಚಾಲಯವನ್ನೂ ಡಿಸೆಂಬರ್ ಒಳಗೆ ವ್ಯಾಪಾರಿಗಳಿಗೆ ಬೇಕಾದ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು. …
Read More »
Shaikh BigTv
September 11, 2024
Breaking News, ಧಾರವಾಡ
ಅಣ್ಣಿಗೇರಿ: ಪಟ್ಟಣದಲ್ಲಿ ಹೊಸ ಲೇಔಟ್ ಪರ್ಮಿಷನ್ ಕೊಡುವುದರಲ್ಲಿ ಪುರಸಭೆ ಅಧ್ಯಕ್ಷರು ಕೆಲ ಸದಸ್ಯರು ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ ಸದಸ್ಯರು ಪುರಸಭೆಯ ಮುಂಭಾಗ ಪುರಸಭೆ ಅಧ್ಯಕ್ಷ ಮೆಹಬೂಬಿ ನವಲಗುಂದ ಅವರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
Read More »
Shaikh BigTv
September 11, 2024
Breaking News, ಧಾರವಾಡ
ಕಲಘಟಗಿ:ಪಟ್ಟಣದ ಗ್ರಾಮಸಭೆಗೆ ಬಹಳಷ್ಟು ಅಧಿಕಾರಿಗಳು ಗೈರು ಇರುದ ಕಾರಣ ಗ್ರಾಮಸ್ಥರು ಆಕ್ರೋಶಗೊಂಡು ಗ್ರಾಮ ಸಭೆಯನ್ನು ರದ್ದು ಗೊಳಿಸಿದ್ದಾರೆ. ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಗ್ರಾಮ ಸಭೆ ಹಮ್ಮಿಕೊಳ್ಳಲಾಗಿತ್ತು.ಗ್ರಾಮ ಪಂಚಾಯತ್‌ನಲ್ಲಿ ಈಗಾಗಲೇ ಅಭಿವೃದ್ಧಿ ಹೆಸರಿನಲ್ಲಿ ಬಹಳಷ್ಟು ಹಣ ದುರ್ಬಳಕೆ ಮಾಡಲಾಗಿದ್ದು ಅವುಗಳ ಮಾಹಿತಿ ನೀಡದೆ ಇರುವುದಕ್ಕೆ ಜನರು ಆಕ್ರೋಶಗೊಂಡು ಆಧಿಕಾರಿಗಳನ್ನು ತಾರಾಟೆಗೆ ತೆಗೆದುಕೊಂಡರು. ನಂತರ ಅಧಿಕಾರಿಗಳು ಗ್ರಾಮ ಸಭೆ ದಿನಾಂಕವನ್ನು ಹದಿನೈದು ದಿನಗಳ ಒಳಗಾಗಿ ತಿಳಿಸಲಾಗುವುದು ಗೈರು ಹಾಜರ್ ಇರುವ ಅಧಿಕಾರಿಗಳಿಗೆ …
Read More »
Shaikh BigTv
September 11, 2024
Breaking News, ಧಾರವಾಡ
ಧಾರವಾಡ: ಗ್ಯಾಸ್ ಸಿಲಿಂಡರ್ ನ್ನು ಮನೆ, ಮನೆಗೆ ಹೋಗಿ ವಿತರಣೆ ಮಾಡುವ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಸಿಲಿಂಡರ್ ವಿತರಣೆ ಮಾಡುವ ಸಿಬ್ಬಂದಿಯಿಂದ ಅನ್ಯ ಕೆಲಸಗಳನ್ನೂ ಮಾಡಿಸಲಾಗುತ್ತಿದೆ. ಕೇವಲ ವಿತರಣೆ ಮಾಡುವ ಕೆಲಸವಷ್ಟೇ ಅಲ್ಲದೇ ಓಟಿಪಿ ಅಪ್ಲೇಟ್ ಮಾಡಿಸುವುದು, ಪಂಚ್ ಮಾಡಿಸುವ ಕೆಲಸವನ್ನು ಮಾಡಿಸಲಾಗುತ್ತಿದೆ. ಈ ಕೆಲಸ ಸಿಬ್ಬಂದಿಗೆ ಹೊರೆಯಾಗುವ ಜೊತೆಗೆ ಮಾನಸಿಕ ಹಿಂಸೆ ಕೂಡ ಆಗುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದರು. ಧಾರವಾಡದಾದ್ಯಂತ ಸುಮಾರು 100ಕ್ಕೂ ಅಧಿಕ ಗ್ಯಾಸ್ ಸಿಲಿಂಡರ್ ವಿತರಣೆ …
Read More »
Shaikh BigTv
September 11, 2024
Breaking News, ಧಾರವಾಡ
ಧಾರವಾಡ: ನವಲಗುಂದ ತಾಲೂಕಿನಲ್ಲಿ ಅವೈಜ್ಞಾನಿಕವಾಗಿ ಚಕ್ಕಡಿ ರಸ್ತೆ ನಿರ್ಮಾಣ ಮಾಡುವುದರ ಜೊತೆಗೆ ಪಾರಂಪರಿಕ ಗುಡ್ಡದ ಮಣ್ಣಿನಲ್ಲಿ ಅವ್ಯವಹಾರ ನಡೆಸಲಾಗುತ್ತಿದೆ ಎಂದು ಆರೋಪ ಮಾಡಿರುವ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಆರೋಪಕ್ಕೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಶಂಕರ ಪಾಟೀಲ ಮುನೇನಕೊಪ್ಪ ಅವರು ನನ್ನ ಸ್ನೇಹಿತರು. ರಾಜಕಾರಣದಲ್ಲಿ ಈ ರೀತಿ ಆರೋಪ ಮಾಡುವುದು ಸಹಜ. ಈ ಬಗ್ಗೆ ತನಿಖೆ …
Read More »
Shaikh BigTv
September 11, 2024
Breaking News, ಧಾರವಾಡ
ಧಾರವಾಡ:ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ವಸಂತ ನಾಡಿಗೇರ ತೀವ್ರ ಹೃದಯಾಘಾತದಿಂದ ವಿಧಿವಶರಾದ ಹಿನ್ನೆಲೆಯಲ್ಲಿ ಮೃತರ ಆತ್ಮಕ್ಕೆ ಶಾಂತಿಸಿಗಲೆಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸಂತಾಪ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸಂಜಯಕುಮಾರ ಮಾಲಗತ್ತಿ, ವಿಭಾಗದ ಪ್ರಾಧ್ಯಾಪಕ ಡಾ. ಜೆ. ಎಂ. ಚಂದುನವರ ಸೇರಿದಂತೆ ಹಲವರು ಇದ್ದರು.
Read More »