Breaking News

ಧಾರವಾಡ

ಸಿಎಂ ಅವರು ಹಗರಣ ಪ್ರಕರಣಗಳ ಸಮನ್ವಯ ಸಮಿತಿ ರಚಿಸಿದ್ದಾರೆ: ಸಚಿವ ಸಂತೋಷ ಲಾಡ್

ಧಾರವಾಡ: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿವೆ ಎನ್ನಲಾದ ಹಗರಣಗಳ ಕುರಿತು ತನಿಖೆ ನಡೆಸುವಂತೆ ಸಿಎಂ ಅವರು ಹಗರಣ ಪ್ರಕರಣಗಳ ಸಮನ್ವಯ ಸಮಿತಿ ರಚಿಸಿದ್ದು, ಅದರಲ್ಲಿ ನನ್ನನ್ನೂ ಸದಸ್ಯನನ್ನಾಗಿ ಮಾಡಿದ್ದಾರೆ. ಎರಡು ತಿಂಗಳಲ್ಲಿ ಹಗರಣಗಳ ತನಿಖೆ ನಡೆಸಿ ವರದಿ ನೀಡುವಂತೆ ಸಿಎಂ ತಾಕೀತು ಮಾಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು ಎಂದಿದ್ದಾರೆ. ಈ ಸಮಿತಿಯಲ್ಲಿ …

Read More »

ವಿದೇಶದಲ್ಲಿ ಭಾರತೀಯ ಸಂಪ್ರದಾಯ ಆಚರಣೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಣಕವಾಡದ ಶಶಿ ಚಾಕಲಬ್ಬಿ, ಸಾನ್ವಿ ಚಾಕಲಬ್ಬಿ ಎಂಬುವವರೇ ಅಮೇರಿಕಾದ ಸ್ಯಾನ್-ಡಿಯಾಗೋ ನಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಮೂಲಕ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಈ ಹಿಂದೆಯೂ ಕೂಡ ಈ ದಂಪತಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಮನೆಯಲ್ಲಿಯೇ ರಾಮಮಂದಿರ ನಿರ್ಮಾಣ ಮಾಡಿ ಪೂಜೆ ಕೂಡ ಮಾಡಿದ್ದರು. ಈ ಬಾರಿ ಗಣೇಶೋತ್ಸವಕ್ಕೆ ಗಣಪತಿ ಪ್ರತಿಷ್ಠಾಪನೆ ಮಾಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನೆರೆ ಹೊರೆಯವರಿಗೆ ಪ್ರಸಾದ ವಿತರಣೆ ಮಾಡಿ …

Read More »

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಧಾರವಾಡ ಡಿಮ್ಹಾನ್ಸ್‍ದಲ್ಲಿ ಜರುಗಿದ ವಿಶೇಷ ಉಪನ್ಯಾಸ

ಧಾರವಾಡ : ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ ಧಾರವಾಡ ಡಿಮ್ಹಾನ್ಸ್‍ದಲ್ಲಿ ಖ್ಯಾತ ಮನೋವೈದ್ಯ ಪೆÇ್ರ. ಸಿ.ಆರ್.ಚಂದ್ರಶೇಖರ ಅವರಿಂದ ವಿಶೇಷ ಉಪನ್ಯಾಸ ಜರುಗಿತ್ತು. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ, ಧಾರವಾಡ, ಭಾರತೀಯ ಮನೋವೈದ್ಯಕೀಯ ಸಂಘ(ಕರ್ನಾಟಕ ಶಾಖೆ), ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಹುಬ್ಬಳ್ಳಿ, ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಧಾರವಾಡ, ಜನತಾ ಶಿಕ್ಷಣ ಸಮಿತಿ, ವಿದ್ಯಾಗಿರಿ ಧಾರವಾಡ, ಸೃಷ್ಟಿ ವಿಜ್ಞಾನ ಪದವಿ …

Read More »

ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಗೆ ಅಂತರರಾಷ್ಟ್ರೀಯ ಮಂಡಳಿಯಿಂದ ವಾಟ್ಸೇವ್ ಪ್ರಶಸ್ತಿ

ಧಾರವಾಡ : ಅಂತರರಾಷ್ಟ್ರೀಯ ನೀರಾವರಿ ಮತ್ತು ಒಳಚರಂಡಿ ಮಂಡಳಿ (ಐಸಿಐಡಿ) ನೀರಾವರಿ ನಿರ್ವಹಣೆ, ಪ್ರವಾಹ ನಿರ್ವಹಣೆ ಮತ್ತು ಸುಸ್ಥಿರ ಕೃಷಿ ಉತ್ತೇಜಿಸಲು ವೈಜ್ಞಾನಿಕ ಹಾಗೂ ತಾಂತ್ರಿಕ ಜಾಗೃತಿ ಮೂಡಿಸುವ ಜಾಗತಿಕ ಮಟ್ಟದ ಸಂಸ್ಥೆಯಾಗಿದೆ ಎಂದು ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ (ವಾಲ್ಮಿ) ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ) ಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿ, …

Read More »

ಸೆ.17 ರಂದು ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ

ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಭಗವಾನ ಶ್ರೀ ವಿಶ್ವಕರ್ಮ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ …

Read More »

ಬೀದಿ ನಾಯಿಗಳ ಸರ್ವೆ 15 ದಿನಗಳಲ್ಲಿ ಆರಂಭಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಹುಬ್ಬಳ್ಳಿ – ಧಾರವಾಡ ಅವಳಿನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ ಆರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ಜರುಗಿದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು ಅನುಷ್ಠಾನ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಮೀಕ್ಷೆಯು ಸರಕಾರೇತರ ಸಂಘ ಸಂಸ್ಥೆಗಳ ಮೂಲಕ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಸಾರ್ವಜನಿಕರ …

Read More »

ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ

ಕಲಘಟಗಿ : ನೂತನ ಕಲಘಟಗಿ ತಾಲೂಕ ಕಾರ್ಯನಿರತ ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಕಲಘಟಗಿ ಪಟ್ಟಣದ ಹನ್ನೆರೆಡು ಮಠದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಪ್ರಭಯ್ಯ ಸ್ವಾಮಿ ಲಕ್ಕುಂಡಿಮಠ ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ಸೋಮಲಿಂಗಪ್ಪ ಕರಿಕಟ್ಟಿ, ಕಾರ್ಯದರ್ಶಿಯಾಗಿ ಶಿವಕುಮಾರ್‌ ನೂಲ್ವಿ, ಉಪಾಧ್ಯಕ್ಷರಾಗಿ ಮೋಹನ್ ಕಲ್ಲೇದ, ಖಜಾಂಚಿಯಾಗಿ ಗುಳೆಶ್ ಹೂಗಾ‌ರ್ ಸಹ ಕಾರ್ಯದರ್ಶಿಯಾಗಿ ನಾಗರಾಜ್ ಅಂಚಟಗೇರಿ ಆಯ್ಕೆ ಗೊಂಡಿದ್ದು ಎಲ್ಲಾ ಸದಸ್ಯರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Read More »

ರಸ್ತೆ ವಿಕ್ಷಿಸಿದ ಕೋನರಡ್ಡಿ

ಅಣ್ಣಿಗೇರಿ : ಸತತವಾಗಿ ಸುರಿದ ಮಳೆಯಿಂದ ಅಣ್ಣಿಗೇರಿ-ಹಳ್ಳಿಕೇರಿ-ಅನ್ನೂರ-ಕಿತ್ತೂರ ರಸ್ತೆ ಬಸ್‌ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣ ಖಡಿ ಮೊರಂ ಹಾಕಿ ಗಟ್ಟಿಗೊಳಿಸಿ ಬಸ್ ಓಡಾಡಲು ಸಾರ್ವಜನಿಕರಿಗೆ ಅನುಕೂಲ ಮಾಡಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್‌.ಹೆಚ್‌. ಕೋನರಡ್ಡಿ ಹೇಳಿದರು. ಹಳ್ಳಿಕೇರಿ-ಅಡ್ಡಿರ-ಕಿತ್ತೂರ-ನಾವಳ್ಳಿಯಿಂದ ತುಪ್ಪದಕುರಹಟ್ಟಿ ಕ್ರಾಸ್ ವರೆಗೆ ರಸ್ತೆ ದುರಸ್ತಿ ಕಾಮಗಾರಿ ವೀಕ್ಷಣೆ ಮಾಡಿದ ಅವರು ಕಳೆದ ಕೆಲ ದಿನಗಳಿಂದ ಇಲ್ಲಿಯವರೆಗೆ ಸತತವಾಗಿ ಸುರಿದ ಮಳೆಗೆ ಕಪ್ಪು ಮಣ್ಣಿನಿಂದ …

Read More »

ಚಿರತೆ ಬಾಯಿಗೆ ನಾಯಿ ಬಲಿ ಆಯ್ತಾ?

ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಕಾಣಿಸಿಕೊಂಡಿರುವ ಚಿರತೆ ಇಂದು ಬೆಳಗಿನಜಾವ ನಾಯಿಯನ್ನು ಹೊತ್ತೊಯ್ದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕಳೆದ ಎರಡೂರು ದಿನಗಳ ಹಿಂದೆ ಚಿರತೆಯ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಆ ಚಿರತೆ ಸೆರೆಗಾಗಿ ಇದೀಗ ಬೋನು ಇಟ್ಟಿದೆ. ಆದರೆ, ಕವಿವಿಗೆ ಹೊಂದಿಕೊಂಡಿರುವ ರವೀಂದ್ರನಗರದ ಬಸವರಾಜ ತಳವಾರ ಮನೆಯಲ್ಲಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಬಗ್ಗೆ ವರದಿಯಾಗಿದೆ. ಮನೆಯ ಮುಂದೆ ನಾಯಿಯ ರಕ್ತ ಚೆಲ್ಲಾಡಿದೆ. ಅಲ್ಲದೇ …

Read More »

ಪಜ್ರಾಪ್ರಭುತ್ವ ಎಲ್ಲರೂ ಸೇರಿ ಸಂಭ್ರಮಿಸೋಣ: ಸಚಿವ ಸಂತೋಷ ಲಾಡಲ

ಧಾರವಾಡ : ರಾಜ್ಯ ಸರಕಾರವು ಸೆಪ್ಟೆಂಬರ್ 15 ರ ಪ್ರಜಾಪ್ರಭುತ್ವದಿವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲರೂ ಸೇರಿ ಸಂಭ್ರಮಿಸೋಣ. ಪ್ರತಿ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪ್ರಜಾಪ್ರಭುತ್ವದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ …

Read More »