Breaking News

ಧಾರವಾಡ

ಮೈಸೂರು ದಸರಾದಲ್ಲಿ ಧಾರವಾಡ ಸ್ತಬ್ಧ ಚಿತ್ರ ಪ್ರದರ್ಶನ : ಸ್ವರೂಪ ಟಿ. ಕೆ.

ಧಾರವಾಡ: ಅಕ್ಟೋಬರ್ 12 ರಂದು ನಡೆಯುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಧಾರವಾಡ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರವನ್ನು ರೂಪಿಸಲಾಗುವುದು ಎಂದು ಜಿಪಂ ಸಿಇಓ ಸ್ವರೂಪ ಟಿ. ಕೆ. ತಿಳಿಸಿದರು. ನಗರದ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಅವರು, ಮೈಸೂರು ದಸರೆಯಲ್ಲಿ ದೇಶ, ವಿದೇಶಗಳ ಜನರು ಭಾಗಬಹಿಸುವುದರಿಂದ ಜಿಲ್ಲೆಯ ಸಂಸ್ಕೃತಿಯನ್ನು ಹೆಚ್ಚು ಜನರಿಗೆ ಪರಿಚಯಿಸಲು ಸಾಧ್ಯವಾಗುತ್ತದೆ ಎಂದರು. ಇತರರು ಉಪಸ್ಥಿತರಿದ್ದರು.

Read More »

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯಾಲಯ ಉದ್ಘಾಟನೆ

ಅಣ್ಣಿಗೇರಿ: ನೂತನವಾಗಿ ಪ್ರಾರಂಭವಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯಾಲಯವನ್ನು ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರು ಹಾಗು ಅಣ್ಣಿಗೇರಿ ತಾಲೂಕ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು ಮಂಜುನಾಥ್ ಮಾಯಣ್ಣವರ ಅವರೊಂದಿಗೆ ಶಾಸಕ ಕೋನರಡ್ಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಣಿಗೇರಿ ತಹಶೀಲ್ದಾರ ದಾಸಪ್ಪನವರ, ಪುರಸಭೆ ಮುಖ್ಯಾಧಿಕಾರಿ ಪಿ.ಸಿ. ಗದ್ದಿಗೌಡರ,ಕಾರ್ಯನಿರ್ವಾಹಕ ಅಧಿಕಾರಿ ತಾ.ಪಂ ಶಿಂಧೆ, ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ವಿನೋದ ಅಸೂಟಿ, ಧಾರವಾಡ ಜಿಲ್ಲಾ ಕೆಡಿಪಿ ನಾಮನಿರ್ದೇಶನ ಅದಸ್ಯರಾದ ಆ‌ರ್.ಹೆಚ್.ಕೋನರಡ್ಡಿ, ಅಣ್ಣಿಗೇರಿ …

Read More »

ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳುನ್ನು ಉದ್ಘಾಟಿಸಿದ ಶಾಸಕ

ಅಣ್ಣಿಗೇರಿ: ಕುಸುಗಲ್ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕ/ಶಿಕ್ಷಕಿಯರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಕೋನರಡ್ಡಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ವಿ ಎಪ್ ಚುಳಕಿ, ಗ್ರಾಮ ಪಂಚಾಯತ್‌ ಅಧ್ಯಕ್ಷರು ನೇತ್ರಾವತಿ …

Read More »

ಹುಲಿಕೇರಿ ಇಂದ್ರಮ್ಮ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಭೋಸರಾಜು

ಧಾರವಾಡ : ಅಳ್ನಾವರ ತಾಲೂಕಿನ ಐತಿಹಾಸಿಕ ಹುಲಿಕೇರಿ ಇಂದ್ರಮ್ಮ ಕೆರೆಗೆ ಭೇಟಿ ನೀಡಿ, ಬಾಗಿನ ಅರ್ಪಿಸಿದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಕೆರೆ ದುರಸ್ತಿ ಕಾಮಗಾರಿಯನ್ನು ಯುದ್ದೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇಂದು ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಹುಲಿಕೇರಿ ಗ್ರಾಮದ ಇಂದ್ರಮ್ಮ ಸಣ್ಣ ನೀರಾವರಿ ಕೆರೆ ಪುನರುಜ್ಜೀವನ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಇಂದ್ರಮ್ಮ ಕೆರೆಯ ಕಾಮಗಾರಿಯನ್ನು …

Read More »

9 ಕೋಟಿ ವೆಚ್ಚದ ತಾರಾಲಯ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ: ಸಚಿವ ಎನ್.ಎಸ್. ಭೋಸರಾಜು ಸೂಚನೆ

ಧಾರವಾಡ : ಧಾರವಾಡದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ 9 ಕೋಟಿ ರೂ ವೆಚ್ಚದ ತಾರಾಲಯ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಸೂಚನೆ ನೀಡಿದರು. ಇಂದು ಧಾರವಾಡದಲ್ಲಿರುವ ಧಾರವಾಡ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಅನುಕೂಲಕ್ಕಾಗಿ ವಿಜ್ಞಾನ ಕೇಂದ್ರಗಳನ್ನು ಹಾಗೂ …

Read More »
Featured Video Play Icon

ವರೂರಿನಲ್ಲಿ ಲೋಕ ಕಲ್ಯಾಣಕ್ಕೆ ಮಹಾ ಮಸ್ತಕಾಭೀಷೇಕ..

ಹುಬ್ಬಳ್ಳಿ: ಇಲ್ಲಿಯ ವರೂರಿನ ಗ್ರಾಮದಲ್ಲಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಜೈನ ತೀರ್ಥಂಕರರ ಸಮಾಗಮದಲ್ಲಿ 2025ರ ಜನವರಿ 15ರಿಂದ 26ರ ವರೆಗೆ ಮಹಾ ಮಸ್ತಕಾಭೀಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಮಹೋತ್ಸವ ಮುಹೂರ್ತ ಉದ್ಘೋಷ ಕಾರ್ಯಕ್ರಮದಲ್ಲಿ ಮಹಾ ಮಸ್ತಕಾಭೀಷೇಕದ ದಿನಾಂಕ ನಿಗದಿ ಮಾಡಲಾಗಿದ್ದು,‌ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಮಹಾ ಮಸ್ತಕಾಭೀಷೇಕದ ಅಧ್ಯಕ್ಷರನ್ನಾಗಿ ಕೂಡ ಘೋಷಣೆ ಮಾಡಲಾಯಿತು. ಅಲ್ಲದೇ ಇದೇ ವೇಳೆ ವೀರೇಂದ್ರ ಹೆಗ್ಗಡೆಯವರಿಗೆ ಜವಾಬ್ದಾರಿ ವಹಿಸುವ …

Read More »

ಮಳೆಯಿಂದಾಗಿ ರೈತರ ಬೆಳೆಗಳು : ಪರಿಹಾರ ಕೊಡುವಂತೆ ಪ್ರತಿಭಟನೆ

ಕಲಘಟಗಿ:ಮಳೆಯಿಂದಾಗಿ ರೈತರ ಬೆಳೆಗಳು ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ಕಲಘಟಗಿ ಪಟ್ಟಣದಲ್ಲಿ ನಡೆಸಲಾಯಿತು. ರೈತರು ಬೆಳೆದ ಬೆಳೆಗಳು ಹಾನಿಯಾಗಿದ್ದು, ರೈತರು ಸಂಕಷ್ಟವನ್ನು ಎದುರಿಸುವಂತಾಗಿದೆ. ಕೂಡಲೇ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Read More »

ಜಿಲ್ಲಾಮಟ್ಟದ ತರಬೇತಿದಾರರಿಗೆ ಎರಡು ದಿನಗಳ ತರಬೇತಿ

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ರಾಮ ಆರೋಗ್ಯ ಯೋಜನೆಯಡಿ, ಜಿಲ್ಲಾಮಟ್ಟದ ತರಬೇತಿದಾರರಿಗೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿಯನ್ನು ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಸುಜಾತಾ ಹಸವೀಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ ಹಾಗೂ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅಧಿಕಾರಿಗಳು ಇದ್ದರು.

Read More »

ಭಾರಿ ಮಳೆ: ಭಾಗಶಃ ಮನೆ ಕುಸಿತ

ನವಲಗುಂದ: ಪಟ್ಟಣದಲ್ಲಿ ಸುರಿದ ಭಾರಿ ಮಳೆಯಿಂದ ಒಂದು ಮನೆ ಧರಶಾಹಿ ಆಗಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯಾದಿಂದ ಪಾರಾದ ಘಟನೆ ನಡೆದಿದೆ. ಬಸವೇಶ್ವರ ನಗರದ ಮಾರುತಿ ಭವಾನಿ ಅವರ ಮನೆ ಭಾಗಶಃ ಕುಸಿದಿದ್ದು, ಅಪಾರ ಪ್ರಮಾಣದ ಹಾನಿ ಆಗಿದೆ. ಮನೆಯಲ್ಲಿದ್ದ ಪಾತ್ರೆ ಮಣ್ಣಿನಲ್ಲಿ ಸಿಲುಕಿ ಹಾಳಾಗಿದ್ದಷ್ಟೇ ಅಲ್ಲದೆ ವಾಸಿಸಲು ಆಗದಂತೆ ಬಿದ್ದಿದೆ. ಸಂತ್ರಸ್ತರು ತಮ್ಮ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಾರೆ.

Read More »

ಭಾರಿ ಮನೆ : ಮನೆ ಭಾಗಶಃ ಕುಸಿತ

ನವಲಗುಂದ: ಪಟ್ಟಣದಲ್ಲಿ ಸುರಿದ ಭಾರಿ ಮಳೆಯಿಂದ ಒಂದು ಮನೆ ಧರಶಾಹಿ ಆಗಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯಾದಿಂದ ಪಾರಾದ ಘಟನೆ ನಡೆದಿದೆ. ಬಸವೇಶ್ವರ ನಗರದ ಮಾರುತಿ ಭವಾನಿ ಅವರ ಮನೆ ಭಾಗಶಃ ಕುಸಿದಿದ್ದು, ಅಪಾರ ಪ್ರಮಾಣದ ಹಾನಿ ಆಗಿದೆ. ಮನೆಯಲ್ಲಿದ್ದ ಪಾತ್ರೆ ಮಣ್ಣಿನಲ್ಲಿ ಸಿಲುಕಿ ಹಾಳಾಗಿದ್ದಷ್ಟೇ ಅಲ್ಲದೆ ವಾಸಿಸಲು ಆಗದಂತೆ ಬಿದ್ದಿದೆ. ಸಂತ್ರಸ್ತರು ತಮ್ಮ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಾರೆ.

Read More »