Breaking News

ಧಾರವಾಡ

1978 ನನ್ನ ಜೀವನದ ಅಮೂಲ್ಯ ವರ್ಷ: ಡಾ.ವೀರೇಂದ್ರ ಹೆಗ್ಗಡೆ

ಧಾರವಾಡ : 1978 ರಲ್ಲಿ ನನ್ನ ಜೀವನದ ಅತಿ ಅಮೂಲ್ಯವಾದ ವರ್ಷ. ನನ್ನ ಮದುವೆಯಾಗಿದ್ದು 1978 ರಲ್ಲಿ ಆ ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿ ‌ಕೆಲಸಗಳು ಆಗಿವೆ ಎಂದು ರಾಜ್ಯಸಭಾ ಸದಸ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಮ್ಮ ಮದುವೆಯ ನೆನಪನ್ನು ಮೆಲುಕು ಹಾಕಿದರು. ಜೆಎಸ್ಎಸ್ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿ ಪ್ರಾರಂಭ ಮಾಡಿದ ವರ್ಷ ಅದು. ಧಾರವಾಡದಲ್ಲಿ ಜೆಎಸ್ಎಸ್ ಧಾರವಾಡ …

Read More »

ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ….

ಧಾರವಾಡ : ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಸಂಸ್ಕೃತಿ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಧಾರವಾಡದ ವಿದ್ಯಾರ್ಥಿಗಳಾದ ಕು.ಸುಬ್ರಹ್ಮಣ್ಯ ತೋಳಮಟ್ಟಿ, .ದಾನೇಶ್ ಎಂ.ವಿ. ಹಾಗೂ ಆದಿತ್ಯ ಜನಾದ್ರಿ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಆಶುಭಾಷಣ ಸ್ಪರ್ಧೆಯಲ್ಲಿ ಕು.ಶ್ರೇಯಸ್ ಯಮಕನಮರಡಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ಶಾಲೆಯ ಕಾರ್ಯದರ್ಶಿಗಳಾದ ರಾಘವೇಂದ್ರ ಅಂಬೇಕರ್, ಪ್ರಾಚಾರ್ಯರಾದ ಡಾ. ಅನಿತಾ …

Read More »

ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು…

ಧಾರವಾಡ : ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಹಾಗೂ ನವಲಗುಂದ ರಸ್ತೆಯಲ್ಲಿ ಸೋಮಾಪೂರ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದ ಸುರೇಶ ಎಂಬಾತನೆ ಸ್ಥಳದಲ್ಲಿಯೇ ಮೃತಪಟ್ಟವನೆಂದು ಗುರುತಿಸಲಾಗಿದೆ. ರಾಯಚೂರ ಜಿಲ್ಲೆಯ ಸಿಂಧನೂರಿನಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್, ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಇದರಿಂದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ …

Read More »

ದಿ 21 ಹಾಗೂ 22 ರಂದು ಸ್ವಾಭಿಮಾನಿ ಕಲ್ಯಾಣ ಪರ್ವ…

ಧಾರವಾಡ: ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿರುವ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಇದೇ ತಿಂಗಳ ದಿ 21 ಹಾಗೂ 22 ರಂದು ಸ್ವಾಭಿಮಾನಿ ಕಲ್ಯಾಣ ಪರ್ವವನ್ನು ಆಯೋಜಿಸಲಾಗಿದೆ ಎಂದು ಕಲ್ಯಾಣ ಪರ್ವ ಉತ್ಸವ ಸಮಿತಿಯ ಅಧ್ಯಕ್ಷರಾದ ಕುಂಬಳಗೂಡಿನ ಶ್ರೀ ಚನ್ನಬಸವೇಶ್ವರ ಜ್ಞಾನಪೀಠದ ಜಗದ್ಗುರು ಪೂಜ್ಯ ಡಾ||ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 12 ನೇ ಶತಮಾನದಲ್ಲಿ ಗುರು ಬಸವಣ್ಣರವರು ಅನುಭವ ಮಂಟಪವನ್ನು ಸ್ಥಾಪಿಸಿದರು. ಯಾವುದೇ ಜಾತಿ, ಮತ, ಪಂಥ ಹಾಗೂ …

Read More »

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ರಾಜ್ಯದಲ್ಲೇ ನಿಂತು ಮಾತನಾಡಿದ ಬಸವರಾಜ ಗುರಿಕಾರ…..

ಧಾರವಾಡ: ಶಿಕ್ಷಕರ OPS ಹಣ ಬಿಡುಗಡೆ ಮಾಡುವುದು, ಹಳೆಯ ಪಿಂಚಣಿ ಯೋಜನೆಯನ್ನೇ ಜಾರಿಗೆ ತರುವುದು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ಶಿಕ್ಷಕರ ಫೆಡರೇಶನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ನೇತೃತ್ವದಲ್ಲಿ ನಡೆಯುತ್ತಿರುವ ಶಿಕ್ಷಕರ ಭಾರತ ಯಾತ್ರೆ ಉತ್ತರ ಪ್ರದೇಶ ತಲುಪಿದೆ. ವಿವಿಧ ರಾಜ್ಯಗಳಲ್ಲಿ ‌ಯಾಲಿ ಹಾಗೂ ಸಮಾವೇಶಗಳನ್ನು ನಡೆಸಿದ ನಂತರ ಇದೀಗ ಯಾತ್ರೆಯು ಉತ್ತರ ಪ್ರದೇಶಕ್ಕೆ ಬಂದು ತಲುಪಿದೆ.ಮಧ್ಯಪ್ರದೇಶದ ರೇವಾದಲ್ಲಿ ನಿನ್ನೆ ಬೃಹತ್ ಸಮಾವೇಶ ನಡೆಸಿದ …

Read More »

ಗ್ರಾಪಂ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ

ಕುಂದಗೋಳ : ಗುಡೇನಕಟ್ಟಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಶಾಂತವ್ವ ಗು ಹೊಸಳ್ಳಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತಾಯವ್ವ ವಿ ಕೆಂಚನ್ನವರ ಇವರನ್ನು ಸಮಸ್ತ ಗುಡೆನಕಟ್ಟಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಸಿಬ್ಬಂದಿ ಸನ್ಮಾನ ಮಾಡಿ ಗೌರವಿಸಿದರು.

Read More »

ಮಳೆಯಿಂದ ಹಾನಿಯಾದ ಮನೆಗೆ ಶಾಸಕರ ಭೇಟಿ

ನವಲಗುಂದ : ವಿಧಾನಸಭಾ ಮತಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಶಾಸಕ ಎನ್.ಹೆಚ್.ಕೋನರಡ್ಡಿ ವೀಕ್ಷಣೆ ಮಾಡಿದರು. ಹಲವು ದಿನದಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಶಾಸಕ ಕೋನರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More »

ಕಾಂಗ್ರೇಸ್ ಬಿಟ್ಟು ಹೋಗಲ್ಲ ಶಾಸಕ ರಾಯರೆಡ್ಡಿ

ಧಾರವಾಡ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಅಸಮಾಧಾನಗೊಂಡು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಕಾಂಗ್ರೆಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಧಾರವಾಡದ ಮಮತಾ ಫಾರ್ಮಹೌಸ್ ನಲ್ಲಿ ಮಾತನಾಡಿದ ಅವರು ನಾನು ಕಟ್ಟಾ ಕಾಂಗ್ರೇಸ್ಸಿಗ, ನನಗೆ ಬಿಜೆಪಿ ಸಿದ್ಧಾಂತ ಆಗಿ ಬರಲ್ಲ. ಹೀಗಾಗಿ ಕಾಂಗ್ರೇಸ್ ಬಿಟ್ಟು ಹೋಗಲ್ಲ ಎಂದಿದ್ದಾರೆ. ಕಾಂಗ್ರೇಸ್, ಬಿಜೆಪಿ ಪಕ್ಷದವರು ಎಲ್ಲರನ್ನು ಕರೆಯುತ್ತಿರುತ್ತಾರೆ.ಹಾಗಂತ ಹೋಗೋಕೆ ಆಗಲ್ಲ ಎಂದು ಸ್ಪಷ್ಟಪಡಿಸಿದರು. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಪ್ರೌಢಶಾಲಾ ಕ್ರೀಡಾ ಕೂಟ.ನವಲಗುಂದ

ನವಲಗುಂದ: ಪಟ್ಟಣದ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ರ ಒಂದನೇ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ಕ್ರೀಡಾ ಕೂಟ ಜರುಗಿದವು. ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಣ ಪದ್ಧತಿ ಇದ್ದ ಕಾಲದಿಂದಲೇ ಶಿಕ್ಷಣದೊಂದಿಗೆ ದೈಹಿಕ ವ್ಯಾಯಾಮ ಹಾಗೂ ಮನರಂಜನೆಗಾಗಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಈ ಪದ್ಧತಿ ಇಂದಿನ ಶಿಕ್ಷಣ ಪದ್ಧತಿವರೆಗೂ ಮುಂದುವರಿದೆ ಎಂದು ಮುಖ್ಯೋಪಾಧ್ಯಾಯರಾದ ಡಿ.ಜೆ ಹುಲ್ಲೂರ ಹೇಳಿದರು. ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ ಅವರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟುವಾಗಿ ಬೆಳೆಸಲು ಅವಕಾಶ …

Read More »

ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಸೆ

ಧಾರವಾಡ: ಶಿಕ್ಷಣ ಹಾಗೂ ಶಿಕ್ಷಕರ ಬೇಡಿಕೆಗಳ ಈಡೇರಿಕೆಗಾಗಿ ಸೆ.5 ರಿಂದ ಅ.5 ರವರೆಗೆ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ವತಿಯಿಂದ ಭಾರತ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದರು. ನಗರದ ಸರ್ಕಾರಿ ನೌಕರರ ಭವನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಹಳೆ ಪಿಂಚಣಿ ಜಾರಿಗೆಗೊಳಿಸಬೇಕು. ರಾಷ್ಟ್ರೀಯ ಏಕರೂಪ ವೇತನ ನೀಡಬೇಕು. ನೂತನ ಶಿಕ್ಷಣ ನೀತಿಯ ಲೋಪದೋಷಗಳನ್ನು ಸರಿಪಡಿಸಬೇಕು. ಅರೆಕಾಲಿಕ ಶಿಕ್ಷಕರನ್ನು ಕೈಬಿಡಬೇಕು ಎಂದು …

Read More »

You cannot copy content of this page