Breaking News

ಧಾರವಾಡ

ನಿರಂತರ ಮಳೆಯಿಂದ ಉಂಟಾದ ಬೆಳೆ ಹಾನಿಯ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ; ಮುಂಗಾರು ಹಂಗಾಮಿನಲ್ಲಿ ಅತಿ ಮತ್ತು ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಆಗಿರುವ ಕುರಿತು ಕಂದಾಯ ಮತ್ತು ಕೃಷಿ ಇಲಾಖೆ ಮಾಡುತ್ತಿರುವ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ, ವರದಿ ನೀಡಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಬೆಳಿಗ್ಗೆ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ …

Read More »

ಗಣೇಶ ಮೂರ್ತಿ ಪ್ರತಿಷ್ಠಾಪನೆ : ಮಹತ್ವದ ಸೂಚನೆ ನೀಡಿದ ಹೆಸ್ಕಾಂ

ನವಲಗುಂದ : ಶಹರ ಹಾಗೂ ತಾಲೂಕಿನ ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶ ಮಂಡಳಿಯವರು ಗಣೇಶ ಮೂರ್ತಿ ಪ್ರತಿಷ್ಠಾಪನೆಯನ್ನು ಹೆಸ್ಕಾಂ ಕಂಪನಿಯ ವಿದ್ಯುತ್ ಲೈನ್ ಕೆಳಗಡೆ ಹಾಗೂ ಲೈನಿನ ಅಕ್ಕಪಕ್ಕದಲ್ಲಿ ಪೆಂಡಾಲನ್ನು ಹಾಕಬಾರದು ಮತ್ತು ಸುರಕ್ಷತಾ ಅಂತರವನ್ನು ಕಾಯ್ದುಕೊಂಡು ಪೆಂಡಾಲ ಹಾಕಿಕೊಳ್ಳಬೇಕು ಎಂದು ಹೆಸ್ಕಾಂ ಶಾಖಾಧಿಕಾರಿ ಹಣಮರಡ್ಡಿ ರೋಗಿ ತಿಳಿಸಿದ್ದಾರೆ. ಗಣೇಶ ಮಂಡಳಿ ಆಯೋಜಕರು ಅನಧಿಕೃತವಾಗಿ ವಿದ್ಯುತ್ತನ್ನು ಬಳಸದೆ ತಾತ್ಕಾಲಿಕ ಸ್ಥಾವರವನ್ನು ಪಡೆದು ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ವಿದ್ಯುತ್ತನ್ನು ಪಡೆಯಬಹುದು. …

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ

ಕಲಘಟಗಿ : ದೇವಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಒಂಬತ್ತು ಗಂಟೆಗೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕೆಎಸ್ ಆರ್‌ಟಿ ಸಿ ಬಸ್, ಎರಡು ಕಾರಗಳು ಹಾಗೂ ಒಂದು ಟ್ಯಾಂಕರ್ ಲಾರಿ ಜಖಂಗೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿಸದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.. ಅದೃಷ್ಟವಶಾತ್ ಯಾವದೇ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕಲಘಟಗಿ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Read More »

ರಸ್ತೆ ಸುಧಾರಣೆ ಕುಂದಗೋಳದಲ್ಲಿ ಪ್ರತಿಭಟನೆ

ಕುಂದಗೋಳ : ತಾಲೂಕಿನಲ್ಲಿ ಮಳೆಯಿಂದ ಹಾಳಾಗಿರುವ ರಸ್ತೆ ಸುಧಾರಣೆ ಜೊತೆಗೆ ಎಲ್. ಅಂಡ್ ಟಿ ಕಂಪನಿಯವರು ಜಲಜೀವನ ಯೋಜನೆಯಡಿ ಹಾಕಬೇಕಿರುವ ನೀರಿನ ಪೈಪುಗಳನ್ನು ಯದ್ವಾತದ್ವಾ ಅಗೆದು ರಸ್ತೆ ಹದಗೆಡಿಸಿದ್ದಾರೆ. ಈ ಕೂಡಲೇ ಈ ಅವ್ಯ ಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕುಂದಗೋಳ ತಹಶೀಲ್ದಾರ ಕಚೇರಿ ಎದುರು ಕರವೇ ತಾಲೂಕ ಘಟಕ ಬೃಹತ್ ಪ್ರತಿಭಟನೆ ನಡೆಸಿತು. ಕರವೇ ಅಧ್ಯಕ್ಷ ಕಲ್ಲಪ್ಪ ಹರಕುಣಿ, ಪ್ರವೀಣ ಬರದೇಲಿ, ಮಂಜುನಾಥ ಪೂಜಾರ ಸಹಿತ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ …

Read More »

ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯ: ಸಂಗಮೇಶ ಬಬಲೇಶ್ವರ

ಧಾರವಾಡ : ಕ್ರೀಡಾಸಕ್ತಿ ಇರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ ಹೇಳಿದರು. ಅವರು ಇಂದು ಬೆಳಿಗ್ಗೆ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಉದ್ಘಾಟಿಸಿ, ಮಾತನಾಡಿದರು. ಮಕ್ಕಳಲ್ಲಿ ಒಬ್ಬ …

Read More »

ಎಸ್.ಎಸ್.ಎಲ್.ಸಿ ಮಾದರಿಯ ಬೆಸ್‍ಲೈನ್ ಪರೀಕ್ಷೆ; ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಮತ್ತು ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಮಿಷನ್ ವಿದ್ಯಾಕಾಶಿ ಯೋಜನೆ ಮೂಲಕ ವಿಶಿಷ್ಟ ಕ್ರಮಗಳನ್ನು ಕೈಗೊಳ್ಳುತ್ತಿರುವ ಧಾರವಾಡ ಜಿಲ್ಲಾಡಳಿತವು ಇಂದು ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಏಕಕಾಲಕ್ಕೆ ಬೋರ್ಡ ಎಕ್ಸಾಂ ಮಾದರಿಯಲ್ಲಿ ಬೇಸಲೈನ್ ಪರೀಕ್ಷೆ ಆಯೋಜಿಸಿರುವದನ್ನು ನವಲೂರ ಸರಕಾರಿ ಪ್ರೌಢಶಾಲೆಯಲ್ಲಿ ಪರಿಶೀಲಿಸಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತ …

Read More »

ನವಲಗುಂದ ಹೊರವಲಯದಲ್ಲಿ 147 ಲೀಟರ್ ಮದ್ಯ ವಶ

ನವಲಗುಂದ: ಪಿಎಸ್‌ಐ ಜನಾರ್ಧನ ಭಟ್ರಳ್ಳಿ ನೇತೃತ್ವದ ತಂಡ ಪಟ್ಟಣದ ಹೊರವಲಯದ ಜಮೀನನಲ್ಲಿರುವ ಶೆಡನಲ್ಲಿ ಮದ್ಯವನ್ನು ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ವೇಳೆ ಸೂಕ್ತ ಮಾಹಿತಿ ಮೇರೆಗೆ ದಾಳಿ ನಡೆಸಿ 60.290 ರೂ ಕಿಮ್ಮತ್ತಿನ ವಿವಿದ ಬ್ರಾಂಡಗಳ ಒಟ್ಟು 147 ಲೀಟರ್ ಮದ್ಯವನ್ನು ವಶಪಡೆಸಿಕೊಂಡಿದ್ದಾರೆ. ಯಾವುದೇ ಪಾಸ್ ಪರ್ಮಿಟ ಇಲ್ಲದೇ ಸಾರ್ವಜನೀಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟುಕೊಂಡಿದ್ದ ಅರ್ಜುನ ತಂದೆ ಹನಮಂತಪ್ಪ ಮರಿನಾಯ್ಕರನನ್ನು ಬಂಧಿಸಿದ್ದಾರೆ.ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಹೆಚ್ಚಿನ …

Read More »

ಆಂಬ್ಯುಲೆನ್ಸ್ ಒಳಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಿ

ಕುಂದಗೋಳ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಒಳಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕುಂದಗೋಳ ತಾಲೂಕಿನ ದೇವನೂರು ಗ್ರಾಮದ ಅಕ್ಕಮಹಾದೇವಿ ಗೋಡಿ ಎಂಬುವವರಿಗೆ ಇಂದು ಬೆಳಿಗ್ಗೆ 3 ಗಂಟೆ 50 ನಿಮಿಷಕ್ಕೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಕುಟುಂಬಸ್ಥರು ಕುಂದಗೋಳ ತಾಲೂಕು ಆಸ್ಪತ್ರೆಯ ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ದೇವನೂರು ಗ್ರಾಮಕ್ಕೆ ಆಗಮಿಸಿದ ಆಂಬ್ಯಲೆನ್ಸ್‌ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆ ತರುವಾಗ ಹೆರಿಗೆ ನೋವು …

Read More »

ಬಸ್‌ ನಿಲ್ದಾಣದಲ್ಲಿ ಪಾರ್ಕ್ ಮಾಡಿದ ವಾಹನ ಎಸ್ಕೆಪ್

ಕುಂದಗೋಳ: ಬಸ್‌ ನಿಲ್ದಾಣ ಸಮೀಪದ ಅಂಗಡಿಯೊಂದರ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ನಡೆದಿದೆ. ಆಗಷ್ಟ 20ರಂದು ಸಂಶಿ ಗ್ರಾಮದ ಬಸ್ ನಿಲ್ದಾಣ ಬಳಿಯ ಬಂಡಿವಾಡ ಜನರಲ್ ಸ್ಟೋರ್ ಬಳಿ ನಿಲ್ಲಿಸಿದ್ದ ಹಿರೋ ಎಚ್.ಎಫ್ ಕಂಪನಿ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ಅರುಣಕುಮಾರ ಬಾಬುಗೌಡ ಯರಡ್ಡಿ ಎಂಬುವವರೇ ದ್ವಿಚಕ್ರ ವಾಹನ ಕಳೆದುಕೊಂಡವರು. ಈ …

Read More »

ರೇಣುಕಸ್ವಾಮಿ ಹತ್ಯೆ ಪ್ರಕರಣ: A9 ಆರೋಪಿ ಧನರಾಜ್ ಧಾರವಾಡಕ್ಕೆ ಶಿಫ್ಟ್

ಧಾರವಾಡ: ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದ ಪಾಲಾಗಿದ್ದ ನಟ ದರ್ಶನ್ ಆ್ಯಂಡ್ ಟೀಮ್‌ಅನ್ನು ಬೇರೆ ಬೇರೆ ಕಾರಾಗೃಹಗಳಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ಕೊಟ್ಟಿದೆ. A9 ಆರೋಪಿಯಾಗಿರುವ ಧನರಾಜ್ ಎಂಬಾತನನ್ನು ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ.ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದ್ದ ಫೋಟೋ ಹಾಗೂ ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಸರ್ಕಾರ ಎಲ್ಲಾ ಆರೋಪಿಗಳನ್ನು ಬೇರೆ ಬೇರೆ ಕಾರಾಗೃಹಗಳಿಗೆ ಶಿಫ್ಟ್ ಮಾಡಲು ಸೂಚನೆ ಕೊಟ್ಟಿತ್ತು. ಇದಕ್ಕೆ ಇಂದು …

Read More »