Shaikh BigTv
August 21, 2024
Breaking News, ಧಾರವಾಡ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದ ಹೊರವಲಯದಲ್ಲಿ ರೈತರ ಜಮೀನಿನಲ್ಲಿ ಚಿರತೆ ಸೆರೆಗೆ ಅರಣ್ಯ ಇಲಾಖೆಯಿಂದ ಬೋನ ಹಾಗೂ ಸಿ ಸಿ ಕ್ಯಾಮೆರಾ ಅಳವಡಿಸಲಾಗಿದೆ. ಮಲಕನಕೊಪ್ಪ ಗ್ರಾಮ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಮೀನಿನಲ್ಲಿ ಮೊನ್ನೆ ಕಟ್ಟಿ ಹಾಕಿದ ನಾಯಿಯನ್ನು ಚಿರತೆಯೊಂದು ತಿಂದು ಹೋದ ಘಟನೆ ನಡೆದಿದ್ದು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಜಮೀನಿನ ಸುತ್ತಮುತ್ತ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಶನಿವಾರ ರಾತ್ರಿ ಮತ್ತೆ ಚಿರತೆ …
Read More »
Shaikh BigTv
August 20, 2024
Breaking News, ಧಾರವಾಡ
ಧಾರವಾಡ: ದಲಿತರ ಸಮುದಾಯದ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಎಸ್ಸಿ ಎಸ್ಟಿ ಸಮುದಾಯಗಳ ಆಸ್ತಿಗಳನ್ನು ಕಬಳಿಸುವ ಮೂಲಕ ಅಧಿಕಾರಗಳು ಅನ್ಯಾಯ ಮಾಡುತ್ತಿದ್ದಾರೆ. ಶೋಷಿತ ಸಮುದಾಯ ಜನರ ಮೇಲೆ ಅಧಿಕಾರಿಗಳು ದರ್ಪ ತೋರುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಆಗ್ರಹಿಸಿದರು.
Read More »
Shaikh BigTv
August 20, 2024
Breaking News, ಧಾರವಾಡ
ಧಾರವಾಡ : ದೇವರಾಜ ಅರಸು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ಬಡವರ, ಹಿಂದುಳಿದವರ ನಿಂತು ಸಾಮಾಜಿಕ ಮತ್ತು ಮೂಲಭೂತ ಅವಶ್ಯಕತೆಗಳನ್ನು ಒದಗಿಸಿದವರು, ಇವರು ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದೆ, ಲಕ್ಷಾಂತರ ವಿದ್ಯಾರ್ಥಿ ವಸತಿ ನಿಲಯಗಳನ್ನು ಕಟ್ಟಿಸಿಕೊಟ್ಟವರು ಇವರು, ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದ ಇವರು ತಮ್ಮ ಆಧಿಕಾರದ ಸಂದರ್ಭದಲ್ಲಿ ಸಮಾಜದಲ್ಲಿದ್ದಂತಹ ಎಲ್ಲ ವರ್ಗದವರ ಪರವಾಗಿ ಶ್ರಮಿಸಿದರು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿದರು. ಅವರು ಇಂದು …
Read More »
BigTv News
August 20, 2024
Breaking News, ಧಾರವಾಡ
ಧಾರವಾಡ : ಕೇರಳ ರಾಜ್ಯದಲ್ಲಿ ಜಾತಿ, ಮತ ಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ನಾರಾಯಣ ಗುರು ಎಂಬ ಒಬ್ಬ ಸಮಾಜ ಸುಧಾರಕ ಉದಯಿಸಿ, ಸಮಾಜದ ತಾರತಮ್ಯಗಳನ್ನು ತೆಗೆದುಹಾಕಲು ತಮ್ಮ ಇಡಿ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ಹೇಳಿದ ತತ್ವ ಜಗತ್ತಿನಲ್ಲಿ ಇರುವುದು ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬ ಸತ್ಯ ವಾಕ್ಯವನ್ನು ಪ್ರತಿಪಾದಿಸಿದ್ದರು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಮಾತನಾಡಿದರು. ಅವರು ಕರ್ನಾಟಕ ಕುಲಪುರೋಹಿತ ಆಲೂರು …
Read More »
Shaikh BigTv
August 20, 2024
Breaking News, ಧಾರವಾಡ
ನವಲಗುಂದ: ಆಧುನಿಕ ತಂತ್ರಜ್ಞಾನದಿಂದಾಗಿ ನಾನಾ ರೀತಿಯ ಜಂಗಮ ವಾಣಿಗಳು ವಿಭಿನ್ನ ಛಾಯಾಚಿತ್ರಗಳನ್ನು ಭಿತ್ತರಿಸುವುದರಿಂದ ಛಾಯಾಗ್ರಾಹಕರ ಉದ್ಯಮಗಳ ಮೇಲೆ ಹೊಡೆತ ಬಿದ್ದಿದ್ದೆ. ಛಾಯಾಗ್ರಾಹಕರ ನೆರವಿಗಾಗಿ ಸರಕಾರ ಅಕಾಡೆಮಿ ಸ್ಥಾಪಿಸಿ, ಉದ್ಯಮಕ್ಕೆ ತೆರಿಗೆ ವಿನಾಯಿತಿ ನೀಡಿದರೆ ಅನುಕೂಲವಾಗುತ್ತದೆ ಎಂದು ನವಲಗುಂದ ತಾಲೂಕ ಛಾಯಾಗ್ರಾಹಕರ ಅಧ್ಯಕ್ಷರಾದ ಸಂಗಯ್ಯ ಹಿರೇಮಠ ಹೇಳಿದರು. ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿರುವ ಸುಧಾ ಫೋಟೋ ಸ್ಟುಡಿಯೋದಲ್ಲಿ ಹಮ್ಮಿಕೊಂಡ 185ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯಾದ್ಯಂತ ಲಕ್ಷಕ್ಕೂ …
Read More »
Shaikh BigTv
August 20, 2024
Breaking News, ಧಾರವಾಡ
ನವಲಗುಂದ: ಪಟ್ಟಣದ ಶಂಕರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯಲ್ಲಿ ಇಂದು ಭಾರತದ 7ನೇ ಪ್ರಧಾನಮಂತ್ರಿಗಳಾದ ಭಾರತರತ್ನ ದಿ.ರಾಜೀವ ಗಾಂಧಿಯವರ 80 ನೇ ಜನ್ಮದಿನಾಚರಣೆ ನಿಮಿತ್ತ “ರಾಷ್ಟ್ರೀಯ ಸದ್ಭಾವನಾ ದಿವಸ” ವನ್ನು ಎನ್.ಎಸ್.ಎಸ್ ಘಟಕದಡಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ.ಎಂ.ಎನ್.ಹಾರೋಗೇರಿ, ಎಸ್.ಎಸ್.ದೊಡ್ಡಮನಿ, ಇರ್ಷಾದ ಬುದ್ದೇಖಾನ್ ಹಾಗೂ ಸಿಬ್ಬಂದಿ, ಮತ್ತು ಎನ್‌ಎಸ್‌ಎಸ್ ಸ್ವಯಂಸೇವಕರು, ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಚಾರ್ಯರು ಬೋಧಿಸಿದ ಪ್ರತಿಜ್ಞಾವಿಧಿ ಸ್ವೀಕರಿಸಿದರು.
Read More »
Shaikh BigTv
August 20, 2024
Breaking News, ಧಾರವಾಡ
ಧಾರವಾಡ : ಪ್ರತಿಯೊಂದು ಸಮಸ್ಯೆಗಳಿಗೆ ಶಿಕ್ಷಣದಿಂದ ಪರಿಹಾರ ನೀಡಲು ಸಾಧ್ಯವಿದೆ. ಸಮಾಜದವರು ಮೂಲ ವೃತ್ತಿ ಜೊತೆಗೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ ಅವರು ಹೇಳಿದರು. ಅವರು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾದ ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯ ಪ್ರಯುಕ್ತ ಶಿವ ಶರಣ ಶ್ರೀ ನುಲಿಯ ಚಂದಯ್ಯ ಅವರ …
Read More »
Shaikh BigTv
August 20, 2024
Breaking News, ಧಾರವಾಡ
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ಧಾರವಾಡ ನಗರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಧಾರವಾಡ ಕಡಪಾ ಮೈದಾನದಿಂದ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಗಮಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
Read More »
Shaikh BigTv
August 20, 2024
Breaking News, ಧಾರವಾಡ
ಧಾರವಾಡ: ಧಾರವಾಡ ಫೋಟೊ ಮತ್ತು ವಿಡಿಯೋಗ್ರಾಫರ್ಸ್ ಸಂಘದ ವತಿಯಿಂದ 185ನೇ ಛಾಯಾಗ್ರಹಣ ದಿನಾಚರಣೆ ಆ.21ರಂದು ಬೆಳಗ್ಗೆ 9:30ಕ್ಕೆ ನಗರದ ಕನ್ನಡ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ರಂಗಾಯಣದ ನಿರ್ದೇಶಕ ರಾಜು ತಾಳಿಕೋಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಯಾಗಿ ಮಂಜುನಾಥ ಸುಳ್ಳೋಳ್ಳಿ ಆಗಮಿಸುವರು. ಪೃಥ್ವಿರಾಜ್ ಮಿಸ್ಕಿನ್, ಮುರಲಿಧರ ಮಲಿಜಿ, ಶ್ರೀನಿವಾಸ …
Read More »
Shaikh BigTv
August 19, 2024
Breaking News, ಧಾರವಾಡ
ಧಾರವಾಡ: ರಕ್ಷಾ ಬಂಧನ ಹಬ್ಬವನ್ನು ಧಾರವಾಡದ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಗಳು ರಕ್ಷಾಬಂಧನವನ್ನು ಕಟ್ಟಿಕೊಳ್ಳುವುದರ ಮೂಲಕ ವಿಶೇಷವಾಗಿ ಆಚರಿಸಿದರು. ಶಾಲೆಯಲ್ಲಿ ವಿದ್ಯಾರ್ಥಿಗಳು ಪರಸ್ಪರ ರಕ್ಷಾ ಬಂಧನ ಹಬ್ಬದ ಶುಭಾಶಯಗಳು ವಿನಿಮಯ ಮಾಡಿಕೊಂಡರು. ಶಿಕ್ಷಕರು ವಿದ್ಯಾರ್ಥಿಗಳಿಗೆ ರಕ್ಷಾಬಂಧನ ಹಬ್ಬದ ಇತಿಹಾಸವನ್ನು ಹಾಗೂ ಪ್ರಾಮುಖ್ಯತೆಯ ಕುರಿತು ಮನವರಿಕೆ ಮಾಡಿ, ರಕ್ಷಾ ಬಂಧನ ಹಬ್ಬವನ್ನು ವಿಶೇಷವಾಗಿ ಆಚರಿಸಿ ಗಮನ ಸೆಳೆದರು.
Read More »