Breaking News

ಧಾರವಾಡ

ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಬಸವರಾಜ ಗುರಿಕಾರ

ಧಾರವಾಡ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸುದ್ದಿಗೋಷ್ಠಿ ನಡೆಸಿ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ ಆದರೂ ಬಿಜೆಪಿ ವಿನಾಕಾರಣ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಶಿಕ್ಷಕ ಘಟಕದ ರಾಜ್ಯಾಧ್ಯಕ್ಷರಾದ ಬಸವರಾಜ ಗುರಿಕಾರ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅನುಮತಿ ನೀಡಿದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆನ್ನುವ …

Read More »

ಜನರಗೆ ಕೋಟ್ಯಾಂತರ ರೂ. ಫಂಗನಾಮ್ ಹಾಕಿ ಎಸ್ಕೇಪ್ ಆದ ದಂಪತಿ

ಧಾರವಾಡ:ಧಾರವಾಡದಲ್ಲಿ ಕಂಪ್ಯೂಟರ್‌ ಅಂಗಡಿ ಇಟ್ಟುಕೊಂಡಿದ್ದ ಅಮೋಲ್ ಜನರ ವಿಶ್ವಾಸ ಗಳಿಸಿದ್ದು, ಅವರ ಬಳಿ ಕೋಟ್ಯಾಂತರ ರೂಪಾಯಿ ಪಡೆದುಕೊಂಡು ದಂಪತಿ ಧಾರವಾಡವನ್ನೇ ಬಿಟ್ಟು ಹೋಗಿರುವ ಘಟನೆ ನಡೆದಿದೆ. ಮೂಲತಃ ಬೀದ‌ರ್ ಜಿಲ್ಲೆಯ ಔರಾದ್ ತಾಲೂಕಿನವರು ಎಂದು ಹೇಳಿಕೊಂಡು ಬಂದಿದ್ದ ಅಮೋಲ್ ಮೊಕಾಶಿ ಹಾಗೂ ಆತನ ಪತ್ನಿ ಅಪರ್ಣಾ ಮೊಕಾಶಿ, ಕಳೆದ 15 ವರ್ಷಗಳಿಂದ ಧಾರವಾಡದಲ್ಲೇ ವಾಸವಾಗಿದ್ದರು. ಅದೇ ವಿಶ್ವಾಸದ ಮೇಲೆ ಧಾರವಾಡದ ಅನೇಕರ ಬಳಿ ಕಂಪ್ಯೂಟರ್ ತರಬೇಕು, ಸಿಸಿ ಕ್ಯಾಮೆರಾ ತರಬೇಕು …

Read More »

ಸ್ವಾತಂತ್ರ್ಯ ಸಂಗ್ರಾಮಕ್ಕೆ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನ್ನು ಮರೆಯಬಾರದು: ಡಾ. ಅರುಣಕುಮಾರ. ಸಿ.

ಧಾರವಾಡ: ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) ಯಲ್ಲಿ ಅಗಸ್ಟ್ 15, 2024 ರಂದು 78ನೇ ಸ್ವಾತಂತ್ರ್ಸೋವದ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ.ಅರುಣಕುಮಾರು ಸಿ ರವರು ಧ್ವಜಾರೋಹಣಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿ, ಎಲ್ಲರೂ ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ರಾಷ್ಟ್ರದ ಅಭಿವೃದ್ದಿ ಸಾಧ್ಯ, ನಾವೆಲ್ಲರೂ ಒಂದು ಎನ್ನುವ ಭಾವನೆ ಎಲ್ಲರಲ್ಲೂ ಬೆಳಸಿಕೊಳ್ಳಬೇಕೆಂದು ತಿಳಿಸಿದರು. ಭಾರತ ದೇಶಕ್ಕೆ ಸ್ವಾತಂತ್ರ್ಯ ಬರಲು ಅನೇಕ ಹೋರಾಟಗಾರರು ತಮ್ಮ ಅಮೂಲ್ಯ …

Read More »

ವೈದ್ಯಕೀಯ ಸಿಬ್ಬಂದಿ ಮೇಲೆ ಅತ್ಯಾಚಾರ ಎಸಗಿ ಕೊಲೆ:ನಗರಷ ಆಸ್ಪತ್ರೆಯ ಓಪಿಡಿ ಬಂದ್

ಧಾರವಾಡ: ರಾಜ್ಯಾದ್ಯಂತ ಪಶ್ಚಿಮ ಬಂಗಾಳದಲ್ಲಿ ನಡೆದ ವೈದ್ಯಕೀಯ ಸಿಬ್ಬಂದಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ ಖಂಡಿಸಿ ಧಾರವಾಡ ನಗರದಲ್ಲಿನ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯ ಓಪಿಡಿ (ಹೊರ ರೋಗಿಗಳ ಚಿಕಿತ್ಸೆ) ಬಂದ್‌ ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಧಾರವಾಡ ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ (ಓಪಿಡಿ) ಹೊರ ರೋಗಿಗಳ ಚಿಕಿತ್ಸೆ ಬಂದ್ ಮಾಡಲಾಗಿದ್ದು, ವೈದ್ಯಕೀಯ ಸಿಬ್ಬಂದಿ ಪ್ರಕರಣದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.

Read More »

ಹೆಸರು ಖರೀದಿ ಕೇಂದ್ರ ತೆರೆಯುವಂತೆ ಎಂ.ಆರ್.ಪಾಟೀಲ್ ಮನವಿ

ಕುಂದಗೋಳ : ಕರ್ನಾಟಕ ಸರ್ಕಾರದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಹೆಸರು ಖರೀದಿ ಕೇಂದ್ರ ತೆರೆಯುವಂತೆ ಶಾಸಕ ಎಂ.ಆರ್.ಪಾಟೀಲ್ ಮನವಿ ಮಾಡಿದ್ದಾರೆ. ಪ್ರಸ್ತುತ ವರ್ಷ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕುಂದಗೋಳ ಮತಕ್ಷೇತ್ರದಲ್ಲಿ ರೈತರು ಹೆಸರು ಬೆಳೆ ಬೆಳೆದಿದ್ದಾರೆ.ಆ ಬೆಳೆಗೆ ಖಾಸಗಿ ವರ್ತಕರಿಂದ ಬೆಂಬಲ ಬೆಲೆ ದೂರವಾಗಿದೆ, ಸರ್ಕಾರ ಈಗಾಗಲೇ ಬೆಂಬಲ ಬೆಲೆ ರೂ. 8662 ಘೋಷಣೆ ನಿಗದಿ ಮಾಡಿದೆ, …

Read More »

ಧಾರವಾಡ ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟಿ ಅಧಿಕಾರ ಸ್ವೀಕಾರ

ಧಾರವಾಡ: ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಕಲಾ ಹುಡೇದ ಮತ್ತು ವಿವಿಧ ಕಲಾವಿದರು ಇದ್ದರು.

Read More »

ಸ್ವಾತಂತ್ರ್ಯ ಸಂಗ್ರಾಮದ ದಾಖಲೆ, ಚಲನಚಿತ್ರ ಪ್ರದರ್ಶನಕ್ಕೆ ಗಣ್ಯರು ಭೇಟಿ

ಧಾರವಾಡ:ನಗರದ ವಿದ್ಯಾವರ್ಧಕ ಸಂಘದಲ್ಲಿ ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯಿಂದ ಆಯೋಜಿಸಿರುವ ಸ್ವಾತಂತ್ರ್ಯ ಸಂಗ್ರಾಮದ ದಾಖಲೆ ಮತ್ತು ಛಾಯಾಚಿತ್ರಗಳ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಸೇರಿದಂತೆ ಇತರ ಅಧಿಕಾರಗಳು ಇಂದು ಭೇಟಿ ನೀಡಿ, ವಿಕ್ಷೀಸಿದರು. ಹಿರಿಯ ಸಹಾಯಕ ನಿರ್ದೇಶಕಿ ಡಾ. ಮಂಜುಳಾ ಯಲಿಗಾರ ಇದ್ದರು.

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಿಲಾದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜನ್ಮ ದಿನಾಚರಣೆಯ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ ಅವರು ಪುμÁ್ಪರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ, ಜಿಲ್ಲಾ ಪಂಚಾಯತ ಸಿ.ಇ.ಓ ಸ್ವರೂಪ ಟಿ.ಕೆ, ಹುಬ್ಬಳ್ಳಿ- …

Read More »

ಪ್ರಧಾನಮಂತ್ರಿಗಳ ಹೊಸ 15 ಅಂಶ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

ಧಾರವಾಡ :ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ವಿವಿಧ ಇಲಾಖೆಗಳು ನೀಡುವ ಫಲಾನುಭವಿ ಆಧಾರಿತ ಮತ್ತು ಸಮುದಾಯ ಆಧಾರಿತ ಯೋಜನೆಗಳನ್ನು ಅರ್ಹ ಅಲ್ಪಸಂಖ್ಯಾತರಿಗೆ ತಲುಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯತ ಮಟ್ಟದಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಸ್ಥಳೀಯ ಸಂಸ್ಥೆಗಳೊಂದಿಗೆ ಸಭೆ ಜರುಗಿಸಿ, ಅರ್ಹ ಫಲಾನುಭವಿಗಳ ಪಟ್ಟಿ ತಯ್ಯಾರಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ …

Read More »

7ನೇ ವೇತನ ಆಯೋಗ ಜಾರಿ ಮಾಡಿದ ಸರ್ಕಾರಕ್ಕೆ ಅಭಿನಂದನೆ : ಜಿಲ್ಲಾಧ್ಯಕ್ಷ ಎಸ್ ಎಫ್ ಸಿದ್ದನಗೌಡರ

ಧಾರವಾಡ: ಸರಕಾರಿ ನೌಕರರ ಸಂಘದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಧ್ವಜಾರೋಹಣವನ್ನು ನೆರವೇರಿಸಿದರು.ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಎಲ್ಲನೌಕರರ ಭಾಂಧವರಿಗೆ ಮೊದಲಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶುಭ ಕೋರಿದರು. ರಾಜ್ಯ ಸರ್ಕಾರಿ ನೌಕರರು ದಕ್ಷತೆಯಿಂದ ಸೇವೆಸಲ್ಲಿಸುತ್ತಿರುವ ಕಾರಣದಿಂದಾಗಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಅಭಿವೃಧಿಯಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕ ಸರಕಾರ ಸರಕಾರಿ ನೌಕರರಿಗಾಗಿ 7ನೇ ವೇತನ ಆಯೋಗವನ್ನು ಯಥಾವತ್ತಾಗಿ ಜಾರಿ ಮಾಡಿದ ಮಾನ್ಯ ಮುಖ್ಯ ಮಂತ್ರಿಯವರಿಗೆ ಹಾಗೂ ಉಪ ಮುಖ್ಯ …

Read More »