Breaking News

ಧಾರವಾಡ

ನವೆಂಬರ್ ಮಹಾಕ್ರಾಂತಿ ವರ್ಷಾಚರಣೆ….

ಧಾರವಾಡ: ಮಾನವನಿಂದ ಮಾನವನ ಶೋಷಣೆಯನ್ನು ಕೊನೆಗಾಣಿಸಿ, ಪ್ರಪಂಚದಲ್ಲೇ ಮೊದಲ ಬಾರಿಗೆ ಕಾರ್ಮಿಕ ವರ್ಗದ ಅಧಿಕಾರ ಸ್ಥಾಪನೆಗೆ ಕಾರಣವಾದ 1917ರಲ್ಲಿ ರಷ್ಯಾದಲ್ಲಿ ಜರುಗಿದ ನವೆಂಬರ್ ಮಹಾಕ್ರಾಂತಿಯ 106 ನೇ ವರ್ಷಾಚರಣೆ ಕಾರ್ಯಕ್ರಮವನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ (ಎಸ್.ಯು.ಸಿ.ಐ-ಸಿ) ಪಕ್ಷದ ಧಾರವಾಡ ಜಿಲ್ಲಾ ಸಮಿತಿಯಿಂದ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನವೆಂಬರ್ ಮಹಾಕ್ರಾಂತಿಯ ಶಿಲ್ಪಿಗಳಾದ ಕ ಲೆನಿನ್, ಸ್ಟಾಲಿನ್ ರವರ ಭಾವಚಿತ್ರಕ್ಕೆ ಜಿಲ್ಲಾ ಸಮಿತಿಯ ಹಿರಿಯ ಸದಸ್ಯರಾದ …

Read More »

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ಆದೇಶ ಹಿಂಪಡೆಯಲು ಆಗ್ರಹ….

ಧಾರವಾಡ: ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕಡಿತಗೊಳಿಸಿ ಕಲ್ಯಾಣ ಮಂಡಳಿಯು ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿ ಎಐಯುಟಿಯುಸಿ ಗೆ ಸೇರಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ(ರಿ)ದ ಜಿಲ್ಲಾ ಸಮಿತಿಯವರು ಇಂದು ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆದಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ,ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಳೆದ ೨ ವರ್ಷಗಳಿಂದ ಶೈಕ್ಷಣಿಕ ವರ್ಷಗಳ ಸಹಾಯಧನವನ್ನು …

Read More »

ರೈತರ ಬೇಡಿಕೆಗಳಿಗಾಗಿ ಬೃಹತ್ ಪ್ರತಿಭಟನೆ…

ಧಾರವಾಡ: ಧಾರವಾಡ ಮುರಘಾಮಠದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ರವರ ನೇತೃತ್ವದಲ್ಲಿ ಗುರುವಾರ ದಿ 09 ರಂದು ಸಮಮ 10-30 ಗಂಟೆಗೆ ರೈತರ ಬೇಡಿಕೆಗಳಿಗಾಗಿ ಬೃಹತ್ ಪ್ರತಿಭಟನೆ ಹಾಗೂ ಡಿಸಿ ಕಛೇರಿ ಮುತ್ತಿಗೆ ಕಾರ್ಯಕ್ರಮ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಹಮ್ಮಿಕೊಂಡಿದೆ ಎಂದು ಪ್ರದಾನ ಕಾರ್ಯದರ್ಶಿ ಚಂದ್ರಶೇಖರ ಮ. ಕಲ್ಕೂರ ಹೇಳಿದರು, ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಕಬ್ಬಿಗೆ ಪ್ರತಿ ಟನ್ನಗೆ 4000 ರೂಪಾಯಿ ಬೆಲೆ …

Read More »

ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ಜ ಜಪಾನ್‌ಗೆ ತೆರಳಲು ಧನಸಹಾಯವನ್ನು ಮಾಡಿದ್ದರು

ಧಾರವಾಡ:ಧಾರವಾಡ ಜಿಲ್ಲೆಯ ಕುಂದಗೋಳ‌ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು. ವಿದ್ಯಾರ್ಥಿನಿಯು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್ ಅವಾರ್ಡ್ 2023 ಸ್ಪರ್ಧೆʼ ಯಲ್ಲಿ ಭಾಗವಹಿಸುತ್ತಿದ್ದಾಳೆ. ಇದು ಇಡೀ …

Read More »

ಡಾ. ಪುನೀತ್ ರಾಜಕುಮಾರ್ ಯುವ ಜನತೆಗೆ ಸ್ಪೂರ್ತಿದಾಯಕ ವ್ಯಕ್ತಿ

ಹುಬ್ಬಳ್ಳಿ : ಕರ್ನಾಟಕ ರತ್ನ ಪವರ್ ಸ್ಟಾರ್ ಡಾ// ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆಯ ಅಂಗವಾಗಿ ಇಲ್ಲಿಯ ನವನಗರದಲ್ಲಿರುವ ಕರ್ನಾಟಕ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆಯ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ರಕ್ತದಾನ ಶಿಬಿರವನ್ನು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ಡಾ. ಬಿ ಆರ್ ಪಾಟೀಲ್ ಅವರು ಪುನೀತ್ ರಾಜಕುಮಾರ್ ಕೇವಲ ಒಬ್ಬ …

Read More »

ಸಂತೋಷ್ ಲಾಡ್‌ ಧಾರವಾಡ-ಹಳಿಯಾಳ ರಾಜ್ಯ ಹೆದ್ದಾರಿಯ ಪರಿಶೀಲನೆ…

ಧಾರವಾಡ: ಸ್ಥಳೀಯರ ಅಹವಾಲಿನಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ ಧಾರವಾಡ-ಹಳಿಯಾಳ ರಾಜ್ಯ ಹೆದ್ದಾರಿಯ ಪರಿಶೀಲನೆ ನಡೆಸಿದರು. ರಸ್ತೆ ತಿರುವು ದುರಸ್ತಿ ಮತ್ತು ಸೇತುವೆಯ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಚಿವ ಸಂತೋಷ್ ಲಾಡ್, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಅವರೊಂದಿಗೆ ಧಾರವಾಡ-ಹಳಿಯಾಳ ರಾಜ್ಯ ಹೆದ್ದಾರಿಯನ್ನು ಉನ್ನತ ಶಿಕ್ಷಣ ಅಕಾಡೆಮಿ ಹತ್ತಿರ ಪರಿಶೀಲನೆ ನಡೆಸಿದರು.

Read More »

ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಬಾಲಕ ಸಾವು…

ಧಾರವಾಡ: ರಸ್ತೆ ಬದಿ ನಿಂತಿದ್ದ ಬಾಲಕನಿಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಮೃತಪಟ್ಟ ಘಟನೆ ಇಂದು ಮುಂಜಾನೆ ಧಾರವಾಡ-ಹಳಿಯಾಳ ರಸ್ತೆಯಲ್ಲಿನ ತಾಲೂಕಿನ ಸಲಕಿನಕೊಪ್ಪದ ಬಳಿ ಸಂಭವಿಸಿದೆ. ಮುಧೋಳ ಮೂಲದ ಅರ್ಷದ ಅಹ್ಮದ ಸಲೀಂ ಚೌಧರಿ (8) ಮೃತಪಟ್ಟಿದ್ದು, ದಾಂಡೇಲಿಗೆ ತೆರಳುತ್ತಿದ್ದ ಸಮಯದಲ್ಲಿ ಧಾರವಾಡ ತಾಲೂಕಿನ ಸಲಕಿನಕೊಪ್ಪದ ಬಳಿ ಉಪಹಾರಕ್ಕಾಗಿ ಹೊಟೇಲ್ ಬಳಿ ಕಾರು ನಿಲ್ಲಿಸಿದ್ದರು. ಉಪಹಾರ ಮುಗಿಸಿ ಬಾಲಕ ಕಾರು ಬಳಿ ನಿಂತ ಸಮಯದಲ್ಲಿ, …

Read More »

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಟಿಂಗರಿಕರ್….

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 19ನೇ ಆರೋಪಿಯಾಗಿರುವ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯೋಗೀಶಗೌಡರ ಹತ್ಯೆಯಾದಾಗ ಚೆನ್ನಕೇಶವ ಟಿಂಗರಿಕರ್ ಧಾರವಾಡ ಉಪನಗರ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದರು. ಅಲ್ಲದೇ ಪ್ರಕರಣದ ತನಿಖಾಧಿಕಾರಿ ಸಹ ಆಗಿದ್ದರು. ಸಿಬಿಐಗೆ ಈ ಪ್ರಕರಣದ ತನಿಖೆ ಹಸ್ತಾಂತರಗೊಂಡ ನಂತರ ಟಿಂಗರಿಕರ್ ಸಹ ಈ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು ಎಂದು …

Read More »

1978 ನನ್ನ ಜೀವನದ ಅಮೂಲ್ಯ ವರ್ಷ: ಡಾ.ವೀರೇಂದ್ರ ಹೆಗ್ಗಡೆ

ಧಾರವಾಡ : 1978 ರಲ್ಲಿ ನನ್ನ ಜೀವನದ ಅತಿ ಅಮೂಲ್ಯವಾದ ವರ್ಷ. ನನ್ನ ಮದುವೆಯಾಗಿದ್ದು 1978 ರಲ್ಲಿ ಆ ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿ ‌ಕೆಲಸಗಳು ಆಗಿವೆ ಎಂದು ರಾಜ್ಯಸಭಾ ಸದಸ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಮ್ಮ ಮದುವೆಯ ನೆನಪನ್ನು ಮೆಲುಕು ಹಾಕಿದರು. ಜೆಎಸ್ಎಸ್ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿ ಪ್ರಾರಂಭ ಮಾಡಿದ ವರ್ಷ ಅದು. ಧಾರವಾಡದಲ್ಲಿ ಜೆಎಸ್ಎಸ್ ಧಾರವಾಡ …

Read More »

ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ….

ಧಾರವಾಡ : ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಸಂಸ್ಕೃತಿ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಧಾರವಾಡದ ವಿದ್ಯಾರ್ಥಿಗಳಾದ ಕು.ಸುಬ್ರಹ್ಮಣ್ಯ ತೋಳಮಟ್ಟಿ, .ದಾನೇಶ್ ಎಂ.ವಿ. ಹಾಗೂ ಆದಿತ್ಯ ಜನಾದ್ರಿ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಆಶುಭಾಷಣ ಸ್ಪರ್ಧೆಯಲ್ಲಿ ಕು.ಶ್ರೇಯಸ್ ಯಮಕನಮರಡಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ಶಾಲೆಯ ಕಾರ್ಯದರ್ಶಿಗಳಾದ ರಾಘವೇಂದ್ರ ಅಂಬೇಕರ್, ಪ್ರಾಚಾರ್ಯರಾದ ಡಾ. ಅನಿತಾ …

Read More »