Shaikh BigTv
November 15, 2024
Breaking News, ಧಾರವಾಡ
ಧಾರವಾಡ: ನವಲಗುಂದ ಪುರಸಭೆ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಮರ್ಪಕ ವಸೂಲಾತಿಗಾಗಿ ಡೇ-ನಲ್ಮ ಅಭಿಯಾನದಡಿ ಆಯಾ ಪುರಸಭೆ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯುವ ಪ್ರಯುಕ್ತ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಮಹಿಳಾ ಸ್ವ-ಸಹಾಯ ಗುಂಪುಗಳು ನವೆಂಬರ 26, 2024 ರೊಳಗಾಗಿ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಪುರಸಭೆ ಕಾರ್ಯಾಲಯದಲ್ಲಿ …
Read More »
Shaikh BigTv
November 15, 2024
Breaking News, ಧಾರವಾಡ
ಧಾರವಾಡ: ಕೈಮಗ್ಗ ಮೇಳವು ರಾಜ್ಯ ಹಾಗೂ ಹೊರರಾಜ್ಯಗಳ ವೈವಿಧ್ಯಮಯ ಉತ್ಪನ್ನಗಳಿಂದ ಹುಬ್ಬಳ್ಳಿ-ಧಾರವಾಡ ಜನತೆಯನ್ನು ಆಕರ್ಷಿಸುತ್ತಿದೆ. ನವೆಂಬರ 1, 2024 ರಿಂದ ಪ್ರಾರಂಭಗೊಂಡ ಕೈಮಗ್ಗ ಮೇಳವು ನವೆಂಬರ 14, 2024ರವೆಗೆ ಜರುಗಲಿದ್ದು, ಜನರನ್ನು ತನತ್ತ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಮೇಳದಲ್ಲಿ ನವೆಂಬರ 1 ರಿಂದ 10 ವರೆಗೆ ಒಟ್ಟು ರೂ. 62,33,245 ಗಳ ವಹಿವಾಟು ಆಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಇಂದು ಕೈಮಗ್ಗ ಮೇಳಕ್ಕೆ ಭೇಟಿ ನೀಡಿ, ಮಾಧ್ಯಮ …
Read More »
Shaikh BigTv
November 15, 2024
Breaking News, ಧಾರವಾಡ
ಧಾರವಾಡ: ಸರ್ಕಾರದ ಯೋಜನೆಗಳ ಅನುμÁ್ಟನ ಜವಾಬ್ದಾರಿ ಹೊತ್ತವರು ಇಲಾಖಾ ಅಧಿಕಾರಿಗಳು. ಯೋಜನೆಗಳ ಅನುμÁ್ಟನದಲ್ಲಿ ಬದ್ಧತೆ ಹಾಗೂ ಕಾಳಜಿ ಇರಲಿ ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ತಿಳಿಸಿದರು. ಅವರು ಧಾರವಾಡದ ಸೃಜನಾ ರಂಗ ಮಂದಿರದಲ್ಲಿ ಗುರುವಾರ ಧಾರವಾಡ ಜಿಲ್ಲೆಗೆ ಸಂಭಂದಿಸಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ …
Read More »
Shaikh BigTv
November 15, 2024
Breaking News, ಧಾರವಾಡ
ಧಾರವಾಡ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ ಹಾಗೂ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್, ಜಿಲ್ಲಾ ಆಸ್ಪತ್ರೆ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ 2024 ಅಂಗವಾಗಿ ಇಂದು (ನ.14) ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್, ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ಸಾಮಾನ್ಯ ಕ್ಯಾನ್ಸರ್ ತಪಾಸಣೆಯನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಸಂಗಪ್ಪ ಗಾಬಿ ಹಾಗೂ ಜಿಲ್ಲಾ ಎನ್.ಸಿ.ಡಿ. ಕಾರ್ಯಕ್ರಮಾಧಿಕಾರಿ …
Read More »
Shaikh BigTv
November 15, 2024
Breaking News, ಧಾರವಾಡ
ಧಾರವಾಡ: ಹಲವು ಸಲ ಸೂಕ್ತ ನಿರ್ದೇಶನಗಳನ್ನು ನೀಡಿದರೂ ಕೆಲವು ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳಲ್ಲಿ ವಿಳಂಬ, ನಿμÁ್ಕಳಜಿ ಕಾಣುತ್ತಿದೆ. ಇದರಿಂದ ಆಗುವ ರಸ್ತೆ ಅಪಘಾತ, ಜೀವ ಹಾನಿಗಳಿಗೆ ಕಾಮಗಾರಿ ವ್ಯಾಪ್ತಿಯ ಸಂಬಂಧಿತ ಅಧಿಕಾರಿಗಳನ್ನು ಸಹ ಜವಾಬ್ದಾರರನ್ನಾಗಿ ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ರಸ್ತೆ ಸುರಕ್ಷಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಎಚ್ಚರಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ …
Read More »
Shaikh BigTv
November 12, 2024
Breaking News, ಧಾರವಾಡ
ಧಾರವಾಡ: ಒನಕೆ ಓಬವ್ವ 18 ನೇ ಶತಮಾನದಲ್ಲಿ ಸಾಮಾನ್ಯ ಮಹಿಳೆ. ಚಿಕ್ಕ ವಯಸ್ಸಿನಲ್ಲಿ ಮದುವೆಯಾಗಿ ತನ್ನ ಜೀವನ ಪ್ರಾರಂಭಿಸಿದಳು. ರಾಜರುಗಳು ತಮ್ಮ ಸೇನಾ ಬಲದಿಂದ ತಮ್ಮ ಸಾಮ್ರಾಜ್ಯವನ್ನು ಕಟ್ಟುವ ಕಾಲದಲ್ಲಿ ಒನಕೆ ಓಬವ್ವಳು ರಾಜ್ಯ ರಕ್ಷಣೆ ಮತ್ತು ರಾಜ್ಯಕ್ಕೆ ನಿಷ್ಠಳಾಗಿ ತೋರಿದ ಧೈರ್ಯ ಮತ್ತು ಸಾಹಸಗಳು ಸ್ತ್ರಿ ಕುಲಕ್ಕೆ ಅತ್ಯಂತ ಅಭಿಮಾನ, ಗೌರವಗಳನ್ನು ತಂದುಕೊಟ್ಟಿವೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಡಳಿತ …
Read More »
Shaikh BigTv
November 12, 2024
Breaking News, ಧಾರವಾಡ
ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನವೆಂಬರ 18 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ತಿಳಿಸಿದರು. …
Read More »
Shaikh BigTv
November 12, 2024
Breaking News, ಧಾರವಾಡ
ಧಾರವಾಡ: ಕರ್ನಾಟಕ ರಾಜ್ಯ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ನವೆಂಬರ 14 ರಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ನಡೆಸಲಿದ್ದು, ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದರು. ಅವರು, ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ, ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು …
Read More »
BigTv News
November 10, 2024
Breaking News, ಧಾರವಾಡ
ಧಾರವಾಡ: ಮುಂಗಾರು ಹಂಗಾಮಿನಲ್ಲಿ ಭತ್ತ ಬೆಳೆದ ರೈತರಿಗೆ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಧಾರವಾಡ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡಲು ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. ಎಫ್‌ಎಕ್ಯೂ ಗುಣಮಟ್ಟದ ಭತ್ತವನ್ನು ರೈತರಿಂದ ಪ್ರತಿ ಕ್ವಿಂಟಾಲ್‌ಗೆ ರೂ.2,300 ಮತ್ತು ಬಿಳಿಜೋಳವನ್ನು ರೂ. 3,371 ದರದಲ್ಲಿ ಖರೀದಿ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಈ …
Read More »
Shaikh BigTv
November 7, 2024
Breaking News, ಧಾರವಾಡ
ಧಾರವಾಡ: ತಾರ್ ಜೀಪ್ ಹಾಗೂ ಪಶು ಆ್ಯಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾರ್‌ನಲ್ಲಿದ್ದ ಕೆಲವರಿಗೆ ಗಾಯಗಳಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಸಂಭವಿಸಿದೆ. ಪಶು ಆ್ಯಂಬುಲೆನ್ಸ್ ಹಾಗೂ ತಾರ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದರಿಂದ ತಾರ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೇ ವಾಹನದಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಗಾಯಗೊಂಡವರ ಹೆಸರು ವಿಳಾಸ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ …
Read More »