BigTv News
April 14, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ, ಪೂಜೆ ಮಾಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಮಂಜುಳಾ ಚವ್ಹಾಣ, ಅಪರ ತಹಸೀಲ್ದಾರರಾದ ಜಿ.ವಿ.ಪಾಟೀಲ, ಶಿವಾನಂದ ಹೆಬ್ಬಳ್ಳಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ …
Read More »
BigTv News
April 11, 2023
Breaking News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಾವೆಲ್ಲರೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಗರು. ಶೆಟ್ಟರ್ ಅವರು ಎಲ್ಲಿ ಇರುತ್ತಾರೋ ನಾವು ಅಲ್ಲಿಯೇ ಅವರೊಂದಿಗೆ ಇರುತ್ತೇವೆ. ಹೈ ಕಮಾಂಡ್ ಯಾವುದೇ ಪರಿಸ್ಥಿತಿಯಲ್ಲಿಯೂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವುದು ಖಂಡಿತ. ಈಗ ಎದ್ದಿರುವ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ನಾಗೇಶ ಕಲಬುರಗಿ ಹೇಳಿದರು.ಜಗದೀಶ್ಶೆ ಟ್ಟರ್ ನಿವಾಸಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಶಾಸಕರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಿಎಂ …
Read More »
BigTv News
April 9, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ಇವತ್ತು ರಾತ್ರಿ ಅಥವಾ ನಾಳೆ ಬಿಜೆಪಿ ಪಟ್ಟಿ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ಇವತ್ತು ಸಾಯಂಕಾಲ ಪಾರ್ಲಿಮೆಂಟರಿ ಮೀಟಿಂಗ್ ಫಿಕ್ಸ್ ಆಗಿದೆ. ಇವತ್ತು ರಾತ್ರಿ ಮೊದಲ ಪಟ್ಟಿ ಬಿಡುಗಡೆ ಆಗಬಹುದು. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ನಮ್ಮ ಲಿಸ್ಟ್ ಬಿಡುಗಡೆ ಆಗಿದೆ. ಹಿಂದಿನ ಚುನಾವಣೆಯಲ್ಲೂ ಇದೇ ತರಹ ಆಗಿದೆ. ಹೀಗಾಗಿ ವಿಳಂಬ ಅನ್ನೋ ಪ್ರಶ್ನೆ ಬರಲ್ಲ. ಕಾಂಗ್ರೆಸ್ ಒಂದು ತಿಂಗಳ …
Read More »
BigTv News
April 7, 2023
ಕರ್ನಾಟಕ, ಧಾರವಾಡ
ಧಾರವಾಡ: ಕಾಂಗ್ರೆಸ್ ಪಕ್ಷದಿಂದ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ವಿನಯ್ ಕುಲಕಣಿ೯ ಟಿಕೆಟ್ ಘೋಷಣೆ ಮಾಡಿದ್ದೆ ತಡ,ತಾಲೂಕಿನ ಶಿವಳ್ಳಿಯ ಗ್ರಾಮದೇವಿ ದುರ್ಗಾದೇವಿಗೆ ಪೂಜೆ ಸಲ್ಲಿಸಿ, ವಿನಯ ಕುಲಕರ್ಣಿಯವರ ಅನುಪಸ್ತಿತಿಯಲ್ಲಿ ಚುನಾವಣಾ ಪ್ರಚಾರಕ್ಕೆ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿಯವರು ಚಾಲನೆ ನೀಡಿದರು. ಮನೆ ಮನೆಗೆ ತೆರಳಿ ವಿನಯ ಕುಲಕರ್ಣಿಯವರ ಪರವಾಗಿ ಸಹಕಾರ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಶಿವಲೀಲಾ ಕುಲಕರ್ಣಿಯವರು, ವಿನಯ ಕುಲಕರ್ಣಿಯವರ ಜನಪ್ರೀಯತೆ ಯನ್ನು ಸಹಿಸಲಾರದ …
Read More »
BigTv News
April 6, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 400 ಮೊಬೈಲ್ ಹಸ್ತಾಂತರ ಮಾಡಲಾಯಿತು. ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕ್ಯಾಂಪಸ್ ಆವರಣದಲ್ಲಿ ಆಯೋಜಿಸಲಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೆಶಕ ಪ್ರವೀಣ ಸೂದ್ ನೇತೃತ್ವದಲ್ಲಿ …
Read More »
BigTv News
April 6, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಸ್ಥಾನಮಾನ ಶಾಶ್ವತವಲ್ಲ. ನಿಮ್ಮ ಹೃದಯದಲ್ಲಿ ಒಂದು ಸ್ಥಾನವನ್ನು ಮಾಡಿದ್ದೇನೆ ಅದೇ ನನಗೆ ಶಾಶ್ವತ. ಕೋಟಿಗಟ್ಟಲೆ ನಮ್ಮ ಬಂಧುಗಳಿದ್ದಾರೆ. ನಿಮಗೆ ಒಂದು ಅಳಿಲು ಸೇವೆಯನ್ನು ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರ ಭಾವುಕವಾಗಿ ನುಡಿದಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಐದು ವರ್ಷ ಬಾವಿಯಲ್ಲಿ ಇಳಿದು ಚುನಾವಣೆ ಬಂದಾಗ ಮಾತ್ರ ಮೇಲೆ ಬರುವುದು ಚುನಾವಣೆ ಮುಗಿಸಿ ಬಾವಿ ಸೇರುವುದನ್ನು ಕಾಂಗ್ರೆಸ್ ಮಾಡಿದೆ. ವಂಚನೆ ಮಾಡುವ ಆಟವನ್ನು ಕಾಂಗ್ರೆಸ್ ಮಾಡುತ್ತಿದೆ ಎಚ್ಚರಿಕೆ …
Read More »
BigTv News
April 6, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಶೋಷಿತ ವರ್ಗಗಳಿಗೆ ಅನ್ಯಾಯ ಮಾಡಿರುವ ಪಕ್ಷ ಅಂದರೆ ಅದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೂ ಕೂಡ ಸಾಕಷ್ಟು ಅಡೆತಡೆಗಳನ್ನು ಉಂಟು ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಡುವ ಮನೆ ಅಲ್ಲಿ ಯಾರು ಕೂಡ ಹೋಗಬಾರದು ಎಂದು ಬಾಬಾಸಾಹೇಬ ಅಂಬೇಡ್ಕರ್ ಅವರು ಹೇಳಿದ್ದಾರೆ. ಹಸಿರುಕ್ರಾಂತಿ ಹರಿಕಾರ ಜಗಜೀವನರಾಮ್ ಅವರಿಗೆ ಅನ್ಯಾಯ ಮಾಡಿದವರು ಕಾಂಗ್ರೆಸ್ ಪಕ್ಷ. …
Read More »
BigTv News
April 5, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಾಳೆ ಕರ್ನಾಟಕದ ಇತಿಹಾಸದಲ್ಲಿ ಒಂದು ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ, ಒಳಮೀಸಲಾತಿಯನ್ನು ಬಸವರಾಜ ಬೊಮ್ಮಾಯಿ ಅನುಷ್ಠಾನಕ್ಕೆ ತಂದಿದ್ದಾರೆ. ಇದು ಐತಿಹಾಸಿಕ ನಿರ್ಧಾರ. ನಾಳೆ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ದಲಿತ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡಿತ್ತು. ಐದು ವರ್ಷಕ್ಕೊಮ್ಮೆ ಅವರನ್ನ ಬಾವಿಯಿಂದ ಹೊರಗೆ ತಗೆದು ವೋಟ್ ಹಾಕಿಸಿಕೊಂಡು ಮತ್ತೆ ಬಾವಿಯೊಳಗೆ ತಳುತ್ತಿದ್ದರೆಂದು ಸಚಿವ ಸಿಸಿ ಪಾಟೀಲ್ ಹೇಳಿದರು. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಸಮಾಜಕ್ಕೆ ನ್ಯಾಯ …
Read More »
BigTv News
April 4, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪ್ರಗತಿ ಹಂತದಲ್ಲಿದ್ದ ಮನೆಯೊಂದರ ಗೇಟ್ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಮಂಟೂರ ರಸ್ತೆಯ ಗಣೇಶ್ ಕಾಲೋನಿಯಲ್ಲಿ ಘಟನೆ ನಡರದಿದ್ದು, ೭ ವರ್ಷದ ಬಾಲಕ ಎಂದು ತಿಳಿದು ಬಂದಿದ್ದು, ಹೆಸರು ಹಾಗೂ ಮಾಹಿತಿ ತಿಳಿದು ಬಂದಿಲ್ಲ. ಪ್ರಗತಿಹಂತದಲ್ಲಿದ್ದ ಮನೆಯೊಂದರ ಬಳಿಯಲ್ಲಿ ಬಾಲಕ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
Read More »
BigTv News
April 2, 2023
ಕರ್ನಾಟಕ, ಧಾರವಾಡ
ಧಾರವಾಡ: ಬಾರಾಕೋಟ್ರಿಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಮನೆಯ ಮುಂದೆ ಧಾರವಾಡ – 71 ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು, ಮುಖಂಡರು ಧರಣಿ ನಡೆಸಿದರು. ಧಾರವಾಡ ಕ್ಷೇತ್ರದ ಜೊತೆ ಶಿಗ್ಗಾಂವಿ ಕ್ಷೇತ್ರದ ಲ್ಲಿ ಸ್ಪರ್ಧೆ ಕುರಿತು ಚರ್ಚೆ ನಡೆಯುತ್ತಿದೆ. ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತಿದೆ. ಧಾರವಾಡ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಅಭಿವೃದ್ದಿ ಕೈಕೊಂಡಿದ್ದಾರೆ. …
Read More »