Breaking News

ಧಾರವಾಡ

ಮುಸ್ಲಿಂರ 4% ಮೀಸಲಾತಿ ಕಸಿದುಕೊಂಡ ಸರ್ಕಾರದ ವಿರುದ್ಧ ಖಂಡನೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಏಕಾಏಕಿ ಮುಸ್ಲಿಂ ಸಮುದಾಯದ ಶೇ.4 ರ ಮೀಸಲಾತಿ ಕಿತ್ತುಕೊಂಡಿರುವುದು ಖಂಡನೀಯ ಎಂದು ಮುಸ್ಲಿಂ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಮುಸ್ತಫಾ ಕುನ್ನಿಭಾವಿ ಹೇಳಿದರು. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯಾವ ಆಧಾರದ ಮೇಲೆ ಮೀಸಲಾತಿ ಕಿತ್ತುಕೊಂಡಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಮಹಾರಾಜರು ನೇಮಿಸಿದ ಲೆಸ್ಲಿ ಮಿಲ್ಲರ್ ಆಯೋಗದ ವರದಿಯಿಂದ ಹಿಡಿದು ಡಾ. …

Read More »

ಹಾಡು ಹಾಡಿ ಜನರನ್ನ ರಂಜಿಸಿದ ಸಚಿವ ಮುನೇನಕೊಪ್ಪ

ಹುಬ್ಬಳ್ಳಿ: ಬ್ಯೂಸಿ ಸೆಡ್ಯೂಲ್‌ನಲ್ಲಿ, ರಿಲ್ಯಾಕ್ಸ್ ಆಗಿ ಹಾಡು ಹಾಡಿ ಜನರನ್ನ ರಂಜಿಸಿದ ಸಚಿವ ಮುನೇನಕೊಪ್ಪ. ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಂಡಾಯದ ನೆಲಮೊರಬದಲ್ಲಿ ಸಖತ್ ಆಗಿ ಕನ್ನಡ ಗೀತೆಗಳನ್ನು ಹಾಡಿ ಜನರನ್ನ ರಂಜಿಸಿದ್ದಾರೆ. ಮೊರಬ ಗ್ರಾಮದಲ್ಲಿ ಆಯೋಜಿಸಿದ್ದ “ಮೊರಬ ಉತ್ಸವದಲ್ಲಿ” ಡಾ.ರಾಜ್‌ಕುಮಾರ ನಟಿಸಿದ ನ್ಯಾಯವೇ ದೇವರು ಎಂಬ ಚಲನಚಿತ್ರದ ಆಕಾಶವೇಬೀಳಲಿ ಮೇಲೆ ನಾನೆಂದೂ ನಿಮ್ಮವನು ಎಂಬ ಹಾಡು ಹಾಡಿ ಜನರಲ್ಲಿ ಎಲೆಕ್ಷನ್ ಜೋಶ್ …

Read More »

ಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ- ಸಿಎಂ

ಹುಬ್ಬಳ್ಳಿ: ಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ, ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ಗೆ ಟಾಂಗ್ ಕೊಟ್ಟರು. ನಗರದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರ 30 ವರ್ಷಗಳಿಂದ ಇತ್ತು. ಆದರೆ, ಕಾಂಗ್ರೆಸ್ ಮೂಗಿಗೆ ತುಪ್ಪ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟಿತು. ನಮಗೆ ಬದ್ಧತೆ ಇದೆ. ಇದರ ಬಗ್ಗೆ ಅಧ್ಯಯನ ಮಾಡಿ, ಸಚಿವ ಸಂಪುಟ ಉಪ …

Read More »

ಯಾವುದೇ ಸಂದರ್ಭದಲ್ಲೂ ಚುನಾವಣೆ ಘೋಷಣೆ ಆಗಬಹುದು -ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ರಾಜ್ಯಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ ಆಗಬಹುದೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಹಲವಾರು ದಶಕಗಳಿಂದ ನಡೆದು ಬಂದಂತಹ ಸದಾಶಿವ ಆಯೋಗವನ್ನು ಅತ್ಯಂತ ಧೈರ್ಯದಿಂದ ಅನುಷ್ಟಾನ ಮಾಡಿದ್ದಕ್ಕೆ, ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Read More »

ಯುವಕನೋರ್ವನನ್ನು ಕಾಪಾಡಲು ಡಿವೈಡರ್ ಗೆ ಡಿಕ್ಕಿ ಹೊಡೆದ ಚಿಗರಿ ಬಸ್

ಹುಬ್ಬಳ್ಳಿ : ಬಿ.ಆರ್.ಟಿ.ಎಸ್ ರಸ್ತೆ ದಾಟುತ್ತಿದ್ದ ಯುವಕನೋರ್ವನನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬಿ.ಆರ್.ಟಿ.ಎಸ್ (ಚಿಗರಿ) ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡ ಘಟನೆ ನಗರದ ವಿದ್ಯಾನಗರದ ಜೆ.ಜಿ. ಕಾಮರ್ಸ್ ಕಾಲೇಜ್ ಬಳಿ ನಡೆದಿದೆ. ಘಟನೆಯಲ್ಲಿ ಯುವಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದ್ದು, ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತಂತೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹ ಕಚೇರಿಯ ಎದುರು ಪ್ರತಿಭಟನೆ

ಧಾರವಾಡ: ಕೊಳಚೆ ಪ್ರದೇಶದ ‌ನಿವಾಸಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದ್ದು, ಧಾರವಾಡ ನಗರದ ಕೊಳಚೆ ಪ್ರದೇಶಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ನೀರಿನ ಬಿಲ್, ಮನೆ ಕರ ಕಡಿಮೆ ಮಾಡಬೇಕು.ವಸತಿ ರಹಿತರಿಗೆ ವಸತಿ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸಮಗ್ರ ಪ್ರಜೆಗಳ ಧ್ವನಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Read More »

ಕಾರಿನಲ್ಲಿ ಕಂತೆ ಕಂತೆ ನೋಟುಗಳು: ವಶಕ್ಕೆ ಪಡೆದ ಪೊಲೀಸರು

ಧಾರವಾಡ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 53 ಲಕ್ಷ ಹಣವನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕೋಡಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಈ ವಾಹನ ತೇಗೂರು ಚೆಕ್ ಪೋಸ್ಟ್ ಬಳಿ ಬರುತ್ತಿದ್ದಂತೆ ಪೊಲೀಸರು ತಪಾಸಣೆಗೊಳಪಡಿಸಿದಾಗ ಕಾರಿನಲ್ಲಿ ಹಣ ಪತ್ತೆಯಾಗಿದೆ. ಚಿಕ್ಕೋಡಿ ಮೂಲದ ಸಂಜು ಹಿರೇಮಠ ಎಂಬಾತ ಈ ಕಾರು ತೆಗೆದುಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ ದಾಖಲೆ ಇಲ್ಲದ ಹಣ …

Read More »

ಮೂಲ‌ ಕಾಂಗ್ರೆಸ್‌ನವರಿಗೆ ಟಿಕೆಟ್ ಕೊಡಿ‌-ಅಲ್ತಾಫ್ ಹಳ್ಳೂರ್

ಹುಬ್ಬಳ್ಳಿ- ಧಾರವಾಡ: ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಫೈಟ್ ನಡೆದಿದ್ದು, ಜಿಲ್ಲಾ ಕಮಿಟಿ ಜೊತೆ ಚರ್ಚಿಸದೆ ಮೋಹನ್ ಲಿಂಬಿಕಾಯಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.ಲಿಂಬಿ ಕಾಯಿ ಕಾಂಗ್ರೆಸ್ ಸೇರ್ಪಡೆ ಕುರಿತು ಮುಂಚೆಯೇ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ. ಅವರು ಯಾವುದೇ ಷರತ್ತು ಇಲ್ಲದೆ ಬಂದಿದ್ದಾರೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಹೇಳಿದ್ದಾರೆ. ಅರವಿಂದ ಬೆಲ್ಲದ್‌ರನ್ನು ಸೋಲಿಸಲು ಉತ್ತಮ ಅಭ್ಯರ್ಥಿ ಕೊಡಿ ಎಂದು …

Read More »

ಈದ್ಗಾ ಮೈದಾನಕ್ಕೆ ಮರುನಾಮಕರಣ ತಿರಸ್ಕಾರಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿ: ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮನವರ ಹೆಸರಿಡುವುದನ್ನು ಪ್ರಶ್ನಿಸಿ ಹಾಅಕಿದ್ದ ಪಿಐಎಲ್ ಅರ್ಜಿಯನ್ನು ಹೈ ಕೋರ್ಟ್ ತಿರಸ್ಕಾರಗೊಳಿಸಿದೆ. ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ಹುಬ್ಬಳಿ ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ಮೈದಾನ ಎಂಬ ಮರುನಾಮಕರಣಕ್ಕೆ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಹುಸೇನ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಪಾಲಿಕೆ ಪರವಾಗಿ ವಾದ ಮಂಡಿಸಿದ …

Read More »

ಕುಡಿಯುವ ನೀರಿಗಾಗಿ ಪರದಾಟ, ಬೀದಿಗಳಿದು ಪ್ರತಿಭಟನೆ

ಧಾರವಾಡ: ನಗರದ ಕೇಲಗೇರಿ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ತಡರಾತ್ರಿ ರಸ್ತೆ ಸಂಚಾರ ಸ್ಥಗಿತಗೊಳಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಈ ಮೊದಲು ವಾರಕ್ಕೊಮ್ಮೆ ಬರುತ್ತಿದ್ದ ನೀರು ಈಗ ೧೬ ದಿನಗಳು ಒಂದೊಂದು ಕಡೆ ತಿಂಗಳಿಗೊಮ್ಮೆ ಬರುವಂತಾಗಿದೆ. ಸಮಸ್ಯೆಯ ಗಂಭೀರತೆ ಅರಿತು ಅದನ್ನು ನಿವಾರಿಸಬೇಕಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ರಾಜ್ಯ ಸರಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುವಂತೆ …

Read More »