admin
February 22, 2022
Breaking News, ಧಾರವಾಡ
ಧಾರವಾಡ: ನಗರದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಕೆ.ಇ.ಬೋರ್ಡ್ ಹೈಸ್ಕೂಲ್ ವಿದ್ಯಾರ್ಥಿನಿ ಅಮೂಲ್ಯ ಬಸಯ್ಯ ಹಿರೇಮಠ ಪ್ರಥಮ ಸ್ಥಾನ ಪಡೆದಿದ್ದಾಳೆ. ಈ ಮೂಲಕ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಕಸ ಗುಡಿಸುವ ಆಧುನಿಕ ಯಂತ್ರ ಆವಿಷ್ಕರಿಸಿರುವ ಈ ವಿದ್ಯಾರ್ಥಿನಿ, ಅದರ ಪ್ರಯೋಜನ ಮತ್ತು ಆವಿಷ್ಕಾರದ ಕುರಿತು ವಿವರಣೆ ನೀಡಿ ನಿರ್ಣಾಯಕರ ಗಮನಸೆಳೆದು ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ. ಸ್ವಚ್ಛ ಭಾರತ ಆಂದೋಲನದ ಘೋಷವಾಕ್ಯದ …
Read More »
admin
February 21, 2022
Breaking News, ಧಾರವಾಡ
ಧಾರವಾಡ : ಸಬ್ ಇನ್ಸ್ಪೆಕ್ಟರ್ ಹುದ್ದೆಯ ಎಕ್ಸಾಂ ನಲ್ಲಿ ಅಕ್ರಮ ನಡೆದಿರುವ ಘಟನೆ ಖಂಡಿಸಿ ಸಬ್ ಇನ್ಸ್ಪೆಕ್ಟರ್ ಪರೀಕ್ಷಾರ್ಥಿಗಳು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಪರೀಕ್ಷೆಯಲ್ಲಿ ಬ್ಲೂಟೂತ್ ಸೇರಿದಂತೆ ಇನ್ನಿತರ ಹೈಟೆಕ್ ತಂತ್ರಜ್ಞಾನ ಬಳಸಿ ಪರೀಕ್ಷೆಯಲ್ಲಿ ಹಲವು ಸಬ್ ಇನ್ಸ್ಪೆಕ್ಟರ್ ಪರೀಕ್ಷಾರ್ಥಿಗಳು ಪಾಸಾಗಿದ್ದು ಅಕ್ರಮ ಎಸಗಿದ್ದಾರೆ. ಕೂಡಲೇ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು. …
Read More »
admin
February 19, 2022
Breaking News, ಧಾರವಾಡ
ಧಾರವಾಡ: ರಸ್ತೆಯ ತಿರುವಿನಲ್ಲಿದ್ದ ಮನೆಯ ಗೋಡೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರನ ಹೆಸರು, ವಿಳಾಸ ತಿಳಿದು ಬಂದಿಲ್ಲ. ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿದ್ದ ಮದುವೆಗೆಂದು ಈ ಯುವಕ ಬೈಕ್ ತೆಗೆದುಕೊಂಡು ಬಂದಿದ್ದ ಎಂದು ಗೊತ್ತಾಗಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಸಹಿತ ಕುಸಿದು ಬಿದ್ದಿದೆ. ಘಟನೆ ಸಂಬಂಧ ಧಾರವಾಡ ಗ್ರಾಮೀಣ …
Read More »
admin
February 16, 2022
Breaking News, ಧಾರವಾಡ
ಧಾರವಾಡ: ಇಂದು ನಿಧನರಾದ ಕವಿ ನಾಡೋಜ ಚೆನ್ನವೀರ ಕಣವಿ ಅವರ ಅಂತ್ಯಸಂಸ್ಕಾರ ಧಾರವಾಡ ಹೊರವಲಯದಲ್ಲಿರುವ ಕಣವಿ ಕುಟುಂಬದ ಸೃಷ್ಟಿ ಫಾರ್ಮ್ ಹೌಸ್ನಲ್ಲಿ ವೀರಶೈವ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಅವರ ಹಿರಿಯ ಪುತ್ರ ಶಿವಾನಂದ ಕಣವಿ ಅವರು ಅಂತಿಮ ವಿಧಿ-ವಿಧಾನಗಳನ್ನು ಕೈಗೊಂಡರು. ಕಣವಿ ಅವರ ಇಚ್ಛೆಯಂತೆ ಪತ್ನಿ ಶಾಂತಾದೇವಿ ಅವರ ಸಮಾಧಿ ಬಳಿಯೇ ಅವರ ಅಂತಿಮಕ್ರಿಯೆ ನಡೆಸಲಾಯಿತು. ಸರ್ಕಾರದ ಸಕಲ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ನಡೆದಿದ್ದು, ಪೊಲೀಸರು ಗಾಳಿಯಲ್ಲಿ …
Read More »
admin
February 16, 2022
Breaking News, ಧಾರವಾಡ
ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕವಿ ಕಣವಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಕೆಸಿಡಿ ಆವರಣದಲ್ಲಿ ಜಿಲ್ಲಾಡಳಿತದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮಧ್ಯಾಹ್ನ 1 ರಿಂದ 3ರವರೆಗೆ ಅಂತಿಮ ದರ್ಶನ ಪಡೆಯಬಹುದಾಗಿದೆ. ಕಣವಿ ಅವರ ಅಂತ್ಯಕ್ರಿಯೆ ಸಂಜೆ 5ಕ್ಕೆ ಕೆಲಗೇರಿ ಸಮೀಪದಲ್ಲಿರುವ ಅವರ ಫಾರ್ಮ್ ಹೌಸದಲ್ಲಿ ನಡೆಸಲು ಅವರ ಕುಟುಂಬ …
Read More »
admin
February 16, 2022
Breaking News, ಧಾರವಾಡ
ಧಾರವಾಡ: ಕವಿ ಡಾ. ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು. ಕಣವಿ ಅವರ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣವಿ ಅವರ ಕುಟುಂಬ ವರ್ಗದವರ ಇಚ್ಛೆಯಂತೆ ಕೆಲಗೇರಿಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದರು. ಬಸವರಾಜ ಬೊಮ್ಮಾಯಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಧಾರವಾಡಕ್ಕೆ ಬರಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು. ಹೆಲಿಕಾಪ್ಟರ್ ನಲ್ಲಿ …
Read More »
admin
February 16, 2022
Breaking News, ಧಾರವಾಡ
ಧಾರವಾಡ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತೆ ಆಗಿದೆ. ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇನ್ನಿಲ್ಲವಾಗಿದ್ದಾರೆ. ಚೆನ್ನವೀರ ಕಣವಿ …
Read More »
admin
February 13, 2022
Breaking News, ಧಾರವಾಡ
ಧಾರವಾಡ : ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ.ಸ್ವಲ್ಪಮಟ್ಟಿನ ಚೇತರಿಕೆ ಕಂಡು ಬಂದಿದೆ, ಮುಂದಿನ 3-4 ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆ ಇದೆ.ಕಣವಿ ಅವರ ಚಿಂತನೆಗಳು ನಾಡಿಗೆ ಮತ್ತೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು. ಧಾರವಾಡದ ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಗೆ ಭೇಟಿ ನೀಡಿ,ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕವಿ …
Read More »
admin
February 13, 2022
Breaking News, ಧಾರವಾಡ
ಧಾರವಾಡ: ಸಾಲ ವಾಪಸ್ ಕೊಡಿ ಎಂದು ಕೇಳಲು ಹೋದವಳ ಮೇಲೆ ಹಲ್ಲೆ ನಡೆಸಿರುವ ಘಟನೆ ಹಿರೇಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಕೌಸಲ್ಯ ಎಂಬ ಮಹಿಳೆ ಸುಶೀಲವ್ವಳ ಬಳಿ ಕರಾರು ಪತ್ರದೊಂದಿಗೆ 2 ಲಕ್ಷ ರೂ. ಸಾಲ ಪಡೆದುಕೊಂಡಿದ್ದಳು. ಈ ಸಾಲವನ್ನು ವಾಪಸ್ ಕೇಳಲು ಹೋದಾಗ ಕೌಸಲ್ಯ ತನ್ನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾಳೆ ಎಂದು ಸುಶೀಲವ್ವ ಆರೋಪಿಸಿದ್ದಾಳೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ …
Read More »
admin
February 10, 2022
Breaking News, ಧಾರವಾಡ
ಧಾರವಾಡ: ಯತ್ನಾಳ್‌ಗೆ ತಾಕತ್ತಿದ್ದರೆ ಧಾರವಾಡಕ್ಕೆ ಬಂದು ಮಾತಾಡಲಿ. ಅವರ ಚೊಣ್ಣ ಬಿಚ್ಚಿ ಹೊಡೆಯದಿದ್ದರೆ ನನ್ನ ಹೆಸರು ಇಸ್ಮಾಯಿಲ್ ಅಲ್ಲ ಎಂದು ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಸವಾಲ್ ಹಾಕಿದ್ದಾರೆ. ಮುಸ್ಲಿಂ ಮಹಿಳೆಯರ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿತಾಗಿ ಮಾತಾಡಿದ್ದನ್ನು ಖಂಡಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಇಸ್ಮಾಯಿಲ್ ತಮಟಗಾರ, ಬಿಜೆಪಿಯವರು ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ, ಹಿಂದೆ ಮುಸ್ಲಿಂ ಮಹಿಳೆಯರಿಗೆ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದಿದ್ದರು. ತ್ರಿಬಲ್ ತಲಾಖ್ …
Read More »