Breaking News

ಹುಬ್ಬಳ್ಳಿ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಂಡಾಯ ಆಗಲ್ಲ ; ಅಬ್ಬಯ್ಯ

ಹುಬ್ಬಳ್ಳಿ : ಶಿಗ್ಗಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು, ಅಜಂಫೀರ್ ಖಾದ್ರಿ ಕೂಡ ಕಾಂಗ್ರೆಸ್ ನಾಯಕರು, ಆದಷ್ಟು ಬೇಗ ಪಕ್ಷದ ನಾಯಕರು ಅವರನ್ನು ಮಾತನಾಡಿಸಿ ಅವರ ಅಸಮಾಧಾನ ಶಮನ ಶಮನಗೊಳಿಸಲಾಗುವುದು. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಂಡಾಯ ಆಗಲ್ಲ ಎಂದರು.

Read More »

ನಮ್ಮ ಪಕ್ಷದ ಅಭ್ಯರ್ಥಿಯಾಗಿ ಯಾರೇ ನಿಂತರು ಸಹ ಗೆಲುವು ಖಚಿತ: ಬಿ.ಎಸ್.ಯಡಿಯೂರಪ್ಪ

ಹುಬ್ಬಳ್ಳಿ : ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಅಭ್ಯರ್ಥಿಯಾಗಿ ಯಾರೇ ನಿಂತರು ಸಹ ಗೆಲುವು ಖಚಿತ. ಚನ್ನಪಟ್ಟಣದಲ್ಲಿ ಸಹ ಕುಮಾರಸ್ವಾಮಿ ಅವರ ಮಗ ಬಂದ ಕಾರಣ ಅಲ್ಲಿಯೂ ಸಹ ನಿಖಿಲ್ ಕುಮಾರಸ್ವಾಮಿ ಗೆಲುತ್ತಾರೆಂಬ ವಿಶ್ವಾಸವಿದೆ ಎಂದರು. ಇನ್ನೂ ಕುಟುಂಬ ರಾಜಕಾರಣ ವಿಚಾರವಾಗಿ …

Read More »

ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಪ್ರತಿಮೆಗೆ ಮೇಯರ್ ರಾಮಪ್ಪ ಬಡಿಗೇರ್ ಮಾಲಾರ್ಪಣೆ

ಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮ ನವರ ಜನ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಪ್ರತಿಮೆಗೆ ಮೇಯರ್ ರಾಮಪ್ಪ ಬಡಿಗೇರ್ ರವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ ಉಪ ಮೇಯರ್ ಶ್ರೀಮತಿ ದುರ್ಗಮ್ಮ ಶಶಿಕಾಂತ ಬಿಜವಾಡ ರವರು, ಪಾಲಿಕೆ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ ರವರು, ಗೌರವಾನ್ವಿತ ಪಾಲಿಕೆ ಸದಸ್ಯರುಗಳು ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Read More »

ಕಿತ್ತೂರು ರಾಣಿ ಚೆನ್ನಮ್ಮನವರ ಪುತ್ಥಳಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಮಾಲಾರ್ಪಣೆ

ಹುಬ್ಬಳ್ಳಿ: ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಹಾಗೂ ಸ್ವರಾಜ್ಯ ಯುದ್ಧದ 200ನೇಯ ವರ್ಷದ ವಿಜಯೋತ್ಸವದ ನಿಮಿತ್ಯ ಹುಬ್ಬಳ್ಳಿಯಲ್ಲಿರುವ ಪುತ್ಥಳಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಮಾಲಾರ್ಪಣೆ ಮಾಡಿ ಮಾತನಾಡಿದರು. ವೀರಮಾತೆಯರ ಸಾಲಿನ ಮುಕುಟ ಮಣಿ ಕಿತ್ತೂರು ರಾಣಿ ಚೆನ್ನಮ್ಮನವರ ಪರಾಕ್ರಮದ ಕುರಿತು ಮಾತನಾಡಿ, ಅವರ ಸ್ಮರಣಾರ್ಥವಾಗಿ ಕೇಂದ್ರ ಸರಕಾರವು ಚೆನ್ನಮ್ಮರ ಅಂಚೆ ಚೀಟಿ ಬಿಡುಗಡೆ ಮಾಡುತ್ತಿರುವುದು ರಾಜ್ಯದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

Read More »

ಅದ್ದೂರಿಯಾಗಿ ನೆರವೇರಿದ ಭಂಡಾರ ಉತ್ಸವ ಕಾರ್ಯಕ್ರಮ

ಹುಬ್ಬಳ್ಳಿ: ನಗರದ ದಾಜಿಬಾನಪೇಟ ತುಳಾಜಾಭವಾನಿ ದೇವಸ್ಥಾನದಲ್ಲಿ ಜರುಗಿದ ಭಂಡಾರ ಉತ್ಸವ ಕಾರ್ಯಕ್ರಮದಲ್ಲಿಂದು ಶಾಸಕ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಿ, ತಾಯಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎಸ್. ಎಸ್. ಕೆ ಸಮಾಜದ ಅಧ್ಯಕ್ಷರಾದ ಸತೀಶ್ ಮೆಹರವಾಡೆ, ಮಾಜಿ ಶಾಸಕರಾದ ಅಶೋಕ ಕಾಟವೆ, ಪ್ರಮುಖರಾದ ಭಾಸ್ಕರ ಜಿತ್ತೂರಿ, ಕೆ. ಪಿ. ಪೂಜಾರಿ, ನಾರಾಯಣ ಖೋಡೆ, ವಿಠಲ ಲದ್ವಾ, ಪ್ರಕಾಶ ಬುರಬುರೆ, ಪ್ರವೀಣ ಪವಾರ, ಮಿಥುನ ಚವ್ಹಾಣ, ರಾಜು ಜರತಾರಘರ ಹಾಗೂ ಇತರರು …

Read More »

ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ ಕಳ್ಳ ಬಂಧನ

ಹುಬ್ಬಳ್ಳಿ: ಅವಳಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ ಕಳ್ಳನನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್‌ ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಎಸಿಪಿ ಶಿವಪ್ರಕಾಶ ಮಾರ್ಗದರ್ಶನದಲ್ಲಿ ಇನ್ಸೆಕ್ಟರ್ ಹೂಗಾರ ನೇತೃತ್ವದ ತಂಡ ಹುಬ್ಬಳ್ಳಿ ಮೂಲದ ಮಹಾಂತೇಶ ಎಂಬಾತನನ್ನು ಬಂಧಿಸಿದ್ದಾರೆ. ಮಹಾಂತೇಶ ಕಲಾಲ ಈತ ಆನಂದ ನಗರದ ನಿವಾಸಿಯಾಗಿದ್ದು, ಈತ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಸದ್ಯ ಬಂಧಿತ ಆರೋಪಿಯಿಂದ …

Read More »

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಇಂದು ರಾಜೀನಾಮೆ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಇಂದು ತಮ್ಮ ಸದಸ್ಯ ಸ್ಥಾನಕ್ಕೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದರು. ಹುಬ್ಬಳ್ಳಿಯ ಪಿಂಟೋ ರಸ್ತೆಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. ರಾಜೀನಾಮೆ ಪತ್ರ ಸ್ವೀಕರಿಸಿ ಬಳಿಕ ಮಾತನಾಡಿದ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಸಿ.ಪಿ.ಯೋಗೇಶ್ವರ ಅವರು ರಾಜೀನಾಮೆ …

Read More »

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ: ಲಾಡ್

ಧಾರವಾಡ: ಶಿಗ್ಗಾಂವಿ, ಸಂಡೂರು ಹಾಗೂ ಚೆನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ನಿನ್ನೆ ಸಿಎಂ ಅವರು ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ ಬರಲಿದೆ ಎಂದರು. …

Read More »

ಅ.25 ರಂದು ವಿವಿಧ ಸ್ಥಾಯಿ ಸಮಿತಿ ಚುನಾವಣೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಗೆ ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಸ್ಥಾನಗಳಿಗೆ ಚುನಾವಣೆಯು ಅಕ್ಟೋಬರ್ 25 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ …

Read More »

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಭರತ್ ಅವರಿಗೆ ಟಿಕೆಟ್ ನೀಡಲಾಗಿದೆ: ಬೆಲ್ಲದ

ಹುಬ್ಬಳ್ಳಿ : ಶಿಗ್ಗಾಂವಿ-ಸವಣೂರು ವಿಧಾನಸಭಾ ಮತಕ್ಷೇತ್ರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಗೆ ಟಿಕೆಟ್ ನೀಡಿರುವ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಎಂದಿಗೂ ವಂಶ ಪಾರಂಪರಿಕ ಪಕ್ಷವಲ್ಲ. ನಮ್ಮದು ಪ್ರಜಾಪ್ರಭುತ್ವ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡುವ ಪಕ್ಷ. ಅಲ್ಲಿನ ಜನರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಭರತ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಚನ್ನಪಟ್ಟಣ …

Read More »