Breaking News

ಹುಬ್ಬಳ್ಳಿ

ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾದ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾಗೆ ಸನ್ಮಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕರ್ನಾಟಕ ಸರ್ಕಾರದ ಅಧೀನದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾದ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿಂದು ವಡ್ಡರ್ಸೆ ರಘುರಾಮ ಶೆಟ್ಟಿಯವರ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿ ಹಾಗೂ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾದ ಜೆ.ಅಬ್ಬಾಸ್ ಮುಲ್ಲಾ ಅವರಿಗೆ ಹಿರಿಯ ಪತ್ರಕರ್ತರ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ …

Read More »

ಪ್ರೀತಿಸಿ ಮದುವೆಯಾದ ಜೋಡಿಗೆ ಬೇಕಿದೆ ರಕ್ಷಣೆ

ಹುಬ್ಬಳ್ಳಿ : ಪ್ರೀತಿಸಿ ಮದುವೆಯಾದ ಜೋಡಿಗೆ ಹುಡುಗಿ ಮನೆಯವರು ಜೀವ ಬೆದರಿಕೆ ಹಾಕಿದ್ದ, ಈ ಹಿನ್ನೆಲೆ ಜೋಡಿ ಇದೀಗ ಜೀವದ ಭಯಕ್ಕೆ ಮಾಧ್ಯಮದ ಮುಂದೆ ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಮದುವೆಯಾದ ಜೋಡಿ ಇದೀಗ ರಕ್ಷಣೆ ಕೊಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಆನಂದ ದೊಡ್ಡಮನಿ (21) ಮೇಘಾನಾ(19) ಪ್ರೀತಿಸಿ ಮದುವೆಯಾದ ಜೋಡಿ.ಆನಂದ ಆಟೋ ಚಾಲಕರಾಗಿದ್ದು, ಯುವತಿ ಮೇಘಾನಾ ಕಾಲೇಜು ವಿದ್ಯಾರ್ಥಿನಿ.. ಇಬ್ಬರು ಕಳೆದ ಮೂರು ವರ್ಷದಿಂದ ಪ್ರೀತಿ ಮಾಡುತ್ತಿದ್ದಾರಂತೆ.. ಇತ್ತೀಚೆಗೆ ಇವರ …

Read More »

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವ ಭರವಸೆ ಇದೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬೇಡಿಕೆ, ಹೋರಾಟ ಹಲವು ವರ್ಷಗಳಿಂದ ಮುಂದುವರಿದಿದ್ದು ಮೀಸಲಾತಿ ಸಿಗುವ ಸಾಧ್ಯತೆ ಇದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು ಈ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹಕಚೇರಿಯಲ್ಲಿ ಅ. 18ರಂದು ಸಭೆ ಕರೆದಿದ್ದಾರೆ, ಇದುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಬೇಡಿಕೆಗೆ ಸಮರ್ಪಕವಾಗಿ ಸ್ಪಂದಿಸಿಲ್ಲ. ಅವರು 2 …

Read More »

ಕಾಂಗ್ರೆಸ್‌ ಪಕ್ಷ ಗಲಭೆ ಪ್ರಕರಣವನ್ನು ವಾಪಾಸ್‌ ಪಡೆದು ಸಂವಿಧಾನಕ್ಕೆ ಅಗೌರವ ಕೊಡುತ್ತಿದೆ: ಶೆಟ್ಟರ್

ಹುಬ್ಬಳ್ಳಿ : ಹಳೇಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಠಿಣ ಕಾನೂನುಗಳನ್ನು ಹಾಕಲಾಗಿತ್ತು. ಕಡಿಮೆ ಸಮಯದಲ್ಲಿ ಸಾವಿರಾರು ಜನ ಸೇರಿ ಗಲಭೆ ಮಾಡಿದ್ದರು. ಆಗಿನ ಕಮಿಷನ‌ರ್ ಲಾಬೂರಾಮ್ ಅವರು ಸ್ಥಳಕ್ಕೆ ದೌಡಾಯಿಸಿ ನಿಯಂತ್ರಣ ಮಾಡಿ, ಅನಾಹುತ ತಪ್ಪಿಸಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದೀಗ ಕಾಂಗ್ರೆಸ್‌ ಪಕ್ಷ ಗಲಭೆ ಪ್ರಕರಣವನ್ನು ವಾಪಾಸ್‌ ಪಡೆದು ಸಂವಿಧಾನಕ್ಕೆ ಅಗೌರವ ಕೊಡುತ್ತಿದೆ. ಮತಬ್ಯಾಂಕ್ ಗೆ ಸಮಾಜದ ವ್ಯವಸ್ಥೆ ಹಾಳು ಮಾಡುತ್ತಿದೆಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ …

Read More »

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಗಲಭೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಚ್ ಕೆ ಪಾಟೀಲ್‌

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರೋಪಿಗಳ ವಿರುದ್ಧ ದಾಖಲಾಗಿದ್ದ ಕೇಸ್ ಗಳನ್ನು ಹಿಂದೆ ಪಡೆದ ಹಿನ್ನೆಲೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಆದ್ರೆ ಕಾನೂನು ಸಚಿವ ಎಚ್ ಕೆ ಪಾಟೀಲ್‌ ಸರ್ಕಾರದ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು ಗಲಭೆಕೋರರ ಮೇಲಿನ ಕೇಸ್ ವಾಪಸ್ಸು ಪಡೆದಿದ್ದು ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಅಲ್ಪ ಸಂಖ್ಯಾತರ ಸೇವೆ …

Read More »

ಅವಾಚ್ಯ ಪದಗಳಿಂದ ನಿಂದನೆ: ಆತನಿಗೆ ಹಿಗ್ಗಾಮುಗ್ಗಾ ಥಳಿತ

ಹುಬ್ಬಳ್ಳಿ: ಆರ್‌ಎಸ್‌ಎಸ್‌ ಕಾರ್ಯಕರ್ತರು ಪಥಸಂಚಲನ ಮಾಡುತ್ತಿರುವ ವೇಳೆಯಲ್ಲಿ ಸಿಬಿಟಿ ಬಾಕಳೆ ಗಲ್ಲಿಯಲ್ಲಿ ಕಿಡಿಗೇಡಿಯೊಬ್ಬ ಅಡ್ಡ ನಿಂತು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಆಗ ಅಲ್ಲೇ ಇದ್ದ ಸಾರ್ವಜನಿಕರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇಂದು ಆರ್‌ಎಸ್‌ಎಸ್ ವತಿಯಿಂದ ಹುಬ್ಬಳ್ಳಿಯ ನೆಹರೂ ಮೈದಾನದಿಂದ ಪಥಸಂಚಲನ ಆರಂಭವಾಗಿದ್ದು, ಸಿಬಿಟಿ ಬಾಕಳೆ ಗಲ್ಲಿಯಲ್ಲಿ ಕಾರ್ಯಕರ್ತರು ಪಥಸಂಚಲನ ಮಾಡುತ್ತಿದ್ದಾಗ ಕಿಡಿಗೇಡಿಯೊಬ್ಬ ಅಡ್ಡ ನಿಂತಿದ್ದಾನೆ. ಆ ಸಂದರ್ಭ ಅಲ್ಲಿದ್ದ ಸಾರ್ವಜನಿಕರು ಸೈಡ್ ಗೆ ಬಾ ಎಂದು ಸೂಚಿಸಿದ್ದಾರೆ. ಆದರೆ, ಸೈಡ್ …

Read More »

ಕಪ್ಪು ಬಟ್ಟೆ ತೋರಿಸಲು ಮುಂದಾದಾಗ ಇಬ್ಬರನ್ನು ಪೊಲೀಸರು ವಶಕ್ಕೆ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಮಾಡಿದವರ ವಿರುದ್ಧ ದಾಖಲಾದ ಪ್ರಕರಣವನ್ನು ರಾಜ್ಯ ಸರ್ಕಾರಕ್ಕೆ ಹಿಂದೆ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಿಎಂ ಕಾರಿಗೆ ಮುತ್ತಿಗೆಯನ್ನು ಹಾಕಲು ಅಕ್ಷಯ ಪಾರ್ಕ್ನಲ್ಲಿ ಮುಂದಾಗಿದ್ದರು. ಈ ವೇಳೆ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ಸೇರಿದಂತೆ ಹಲವರನ್ನು ನಾಯಕರನ್ನು ಬಂಧಿಸಿ ಎಚ್ಚರಿಕೆ ವಹಿಸಿದ್ದಾರೆ. ಆದ್ರೂ ಕೂಡಾ ವಿಮಾನ ನಿಲ್ದಾಣದಿಂದ ಧಾರವಾಡಕ್ಕೆ ರಸ್ತೆ ಮಾರ್ಗವಾಗಿ ಹೊರಟಿದ್ದ ಸಿಎಂಗೆ ಅಕ್ಷಯ …

Read More »

ಸಿದ್ದರಾಮಯ್ಯ ಗೆ ತಿರುಗೇಟು ನೀಡಿದ ಜೋಶಿ

ಹುಬ್ಬಳ್ಳಿ:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭಯೋತ್ಪಾದಕ ಎಂಬ ಹೇಳಿಕೆಯನ್ನು ನೀಡಿದರು. ಈ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ಮಾತಿಗೆ ತಿರುಗೇಟನ್ನು ನೀಡಿದ್ದಾರೆ. ಸಿದ್ದರಾಮಯ್ಯ ನಮಗಿಂತ 10 ವರ್ಷಗಳ ಮೊದಲೇ ರಾಜಕೀಯದಲ್ಲಿ ಸಕ್ರಿಯರಾಗಿದ್ದವರು. ಈ ಹಿಂದೆ ಅವರು ಉಪ ಮುಖ್ಯಮಂತ್ರಿಯಾಗಿದ್ದಾಗ ನಾವು ಕೂಡಾ ಸಾಕಷ್ಟು ಬಾರಿ ಅವರನ್ನು ಟೀಕೆ ಮಾಡಿದ್ದೇವೆ, ಆದ್ರೆ ಈ ಬಾರಿ ಅವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ ಎಂದು …

Read More »

42 ಪ್ರಕರಣಗಳನ್ನು ವಾಪಾಸ್ ಪಡೆದುಕೊಂಡಿದ್ದೇವೆ :ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿಯವರು ಕೇವಲ ಸುಳ್ಳು, ನಿರಾಧಾರ ವಿಚಾರಗಳ ಮೇಲೆ ಪ್ರತಿಭಟನೆ ಮಾಡುತ್ತಾರೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 42 ಪ್ರಕರಣವನ್ನು ವಾಪಾಸ್‌ ಪಡೆದ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂತಹ ಪ್ರಕರಣಗಳಿಗಾಗಿ ಸಂಪುಟ ಖಾತೆಯ ಉಪಸಮಿತಿ ರಚನೆ ಮಾಡಲಾಗಿರುತ್ತದೆ. ಅದು ಸಲ್ಲಿಸಿದ ವರದಿ ಆಧರಿಸಿ ನಾವು 42 ಪ್ರಕರಣಗಳನ್ನು ವಾಪಾಸ್ ಪಡೆದುಕೊಂಡಿದ್ದೇವೆ. ಈ ಎಲ್ಲ ಪ್ರಕರಣಗಳು ನಂತರ ಕೋರ್ಟ್’ಗೆ ಹೋಗುತ್ತದೆ. ಅಲ್ಲಿ …

Read More »

ಬೈಕ್‌ ಟಚ್ ಆದ ವಿಚಾರ: ಯುವಕನಿಗೆ ಇಟ್ಟಿಗೆಯಿಂದ ಹಲ್ಲೆ

ಹುಬ್ಬಳ್ಳಿ : ಬೈಕ್‌ ಟಚ್ ಆದ ವಿಚಾರಕ್ಕೆ ದಾಯಾದಿಗಳ ನಡುವೆ ಮಾತಿಗೆ ಮಾತು ಬೆಳೆದು ಸಿದ್ದಾರ್ಥ ಎಂಬಾತನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಬಿ ನಗರದಲ್ಲಿ ನಡೆದಿದೆ. ಸಿದ್ದಾರ್ಥ ಎಂಬ ಯುವಕ ಅಕ್ಕಿ ಹೊಂಡ ಬಳಿಯಲ್ಲಿ ಬೈಕ್‌ ತೆಗೆಯುತ್ತಿದ್ದಾಗ ಈತನ ಸಂಬಂಧಿಯಾದ ಪ್ರಭು ಎಂಬಾತ ಪಲ್ಸರ್ ಬೈಕ್‌ನಲ್ಲಿ ಬಂದು ಈತನ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. …

Read More »