Shaikh BigTv
October 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೊಪ್ಪಳದ ಗವಿ ಸಿದ್ದೇಶ್ವರ ಸ್ವಾಮೀಜಿ ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸ್ ಠಾಣೆಯ ಆವರಣದಲ್ಲಿ ಬೆಳೆದ ಉದ್ಯಾನವನದ ಮಾಹಿತಿಯನ್ನು ಇನ್ಸೆಕ್ಟರ್ ರಾಘವೇಂದ್ರ ಹಳ್ಳೂರ್ ಅವರಿಂದ ಪಡೆದರು. ಬೇರೆ ಕಾರ್ಯ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಕೊಪ್ಪಳದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ ಕಸಬಾಪೇಟ ಪೊಲೀಸ್ ಠಾಣೆಯ ಮುಂದೆ ಹೋಗುವಾಗ ಠಾಣೆಯ ಮುಂಭಾಗ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋದನ್ನು ನೋಡಿ ಪೊಲೀಸ್ ಠಾಣೆಗೆ ಭೇಟಿಯನ್ನು ನೀಡಿದರು. ಇದುವರೆಗೂ ಒಂದು ಬಾರಿಯೂ …
Read More »
Shaikh BigTv
October 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಬಹುದೊಡ್ಡ ಉದ್ಯಮಿ ಟಾಟಾ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನ ಭಾರತಕ್ಕೆ ತುಂಬಲಾರದ ನಷ್ಟವಾಗಿದೆ. ತತ್ವ ಸಿದ್ಧಾಂತಗಳ ಮೇಲೆ ಜೀವನ ನಡೆಸಿದ ರತನ್ ಟಾಟಾ ಅವರು, ತಮ್ಮ ಉಜ್ವಲ ಭವಿಷ್ಯದ ಮೂಲಕ ಯುವ ಉದ್ಯಮಿಗಳಿಗೆ ಸಾಕಷ್ಟು ಪ್ರೇರಣೆಯಾಗಿದ್ದ ಬಹುದೊಡ್ಡ ಸಾರ್ಥಕ ಸಾಧಕರು ರತನ್ ಟಾಟಾ ಎಂದು ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್ ಕಂಬನಿ ಮಿಡಿದಿದ್ದಾರೆ. ರತನ್ ಟಾಟಾ ಅವರ ನಿಧನದ …
Read More »
Shaikh BigTv
October 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಆಕಸ್ಮಿಕವಾಗಿ ಕಾರ್‌ವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಸುರಿಯುವ ಮಳೆಯಲ್ಲಿಯೇ ಕಾರ್‌ವೊಂದು ಹೊತ್ತಿ ಉರಿದಿರುವ ಘಟನೆ ಹುಬ್ಬಳ್ಳಿ ಲ್ಯಾಮಿಂಗ್ಟನ್ ಶಾಲೆಯ ಎದುರಿನ ರಸ್ತೆಯಲ್ಲಿ ನಡೆದಿದೆ. ಖಾಸಗಿ ಹೊಟೇಲ್ ಮುಂದೆಯೇ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿದ್ದು, ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲ್ಲದೇ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಂಶಯ ವ್ಯಕ್ತವಾಗಿದ್ದು, ಕಾರಿನ ಮಾಲೀಕರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.
Read More »
Shaikh BigTv
October 10, 2024
Breaking News, ಹುಬ್ಬಳ್ಳಿ
ಧಾರವಾಡ: ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿ, ಧಾರವಾಡ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಈ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಯರಿಕೊಪ್ಪ ಗ್ರಾಮದ ಬಳಿಯ ಮನಸೂರು ಹಳ್ಳಕ್ಕೆ ದೊಡ್ಡ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ನೀರು ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲೂ ಹರಿದು ಬರುತ್ತಿದ್ದು, ಇದರಿಂದ ವಾಹನಗಳು ಸಂಚಾರ ನಡೆಸದೇ ಸಾಲುಗಟ್ಟಿ ನಿಂತಿವೆ. ನಿನ್ನೆ ರಾತ್ರಿಯಿಂದಲೇ ಈ ರಸ್ತೆಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ರಸ್ತೆ …
Read More »
Shaikh BigTv
October 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಭಾರೀ ಮಳೆಯಿಂದಾಗಿ ಕೆಲವೊಂದು ಏರಿಯಾಗಳು ಕೆರೆಯಂತಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 32 ರಲ್ಲಿ ಬರುವ ಆನಂದ ನಗರದ ಗೌತಮ ಕಾಲೋನಿ, ಜೈ ಹನುಮಾನ್ ನಗರದಲ್ಲಿ ರಸ್ತೆ ಮೇಲೆ ನೀರು ಕೆರೆಯಂತೆ ನಿಂತಿದೆ. ಅಷ್ಟೇ ಅಲ್ಲೇ ಮನೆ ಒಳಗೆ ನೀರು ನುಗ್ಗಿದ್ದು ಇಲ್ಲಿನ ನಿವಾಸಿಗಳು ಸಾಕಷ್ಟು ತೊಂದರೆಯನ್ನು ಅನುಭವಿಸಿದ್ದಾರೆ. ಹೀಗೆ ನೀರು ನಿಲ್ಲುವುದಕ್ಕೆ ಮುಖ್ಯ ಕಾರಣವೆಂದ್ರೆ ಸೂಕ್ತವಾದ ರಸ್ತೆ ಇಲ್ಲ, …
Read More »
Shaikh BigTv
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಸಿದ್ದರಾಮಯ್ಯ ಅವರು ನಿಜವಾಗಿಯೂ ಪ್ರಯಾಣಿಕರು ಆಗಿದ್ದರೇ 2018 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೇ ಅನುಷ್ಠಾನ ಮಾಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಜಾತಿಗಣತಿ ವಿಚಾರವಾಗಿ ಮಾತನಾಡಿ, ಇದೀಗ ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸರ್ಕಾರವನ್ನು ಉಳಿಸಲು ಜಾತಿಗಣತಿ ದಾಳವನ್ನು ಉರುಳಿಸಿದ್ದಾರೆ ಎಂದರು.ಈಗಾಗಲೇ ಜಾತಿಗಣತಿಯನ್ನು ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ ಖರ್ಗೇ ಅಂತಹ ನಾಯಕರೇ ಇದೊಂದು ಅವೈಜ್ಞಾನಿಕ ಎಂದು ಹೇಳಿದ್ದಾರೆ. ಹೀಗಾಗಿ ಸದನದಲ್ಲಿ ಜಾತಿಗಣತಿ ಅನುಷ್ಠಾನ ಮಾಡುವುದು ಸಿದ್ದರಾಮಯ್ಯ ಅವರ …
Read More »
Shaikh BigTv
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಮಾತನಾಡಿದ ಅವರು,ವಾಲ್ಮೀಕಿ, ಮುಡಾ ಹಗರಣ ಸಂಬಂಧಿಸಿದಂತೆ ಮೈಸೂರಿನವರೆಗೆ ಪಾದಯಾತ್ರೆ ಮಾಡಿದ್ದೇವೆ. ಇದರ ಪರಿಣಾಮವಾಗಿ ನಮಗೆ ಮೊದಲ ಜಯ ಸಿಕ್ಕಿದೆ. ಈಗಾಗಲೇ ಸಿಎಂ ಕುರ್ಚಿ ಅಲುಗಾಡುತ್ತಿದೆ. ಸಿದ್ದರಾಮಯ್ಯ ಅವರ ಬಂಡತನ ಬಹಳ ದಿನ ನಡೆಯೋದಿಲ್ಲ. ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
Read More »
Shaikh BigTv
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಜಾತಿ ಜನಗಣತಿ ವಿಚಾರವಾಗಿ ಸ್ವಪಕ್ಷದಲ್ಲೇ ಅಪಸ್ವರ ಉಂಟಾಗಿದೆ.ಜಾತಿ ಗಣತಿ ವಿಚಾರದ ಬಗ್ಗೆ ಸಿಎಂ ಈಗಾಗಲೇ ಹೇಳಿದ್ದಾರೆ. ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಜಾತಿ ಜನಗಣತಿ ಹಳೆಯದಾಗಿದ್ದರಿಂದ ಕೆಲವೊಬ್ಬರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕೆಲವೊಬ್ಬರು ತಿದ್ದುಪಡಿ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಈ ಸಮಿತಿಯಲ್ಲಿ ಚರ್ಚೆಯಾದ ನಂತರ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು.
Read More »
Shaikh BigTv
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿಜೆಪಿಯವರು ಒಂದು ಬಾರಿಯೂ 113 ಸ್ಥಾನ ದಾಟಿಲ್ಲ. ಬಿಜೆಪಿಯವರು ಯಾವಾಗಾದ್ರೂ ಐದು ವರ್ಷ ಅಧಿಕಾರ ನಡೆಸಿರುವ ಉದಾಹರಣೆ ಇದೆಯಾ..? ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿರೋ ಸರ್ಕಾರ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ಬಿಜೆಪಿಯವರು ಸರಿಯಾಗಿ ಅಧಿಕಾರ ಮಾಡಲ್ಲ. ಅಧಿಕಾರ ಕಳೆದುಕೊಂಡಾಗ ಅಧಿಕಾರ ಬೇಕು ಅಂತಾರೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
Read More »
Shaikh BigTv
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಜೂಜಾಟದ ಆಡುತ್ತಿದ್ದ ಅಡ್ಡೆ ಮೇಲೆ, ಹುಬ್ಬಳ್ಳಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪಿಎಸ್.ಐ ಚಾಮುಂಡಿ ನೇತೃತ್ವದಲ್ಲಿ ದಾಳಿ ನಡೆಸಿ ಎಳು ಜನರ ಜೊತೆಗೆ 19850 ರೂ.ನಗದು ಮತ್ತು ಇಸ್ಪೀಟು ಕಾರ್ಡ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »