Shaikh BigTv
October 7, 2024
Breaking News, ಹುಬ್ಬಳ್ಳಿ
ಧಾರವಾಡ: ಭೂ ವಂಚನೆ ಸಂಬಂಧ ಈಗಾಗಲೇ ವಿಪಕ್ಷ ನಾಯಕ ಆರ್.ಅಶೋಕ್ ಕೋರ್ಟ್‌ನಿಂದ ಎಲ್ಲವೂ ಬಗೆಹರಿದಿದೆ ಎಂದಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕೇಸ್ ಜೊತೆ ಇನ್ನೊಬ್ಬರ ಕೇಸ್ ಹೋಲಿಕೆ ಮಾಡಬಾರದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಅಶೋಕ್ ಅವರು ತಮ್ಮ ಪ್ರಕರಣದ ಬಗ್ಗೆ ಸ್ಪಷ್ಟಿಕರಣ ಸಹ ಕೊಟ್ಟಿದ್ದಾರೆ. ಕೋರ್ಟ್‌ನಲ್ಲೇ ಅಶೋಕ ಅವರ ತಪ್ಪಿಲ್ಲ ಎಂದು ಸಾಬೀತಾಗಿದೆ. ಈಗ ಮುಡಾ ಹಗರಣ ಎದ್ದಿದೆ. ತನಿಖೆಗೆ ಆದೇಶ ಕೂಡ …
Read More »
Shaikh BigTv
October 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದರೋಡೆಕೋರನ ಮನೆ ದರೋಡೆಗೆ ಯತ್ನಿಸಿದ ಹಿನ್ನಲೆ ಅವರ ಕಾಲಿಗೆ ಗೋಕುಲ ಠಾಣೆಯ ಪೊಲೀಸರು ಗುಂಡೇಟು ನೀಡಿ ಬಂಧಿಸಿದ ಘಟನೆ ಇಂದು ಬೆಳಗಿನ ಜಾವ ಗೋಕುಲದಲ್ಲಿ ನಡೆದಿದೆ. ಗೋಕುಲ ಗ್ರಾಮದ ಮನೆಯೊಂದರಲ್ಲಿ ದರೊಡೆಕೋರ ಮಾಡಲು ಸೀತಾರಾಮ ಕಾಳೆ ಮುಂದಾಗಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾಗಿದ್ದರು. ಈ ವೇಳೆ ಆರೋಪಿ ಸೀತಾರಾಮ ಕಾಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದ.ಕೂಡಲೇ ಗೋಕುಲ …
Read More »
Shaikh BigTv
October 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಐತಿಹಾಸಿಕ ದೇವಸ್ಥಾನದ ದೇವರ ವಿಗ್ರಹವನ್ನು ಭಗ್ನಗೊಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಸ್ಥಳದಲ್ಲಿ ಉದಿಗ್ನ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಈ ವೊಂದು ಘಟನೆ ನಡೆದಿದ್ದು, ಅಪರ್ಣಾ ಅಪಾರ್ಟೆಂಟ್ ಹತ್ತಿರದ ದತ್ತಾತ್ರೇಯ ದೇವಸ್ಥಾನದಲ್ಲಿನ ದತ್ತಾತ್ರೇಯ ದೇವರ ವಿಗ್ರಹದ ನಾಲ್ಕು ಕೈಗಳನ್ನು ಮುರಿದು ವಿರೂಪಗೊಳಿಸಿದ್ದಾರೆ. ಇನ್ನು ಸುಮಾರು 20 ವರ್ಷದ ಹಿಂದಿನ ಇತಿಹಾಸ ಹೊಂದಿರುವ ದೇವಸ್ಥಾನ ಇದಾಗಿದೆ. ಕಳೆದ ಶನಿವಾರ ರಾತ್ರಿ ನವರಾತ್ರಿ ಹಿನ್ನೆಲೆಯ ಸ್ಥಳೀಯ ನಿವಾಸಿಗಳು ದಾಂಡಿಯಾ ನೃತ್ಯ …
Read More »
Shaikh BigTv
October 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ವೈಭವಿ ಶಾಂಡಿಲ್ಯ ನಟನೆಯ ಮಾರ್ಟಿನ್ ಸಿನಿಮಾ ಫ್ರೀ ರಿಲೀಸ್ ಸಮಾರಂಭ ದಾವಣಗೆರೆಯಲ್ಲಿ ಅಕ್ಟೋಬರ್ 6ರಂದು ನಡೆಯಲಿದೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ಹಂಚಿಕೊಂಡ ಸಿನಿಮಾದ ನಟ ಧ್ರುವ ಸರ್ಜಾ, ಅಕ್ಟೋಬರ್ 11ರಂದು ಸಿನಿಮಾ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ. ನಾನು ಹಿಂದೆ ನಟಿಸಿರುವ ಅದ್ಧೂರಿ, ಬಹದ್ದೂರ್, ಭರ್ಜರಿ ಸಿನಿಮಾಗಿಂತ ವಿಭಿನ್ನವಾಗಿದೆ. ಇದು ಆಕ್ಷನ್ ಸಿನಿಮಾ ಆಗಿದ್ದು, ಕುಟುಂಬ ಸಮೇತ ಎಲ್ಲರೂ …
Read More »
Shaikh BigTv
October 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆಯೇ ಅಭಿಮಾನಿಗಳು ವಾದ್ಯಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಅಲ್ಲದೇ ಪುಷ್ಪ ಮಳೆಗರೆದು ಅಭಿನಂದನೆ ಸಲ್ಲಿಸಿದರು. ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿರುವುದು ಹುಬ್ಬಳ್ಳಿಗೆ ಆಗಮಿಸಿದ ಸ್ಟಾರ್ ನಟನಿಗೆ ಸಲ್ಲಿಸಿದ ಗೌರವ ಇದಾಗಿದೆ. ಅಲ್ಲದೆ ನಟ ಧ್ರುವ ಸರ್ಜಾ ಅವರು ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಿತ್ರದ ಯಶಸ್ಸಿಗೆ ಮನವಿ ಮಾಡಿದರು. …
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಧಾರವಾಡ: ಡ್ರಗ್ಸ್ ವಿರುದ್ಧ ನಾವು ಸಮರ ಸಾರಿದ್ದೇವೆ. ಕರ್ನಾಟಕದಲ್ಲಿ 10 ಸಾವಿರಕ್ಕೂ ಹೆಚ್ಚು ಜನ ವಿದೇಶಿಗರಿದ್ದಾರೆ. ಅವರು ಈ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನೆಲ್ಲ ಫರ್ಮನೆಂಟ್ ಆಗಿ ಮಾನಿಟರ್ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ನೂರಕ್ಕೂ ಹೆಚ್ಚು ಜನರನ್ನು ಆಯಾ ದೇಶಕ್ಕೆ ವಾಪಸ್ ಕಳುಹಿಸಿದ್ದೇವೆ. ಆಯಾ ರಾಯಭಾರ ಕಚೇರಿಯವರ ಕ್ಲಿಯರನ್ಸ್ ಕೇಳಿ ವಾಪಸ್ ಕಳುಹಿಸುತ್ತಿದ್ದೇವೆ. ಕೇಂದ್ರ ಸರ್ಕಾರದ ಗುಪ್ತಚರ ಸಂಸ್ಥೆಗಳು ಏನು ಮಾಡುತ್ತಿವೆಯೋ …
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಧಾರವಾಡ: ಕೆಲವರು ಈ ಸಂಬಂಧ ಕೋರ್ಟ್‌ಗೆ ಹೋಗಿದ್ದಾರೆ. ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ಶರಣಪ್ರಕಾಶ ಅವರ ಬೇಡಿಕೆಯೂ ಒಂದಿದೆ. 371ಜೆ ಗೆ ಶೇ.8 ರಷ್ಟು ಮೀಸಲಾತಿಯನ್ನು ಅವರು ಕೇಳಿದ್ದಾರೆ. 2023ರಲ್ಲಿ ಈ ಸಂಬಂಧ ಆದೇಶವಾಗಿದೆ. ಈ ಆದೇಶ ಪಾಲಿಸಿ ಎಂದು ಒತ್ತಾಯಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. 545 ಪಿಎಸ್‌ಐ ನೇಮಕಾತಿಯ ಫಲಿತಾಂಶ ಸಂಬಂಧ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಅವರು, 545 ಪಿಎಸ್‌ಐ ನೇಮಕ ಪ್ರಾರಂಭವಾಗಿದ್ದು 2020ರಲ್ಲಿ ಹೀಗಾಗಿ …
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಧಾರವಾಡ ; ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಇಂದು ತಿಳಿಸಿದರು. ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, …
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಜಿ.ಟಿ ದೇವೇಗೌಡ ಹೇಳಿಕೆ ಬಿಜೆಪಿಗೆ ಏನೂ ಡ್ಯಾಮೇಜ್ ಆಗೋಲ್ಲ. ಜಿ.ಟಿ ದೇವೇಗೌಡ ಮೊನ್ನೆ ಮೊನ್ನೆವರೆಗೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರದ ವಿರುದ್ಧ ಮಾತನಾಡಿದ್ದರು. ಈಗ ಏಕಾಏಕಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗ ರಾಜಕಾರಣದಲ್ಲಿ ಕೆಲವರಿಗೆ ತಮಗೆ ಬೇಕಾದ ಸ್ಥಾನಮಾನ ಸಿಗದೆ ಇದ್ದಲ್ಲಿ, ಟಿಕೆಟ್, ಮಂತ್ರಿ ಸ್ಥಾನ ಸಿಗದೆ ಹೋದ್ರೆ ಪಕ್ಷದ …
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೋರರು ಭಾರತಕ್ಕೆ ಬಂದಿದ್ದರು. ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ? ಎಲ್ಲಲ್ಲಿ ಬಾಂಬ್ ಬ್ಲಾಸ್ಟ್‌ಗಳಾಗಿವೆ ಎಂಬುದನ್ನು ತಿಳಿದು ಮಾತನಾಡಲಿ. ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಗೃಹ ಮಂತ್ರಿಯಾಗಿ ಜೆ.ಪರಮೇಶ್ವರ …
Read More »