Breaking News

ಹುಬ್ಬಳ್ಳಿ

ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶೆಟ್ಟರ್

ಹುಬ್ಬಳ್ಳಿ: ಕಾಂಗ್ರೆಸ್‌ ಸರ್ಕಾರದ ತುಷ್ಟಿಕರಣ ರಾಜ್ಯದಲ್ಲಿ ಮೀತಿಮೀರಿದೆ. ನೆಲಮಂಗಲ ಕೋಮುಗಲಭೆಯಲ್ಲಿ ಆರೋಪಿಗಳ ಬಂಧನದಲ್ಲಿ ಸರ್ಕಾರದ ಕ್ರಮವೇ ತಿಳಿಯುತ್ತದೆ. ಎ-1 ಆರೋಪಿ ಹಾಗೂ ಎಲ್ಲ ಆರೋಪಿಗಳು ಹಿಂದುಗಳೇ ಆಗಿದ್ದಾರೆ. ಈ ಗಲಭೆಗೆ ಮುಖ್ಯ ಕಾರಣ ಕಾಂಗ್ರೆಸ್‌ ಸರ್ಕಾರದ ತುಷ್ಟಿಕರಣ ಎಂದು ಸಂಸದ ಜಗದೀಶ್ ಶೆಟ್ಟ‌ರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುನಿರತ್ನರ ಬಂಧನದಿಂದ ರಾಜ್ಯ ಸರ್ಕಾರದ ದ್ವೇಷ ರಾಜಕಾರಣ ಎಷ್ಟಿದೆ ಎಂದು ಗೊತ್ತಾಗುತ್ತದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ …

Read More »

ಮುನಿರತ್ನ ಬಂಧನ : ಲಾಡ್ ಪ್ರತಿಕ್ರಿಯೆ

ಧಾರವಾಡ: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಮುನಿರತ್ನ ಅವರ ಮೇಲೆ ಕಾನೂನು ಕ್ರಮ ಜರುಗಿಸಿದ್ದೇವೆ. ಜನಪ್ರತಿನಿಧಿ ಆಗಿರಲಿ ಯಾರೇ ಆಗಲಿ ಆ ರೀತಿಯ ಪದ ಬಳಕೆ ಮಾಡಬಾರದು. ಅದು ಮುನಿರತ್ನ ಅವರ ಓರಿಜಿನಲ್‌ ಧ್ವನಿ ಇದೆಯಾ, ನಕಲಿ ಇದೆಯಾ ಎಂಬುದು ಮುಂದೆ …

Read More »

ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ: ಗಂಭೀರ ಗಾಯ

ಹುಬ್ಬಳ್ಳಿ: ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಶಾರದಾ ಭವನ ಕಡೆಯಿಂದ ದೇಸಾಯಿ ಬ್ರಿಡ್ಜ್ ಕಡೆಗೆ ಹೊರಟಿದ್ದ ಕಾರು ಬಾಳಿಗಾ ಕ್ರಾಸ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದು ನಡು ರಸ್ತೆಯಲ್ಲಿಯೇ ಪಲ್ಟಿಯಾಗಿದೆ. ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. …

Read More »

ಸಾವಿನಲ್ಲಿ ಸಾರ್ಥಕತೆ ಮೆರೆದ ASI ನಾಭಿರಾಜ್

ಹುಬ್ಬಳ್ಳಿ: ಹಳೇ ಕೋರ್ಟ್ ಸರ್ಕಲ್ ಬಳಿ ಪ್ರೈಓವ‌ರ್ ಕಾಮಗಾರಿ ವೇಳೆಯಲ್ಲಿ ನಡೆದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ASI ನಾಭಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಅವರ ಕುಟುಂಬಸ್ಥರು ಸಾರ್ಥಕತೆಯನ್ನು ಮೆರೆದಿದ್ದು ನಾಭಿರಾಜ್ ಅವರ ಕಣ್ಣುಗಳನ್ನು ದಾನ ಮಾಡಿ ಮಾದರಿಯಾಗಿದ್ದಾರೆ. ASI ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಕಮಿಷನ‌ರ್ ಎನ್ ಶಶಿಕುಮಾರ್ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯವನ್ನು ತುಂಬಿದ್ದಾರೆ. ಅಷ್ಟೇ ಅಲ್ಲದೇ ಈಗಾಗಲೇ ಆಗಿದ್ದ FIR …

Read More »

ಫೈ ಓವ‌ರ್ ಕಾಮಗಾರಿ ವೇಳೆ ಪ್ರಕರಣ: ವ್ಯಕ್ತಿ ಸಾವು

ಹುಬ್ಬಳ್ಳಿ: ಫೈ ಓವ‌ರ್ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ 3:45ಕ್ಕೆ ಸಾವನ್ನಪ್ಪಿದ್ದಾರೆ. ನಾಭಿರಾಜ್ ಅವರು ಕಳೆದ ಮಂಗಳವಾರ ಸಾಯಂಕಾಲ ಕರ್ತವ್ಯಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿ ನಡೆಯುತ್ತಿದ್ದ ಫೈಓವರ್ ಕಾಮಗಾರಿಯ ಕಬ್ಬಿಣದ ರಾಡ್ ಅವರ ತಲೆಯ ಮೇಲೆ ಬಿದ್ದಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ …

Read More »

ಗಣೇಶ ವಿಸರ್ಜನೆ :ಎನ್ ಶಶಿಕುಮಾರ್ ಭೇಟಿ

ಹುಬ್ಬಳ್ಳಿ: ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ IPS ರವರು ಗಣೇಶ ವಿಸರ್ಜನೆ ಕಾಲಕ್ಕೆ ಖುದ್ದು ಭೇಟಿ ನೀಡಿ, ಪೊಲೀಸ್ ಇಲಾಖೆಯಿಂದ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮೇಲ್ವಿಚಾರಣೆ ನಡೆಸಿದರು. ಇದೇ ಸಮಯದಲ್ಲಿ ಸಾರ್ವಜನಿಕರನ್ನೂ ಸಹ ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಸಂವಹನ ನಡೆಸಿದರು. ಗಣೇಶ ವಿಸರ್ಜನೆ ಸಮಯದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Read More »

ಅವಳಿ ನಗರದಲ್ಲಿರುವ ಬಿಜೆಪಿ ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ನಾರಾಯಣ ಕಿರೆಸೂರ

ಹುಬ್ಬಳ್ಳಿ: ಅವಳಿ ನಗರದಲ್ಲಿರುವ ಬಿಜೆಪಿ ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲ ಕಾರ್ಯಕರ್ತರು ಅನ್ನೋನ್ಯತೆಯಿಂದ ಇದ್ದೇವೆ. ಪ್ರಹ್ಲಾದ್ ಜೋಶಿ ಹಾಗೂ ಮಹೇಶ್ ಟೆಂಗಿನಕಾಯಿ ಎಲ್ಲವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ನಾರಾಯಣ ಕಿರೆಸೂರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಅವಳಿ ನಗರದ ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ. ಜಗದೀಶ್ ಶೆಟ್ಟ‌ರ್ ಕಾಂಗ್ರೆಸ್‌ ತೊರೆದು ಮರಳಿ ಬಿಜೆಪಿಗೆ ಬಂದಿದ್ದು ಆನೆ ಬಲವನ್ನು ತಂದಿದೆ. ಎಲ್ಲರೂ ಅದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.ಶಾಸಕ ಮಹೇಶ …

Read More »

ಲ್ಯಾಪ್‌ಟಾಪ್‌ ಕಳ್ಳತನ ಪ್ರಕರಣ : ಕಿಡಿಕಾರಿದ ಜೋಶಿ

ಹುಬ್ಬಳ್ಳಿ: ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್‌ಟಾಪ್‌ ಕಳ್ಳತನ ಪ್ರಕರಣ ಇದೆಲ್ಲ ಮಿಲಾಪಿ ಕುಸ್ತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಕಾರ್ಮಿಕ ಇಲಾಖೆಯ 101 ಲ್ಯಾಪ್ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮಕ್ಕಳಿಗೆ ಹಂಚಿಕೆ ಮಾಡೋ ಲ್ಯಾಪ್‌ಟಾಪ್ ಎಲ್ಲಿ ಹೋದ್ವು? ಅವರೇ ಭಾಗಿಯಾಗಿರ್ತಾರೆ. ನಂತರ ದೂರು ಕೊಡ್ತಾರೆ. ಇದೆಲ್ಲ ಮಿಲಾಪಿ ಕುಸ್ತಿ ಎಂದರು. ನಿನ್ನೆ ಈ ವಿಚಾರ ದಿಶಾ ಸಭೆಯಲ್ಲೂ ಚರ್ಚೆ ಆಗಿದೆ. ಕಾರ್ಮಿಕ ಸಚಿವರ …

Read More »

ಬಿಬಿಎಂಪಿ ಗುತ್ತಿಗೆದಾರನಿಗೆ ಮುನಿರತ್ನ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಟೆಂಗಿನಕಾಯಿ

ಹುಬ್ಬಳ್ಳಿ: ಶಾಸಕ ಮುನಿರತ್ನ ಅವರನ್ನ ಪಕ್ಷದಿಂದ ಉಚ್ಛಾಟಿಸಿ ಎಂದು ಕಾಂಗ್ರೆಸ್ ಪಟ್ಟು ಹಿಡಿದ ವಿಚಾರಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಆಕ್ಷೇಪ ವ್ಯಕ್ತಪಡಿಸಿದರು. ಬಿಬಿಎಂಪಿ ಗುತ್ತಿಗೆದಾರನಿಗೆ ಮುನಿರತ್ನ ಬೆದರಿಕೆ ಆರೋಪ ಹಾಗೂ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು, ನೋಡ್ರಿ ಕಾಂಗ್ರೆಸ್ ನವರಿಗೆ ಕೆಲಸ- ಬಗಸಿ ಇಲ್ಲ. ಅವ್ರನ್ನ ಉಚ್ಚಾಟನೆ ಮಾಡಿ ಇವ್ರನ್ನ ಉಚ್ಚಾಟನೆ ಮಾಡಿ ಅಂತ ಹೇಳ್ತಾ ಇದ್ದಾರೆ. ಹಾಗಾದರೆ ರಾಹುಲ್ ಗಾಂಧಿ ದಲಿತರ ಮೀಸಲಾತಿ ತೆಗೆದು ಹಾಕುವ …

Read More »

ಕಾಂಗ್ರೆಸ್‌ ಸರ್ಕಾರ ಬಂದಾಗ ದೇಶ ದ್ರೋಹ ಕೃತ್ಯಗಳು ಸರ್ವೇ ಸಾಮಾನ್ಯವಾಗಿದೆ : ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್‌ ಸರ್ಕಾರ ಬಂದಾಗ ದೇಶ ದ್ರೋಹ ಕೃತ್ಯಗಳು ಸರ್ವೇ ಸಾಮಾನ್ಯವಾಗಿದೆ. ಗಣಪತಿ ಪ್ರತಿಷ್ಠಾಪನೆ ಮಾಡಿದವರನ್ನು ಎ-1 ಆರೋಪಿ ಮಾಡಿದ್ದು, ಎಸ್.ಪಿ ಗೆ ಹಾಗೂ ಗೃಹ ಸಚಿವರಿಗೆ ನಾಚಿಕೆ ಮಾನ ಮರ್ಯಾದೆಯೇ ಇಲ್ಲವಾಗಿದ್ದು, ರಾಜ್ಯವನ್ನು ಪಾಕಿಸ್ತಾನ ಮಾಡಿದ್ದೀರಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದಲ್ಲಿ ಯುಪಿಎ ಕಾಲದಲ್ಲಿ ಯಾವ ರೀತಿ ಭ್ರಷ್ಟಾಚಾರ ಆಗಿತ್ತೋ ಅದೇ ರೀತಿ ಇಲ್ಲೂ ಸೀರಿಸ್ …

Read More »