Breaking News

ಹುಬ್ಬಳ್ಳಿ

ಹುಬ್ಬಳ್ಳಿ: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ 45 ರೌಡಿಶೀಟರಗಳ ಗಡಿಪಾರು; ಕಮಿಷನರ್ ಎನ್.ಶಶಿಕುಮಾರ್ ಆದೇಶ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕಲು ಹುಬ್ಬಳ್ಳಿ ಧಾರವಾಡ ಅವಳಿನಗರದ ಪೊಲೀಸ ಕಮಿಷನರೇಟ್ ವ್ಯಾಪ್ತಿಯ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು‌ ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ …

Read More »

ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಬಂದು ಹಣ ಕಳ್ಳತನ ಮಾಡಿ ಎಸ್ಕೇಪ್

ಹುಬ್ಬಳ್ಳಿ: ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಮಳ್ಳರಂತೆ ಬಂದ ಇಬ್ಬರು ಕಪಲ್ಸ್ ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿರುವ ಘಟನೆ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿರುವ ಫ್ಲೈಯಿಂಗ್ ಮಷಿನ್ ಬಟ್ಟೆ ಅಂಗಡಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಟ್ಟೆ ಖರೀದಿಗೆಂದು ಫುಲ್ ಟಿಪ್‌ಆಫ್ ಆಗಿ ಬಂದ ಹುಡುಗ ಹುಡುಗಿ, ಯಾರು ಇಲ್ಲದ ಅಂಗಡಿಗೆ ನುಗ್ಗಿ ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡುವುದೇ ಇವರ ವೃತ್ತಿಯಾಗಿದೆ. ಅದೇ ರೀತಿ ಇಂದು ಇಬ್ಬರು ಫ್ಲೈಯಿಂಗ್ …

Read More »

ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ: ಸಚಿವ ಆರ್.ಬಿ.ತಿಮ್ಮಾಪುರ ಸ್ಪೋಟಕ ಹೇಳಿಕೆ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಗುಸು ಗುಡು ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡುವೆ ಅಧಿಕಾರ ಹಂಚಿಕೆ ಸಂಬಂಧ ಕೈ ಪಾಳಯದಲ್ಲಿ ಚರ್ಚೆ ಹುಟ್ಟುವಂತೆ ಮಾಡಿದ್ದು, ಈ ನಡುವೆ ದಲಿತ ಸಿಎಂ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಡಿ ಕೆ ಶಿವಕುಮಾರ್ ವಿದೇಶಿ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಇದರ ಮಧ್ಯ ಅಧಿಕಾರ ಹಂಚಿಕೆ …

Read More »

500 ರೂ. ಮುಖಬೆಲೆಯ ನೋಟುಗಳ ಮೇಲೆ ಅಂಬೇಡ್ಕರ್ ಚಿತ್ರ ಮುದ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಒತ್ತಾಯ

ಹುಬ್ಬಳ್ಳಿ: 500 ರೂ. ಮುಖಬೆಲೆಯ ನೋಟುಗಳ ಮೇಲೆ ಬಾಬಾಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಚಿತ್ರ ಮುದ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ. ನಗರದ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಘಟನೆ ಇಲ್ಲಿಯ ಇಂದಿರಾ ಗಾಜಿನಮನೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ’ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿದರು. 500 ಮುಖಬೆಲೆಯ ನೋಟಿನಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ …

Read More »

ವಕೀಲ ವೃತ್ತಿಗೆ ಗೌರವ ತಂದುಕೊಟ್ಟವರು ಅಂಬೇಡ್ಕರ್: ಕಾಂಗ್ರೆಸ್ ಲೀಗಲ್ ಸೆಲ್ ನಿಂದ ರಾಷ್ಟ್ರಪತಿಗೆ ಮನವಿ

ಹುಬ್ಬಳ್ಳಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಅಮಿತ್ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು ಹಾಗೂ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಲೀಗಲ್ ಸೆಲ್ ವತಿಯಿಂದ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಹುಬ್ಬಳ್ಳಿ ಧಾರವಾಡ ಅವಳಿನಗರದ ಬಂದ್ ಗೆ ಬೆಂಬಲ ಸೂಚಿಸಿದ ಅವರು, ಕೂಡಲೇ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸಚಿವ ಅಮಿತ್ …

Read More »

ಜಬ್ ತಕ್ ಸೂರಜ್ ಚಾಂದ್ ರಹೇಗಾ: ಬಾಬಾ ಥೇರಾ ನಾಮ್ ರಹೇಗಾ..!

ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಮಹಿಳೆಯರು ಕೂಡ ರಸ್ತೆಗ ಇಳಿದು ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಭಾವಚಿತ್ರ ಹಾಗೂ ಮೂರ್ತಿ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ವಿವಿಧ ದಲಿತ ಸಂಘಟನೆಗಳ‌ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಬ್ ತಕ್ ಸೂರಜ್ ಚಾಂದ್ ರಹೇಗಾ.. …

Read More »

ಅಮಿತ್ ಶಾ ವಿರುದ್ಧ ಪ್ರತಿಭಟನೆ: ಇಂಡಿ ಪಂಪ್ ಬಳಿಯಲ್ಲಿ ಟೈರ್ ಗೆ ಬೆಂಕಿ

ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ದಲಿತ ಸಂಘಟನೆಗಳ‌ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ …

Read More »

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ. ಡೀಸೆಲ್, ಪೆಟ್ರೋಲ್ ದರ ಹೆಚ್ಚಳವಾದಾಗ ಎಲ್ಲ ವಸ್ತುಗಳೂ ದುಬಾರಿ ಆಗುತ್ತವೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಸಹ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ 1 ಲೀಟರ್ ಡೀಸೆಲ್ ಅನ್ನು ₹30ರಿಂದ ₹40ಕ್ಕೆ ಕೊಡಬಹುದು. ರಿಲಯನ್ಸ್ ಪೆಟ್ರೋಲ್ ಬಂಕ್ ಉಳಿಯಬೇಕು ಎನ್ನುವ ಉದ್ದೇಶದಿಂದ ಪೆಟ್ರೋಲ್, ಡಿಸೇಲ್ …

Read More »

ಹುಬ್ಬಳ್ಳಿ ವಿಭಾಗೀಯ ರೈಲ್ವೆ ನೂತನ ವ್ಯವಸ್ಥಾಪಕರಾಗಿ ಬೇಲಾ ಮೀನಾ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ ವಿಭಾಗೀಯ ರೈಲ್ವೆ ನೂತನ ವ್ಯವಸ್ಥಾಪಕರಾಗಿ ಬೇಲಾ ಮೀನಾ ಅವರು ಅಧಿಕಾರ ಸ್ವೀಕರಿಸಿದರು. ಈ ಮೂಲಕ ಹುಬ್ಬಳ್ಳಿಯ ವಿಭಾಗೀಯ ನೈರುತ್ಯ ರೈಲ್ವೆಯ ವ್ಯವಸ್ಥಾಪಕರಾಗಿ ಬೇಲಾ ಮೀನಾ ಗದ್ದುಗೆಗೇರಿದ್ದಾರೆ. ಬೇಲಾ ಮೀನಾ ಅವರು ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ನೂತನ ವ್ಯವಸ್ಥಾಪಕರಾಗಿ (DRM) ಅಧಿಕಾರ ಸ್ವೀಕರಿಸಿದರು. ಇವರು 1996ರ ಬ್ಯಾಚ್‌ನ ಭಾರತೀಯ ರೈಲ್ವೆ ಸಂಚಾರ ಸೇವೆಯ (IRTS) ಅಧಿಕಾರಿಯಾಗಿದ್ದು, 1997ರ ಸೆಪ್ಟೆಂಬರ್ 4ರಂದು ಭಾರತೀಯ ರೈಲ್ವೆಯಲ್ಲಿ ತಮ್ಮ ವೃತ್ತಿ ಜೀವನ …

Read More »

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಸ್ಥಾಪನೆಗೆ ಅನುಮೋದನೆ ನೀಡಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಧಾರವಾಡ ಮಹಾನಗರ ಪಾಲಿಕೆ ಸ್ಥಾಪನೆಗೆ ಸಂಪುಟದಲ್ಲಿ ಅನುಮೋದನೆ ನೀಡಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಅಭಿವೃದ್ಧಿಗೆ ಒತ್ತು, ಮಹತ್ವದ ಘೋಷಣೆಗಳು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ ಎನ್ನುವುದಕ್ಕೆ ಧಾರವಾಡ ಪ್ರತ್ಯೇಕ ಪಾಲಿಕೆ ನಿರ್ಣಯ ಮತ್ತೊಂದು ನಿದರ್ಶನ’ ಎಂದು ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಪರ ಮತ್ತು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಬಿಜೆಪಿ …

Read More »