Breaking News

ಹುಬ್ಬಳ್ಳಿ

ಸಿಎಂ ಸಿದ್ಧರಾಮಯ್ಯನವರದು ಲೆಫ್ಟಿಸ್ಟ್ ವಿಚಾರಧಾರೆ, ಅನಗತ್ಯ ವಿಚಾರದಲ್ಲಿ ಬೀಳಬಾರದು: ಕೇಂದ್ರ ಸಚಿವ ಜೋಶಿ ವ್ಯಂಗ್ಯ

ಹುಬ್ಬಳ್ಳಿ: ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡೋ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರು ಲೆಫ್ಟಿಸ್ಟ್ ವಿಚಾರ ಧಾರೆಯವರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೆಫ್ಟಿಸ್ಟ್ ಸಹ ಇದಕ್ಕೆ ವಿರೋಧ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅನಗತ್ಯ ವಿಚಾರದಲ್ಲಿ ಬೀಳಬಾರದು. ಅವರ ಹಗರಣಗಳ ಬಗ್ಗೆ ನಾವು ಮಾತನಾಡಿದ್ದೇವೆ. ಧೀರ್ಘ ಅಧಿಕಾರದಲ್ಲಿ ಇದ್ದವರು, ಚಿಲ್ಲರೆಯಲ್ಲಿ ಸಿಲುಕಬೇಡಿ ಎಂದ ಜೋಶಿ ತಿಳಿ ಹೇಳಿದರು.

Read More »

ರಾಜ್ಯ ಸರ್ಕಾರದ ವಿರುದ್ಧ ಜಗದೀಶ ಶೆಟ್ಟರ್ ವಾಗ್ದಾಳಿ: ದುರಾಡಳಿತದಿಂದ ರಾಜ್ಯದ ಜನರಿಗೆ ಹೊಡೆತ..!

ಹುಬ್ಬಳ್ಳಿ: ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಖಂಡನೀಯವಾಗಿದೆ. ಗ್ಯಾರಂಟಿ ಯೋಜನೆ ಅಂತ ಫ್ರೀ ಕೊಡತ್ತಾರೆ. ಮತ್ತೊಂದು ಕಡೆ ಸಾಲ ತೆಗೆದುಕೊಳ್ಳತ್ತಾರೆ. ಸಾಲ ಮತ್ತು ಬಡ್ಡಿಯಲ್ಲಿ ಸಾರಿಗೆ ಸಂಸ್ಥಗಳು ನಡೆಯುತ್ತಿವೆ. ನಾಲ್ಕೂ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ, ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತ ಇದಕ್ಕೆ ಕಾರಣ. ಪ್ರಯಾಣಿಕರಿಗೆ ಪೆಟ್ಟು‌ ನೀಡುವ ಕಾರ್ಯವಾಗುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ …

Read More »

ಧಾರವಾಡ ಪ್ರತ್ಯೇಕ ಪಾಲಿಕೆ ನಿರ್ಧಾರ ಸ್ವಾಗತಿಸಿದ ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ದೊಡ್ಡ ಪಕ್ಷ ಆಗಿರೋದ್ರಿಂದ ಒಂದಷ್ಟು ಅಸಮಾಧಾನ, ಅತೃಪ್ತಿ ಇದ್ದೇ ಇರುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಬೆಳವಣಿಗೆ ಹೈಕಮಾಂಡ್ ಗೆ ಗೊತ್ತಿದೆ. ಅದರ ಬಗ್ಗೆ ವರಿಷ್ಠ ಚಿಂತನೆ ಮಾಡತ್ತಾರೆ. ನಮ್ಮ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರ ಅವರು ಎಲ್ಲಾ ನಿಭಾಯಿಸುತ್ತಾರೆ.‌ ಸಮಸ್ಯೆ ಇಲ್ಲದ ಪಾರ್ಟಿಗಳು ಇಲ್ಲ. ಎಲ್ಲಾ ಪಕ್ಷದಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೆ ಇರುತ್ತವೆ. …

Read More »

ಗ್ಯಾರಂಟಿ ಹೆಸರಲ್ಲಿ ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಎಲ್ಲಾ ದರ ಏರಿಕೆ ಮಾಡಿ ಜನ ಸಾಮಾನ್ಯರ ನಿತ್ಯದ ಜೀವನಕ್ಕೆ ಕುತ್ತು ತಂದಿದೆ. ವಿದ್ಯುತ್ ದರ, ಹಾಲಿನದರ, ಡೀಸೆಲ್‌, ಪೆಟ್ರೋಲ್ ದರ ರಾಜ್ಯದಲ್ಲಿ ಏರಿಕೆ ಮಾಡಿದ್ದಾರೆ. ಆಸ್ತಿ ನೊಂದಣಿ, ಮದ್ಯದ ದರ ಏರಿಕೆ ಮಾಡಿದ್ದರು ಈಗ ಬಸ್ ದರ ಏರಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ …

Read More »

ಹುಬ್ಬಳ್ಳಿಯ ಸಿಲಿಂಡರ್ ಸ್ಫೋಟ ಪ್ರಕರಣ: ಪವಾಡ ಸದೃಶ ರೀತಿಯಲ್ಲಿ ಬದುಕುಳಿದ ಮಾಲಾಧಾರಿ ವಿನಾಯಕ್ ಬಾರಕೇರ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟ ದುರ್ಘಟನೆಯಲ್ಲಿ ಈವರೆಗೆ 8 ಜನ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದು, ಒಬ್ಬ ಮಾಲಾಧಾರಿ ಮಾತ್ರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಮಾಲಾಧಾರಿ ವಿನಾಯಕ್ ಬಾರಕೇರ ಬಹುತೇಕ ಚೇತರಿಸಿಕೊಂಡಿದ್ದು, ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ. 12 ವರ್ಷದ ವಿನಾಯಕ್ ಆರೋಗ್ಯದ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಡಿಸ್ಚಾರ್ಜ್​ ಮಾಡಲಾಗುವುದು ಎಂದು ಕಿಮ್ಸ್ ನಿರ್ದೇಶಕ ಡಾ. ಎಸ್​ಎಫ್ ಕಮ್ಮಾರ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 22 …

Read More »

ಹಾವು ಕಚ್ಚಿ ಮೂರು ವರ್ಷದ ಬಾಲಕಿ ಸಾವು

ಹುಬ್ಬಳ್ಳಿ: ಅಂಗನವಾಡಿಗೆ ತೆರಳಿದ್ದ ವೇಳೆ ಮೂರು ವರ್ಷದ ಮಗು ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಕಾರವಾರ ಜಿಲ್ಲೆಯ ಮುಂಡಗೋಡು ಅಳೂರು ಓಣಿಯಲ್ಲಿ ನಡೆದಿದೆ. ಮಯೂರಿ(3) ಮೃತ ಬಾಲಕಿ, ಸ್ಥಳಿಯ ಮಾರಿಕಾಂಬ ಅಂಗನವಾಡಿ ತೆರಳಿದ್ದ ಮಯೂರಿ ಹೊರಬದಿಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಮಯೂರಿ ಕಾಲಿಗೆ ಹಾವು ಕಚ್ಚಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಯೂರಿ ಸಾವನ್ನಪ್ಪಿದ್ದಾಳೆ. ಅಂಗನವಾಡಿ ಶಿಕ್ಷಕಿ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬ ಆರೋಪ ಕೇಳಿ ಬರುತ್ತಿದೆ.

Read More »

ಅಯ್ಯಪ್ಪ ಮಾಲಾಧಾರಿಗಳ ಸಾವು: ಸಚಿವ ಸಂತೋಷ್ ಲಾಡ್ ಸಂತಾಪ

ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ನಿನ್ನೆ ಒಬ್ಬರು ಹಾಗೂ ಇಂದು ಒಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 7ಕ್ಕೇರಿದೆ. 9 ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತಿಬ್ಬರು ಗಾಯಾಳುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ …

Read More »

ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಮೃತರ ಸಂಖ್ಯೆ 7ಕ್ಕೆ ಏರಿಕೆ

ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೋರ್ವ ಮಾಲಾಧಾರಿ ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ ಏಳಕ್ಕೇರಿದೆ. ತೇಜಸ್ ಸತಾರೆ ಎಂಬ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, ತೇಜಸ್ ಹೊಟೇಲ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿಯೂ ಗಂಭೀರವಾಗಿದೆ. ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಕುಟುಂಬಕ್ಕೆ ಸರಕಾರ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

Read More »

ಹುಬ್ಬಳ್ಳಿಯಲ್ಲಿ ಹಳೇ ದ್ವೇಷಕ್ಕಾಗಿ ಯುವಕರಿಬ್ಬರಿಗೆ ಚಾಕು ಇರಿತ

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಆನಂದ ನಗರದ ಗೋಡಕೆ ಪ್ಲಾಟ್ ಬಳಿ ನಡೆದಿದೆ. ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ… ಹಳೇ ಹುಬ್ಬಳ್ಳಿ ಠಾಣೆಯ ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು..  ತಂಡ ದೌಡಾಯಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ…

Read More »
Featured Video Play Icon

ಕೊಲೆ ಪ್ರಕರಣವನ್ನು ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ಯಶಸ್ವಿಯಾದ ಬೆಂಡಿಗೇರಿ ಠಾಣೆಯ ಪೊಲೀಸರು

ಹುಬ್ಬಳ್ಳಿ ಖಡಕ್ ಖಾಕಿ ಕಾರ್ಯಾಚರಣೆ: ಕೊಲೆಗಡುಕರ ಹೆಡೆಮುರಿ.. ಕ್ರೌರ್ಯ ಮೆರೆದಿದ್ದವರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ ಕಹಾನಿ.. ಹುಬ್ಬಳ್ಳಿ: ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದ್ದ ಕೊಲೆ ಪ್ರಕರಣವನ್ನು ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಮಂಟೂರ ರಸ್ತೆಯ ನಿವಾಸಿ ಸ್ಯಾಮ್ಯುಯೆಲ್ ಮಬ್ಬು (38) ಎಂಬಾತನನ್ನು ನಗರದ ಹೊರವಲಯದ ರಿಂಗ್ ರೋಡ್ ಬಳಿಯಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆ …

Read More »