admin
April 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಕೇಸ್ ದಾಖಲು ಮಾಡಲಾಗಿದ್ದು, 134 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ತನಿಖೆಯನ್ನು ಕೈಗೊಂಡಿದ್ದು, ಸೂಕ್ತ ಬಂದೋಬಸ್ತ್ ಜೊತೆಗೆ ನಾಳೆಯವರೆಗೂ 144 ಜಾರಿಯಲ್ಲಿ ಇರಲಿದೆ ಎಂದು ಪೊಲೀಸ್ ಆಯುಕ್ತರಾದ ಲಾಭುರಾಮ್ ಹೇಳಿದರು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶನಿವಾರ ರಾತ್ರಿ ಘಟನೆ …
Read More »
admin
April 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗಲಭೆಯ ವಾಸೀಂ ಪಠಾಣ್ ವಿಚಾರಣೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಲಾಭುರಾಮ್ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ತಲೆಮರೆಸಿಕೊಂಡಿದ್ದ ವಾಸೀಂ ಪಠಾಣ್ ನನ್ನು ಠಾಣೆಗೆ ಕರೆತಂದಿರುವ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಪೊಲೀಸ್ ಆಯುಕ್ತರು ಠಾಣೆಗೆ ಭೇಟಿ ನೀಡಿ ಮತ್ತಷ್ಟು ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆ …
Read More »
Shaikh BigTv
April 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶನಿವಾರ ರಾತ್ರಿ ವೇಳೆಯಲ್ಲಿ ಶಾಂತಿಯಿಂದ ಕೂಡಿದ್ದ ಹುಬ್ಬಳ್ಳಿಯಲ್ಲಿ ಅಶಾಂತಿಯನ್ನು ಹುಟ್ಟು ಹಾಕಿ ಕಲ್ಲು ತೂರಾಟ ನಡೆಸಿರುವ ಗಲಭೆಕೋರರನ್ನು ಬಂಧಿಸುವ ಕಾರ್ಯಾಚರಣೆ ದಿನದಿಂದ ದಿನಕ್ಕೆ ಚುರುಕುಗೊಂಡಿದ್ದು, ಇಂದು ಕೂಡ ಏಳು ಜನ ಆರೋಪಿಗಳನ್ನು ಬಂಧಿಸಿದ ಪೊಲೀಸರು. ವೈದ್ಯಕೀಯ ತಪಾಸಣೆ ಹಾಗೂ ಕಾರಾಗೃಹಕ್ಕೆ ಕರೆದೊಯ್ದರು. ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಆವರಣದಲ್ಲಿ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ 133 ಜನರನ್ನು ವಶಕ್ಕೆ ಪಡೆದಿದ್ದು, ದಿನದಿಂದ ದಿನಕ್ಕೆ ಬಂಧಿತರ …
Read More »
admin
April 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ರೈತರ ಉಳಿವು, ಅಳಿವಿಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರೈತ ಭಾರತ ಪಕ್ಷದಿಂದ ೨೨೪ ಮತಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಉತ್ತರ ಕರ್ನಾಟಕ ರೈತ ಸಂಘ ತಿರ್ಮಾಣಿಸಲಾಗಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೨೨೪ ಕ್ಷೇತ್ರದಲ್ಲಿಯೂ ರೈತರೇ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದರು. ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಹಾಗೂ ಬೆಂಬಲ ಬೆಲೆ ದೊರತಿಲ್ಲ. ಇದರಿಂದಾಗಿ …
Read More »
admin
April 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಟ್ಸ್ಆಯಪ್ನಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿಕೊಂಡಿದ್ದ ಆರೋಪಿ, ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಈತನಿಗೆ ಏ.22ರಿಂದ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ, ಅಭಿಷೇಕನಿಗೆ ಪರೀಕ್ಷೆ …
Read More »
admin
April 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ದಿನೆ ದಿನೆ ಒಂದಿಲ್ಲೊಂದು ಕೋಮು ಗಲಭೆ ಸೃಷ್ಟಿಸುವ ಕೃತ್ಯಗಳು ನಡಿಯುತ್ತಲೇ ಇವೆ. ಅಷ್ಟೇ ಅಲ್ಲದೆ ಹುಬ್ಬಳ್ಳಿ ಧಾರವಾಡದಲ್ಲಿ ಕೋಮು ಗಲಭೆಯ ವಾತಾವರಣ ಸೃಷ್ಟಿಯಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ನಡೆದ ಕೋಮು ಗಲಭೆಯಿಂದ ವಾಣಿಜ್ಯ ನಗರಿ ಜನರು ಭಯಬೀತರಾಗಿದ್ದರು. ಆದ ಕಾರಣ ಹಿಂದೂ ಮುಸ್ಲಿಂ ಎಲ್ಲರೂ ಒಂದೆ ತಾಯಿಯ ಮಕ್ಕಳಿದ್ದಂತೆ. ನಾವೆಲ್ಲರೂ ಭಾರತಿಯರು ಒಂದಾಗಿ ಬಾಳಬೇಕೆಂದು, ಸರ್ವಧರ್ಮದ ಹಿಂದೂ ಸ್ವಾಮೀಜಿಗಳು ಮತ್ತು …
Read More »
admin
April 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದೇಶದಲ್ಲಿ ಎಲ್ಲ ಧರ್ಮದವೂ ಒಂದೆಯಾಗಿದೆ. ಸಂವಿಧಾನ ಮತ್ತು ಕಾನೂನಿಗಿಂತ ಯಾರು ದೊಡ್ಡವರಲ್ಲ. ಆದರೆ ಇತ್ತೀಚೆಗೆ ಇಂತಹ ಗಲಭೆ ಗಳು ರಾಜ್ಯದಲ್ಲಿ ನಡೆಯುತ್ತಿದೆ. ಇದು ಮುಂದೆಯಾಗದಂತೆ ಜನಸಾಮಾನ್ಯರು ಶಾಂತಿಯುತವಾಗಿರಬೇಕು ಎಂದು ಬೆಂಗಳೂರಿನ ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಹಿಂಸಾತ್ಮಕ ಘಟನೆ ನಡೆದಿದೆ. ಇದು ಸಮಾಜಕ್ಕೆ ಮಸಿ ಬಳೆಯುವಂತಾಗಿದೆ. ಹಿಂದಿನ ಕಾಲದಿಂದಲೂ ಸರ್ವಧರ್ಮ ಸಮನ್ವಯತೆಯಿಂದ ನಡೆದುಕೊಂಡು ಬಂದಿದ್ದೇವೆ ಎಂದರು. ದೇಶದಲ್ಲಿ ಸಂವಿಧಾನದಂತೆ ನಡೆಯಬೇಕು. …
Read More »
admin
April 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣ ಹಿನ್ನೆಲೆ ಏ.23 ರ ವರೆಗೆ ನಿಷೇಧಾಜ್ಞೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ. ಹಳೇ ಹುಬ್ಬಳ್ಳಿ ಠಾಣೆ ಸೇರಿದಂತೆ ದಕ್ಷಿಣ ವಿಭಾಗದ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹು-ಧಾ ಪೊಲೀಸ್ ಆಯುಕ್ತ ಲಾಭೂ ರಾಮ್ ಆದೇಶ ಹೊರಡಿಸಿದ್ದಾರೆ.
Read More »
admin
April 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಶಿಗ್ಗಾಂವಿ ಶೂಟೌಟ್‌ಗೆ ಪ್ರಕರಣಕ್ಕೆ ಮತ್ತೇ ಟ್ವಿಸ್ಟ್ ಸಿಕ್ಕಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಯುವಕನ ಮಾವ ಮಹದೇವಪ್ಪ ತಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರಮಂದಿರಕ್ಕೆ ಎಂಟ್ರಿಯಾಗಿ ಬಳಿಕ ಅಪರಿಚಿತ ವ್ಯಕ್ತಿ ಗನ್ ತೋರಿಸಿದ್ದ. ಗನ್ ತೋರಿಸುತ್ತಲೇ ಹಂತಕ ತಬ್ಬಿಕೊಂಡು ಶೂಟ್ ಮಾಡಿದ್ದಾರೆ. ಕೆಜಿಎಫ್ – 2 ಸಿನೆಮಾ ಪ್ರಾರಂಭವಾಗಿ ಐದೇ ನಿಮಿಷದಲ್ಲಿಯೇ ಕಾಲು ತಾಗಿದ್ದಕ್ಕೆ ಜಗಳ ಆರಂಭವಾಗಿದ್ದು, ಜಗಳದ ನಂತ್ರ ವಾಪಸ್ಸು ಬಂದು ನೋಡ್ತೆನಿ ಎಂದು ತೆರಳಿದ್ದರು. ಹತ್ತೆ ನಿಮಿಷಗಳಲ್ಲಿ …
Read More »
admin
April 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿನ್ನಲೆ ಮತ್ತೆ ಹನ್ನೆರಡು ಜನರನ್ನು ಪೊಲೀಸರು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 115 ಕ್ಕೇ ಏರಿದೆ. ಹುಬ್ಬಳ್ಳಿಯಲ್ಲಿ ಪೊಲೀಸರನ್ನೇ ಗುರಿಯಾಗಿಸಿಕೊಂಡುಪುಂಡರು ದಾಂಧಲೆ ಮಾಡಿದ್ದರು. ಈ ಹಿನ್ನೆಲೆ ಮೊನ್ನೆ ರಾತ್ರಿಯಿಂದಲೇ ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. 200ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದರು. ಸದ್ಯ ಗಲಭೆಗೆ ಕಾರಣರಾದ ಮತ್ತಷ್ಟು ಪುಂಡರಿಗೆ ಪೊಲೀಸರು ಬಲೆ ಬಿಸಿದ್ದಾರೆ.
Read More »