Welcome to bigtvnews   Click to listen highlighted text! Welcome to bigtvnews
Breaking News

Breaking News

ಕೆಸಿಡಿ ಕಾಲೇಜು ಗಾರ್ಡನ್​​​ನಲ್ಲಿ 2 ಗುಂಪುಗಳ ನಡುವೆ ಮರಾಮಾರಿ

ಧಾರವಾಡ: ಕಳೆದ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಮಾರಾಮಾರಿ ಘಟನೆ ಮಾಸುವ ಮುನ್ನವೇ ಕರ್ನಾಟಕ ಕಾಲೇಜಿನ ಮುಂಭಾಗದಲ್ಲಿರುವ ಗಾರ್ಡನ್​​​ನಲ್ಲಿ ಎರಡು ಗುಂಪಿನ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.‌‌ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯುವಕರ ಬೀದಿ ಕಾಳಗ ಮುಂದುವರಿದಿದ್ದು, ವಿವಿಧ ಕಾಲೇಜಿನ ವಿದ್ಯಾರ್ಥಿಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಹೊಡೆದಾಟ ನಡೆಯುತ್ತಿದ್ದ ವೇಳೆ ಮಾಧ್ಯಮದ ಕ್ಯಾಮೆರಾ ನೋಡಿದ ಯುವಕರು ಓಡಿ ಹೋಗಿದ್ದಾರೆ. ಸದ್ಯ ಧಾರವಾಡದಲ್ಲಿ‌ ಪುಂಡ ರೌಡಿಗಳ ಹಾವಳಿ …

Read More »

ಅಂಗನವಾಡಿ ಕೇಂದ್ರಕ್ಕೆ ಒತ್ತಾಯಿಸಿ ಬಿದಿಗೆ ಇಳಿದ ಗ್ರಾಮಸ್ಥರು: ಮಕ್ಕಳು ಸಮೇತ ರಸ್ತೆ ತಡೆದು ಆಕ್ರೋಶ

ಧಾರವಾಡ: ಕಳೆದ ಹನ್ನೊಂದು ವರ್ಷಗಳಿಂದ ಶಾಶ್ವತ ಅಂಗನವಾಡಿ ಕಟ್ಟಡ ನೀಡದೆ ಇರುವುದನ್ನು ಖಂಡಿಸಿ ಹಾಗೂ ಶಾಶ್ವತ ಅಂಗನವಾಡಿ‌ ಕಟ್ಟಡಕ್ಕೆ ಆಗ್ರಹಿಸಿ, ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೇ ತಮ್ಮ ಮಕ್ಕಳ ಸಮೇತವಾಗಿ ಬಿದಿಗೆ‌ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ‌ ಹೆಬ್ಬಳ್ಳಿ ಗ್ರಾಮದ ಶಿವಾಜಿ ವೃತದಲ್ಲಿ ಗ್ರಾಮಸ್ಥರು ತಮ್ಮ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ರಸ್ತೆಲ್ಲಿಯೇ ಕಲಿಕಾ ಪ್ರಕ್ರಿಯೆಗೆ ಮುಂದಾಗುವ‌ ಮೂಲಕ ರಸ್ತೆ ಸಂಪೂರ್ಣ ಬಂದ್ ಮಾಡಿ, ಗ್ರಾಮ ಪಂಚಾಯತಿ …

Read More »

ಕರ್ನಾಟಕದ ಮೂಲಕ ಭಾರತಕ್ಕೆ ಓಮಿಕ್ರಾನ ಎಂಟ್ರಿ

ಬೆಂಗಳೂರು: ರಾಜ್ಯದ ಇಬ್ಬರಲ್ಲಿ ಓಮಿಕ್ರಾನ ವೈರಸ್ ಪತ್ತೆಯಾಗಿದ್ದು, ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆಯಾಗಿದೆ.ದೇಶದಲ್ಲೇ ಮೊದಲ ಎರಡು ಕೇಸ್ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು.ರಾಜ್ಯದ ಮೂಲಕ ಭಾರತಕ್ಕೆ ಓಮಿಕ್ರಾನ ಪತ್ತೆಯಾಗಿದೆ.ಡೆಲ್ಟಾ ವೈರಸ್ ಗಿಂತ ಅತಿ ವೇಗವಾಗಿ ಈ ವೈರಸ್ ಹರಡುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಸಿಲಿಕಾನ್ ಸಿಟಿ ಬೆಂಗಳೂರಿಗೆ ಓಮಿಕ್ರಾನ ಡಬಲ್ ಶಾಕ್ ನೀಡಿದೆ.ಬೆಂಗಳೂರಿನ 64 ಹಾಗೂ 46 ವರ್ಷದ ವೃದ್ದರಲ್ಲಿ ಓಮಿಕ್ರನಾ ಪತ್ತೆಯಾಗಿದೆ. ಒಟ್ಟಿನಲ್ಲಿ ಸಿಲಿಕಾನ್ ಸಿಟಿ ಮೂಲಕ ಓಮಿಕ್ರಾಮಮನ …

Read More »

ಅಹಿತಕರ ಘಟನೆಗಳನ್ನು ತಡೆಯುವ ದೃಷ್ಟಿಯಿಂದ ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ-

ಹುಬ್ಬಳ್ಳಿ: ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಹಾಗೂ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯಲು ಪೊಲೀಸ್ ಇಲಾಖೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಗೋಕುಲ ರಸ್ತೆ ಪೋಲೀಸ್ ಠಾಣೆ ಹಾಗೂ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಹಿರಿಯ ಅಧಿಕಾರಿಗಳು ನಿಲ್ದಾಣಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾಗಳ ಕಾರ್ಯವಿಧಾನ ಪರಿವೀಕ್ಷಿಸಿದರು. ಇನ್ನಿತರ ಸುರಕ್ಷತಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು. …

Read More »

ಇನ್ನೆರಡು ದಿನದಲ್ಲಿ ವಿರಾಟ್‌ ಕೊಹ್ಲಿ ODI ನಾಯಕತ್ವದ ಭವಿಷ್ಯ ನಿರ್ಧಾರ- ಎಲ್ಲರ ಚಿತ್ತ ಚೇತನ ಶರ್ಮಾ ಸಮಿತಿ ಮೇಲೆ

ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯಿಂದ ವಿರಾಟ್ ಕೊಹ್ಲಿಯ ಏಕದಿನ ನಾಯಕತ್ವದ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ರೂಪಾಂತರಿ ಕೋವಿಡ್​ 19 ಭಿತಿಯ ನಡುವೆಯೂ ಭಾರತ ತಂಡ ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ತಿಳಿಸಿದ್ದು, ದಕ್ಷಿಣ ಆಫ್ರಿಕಾ ಸರ್ಕಾರ ಕೂಡ ಅತ್ಯುತ್ತಮವಾದ ಬಯೋಬಬಲ್ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದೆ. 2022ರಲ್ಲಿ ಸಂಪೂರ್ಣ ಟಿ20 ಕ್ರಿಕೆಟ್​ ಪಂದ್ಯಗಳಿಗೆ ಹೆಚ್ಚು ಒತ್ತು …

Read More »

ತವರಿನಲ್ಲಿ ಕೈ ಜಾರಿದ್ದ ಸ್ಥಾನವನ್ನು ದಕ್ಕಿಸಿಕೊಳ್ಳೊಕೆ ಪರಿಷತ್‌ ಚುನಾವಣಾ ಮೂಲಕ ಬಿಎಸ್‌ ವೈ ರಣತಂತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಜಿಲ್ಲೆ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್ ತೆಕ್ಕೆಯಿಂದ ಮರಳಿ ಸ್ಥಾನವನ್ನು ದಕ್ಕಿಸಿಕೊಳ್ಳುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಮುಂದಾಗಿದ್ದಾರೆ. ಉಪ ಸಮರದಲ್ಲಿ ಸಿಎಂ ತವರಿನ ಸೋಲು ಪರಿಷತ್ ಚುನಾವಣೆಯಲ್ಲಿ ಮಾಜಿ ಸಿಎಂ ತವರಿನಲ್ಲಿ ಅಗಬಾರದು ಎನ್ನುವ ಕಾರಣಕ್ಕೆ ಆದ್ಯತೆ ಮೇಲೆ ಬಿಎಸ್​ವೈ ಪ್ರಚಾರದ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಪರಿಷತ್​​ ಚುನಾವಣಾ ಪ್ರಚಾರ : ಇತ್ತೀಚಿನ ವರ್ಷಗಳಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೂ ಕೊಡದಷ್ಟು ಸಮಯ …

Read More »

ಮೊದಲ ಮತ ಲಖನ್​ಗೋ? ಕವಟಗಿಮಠಗೋ? ರಮೇಶ ಜಾರಕಿಹೊಳಿ ಸಸ್ಪೇನ್ಸ್

ಅಥಣಿ: ನನಗೆ ವೈರಿಗಳು ಹೆಚ್ಚಾಗಿದ್ದಾರೆ. ಇದರಿಂದ ಮಾತನಾಡುವಾಗ ಎಚ್ಚರದಿಂದ ಮಾತನಾಡಬೇಕಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್​ ಚುನಾವಣೆಯ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಜೊತೆ ನಡೆದ ಸಭೆಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ಮತ್ತು ಎರಡನೇ ಪ್ರಾಶಸ್ತ್ಯದ ಮತ ಯಾರಿಗೆ ಹಾಕಬೇಕು ಎಂಬುದನ್ನು ಯಾರಿಗೆ ಹಾಕಬೇಕು ಎಂಬುದನ್ನು ಪಕ್ಷದ ವರಿಷ್ಠರ ಜೊತೆ ಮಾತನಾಡಿ ಶೀಘ್ರವೇ ತಿಳಿಸುವೆ ಎಂದು ಹೇಳಿದರು. ಮೊದಲ ಮತ ಲಖನ್​ಗೋ? …

Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಅರೆಸ್ಟ್‌

ಉಳ್ಳಾಲ (ಮಂಗಳೂರು): ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ತಲಪಾಡಿಯ ಬಳಿ ಶಾಲೆಗೆ ತೆರಳುವ ವೇಳೆ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ ಪರಾರಿಯಾಗಿದ್ದ. ಈ ಸಂಬಂಧ ಉಳ್ಳಾಲ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಸುತ್ತಲಿನ ಸಿಸಿಟಿವಿ ದೃಶ್ಯಗಳ ಆಧರಿಸಿ ಆರೋಪಿ ರಾಶಿಕ್ (22) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಮಂಗಳೂರಿನ ಕೆ.ಸಿ ರೋಡ್​​​ನ ಮುಳ್ಳುಗುಡ್ಡೆ ನಿವಾಸಿಯಾಗಿದ್ದು, ನಿನ್ನೆ …

Read More »

ವಿದ್ಯಾರ್ಥಿಗೆ ಸೋಂಕು-ಶಾಲಾ ಮಕ್ಕಳಿಗೆ ಕೋವಿಡ್‌ ಟೆಸ್ಟ್‌ ಆರಂಭ

ಹುಬ್ಬಳ್ಳಿ : ಕೋವಿಡ್ ಸೋಂಕು ಕಡಿಮೆಯಾಯ್ತು, ಅನ್ನುವಷ್ಟರಲ್ಲಿ ಎಸ್.ಡಿ. ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಬೆನ್ನಲ್ಲೇ ನಗರದ ಆದರ್ಶ ನಗರದ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ದೃಢಪಟ್ಟಿದ್ದು ಮತ್ತಷ್ಟು ಆತಂಕ ಮನೆ ಮಾಡಿದ ಹಿನ್ನಲೆಯಲ್ಲಿ ಶಾಲೆಯಲ್ಲಿ ಕೋವಿಡ್ ಟೆಸ್ಟ್ ತ್ವರಿತವಾಗಿ ನಡೆಸಲಾಗುತ್ತಿದೆ. ನಿನ್ನೆ ಮಧ್ಯಾಹ್ನದ ವೇಳೆಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿತ್ತು. ಅಲ್ಲದೇ ಸೋಮವಾರದವರೆಗೆ ರಜ ಘೋಷಣೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಭೀತಿ ಮತ್ತಷ್ಟು …

Read More »

ಟಿಪ್ಪರ್-ಬಸ್‌ ಮುಖಾಮುಖಿ ಡಿಕ್ಕಿ-6 ಜನರಿಗೆ ಗಂಭೀರ ಗಾಯ

ಚಾಮರಾಜನಗರ: ಟಿಪ್ಪರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.ಗಾಯಾಳುಗಳನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ …

Read More »
You cannot copy content of this page
Click to listen highlighted text!