BigTv News
October 31, 2026
Breaking News
ಬೀದರ್: ಭಾಲ್ಕಿಯ ಹಿರೇಮಠ ಸಂಸ್ಥಾನ ಕಾಂಪ್ಲೆಕ್ಸ್‌ನಲ್ಲಿರುವ ಎಸ್‌ಬಿಐ ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್‌ನಿಂದ ಕತ್ತರಿಸಿ ₹23.86 ಲಕ್ಷ ದೋಚಿದ್ದ ಪ್ರಕರಣವನ್ನು ಐದೇ ದಿನಗಳಲ್ಲಿ ಭೇದಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸಿದ ವಿಶೇಷ ಪೊಲೀಸ್ ತಂಡಗಳು ಹೈದರಾಬಾದ್‌ನ ಶಾಹಿನ್‌ನಗರದಲ್ಲಿ ಕಾರ್ಯಾಚರಣೆ ನಡೆಸಿ ಹರಿಯಾಣ ಮೂಲದ ಶೋಹರಬ್, ಆಸಿಫ್, ಅನೀಶ್ ಹಾಗೂ ರಾಜಸ್ಥಾನದ ರಾಹುಲ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿವೆ. ಬಂಧಿತರಿಂದ ₹12 ಲಕ್ಷ ನಗದು, …
Read More »
BigTv News
October 31, 2026
Breaking News
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ ಮಾಡಿದ ಆರೋಪದಡಿ ಮಾಜಿ ಸಹಾಯಕ ಆಯುಕ್ತೆ ಹಾಗೂ ಕೆಎಎಸ್ ಅಧಿಕಾರಿ ದುರ್ಗಾಶ್ರೀ ವಿರುದ್ಧ ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದುರ್ಗಾಶ್ರೀ ಅವರು ತಮ್ಮ ಅಧಿಕಾರಾವಧಿಯಲ್ಲಿ 87 ಸರ್ವೆ ನಂಬರ್‌ಗಳಿಗೆ ಸೇರಿದ ಒಟ್ಟು 68 ಎಕರೆ 35 ಗುಂಟೆ ಜಮೀನಿನ ದಾಖಲೆಗಳನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. …
Read More »
Shaikh BigTv
October 31, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಗಾಂಜಾ ದಂಧೆಕೋರರಿಗೆ ಆಜಾದ್ ನಗರ ಪೊಲೀಸರ ಬೇಟೆ..! ₹1.25 ಲಕ್ಷದ ಮಾಲು ವಶ, ಎರಡು ಬೈಕ್ ಜಪ್ತಿ! ದಾವಣಗೆರೆಯಲ್ಲಿ ಗಾಂಜಾ ದಂಧೆಗೆ ಆಜಾದ್ ನಗರ ಪೊಲೀಸರ ಏಟು..! ಗಾಂಜಾ ಮಾರಾಟದ ಆರೋಪದಲ್ಲಿ ನಾಲ್ವರು ಅರೆಸ್ಟ್.. 2.5 ಕೆಜಿ ಗಾಂಜಾ, ಎರಡು ಬೈಕ್ ಪೊಲೀಸರ ವಶಕ್ಕೆ..!! ದಾವಣಗೆರೆ: ನಗರದಲ್ಲಿ ಅಕ್ರಮ ಮಾದಕ ದ್ರವ್ಯಗಳ ಮಾರಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಅಖಾಡಕ್ಕಿಳಿದಿದ್ದಾರೆ. ಇದೀಗ ಆಜಾದ್ ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಗಾಂಜಾ …
Read More »
BigTv News
October 31, 2026
Breaking News
ಬೆಂಗಳೂರು: ಕೋರಮಂಗಲ ಸಮೀಪದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಬಸ್‌ನಲ್ಲಿ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಪ್ರಯಾಣಿಕರು ಇಳಿದ ಬಳಿಕ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ದೊಡ್ಡ ಅನಾಹುತ ತಪ್ಪಿದೆ. ಘಟನೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬೆಂಕಿ ಅವಘಡಕ್ಕೆ …
Read More »
BigTv News
October 31, 2026
Breaking News
ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯೆಂದು ಪರಿಚಯಿಸಿಕೊಂಡ ವ್ಯಕ್ತಿಯನ್ನು ಮನೆಗೆ ಆಹ್ವಾನಿಸಿದ ಯುವಕನಿಗೆ ಚಾಕು ತೋರಿಸಿ ಬೆದರಿಸಿ, ಚಿನ್ನಾಭರಣ ದೋಚಿದ ಘಟನೆ ಅಕ್ಟೋಬರ್ 22ರಂದು ನಡೆದಿದೆ. ಮನೆಯ ಮಾಲೀಕರು ಊರಿಗೆ ತೆರಳಿದ್ದ ವೇಳೆ ಅವರ ಸ್ನೇಹಿತ ಮನೆಯಲ್ಲಿದ್ದನು. ಈತನ ಆಹ್ವಾನದ ಮೇರೆಗೆ ಬಂದ ವ್ಯಕ್ತಿ, ಮತ್ತೊಬ್ಬನೊಂದಿಗೆ ಸೇರಿ ಬೆಡ್‌ರೂಂ ಬಾಗಿಲು ಒಡೆದು ಬೀರುವಿನಲ್ಲಿದ್ದ ಸುಮಾರು ₹20 ಲಕ್ಷ ಮೌಲ್ಯದ 226 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ ಎಂದು …
Read More »
BigTv News
October 31, 2026
Breaking News
ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ ವರ್ಷದ ಮಗು ತಾಯಿಯನ್ನು ಕಳೆದುಕೊಂಡಿದೆ. ಮದುವೆಯಾದ ದಿನದಿಂದಲೂ ದಂಪತಿ ನಡುವೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಸುಷ್ಮಿತಾಳ ಕಿವಿ ಹಾಗೂ ತೊಡೆಯಲ್ಲಿ ರಕ್ತದ ಗುರುತುಗಳಿದ್ದು, ಕೊಲೆ ಮಾಡಿ ಬಳಿಕ ನೇಣು ಹಾಕಲಾಗಿದೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಪತಿ ಶ್ರೀನಿವಾಸ್‌ನನ್ನು ಪೊಲೀಸರು ವಶಕ್ಕೆ ಪಡೆದು …
Read More »
BigTv News
October 31, 2026
Breaking News
ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಳಗಾವಿಯ ಚಿಕ್ಕೋಡಿ ಹಾಗೂ ಅಥಣಿ ತಾಲೂಕುಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕೋಡಿ-ಮಹಾಲಿಂಗಪುರ ರಸ್ತೆಯಲ್ಲೇ ರೈತರು ಉಪಹಾರ ತಯಾರಿಸಿ ವಿನೂತನ ಪ್ರತಿಭಟನೆ ನಡೆಸಿದರು. ಹಲವೆಡೆ ರಸ್ತೆ ತಡೆ ನಡೆಸಿದ್ದರಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹೋರಾಟ ತೀವ್ರಗೊಳ್ಳುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಬ್ಬು …
Read More »
BigTv News
October 31, 2026
Breaking News
ಬೆಂಗಳೂರು: ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಸೋಣೆನಹಳ್ಳಿ ಸರ್ಕಲ್ ಬಳಿಯ ಖಾಲಿ ಜಾಗದಲ್ಲಿ ಅನುಮಾನಾಸ್ಪದ ಸ್ಫೋಟಕ ಮಾದರಿಯ ವಸ್ತು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪತ್ತೆಯಾದ ವಸ್ತು ಡೈನಾಮೈಟ್ ಮಾದರಿಯ ಸ್ಫೋಟಕವಾಗಿರಬಹುದು ಎಂದು ಶಂಕಿಸಿದ್ದಾರೆ. ಪೊಲೀಸರು ಸ್ಥಳವನ್ನು ಸುತ್ತುವರಿದು ಸುರಕ್ಷತಾ ಕ್ರಮ ಕೈಗೊಂಡಿದ್ದು, ಹೆಚ್ಚಿನ ಪರಿಶೀಲನೆಗಾಗಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನ ದಳಕ್ಕೆ …
Read More »
BigTv News
October 30, 2026
Breaking News
ಉಡುಪಿ: ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಅಕ್ಟೋಬರ್ 30ರಂದು ಎರಡು ಟಿಪ್ಪರ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಾದ ಮೊಹಮ್ಮದ್ ಶಯಾನ್ ಮತ್ತು ಮೊಹಮ್ಮದ್ ರಯಾನ್ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿವೇಗದ ಟಿಪ್ಪರ್ ಮತ್ತೊಂದು ಟಿಪ್ಪರ್‌ಗೆ ಡಿಕ್ಕಿ ಹೊಡೆದು ಬಳಿಕ ಸ್ಕೂಟರ್‌ಗೆ ಗುದ್ದಿದೆ ಎನ್ನಲಾಗಿದೆ. ಪರವಾನಗಿ ಇಲ್ಲದೆ ಕೋಜೆ ಮಣ್ಣು ಸಾಗಿಸುತ್ತಿದ್ದ ಆರೋಪದಡಿ ಟಿಪ್ಪರ್ ಚಾಲಕರಾದ ನಾಗರಾಜ, ರತ್ವೀಜ್ ಹಾಗೂ …
Read More »
BigTv News
October 30, 2026
Breaking News
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಟೆಕಿ ಮಹೇಂದ್ರ ಹಾಗೂ ಆತನ ಸ್ನೇಹಿತ ತರುಣ್‌ನನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತೆ ಸೇರಿದಂತೆ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 28ರಂದು ಐದು ಬೈಕ್‌ಗಳಲ್ಲಿ ಬಂದ ಆರೋಪಿಗಳು ಇಬ್ಬರನ್ನು ಅಪಹರಿಸಿದ್ದರು. ಮಹೇಂದ್ರನ ತಂದೆ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅತ್ಯಾಚಾರ ಪ್ರಕರಣ ಬೆಳಕಿಗೆ …
Read More »