Breaking News

Breaking News

ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿಸುದ್ದಿ: ಗೌರವಧನ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ರಾಜ್ಯ ಸರ್ಕಾರವು ಗೌರವಧನ ಹೆಚ್ಚಳದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಧರಣಿ ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದಾರೆ. ಕರ್ನಾಟಕ ರಾಜ್ಯ (ಎಐಟಿಯುಸಿ) ನೇತೃತ್ವದಲ್ಲಿ ಧರಣಿ ನಡೆಸಿದ ಸಾವಿರಾರು ಸಿಬ್ಬಂದಿ ಚುನಾವಣೆ ವೇಳೆ ಖಾನಾಪುರದಲ್ಲಿ ಪ್ರಿಯಾಂಕಾ ಗಾಂಧಿ ನೀಡಿದ್ದ ಭರವಸೆಯಂತೆ ಆರನೇ …

Read More »

ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನ: ಇನ್ಸ್‌ಪೆಕ್ಟರ್ ಗೆ 2 ಲಕ್ಷ ರೂ. ದಂಡ..

ದೂರುದಾರರ ಸಂಬಂಧಿಯನ್ನು ಪೊಲೀಸ್‌ ಠಾಣೆಯಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಇನ್ಸೆಕ್ಟರ್ ಎ.ಡಿ…. ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಆರೋಪಿ ಇನ್ಸೆಕ್ಟರ್ ಎ.ಡಿ… ಅವರಿಂದ ಎರಡು ಲಕ್ಷ ರೂಪಾಯಿ ದಂಡ ವಸೂಲಿ ಮಾಡುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಶಿಫಾರಸು ಮಾಡಿದೆ.ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮ 1993 ಕಲಂ 18 (ಇ) ಪ್ರಕಾರ ಶಿಫಾರಸು ಪ್ರತಿ ತಲುಪಿದ ಒಂದು ತಿಂಗಳ ಒಳಗಾಗಿ ಮುಖ್ಯ ಕಾರ್ಯದರ್ಶಿ ಗೃಹ ಇಲಾಖೆಯ …

Read More »

ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ರದ್ದು: ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಪ್ರಸಕ್ತ ಸಾಲಿನ SSLC ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿ ಈ ಬಾರಿ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ​​​ ಎಂದರು. ಒಂದು ದಿನಕ್ಕೆ 1 ಅಂಕ ಎಂಬ ಕಾರ್ಯಕ್ರಮ ರೂಪಿಸಿದ್ದೇವೆ. ಮಕ್ಕಳಿಗೆ ಬೆಳಗ್ಗೆ ಫೋನ್ ಮಾಡಿ ಎಬ್ಬಿಸಿ ಓದಿಸುವ ಕಾರ್ಯಕ್ರಮ …

Read More »

ಗ್ಯಾರೆಂಟಿ ಯೋಜನೆಗಳಿಂದ ಕ್ಷೇತ್ರಕ್ಕೆ ಅನುದಾನ ಸಿಗದ ಕಾರಣ ಅಭಿವೃದ್ಧಿ ಆಗುತ್ತಿಲ್ಲ: ಶಾಸಕ ಬಿ.ಆರ್.ಪಾಟೀಲ್

ಕಲಬುರಗಿ: ನನಗೆ ಅಸಮಾಧಾನ ಆಗಿರುವುದು ನಿಜ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಮಾತನಾಡುವೆ. ಆದರೆ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ’ ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಕ್ಕೆ ಅನುದಾನ ಸಿಗದ ಕಾರಣ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಆಗುತ್ತಿಲ್ಲ ಎಂದೂ ದೂರಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಕಲಬುರಗಿಗೆ ಭಾನುವಾರ ಆಗಮಿಸಿದ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, …

Read More »

ಗ್ರಾಮ ಪಂಚಾಯತ ಮಟ್ಟದಲ್ಲಿ ಗ್ರಾಮ ಸಭೆ ಕರೆಯಲು ಸರ್ಕಾರದಿಂದ ಹೊಸ ನಿಯಮ

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಸಭೆಗಳನ್ನು ಕರೆಯಲು ಸರ್ಕಾರ ಹೊಸ ನಿಯಮ ರೂಪಿಸಿದೆ. ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಸಭೆ ಕರೆಯುವ ಮತ್ತು ನಡೆಸುವು ನಿಯಮಗಳು, 2024) ಎಂದು ಕರೆಯತಕ್ಕದ್ದು ಎಂದು ಹೇಳಿದೆ. ಈ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 1993 (1993ರ ಕರ್ನಾಟಕ ಆಧಿನಿಯಮ ಸಂಖ್ಯೆ:14)ರ ಪ್ರಕರಣ 3ಇ …

Read More »

ಯಾದಗಿರಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಹಾಪುರ, ಸುರಪುರ, ಯಾದಗಿರಿ ,ಗುರಮಠಕಲ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿಯಾಗಿರುವ 159- ಅಂಗನವಾಡಿ ಕಾರ್ಯಕರ್ತೆ ಹಾಗೂ 311-ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರು ಅಥವಾ ಅನ್ಯ ವ್ಯಕ್ತಿಗಳ ಮುಖಾಂತರ ವಾಮ ಮಾರ್ಗದ ಮೂಲಕ ಹಣಕಾಸು ನೀಡಿ ಆಯ್ಕೆ ಹೊಂದಲು ಪ್ರಯತ್ನಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ರೀತ್ಯ ಕಠಿಣ ಕ್ರಮ …

Read More »

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಮುಂದುವರಿಕೆ: ಹೈಕಮಾಂಡ್ ಮಹತ್ವದ ನಿರ್ಧಾರ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿರೋಧಿ ಬಣ ಬಹಿರಂಗವಾಗಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿದ್ದು, ಸದ್ಯ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗಳಿಗೆ ನಡುವೆ ಬಿಜೆಪಿ ಹೈಕಮಾಂಡ್‌ ಮಹತ್ವದ ನಿರ್ಧಾರಕ್ಕೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎನ್ನುವ ಚರ್ಚೆ ಕಮಲ ಪಾಳಯದಲ್ಲಿ ನಡೆಯುತ್ತಿದೆ. ಆದರೆ, ಭಿನ್ನಮತೀಯರ ವಿರೋಧವನ್ನು ಲೆಕ್ಕಿಸದೆ, …

Read More »

ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ-2004 ತಿದ್ದುಪಡಿಗೆ ತೀರ್ಮಾನ: ಕೆ.ಎನ್.ರಾಜಣ್ಣ

ಬೆಂಗಳೂರು : ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ-2004ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಈಗ ಗರಿಷ್ಠ 3 ವರ್ಷ ಶಿಕ್ಷೆ ವಿಧಿಸಬಹುದು. ಅದನ್ನು ಗರಿಷ್ಠ 10 ವರ್ಷಕ್ಕೆ ವಿಸ್ತರಿಸಲು ತಿದ್ದುಪಡಿ ತರಲು ಈಗಾಗಲೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರ ಮೇಲೆ 10 ವರ್ಷ ಶಿಕ್ಷೆ ವಿಧಿಸುವ ಕಠಿಣ ಕಾನೂನಿನ …

Read More »

ಕಾರ್ಮಿಕರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಮದುವೆಗೆ ಸಿಗಲಿದೆ 60 ಸಾವಿರ ರೂ. ಸಹಾಯಧನ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ. ಸಹಾಯಧನವನ್ನು ರಾಜ್ಯ ಸರ್ಕಾರ ನೀಡುತ್ತದೆ. ಫಲಾನುಭವಿಗಳು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಮದುವೆಯ ದಿನಾಂಕದಿಂದ 6 ತಿಂಗಳ ಒಳಗೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬವು ಎರಡು ಬಾರಿ ಮಾತ್ರ …

Read More »

ಹುಬ್ಬಳ್ಳಿ; ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ: ನೇಹಾಳ ತಂದೆ ನಿರಂಜನ್ ಹಿರೇಮಠ ಆರೋಪ

ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ನೇಹಾಳ ತಂದೆ …

Read More »