Breaking News

Breaking News

ಗ್ರಾಮೀಣ ಪ್ರದೇಶಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಸ್ಥಾಪನೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ …

Read More »

ಆದಾಯ ತೆರಿಗೆದಾರರಿಗೆ ಮಹತ್ವದ ಘೋಷಣೆ; 12 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ: ನಿರ್ಮಲಾ ಸೀತಾರಾಮನ್‌

ನವದೆಹಲಿ: ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಈಗ 12 ಲಕ್ಷದವರೆಗೆ ಯಾವುದೇ ತೆರಿಗೆ ವಿಧಿಸಲಾಗುವುದಿಲ್ಲ. ಆರ್ಥಿಕ ಬೆಳವಣಿಗೆ ಮತ್ತು ಜನಸಂಖ್ಯೆಯ ಅಗತ್ಯತೆಗಳನ್ನು ಅವಲಂಬಿಸಿ ಭಾರತದಲ್ಲಿ ಆದಾಯ ತೆರಿಗೆ ದರಗಳು ಕಾಲಕಾಲಕ್ಕೆ ಬದಲಾಗುತ್ತ ಬಂದಿವೆ. ಈ ದರಗಳಲ್ಲಿನ ಹೆಚ್ಚಳ ಅಥವಾ ಇಳಿಕೆಯು ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರುತ್ತದೆ, ತೆರಿಗೆ ವ್ಯವಸ್ಥೆಯು ಎಲ್ಲಾ ವರ್ಗಗಳಿಗೆ ಸಮಾನವಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ. ತೆರಿಗೆ …

Read More »

ನಮ್ಮಿಂದ ತಾನೇ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ: ಗ್ರಾಮೀಣಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಹುಬ್ಬಳ್ಳಿ: ನಮ್ಮ ಬೇವರು, ನಮ್ಮ ದುಡಿಮೆ ಬೇಕಂತೆ ನೆರವು ಕೇಳೋದು ತಪ್ಪಾ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬಜೆಟ್ ಮೇಲೆ ನಮಗೆ ನಿರೀಕ್ಷೆ ಇಲ್ಲಾ ಮೋದಿಯವರ ಮಾಸ್ಟರ್ ಸ್ಟ್ರೋಕ್ ನಿಂದ ನಿರುದ್ಯೋಗ ತಾಂಡವ ಆಡ್ತಾ ಇದೆ. ಮಧ್ಯಮ ವರ್ಗ ನಿರ್ನಾಮವಾಗಿದೆ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಾ …

Read More »

ಬಿಜೆಪಿಯಲ್ಲಿನ ಭಿನ್ನಮತಕ್ಕೆ ಶೀಘ್ರವೇ ತೆರೆ ಬೀಳುತ್ತೆ: ಮಾಜಿ ಸಚಿವ ಮುರುಗೇಶ್ ನಿರಾಣಿ

ಹುಬ್ಬಳ್ಳಿ: ಬಿಜೆಪಿಯಲ್ಲಿ ಗದ್ದಲ ಇರೋದು ಸತ್ಯ, ಬಿಜೆಪಿಯಲ್ಲಿನ ಭಿನ್ನಮತಕ್ಕೆ ಶೀಘ್ರವೇ ತೆರೆ ಬೀಳುತ್ತೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಎರಡೂ ಬಣಗಳ ನಡುವೆ ನಡೆದಿರೋ ಭಿನ್ನಮತ ಹೈಕಮಾಂಡ್ ಗಮನಕ್ಕಿದೆ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ದೊಡ್ಡ ಪಕ್ಷ ಆಗಿರೋದ್ರಿಂದ ಬಿಜೆಪಿಯಲ್ಲಿ ಒಂದಷ್ಟು ಭಿನ್ನಾಭಿಪ್ರಾಯ ಸಹಜ, ಎಲ್ಲ ಮುಖಂಡರನ್ನು ಕರೆದು ಮಾತನಾಡಿದ್ದಾರೆ. ಒಂದು ವಾರದಲ್ಲಿ ಎಲ್ಲ ಭಿನ್ನಾಭಿಪ್ರಾಯಕ್ಕೂ ತೆರೆ ಬೀಳುತ್ತೆ ಬಿಜೆಪಿ ರಾಜ್ಯಾಧ್ಯಕ್ಷರ ಅಭ್ಯರ್ಥಿಯನ್ನು ಹೈಕಮಾಂಡ್ …

Read More »

ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ

ಹುಬ್ಬಳ್ಳಿ: ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಹುಬಳ್ಳಿಯಲ್ಲಿಂದು ಪ್ರಭಾವಿ ಸಚಿವರ ಸಭೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ನಮ್ಮ ಮನೆಗೆ, ನಾವು ಅವರ ಮನೆಗೆ ಹೋಗಲೇ ಬಾರದಾ? ಎರಡಮೂರು ದಿನಕ್ಕೊಮ್ಮೆ ನಾನು ಗೃಹ ಸಚಿವರ ಮನೆಯಲ್ಲೇ ಇರ್ತೇನೆ ನಮ್ಮ ಪಕ್ಷದವರು ಕೂಡ ಹೋಗಬಾರದು ಅಂದ್ರೆ ಹೇಗೆ?ಪರಮೇಶ್ವರ, ಸುರ್ಜೆವಾಲಾ, ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ …

Read More »

ಕೊಪ್ಪಳ: ಹುಲಿಗೆಮ್ಮ ದೇವಿ ದೇವಸ್ಥಾನದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ 100 ಕೋಟಿ ಅನುದಾನ

ಕೊಪ್ಪಳ: ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹಾಗೂ ಕೋಟಿ ಕೋಟಿ ಆದಾಯ ತಂದುಕೊಡುತ್ತಿರುವ ಹುಲಿಗೆಮ್ಮ ದೇವಸ್ಥಾನವನ್ನು ಮಾಸ್ಟರ್‌ಪ್ಲಾನ್‌ನಂತೆ ಅಭಿವೃದ್ಧಿ ಮಾಡುವುದಕ್ಕೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಲು ತಾತ್ಕಾಲಿಕ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಆದೇಶವೂ ಆಗಬಹುದು. ಸಂಸದ ರಾಜಶೇಖರ ಹಿಟ್ನಾಳ ಅವರು ಕೇಂದ್ರಕ್ಕೆ ಮಾಡಿದ್ದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ತಕ್ಷಣ ಡಿಪಿಆರ್‌ ಕಳುಹಿಸಿಕೊಟ್ಟರೆ ನೀಡುವುದಾಗಿ ಹೇಳಿದೆ. ಹೀಗಾಗಿ ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. …

Read More »

ಅನ್ ಲಾಕ್ ರಾಘವ ಚಿತ್ರ ಫೆ. 7 ರಂದು ಬಿಡುಗಡೆ

ಹುಬ್ಬಳ್ಳಿ: ಚನ್ನಗಿರಿ ಮೂಲದ ಮಿಲಿಂದ್ ಗೌತಮ್ ಅವರು ಚೊಚ್ಚಲ ಬಾರಿಗೆ ನಾಯಕನಟನಾಗಿ ಅಭಿನಯಿಸಿರುವ ಅನ್‌ಲಾಕ್ ರಾಘವ ಚಿತ್ರ ಫೆ. 7ರಂದು ರಾಜ್ಯದ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ಐಪ್ಲೆಕ್ಸ್‌ನ ಪ್ರತಿನಿಧಿ ಅವಿನಾಶ್ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಯೂರ ಮೋಷನ್ ಪಿಕ್ಚರ್ಸ್, ಐಪ್ಲೆಕ್ಸ್ ಸಹಯೋಗದಲ್ಲಿ ಚಿತ್ರ ನಿರ್ಮಾಣವಾಗಿದ್ದು ಡಿ. ಸತ್ಯಪ್ರಕಾಶ್ ಕತೆ, ಚಿತ್ರಕಥೆ ಬರೆದಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡಿದ್ದು, ಅನೂಪ್ ಸೀಳಿನ್ …

Read More »

ಇಂದು ಕೇಂದ್ರ ಬಜೆಟ್‌ ಮಂಡನೆ: ರಾಜ್ಯದ ಬೇಡಿಕೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ ವಿಷಯದಲ್ಲಿ ವೈಜ್ಞಾನಿಕವಾದ ಮಾನದಂಡಗಳನ್ನು ಅನುಸರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ. ವಿಶೇಷವಾಗಿ, …

Read More »

ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು: ಸಿಎಂ ಸಿದ್ಧರಾಮಯ್ಯ ಮನವಿ

ಬೆಂಗಳೂರು : ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ. ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ …

Read More »

ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುವ ಮೈಕ್ರೋ ಫೈನಾನ್ಸ್ ಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ: ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ …

Read More »