Breaking News

Breaking News

ಮಹಾಕುಂಭಮೇಳ; ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತ: ಪರಿಹಾರ ಘೋಷಣೆ ಕುರಿತು ಸಿಎಂ ಮಾಹಿತಿ

ಬೆಂಗಳೂರು: ಪ್ರಯಾಗ್ ರಾಜ್ ನಲ್ಲಿ ನಡೆದಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಏರ್ ಆಂಬ್ಯುಲೆನ್ಸ್ ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಿದ್ದು, ಇನ್ನೂ ಎಂಟು ಜನ ನಾಪತ್ತೆಯಾಗಿರುವ ಬಗ್ಗೆ ಮಾಹಿತಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ಘೋಷಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.

Read More »

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಿಗೆ ಬಿ ಖಾತಾ ನೀಡುವಂತೆ ಸಿಎಂ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತುಪಡಿಸಿ ರಾಜ್ಯದ ಉಳಿದ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರದೇಶ ವ್ಯಾಪ್ತಿಯಲ್ಲಿ ಯಾವುದೇ ದಾಖಲೆಗಳಿಲ್ಲದ ನಿವೇಶನಗಳಿಗೆ ‘ಬಿ’ ಖಾತಾ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. ಒಂದು ಬಾರಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಿ, ಎಲ್ಲ ಅಕ್ರಮ ನಿವೇಶನಗಳನ್ನು ಸಕ್ರಮಗೊಳಿಸಿ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಅನಧಿಕೃತ ಬಡಾವಣೆ ತಲೆ ಎತ್ತದಂತೆ ನೋಡಿಕೊಳ್ಳಿ ಎಂದು ಮುಖ್ಯಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ …

Read More »

ರೈತರಿಗೆ ಗುಡ್ ನ್ಯೂಸ್: ಸ್ಪ್ರಿಂಕ್ಲರ್ ಗೆ ಶೇ.90 ರಷ್ಟು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ: 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, …

Read More »

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆದಿದೆ. ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಭಾಗಿಯಾಗಿದ್ದಾರೆ.

Read More »

ಅಲೆಮಾರಿ ಸಮುದಾಯಗಳಿಗೆ ಒಳಮೀಸಲಲ್ಲಿ ಪ್ರತ್ಯೇಕ ವರ್ಗ ಸೃಷ್ಟಿಸುವಂತೆ ಬೇಡಿಕೆ

ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಕೊರಮ, ಕೊರಚ, ಕುರುವನ್, ಕೇಪ್ಮಾರಿಸ್ ವೈಜ್ಞಾನಿಕ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿಯ ನಿಯೋಗವು ಬುಧವಾರ ಒಳ ಮೀಸಲು ವಿಚಾರದಲ್ಲಿ ಸರ್ಕಾರ ರಚಿಸಿರುವ ನ್ಯಾ.ನಾಗಮೋಹನದಾಸ್ ನೇತೃತ್ವದ ವಿಚಾರಣಾ ಆಯೋಗಕ್ಕೆ ಮನವಿ ಸಲ್ಲಿಸಿ ತಮ್ಮ ಬೇಡಿಕೆಯನ್ನು ಪ್ರಸ್ತಾಪಿಸಿದೆ. ಸುಪ್ರೀಂಕೋರ್ಟ್ ತೀರ್ಪಿನ ಮಾನದಂಡದಂತೆ ಪರಿಶಿಷ್ಟ ಜಾತಿಗಳಲ್ಲಿಯೇ ಅತ್ಯಂತ ಹಿಂದುಳಿದಿರುವ ಅಧಿಸೂಚಿತ ಸಮುದಾಯ (ಡಿಎನ್‌ಟಿಎಸ್) ವಿಮುಕ್ತ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾದ ವರ್ಗವನ್ನು ಸೃಷ್ಟಿಸಬೇಕು. ಆ ವರ್ಗದಲ್ಲಿ ಕೊರಚ, ಕೊರಮ, ಕುರವನ್ …

Read More »

ಮಧ್ಯಂತರ ವರದಿ ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹ

ಹಾಸನ: ಒಳಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಕಾಲಾವಕಾಶ ವಿಸ್ತರಣೆ ಮಾಡದೇ, ಕೂಡಲೇ ಈಗಾಗಲೇ ಸಂಗ್ರಹಿಸಿರುವ ಮಧ್ಯಂತರ ವರದಿ ದತ್ತಾಂಶವನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಕರ್ನಾಟಕ ಮಾದಿಗ ದಂಡೋರ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ್ದು, ಮೀಸಲಾತಿ ಜಾರಿ ವಿಷಯದಲ್ಲಿ ಆಯಾ ರಾಜ್ಯಗಳಿಗೆ ಅಧಿಕಾರ ಕೊಟ್ಟಿದೆ. ಆದರೂ …

Read More »

ಪ್ರಸಕ್ತ ವರ್ಷದಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ 1,468 ಕೋಟಿ ರೂ. ವೆಚ್ಚ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಸಕ್ತ ವರ್ಷದಲ್ಲಿ ಸಣ್ಣ ನೀರಾವರಿ ಇಲಾಖೆಗೆ 1,577 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 1,468 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬುಧವಾರ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ವರ್ಷ ಸಣ್ಣ ನೀರಾವರಿ ಇಲಾಖೆಯ 9,449 ಹೆಕ್ಟೇರ್ ಹೊಸ ಅಚ್ಚುಕಟ್ಟು ಸೃಷ್ಟಿಸಲಾಗಿದೆ ಎಂದರು. ರಾಜ್ಯದಲ್ಲಿ ಸಣ್ಣ ನೀರಾವರಿ …

Read More »

ಪಕ್ಷದ ಆಂತರಿಕ ಕಿತ್ತಾಟಕ್ಕೆ ಹೈಕಮಾಂಡೇ ಮದ್ದು: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್

ಹುಬ್ಬಳ್ಳಿ: ಪಕ್ಷದ ಆಂತರಿಕ ಕಿತ್ತಾಟಕ್ಕೆ ಹೈಕಮಾಂಡೇ ಮದ್ದು, ಬಿಜೆಪಿಯಲ್ಲಿ ಆಂತರಿಕ ಗುದ್ದಾಟ ಕ್ಕೆ ಶೀಘ್ರವೇ ತೆರೆ ಬೀಳುತ್ತೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನೀವು ಮಾಧ್ಯಮದಲ್ಲಿ ತೋರಿಸೋದನ್ನ ಬಿಟ್ರೆ ಯಾರು ಮಾತನಾಡಲ್ಲ, ಜಗತ್ತಿನಲ್ಲಿಯೇ ಅತೀ ಹೆಚ್ಚು ಸದಸ್ಯತ್ವ ಹೊಂದಿರುವ ಪಕ್ಷ ಅದು ಬಿಜೆಪಿ ಪಕ್ಷ. ಈ ಹಿನ್ನೆಲೆ ಈ ರೀತಿ ಹೇಳಿಕೆ ಸಹಜ, ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ. ಶ್ರೀರಾಮುಲು ಯತ್ನಾಳ್ ಅಧ್ಯಕ್ಷ …

Read More »

ಕಾಂಗ್ರೆಸ್ ವರ್ತನೆ ವಿರುದ್ಧ ಹಿಂದೂಗಳು ದಂಗೆ ಏಳ್ತಾರೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿ

ಹುಬ್ಬಳ್ಳಿ: ಪ್ರಯಾಗರಾಜ್ ನಲ್ಲಿ 144 ವರ್ಷಗಳ ನಂತರ ಕುಂಭ ಮೇಳ ನಡೀತಾ ಇದೆ ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಹಿಂದೂಗಳ ಭಾವನೆಗೆ ಧಕ್ಕೆ ಮಾಡುವ ಕೆಲಸ ಮಾಡ್ತಾ ಇದೆ ಕಾಂಗ್ರೆಸ್​ ವರ್ತನೆ ಇದೇ ರೀತಿ ಮುಂದುವರಿದರೆ ಹಿಂದೂಗಳು ಅವರ ವಿರುದ್ಧ ದಂಗೆ ಏಳ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಆಕ್ರೋಶಗೊಂಡು ಹಿಂದೂ, ಹಿಂದೂತ್ವದ ಬಗ್ಗೆ ಕಾಂಗ್ರೆಸ್ ನವರಿಗೆ …

Read More »

ಬೈಕ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ರಾಯನಾಳ ಬ್ರಿಜ್ ಬಳಿ ನಡೆದಿದೆ. ರಭಸವಾಗಿ ಬೈಕ ಸವಾರ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸವಾರ ಸಾವನ್ನಪ್ಪಿದ್ದು, ಬೈಕ್ ಸವಾರನ ಮಾಹಿತಿ ಇನ್ನು ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More »