BigTv News
January 27, 2025
Breaking News, ಕಲಬುರಗಿ
ಕಲಬುರಗಿ: ಕೇಂದ್ರ ಸರ್ಕಾರ 2025ನೇ ಸಾಲಿಗೆ ಮಂಡಿಸುವ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಆದ್ಯತೆ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ, ‘ಕಳೆದ 11 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶವನ್ನು ನಿರ್ಲಕ್ಷಿಸಿದೆ. ಇದನ್ನು ಸಮಿತಿ ಬಲವಾಗಿ ಖಂಡಿಸುತ್ತದೆ. ಫೆ.1ರ ಬಜೆಟ್‌ನಲ್ಲಿ ನಮ್ಮ ಪ್ರದೇಶವನ್ನು ಮತ್ತೆ ನಿರ್ಲಕ್ಷಿಸಿದರೆ ಸಮಿತಿ ಈಗಾಗಲೇ …
Read More »
BigTv News
January 27, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಇಂದು ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು …
Read More »
Shaikh BigTv
January 27, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಶವ ಪೆಟ್ಟಿಗೆ ಮೇಲೆ ಕಾರಣ ಬರೆಯುವಷ್ಟು ಕ್ರೂರತನ..?? ಕಲಿಯುಗದ ಪೀಟರ್ ಸಂದೇಶ ಈ ಶವ ಪೆಟ್ಟಿಗೆ ಮೇಲೆ! ಹೆಂಡತಿಯ ಕಾಟಕ್ಕೆ ಗಂಡನ ಸಾವು..??? ಇದು ಎಂತಾ ಕಾಲವಯ್ಯ..??? ಪೀಟರ್ ಆತ್ಮದ ಹತ್ಯೆ ಮಾಡಿದ್ಲಾ ಪಿಂಕಿ..??? ಹುಬ್ಬಳ್ಳಿ ಹೆಂಡತಿ ಕಿರುಕುಳ ತಾಳಲಾರದೇ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಪೀಟರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಪೀಟರ್ ಸಾವಿಗೂ ಮುನ್ನಡೆಥ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ …
Read More »
BigTv News
January 27, 2025
Breaking News, ಕಲಬುರಗಿ
ಕಲಬುರಗಿ: ಕಂದಾಯ ದಾಖಲೆಗಳ ಡಿಜಟಲೀಕರಣದಿಂದ ಭವಿಷ್ಯದಲ್ಲಿ ಅಕ್ರಮ ತಡೆಯಲು ಸಾಧ್ಯವಾಗಲಿದೆ. ಜೊತೆಗೆ ಸಾರ್ವಜನಿಕರ ಕೈಗೂ ದಾಖಲೆಗಳು ಸರಳವಾಗಿ ಸಿಗುವಂತಾಗಲಿದೆ’ ಎಂದು ಐ.ಟಿ.-ಬಿ.ಟಿ. ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ದಾಖಲೆಗಳ ಡಿಜಿಟಲೀಕರಣಗೊಳಿಸುವ ‘ಭೂ ಸುರಕ್ಷಾ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಭೂ ಸುರಕ್ಷಾ ಯೋಜನೆಯ ಪ್ರಾಯೋಗಿಕ ಅನುಷ್ಠಾನಕ್ಕಾಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕು ಆಯ್ದುಕೊಳ್ಳಲಾಗಿತ್ತು. 2024ರ …
Read More »
BigTv News
January 27, 2025
Breaking News
ಚಂಡೀಗಢ: ಅಮೃತಸರದಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಧ್ವಂಸ ಮಾಡಿದ ದುಷ್ಕರ್ಮಿಗಳ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತೀವ್ರವಾಗಿ ಖಂಡಿಸಿದ್ದಾರೆ. ಧ್ವಂಸ ಕೃತ್ಯದ ಹಿಂದೆ ಯಾರ ಕೈವಾಡವಿದೆ, ಆರೋಪಿಗಳು ಯಾರು ಎಂಬುದು ಸದ್ಯದ ಮಟ್ಟಿಗೆ ತಿಳಿಯದ ಹಿನ್ನೆಲೆ ಸಿಎಂ ಕೆರಳಿದ್ದಾರೆ. ಈ ವಿಷಯದಲ್ಲಿ ಯಾರನ್ನೂ ಕ್ಷಮಿಸುವುದಿಲ್ಲ ಎಂದು ಗುಡುಗಿದ್ದಾರೆ. ಗಣರಾಜ್ಯೋತ್ಸವ ದಿನದಂದು ಈ ಘಟನೆ ನಡೆದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆ ಬಗ್ಗೆ …
Read More »
BigTv News
January 27, 2025
Breaking News, ಉತ್ತರ ಪ್ರದೇಶ
ಉತ್ತರ ಪ್ರದೇಶ : ಮಹಾಕುಂಭಮೇಳ ಅಭೂತಪೂರ್ವ ಯಶಸ್ಸು ಗಳಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿದ್ದು. ತ್ರೀವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾಗಿದ್ದಾರೆ.ಅಮಿತ್ ಶಾಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸಾಥ್ ನೀಡಿದ್ದಾರೆ. ಇವತ್ತು ಬೆಳಿಗ್ಗೆ 11:30ರ ಸುಮಾರಿಗೆ ಉತ್ತರ ಪ್ರದೇಶದ ಬಮ್ರೌಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾರನ್ನು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ …
Read More »
BigTv News
January 27, 2025
Breaking News, ಬೆಂಗಳೂರು
ಬೆಂಗಳೂರು: ಜಾತಿ ಜನಗಣತಿ ವಿಚಾರವಾಗಿ ಎದುರಾದ ಪ್ರಶ್ನೆಯೊಂದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಗಮಿಸಿದ್ದಾರೆ. ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವಿಚಾರವಾಗಿ ಶೋಷಿತ ವರ್ಗಗಳ ಬೇಡಿಕೆಗಳ ಕುರಿತು ಪ್ರಶ್ನೆ ಎದುರಾದಾಗ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಗಮಿಸಿದರು. ಆದರೆ ಇದೇ ವೇಳೆ ದೆಹಲಿಯ ವಿಧಾನಸಭೆಯ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷ ಉತ್ತಮವಾದ ಪ್ರಚಾರ ಕಾರ್ಯವನ್ನು ಆಂತರಿಕವಾಗಿ …
Read More »
BigTv News
January 27, 2025
Breaking News, ರಾಯಚೂರು
ರಾಯಚೂರು: ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಪಂಗಡ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ವೈದ್ಯಕೀಯ ಮತ್ತು ರಾಯಚೂರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್ ಪಾಟೀಲ್ ಅವರು ಲೋಕಾರ್ಪಣೆ ಮಾಡಿದರು. ನೂತನ ಕಟ್ಟಡ ವೀಕ್ಷಣೆ ಮಾಡಿದ ಸಚಿವರು ಮತ್ತು ಶಾಸಕರು ಮಾತನಾಡಿ, ಕಟ್ಟಡವನ್ನು ಸರಿಯಾಗಿ ನಿರ್ವಹಣೆ ಮಾಡಿ ಹಾಳಾಗದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಟೇಬಲ್, ಖುರ್ಚಿ, ಕಾಟ್ ಸೇರಿದಂತೆ ಇನ್ನೀತರ ಸಾಮಗ್ರಿಗಳನ್ನು ಗುಣಮಟ್ಟ ಪರೀಕ್ಷಿಸಿ ಅಳವಡಿಸಿ ವಿದ್ಯಾರ್ಥಿಗಳಿಗೆ …
Read More »
BigTv News
January 27, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಜನವರಿ 31 ಮತ್ತು ಫೆಬ್ರವರಿ 2ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಪರೀಕ್ಷೆಗಳಿಗೆ ಹಾಜರಾಗಲು ಅಭ್ಯರ್ಥಿಗಳು ಪರೀಕ್ಷೆ ಕೇಂದ್ರಕ್ಕೆ ತೆರಳಬೇಕು. ಬೇರೆ ಬೇರೆ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳು ಇರುವ ಕಾರಣ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಯದಲ್ಲಿ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿ ಬಸ್ ವ್ಯವಸ್ಥೆ …
Read More »
BigTv News
January 27, 2025
Breaking News, ಬೀದರ್
ಬೀದರ್ : ಜಾತಿ ಜನಗಣತಿ ಮಾಡಿದ ನಂತರವೇ ಒಳಮಿಸಲಾತಿ ಜಾರಿಗೆ ತರಬೇಕು ಎಂದು ಗೋರ್ ಸೇನಾ ರಾಷ್ಟ್ರೀಯ ಸಂಘಟನೆಯು ಒತ್ತಾಯ ಮಾಡಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋರ್ ಸೇನಾ ಮಹಿಳಾ ಅಧ್ಯಕ್ಷ ಸವಿತಾ ರಾಠೋಡ್ ಅವರು, ಜಾತಿ ಜನಗಣತಿಯು 2011ರ ನಂತರ ನಡೆದಿಲ್ಲ. 2011ರಲ್ಲಿಯೂ ನಮ್ಮ ಸಮುದಾಯದ ಜನಗಣತಿ ಸರಿಯಾಗಿ ನಡೆದಿಲ್ಲ. ಹಾಗಾಗಿ ನಮ್ಮ ಜನಸಂಖ್ಯೆ ಹೆಚ್ಚಾಗಿದ್ದು, ಒಳಮಿಸಲಾತಿಯಲ್ಲಿ ನಮ್ಮ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಒದಗಿಸುತ್ತಿಲ್ಲ. ನಾಗಮೋಹನ್ ದಾಸ್ ಅವರಿಗೆ …
Read More »