BigTv News
January 25, 2025
Breaking News, ಬಳ್ಳಾರಿ
ಬಳ್ಳಾರಿ: ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣ ಮಾಡಿರುವ ಘಟನೆ ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ಇಂದು (ಜ.25) ಬೆಳಿಗ್ಗೆ ನಡೆದಿದೆ. ಸುನೀಲ್ ಅವರು ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಇಂಡಿಕಾ ಕಾರಿನಲ್ಲಿ ಬಂದ ಅಪರಿಚಿತರು ಅಪಹರಣ ಮಾಡಿದ್ದು ಬಿಡುಗಡೆಗೆ ಮೂರೂ ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ …
Read More »
BigTv News
January 25, 2025
Breaking News, ಬೆಂಗಳೂರು
ಬೆಂಗಳೂರು :ಜನವರಿ 26 ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ …
Read More »
BigTv News
January 25, 2025
Breaking News, ಮೈಸೂರು
ಮೈಸೂರು: ಮೈಕ್ರೋಫೈನಾನ್ಸ್ ಯಾವುದೇ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ. ಯಾವ ರೀತಿ ಅವರ ಮೇಲೆ ಕಡಿವಾಣ ಹಾಕಿದ್ದೀರಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಮಸ್ಯೆ ಇದೆ. ಜನರು ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಈ ಸಮಸ್ಯೆ ಇದೆ. ಮೈಕ್ರೋಫೈನಾನ್ಸ್ ನವರು ಜನ ಸಾಮಾನ್ಯರ ಮೇಲೆ …
Read More »
BigTv News
January 25, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರಕಾರವು 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪುತ್ತೂರು ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ ಜುಬೀನ್ ಮಹಾಪಾತ್ರ ಅವರನ್ನು ರಾಯಚೂರು ನಗರ ಪಾಲಿಕೆಯ ಆಯುಕ್ತ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತ(ಆಡಳಿತ) ಶಿಂಧೆ ಅವಿನಾಶ್ ಸಂಜೀವನ್‍ರನ್ನು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರನ್ನು ಬೆಂಗಳೂರು …
Read More »
BigTv News
January 25, 2025
Breaking News, ಬೆಂಗಳೂರು
ಬೆಂಗಳೂರು: ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಬೇಕಾದ ಸರ್ಕಾರಗಳು ಶಿಕ್ಷಣ ಕ್ಷೇತ್ರದ ಮಹತ್ವವನ್ನೇ ಮರೆತಂತಿದೆ. ಸರ್ಕಾರಗಳು ಮೊದಲು ಶಿಕ್ಷಣವನ್ನು ಗ್ಯಾರಂಟಿ ಪಟ್ಟಿಯಲ್ಲಿ ಸೇರಿಸಬೇಕು’ ಎಂದು ಸಾಹಿತಿ ಡಾ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದರು. ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಕರ ಪರಿಷತ್ತು ವತಿಯಿಂದ ಆಯೋಜಿಸಿದ್ದ ‘ಸೇವಾ ನಿವೃತ್ತ ಪ್ರಾಧ್ಯಾಪಕರಿಗೆ ಗೌರವ ಸಮರ್ಪಣೆ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲಾ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷಿಸುತ್ತಿವೆ. ಕೇವಲ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಿಸುವ ಕಡೆ ಗಮನ ಹರಿಸುತ್ತಿವೆಯೇ ಹೊರತು, …
Read More »
BigTv News
January 25, 2025
Breaking News, ತುಮಕೂರು
ತುಮಕೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ ಸುಮಾರು ₹3 ಸಾವಿರ ಕೋಟಿ ಅನುದಾನ ಅಗತ್ಯವಿದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಚಂದ್ರಶೇಖರ್‌ಗೌಡ ಹೇಳಿದರು. ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಗೃಹಲಕ್ಷ್ಮಿ ಯೋಜನೆಯಲ್ಲಿ ಹಣ ಪಾವತಿಯಾಗುತ್ತಿಲ್ಲ ಎಂದು ಕೆಲವರು ದೂರು ನೀಡುತ್ತಿದ್ದಾರೆ. ಯಾವ ಕಾರಣಕ್ಕೆ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿಲ್ಲ …
Read More »
BigTv News
January 25, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ‘ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ಕಡಿಮೆ ಬಡ್ಡಿ ದರದಲ್ಲಿ ಜನರಿಗೆ ಸಾಲ ಸಿಗಬೇಕೆಂಬ ಉದ್ದೇಶದಲ್ಲಿ ರಾಜ್ಯದಲ್ಲಿ ‘ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ ಸ್ಥಾಪನೆಗೆ ನಿರ್ಧರಿಸಿದೆ. ಈ ಬಗ್ಗೆ ಸಚಿವ ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ಕ್ರೆಡಿಟ್ ಕೋ ಆಪರೇಟಿವ್ …
Read More »
BigTv News
January 25, 2025
Breaking News, ರಾಯಚೂರು
ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 2024-25ನೇ ಸಾಲಿನಲ್ಲಿ ರಾಯಚೂರಿನ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ಮಂಜೂರಾದ ನೂತನ ಮಿನಿ ಬಸ್‌ಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹಸಿರು ನಿಶಾನೆ ತೋರಿದರು. ಜನವರಿ 24ರಂದು, ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಬಸ್ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು, ಹೂವು, ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದ ಬಸ್‌ನ ಪ್ರವೇಶ ದ್ವಾರದಲ್ಲಿ ರಿಬ್ಬನ್ …
Read More »
BigTv News
January 25, 2025
Breaking News, ಬೆಂಗಳೂರು
ಬೆಂಗಳೂರು: ಸರ್ಕಾರಿ ವಸತಿ ಯೋಜನೆಗಳಲ್ಲಿ ಹೊಸ ಹೊಸ ಆಕಾಂಕ್ಷೆ, ನವೀನ ಕಲ್ಪನೆ ಮತ್ತು ಪ್ರಸ್ತುತ ಎದುರಿಸುತ್ತಿರುವ ತೊಡಕುಗಳ ನಿವಾರಣೆಗಾಗಿ ‘ಕೈಗೆಟಕುವ ವಸತಿ ನೀತಿ’ ರಚಿಸಲು ಸರ್ಕಾರ ಮುಂದಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆ ಹ್ಯೂಮನ್ ಸೆಟಲ್‌ಮೆಂಟ್ ಸಂಸ್ಥೆಗೆ ಹೊಸ ನೀತಿಯನ್ನು ಸಿದ್ಧಪಡಿಸುವ ಜವಾಬ್ದಾರಿ ನೀಡಿರುವ ವಸತಿ ಇಲಾಖೆ, ಮುಂದೆ ವರದಿ ಸಲ್ಲಿಕೆಯಾದ ಬಳಿಕ ಸಂಪುಟದ ಮುಂದಿಟ್ಟು ಚರ್ಚೆ ನಡೆಸಿ ಅನುಷ್ಠಾನಕ್ಕೆ ತರಲಿದೆ. ವಸತಿ ಯೋಜನೆ ಅನುಷ್ಠಾನದಲ್ಲಿ ಅಡಿಗಡಿಗೂ ತೊಡಕುಗಳಿವೆ. ಕಾಲ ಬದಲಾದಂತೆ …
Read More »
BigTv News
January 25, 2025
Breaking News, ರಾಯಚೂರು
ರಾಯಚೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಯಚೂರು ಜಿಲ್ಲೆಯ ಎಲ್ಲಾ ವಸತಿ ನಿಲಯಗಳಲ್ಲಿ ಮೂಲ ಸೌಕರ್ಯ, ಅಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿ ವಸತಿ ನಿಲಯಗಳಲ್ಲಿ ಶಿಸ್ತು ಕಾಪಾಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜ.24ರಂದು ಮುಂದುವರೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ …
Read More »