Breaking News

Breaking News

ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ: ಸಚಿವ ಕೆ.ಜೆ.ಜಾರ್ಜ್‌

ಬಾಗಲಕೋಟೆ: ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು. ನೂತನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಮನೆಗಳಿಗೂ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಅಗತ್ಯವಿದದೆ. ಈ …

Read More »

ಗ್ರಾಹಕರಿಗೆ ಸಿಹಿಸುದ್ದಿ: ದೇಶಾದ್ಯಂತ ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಇಳಿಕೆ

ನವದೆಹಲಿ: ಖಾದ್ಯ ತೈಲ ಗ್ರಾಹಕರಿಗೆ ಸಮಾಧಾನಕರ ಸುದ್ದಿಯೊಂದು ಬಂದಿದೆ. ಎಣ್ಣೆಬೀಜ ಬೆಳೆಗಳ ಬಿತ್ತನೆ ಕಡಿಮೆಯಾಗಿದೆ ಎಂಬ ವರದಿಗಳ ಮಧ್ಯೆ, ಖಾದ್ಯ ತೈಲದ ಬೆಲೆಗಳು ಕುಸಿದಿವೆ. ವರದಿಯ ಪ್ರಕಾರ, ಮಲೇಷ್ಯಾ ವಿನಿಮಯ ಕೇಂದ್ರದ ಕುಸಿತದಿಂದಾಗಿ, ಹೆಚ್ಚಿನ ದೇಶೀಯ ಎಣ್ಣೆಬೀಜಗಳ (ಸಾಸಿವೆ ಎಣ್ಣೆಕಾಳುಗಳು, ನೆಲಗಡಲೆ ಎಣ್ಣೆ, ಸೋಯಾಬೀನ್ ಎಣ್ಣೆ, ಕಚ್ಚಾ ಪಾಮ್ ಎಣ್ಣೆ ಅಥವಾ ಸಿಪಿಒ ಮತ್ತು ಪಾಮೋಲಿನ್ ಮತ್ತು ಹತ್ತಿಬೀಜದ ಎಣ್ಣೆ) ಬೆಲೆಗಳು ಬುಧವಾರ ದೇಶದ ಎಣ್ಣೆಬೀಜ ಮಾರುಕಟ್ಟೆಯಲ್ಲಿ ಕುಸಿದಿವೆ. ದಿನ …

Read More »

ಕಲಬುರಗಿಯಲ್ಲಿ ನಾಳೆ(ಜ.24) ರೈಲ್ ರೋಕೊ ಪ್ರತಿಭಟನೆ

ಕಲಬುರಗಿ: ಈಗಾಗಲೇ ಘೋಷಣೆಯಾಗಿರುವ ಕಲಬುರಗಿ ರೈಲ್ವೆ ವಿಭಾಗ ಕಚೇರಿಗೆ ಮುಂಬರುವ ಬಜೆಟ್‌ನಲ್ಲಿ ಅನುಮೋದನೆ ನೀಡುವಂತೆ ಆಗ್ರಹಿಸಿ ಜನವರಿ 24ರ ಬೆಳಿಗ್ಗೆ 10.30ಕ್ಕೆ ರೈಲ್ ರೋಕೊ ಪ್ರತಿಭಟನೆ ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (ಕೆಕೆಸಿಸಿಐ) ಅಧ್ಯಕ್ಷ ಶಶಿಕಾಂತ ಬಿ.ಪಾಟೀಲ ತಿಳಿಸಿದರು. ಕಲ್ಯಾಣ ಕರ್ನಾಟಕಕ್ಕೆ ಅನುಮೋದನೆಗೊಂಡ ಯೋಜನೆಗಳು ಬೇರೆ ಕಡೆ ಸ್ಥಳಾಂತರಗೊಳ್ಳುತ್ತಿವೆ. 1984ರಲ್ಲಿ ಸರೀನ್ ಸಮಿತಿಯು ಕಲಬುರಗಿ ರೈಲ್ವೆ ವಿಭಾಗ ಕಚೇರಿಗೆ ಶಿಫಾರಸು ಮಾಡಿತ್ತು. ಮೂರು ದಶಕಗಳ …

Read More »

ಕರ್ನಾಟಕದಲ್ಲಿನ ಮಾದರಿ ಶಾಲೆಗಳಿಗೂ ಕೆಇಎಯಿಂದಲೇ ಪ್ರವೇಶ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿನ 12 ಏಕಲವ್ಯ ಮಾದರಿ ಶಾಲೆಗಳಿಗೆ 6ನೇ ತರಗತಿಯ ದಾಖಲಾತಿಯ ಪ್ರವೇಶ ಪರೀಕ್ಷೆ ನಡೆಸುವ ಹೊಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ವಹಿಸಲಾಗಿದೆ. ಪ್ರವೇಶ ಪರೀಕ್ಷೆ ಫೆ. 15ಕ್ಕೆ ನಿಗದಿಯಾಗಿದ್ದು, ಜನವರಿ 25ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್‌ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಮುಂತಾದ ವಸತಿ ಶಾಲೆಗಳಿಗೆ ಕೆಇಎಯೇ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಇದೀಗ ಏಕಲವ್ಯ ಮಾದರಿ …

Read More »

ರಾಯಚೂರು: ತ್ರೈಮಾಸಿಕ ಕೆಡಿಪಿ ಸಭೆಗೆ ಸಮರ್ಪಕ ಮಾಹಿತಿಯೊಂದಿಗೆ ಬರಲು ಅಧಿಕಾರಿಗಳಿಗೆ ಸೂಚನೆ

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನವರಿ 24ರಂದು ನಡೆಯುವ ತ್ರೈಮಾಸಿಕ ಕೆ.ಡಿ.ಪಿ ಸಭೆಗೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಬರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಜನವರಿ 22ರಂದು ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು. ಕೃಷಿ, ತೋಟಗಾರಿಕೆ, ಆರೋಗ್ಯ, …

Read More »

ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಮುಂದಿನ 5 ವರ್ಷ ರಾಷ್ಟ್ರೀಯ ಆರೋಗ್ಯ ಮಿಷನ್ ವಿಸ್ತರಿಸಲು ನಿರ್ಧಾರ

ನವದೆಹಲಿ: ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್​ಎಚ್​ಎಂ) ಅನ್ನು ಮುಂದಿನ 5 ವರ್ಷಗಳಿಗೆ ವಿಸ್ತರಿಸಲು ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಹೇಳಿದರು. NHMಗೆ 5 ವರ್ಷಗಳ ವಿಸ್ತರಣೆಯನ್ನು ಘೋಷಿಸಲಾಗಿದ್ದು, ಈ ಯೋಜನೆಗೆ ಯಾವುದೇ ಬಜೆಟ್ ನಿರ್ಬಂಧಗಳಿಲ್ಲ ಎಂದು …

Read More »

ಕೊಪ್ಪಳ; ಜಿಲ್ಲೆಯಲ್ಲಿ ಸ್ಥಾವರ ಸ್ಥಾಪನೆ ಅಂತಿಮವೇ ಆಗಿಲ್ಲ, ಆತಂಕವೂ ಬೇಡ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಜಿಲ್ಲೆಯಲ್ಲಿ ಪರಮಾಣು ವಿದ್ಯುತ್‌ ಸ್ಥಾವರ ಸ್ಥಾಪನೆ ಮಾಡಲಾಗುತ್ತಿದೆ ಎಂದು ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ಇದರಿಂದ ಯಾರೂ ಆತಂಕಕ್ಕೆ ಒಳಗಾಗುವುದು ಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ‘ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮೇಲಿಂದ ಮೇಲೆ ಭೂಮಿಯಲ್ಲಿರುವ ಖನಿಜದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮಾನ್ಯ ಪ್ರಕ್ರಿಯೆ ನಡೆಸುತ್ತಿದ್ದಾರೆ. ಪರಮಾಣು ಸ್ಥಾವರ ಸ್ಥಾಪನೆ ಅಂತಿಮವೇ ಆಗಿಲ್ಲ. ಒಂದು ವೇಳೆ …

Read More »

ರಾಜ್ಯದಲ್ಲಿ ಲೈನ್ ಮನ್ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್

ವಿಜಯಪುರ: ರಾಜ್ಯದಲ್ಲಿ ಲೈನ್‌ಮನ್‌ಗಳ ಕೊರತೆ ಇದ್ದು, ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಏಪ್ರೀಲ್ ಒಳಗಾಗಿ ಖಾಲಿ ಇರುವ ಲೈನ್‌ಮನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದೆಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರ ಆಗ್ರಹಕ್ಕೆ ಪೂರಕವಾಗಿ ಈ ಭರವಸೆ ನೀಡಿದರು. ಲೈನ್‌ಮನ್‌ಗಳ ಸೇವೆ ಅನನ್ಯ. ಮಳೆಗಾಲದ …

Read More »

ಕಲಬುರಗಿ: ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿಗಳ ಅನುಷ್ಠಾನಕ್ಕೆ ಗ್ರೀನ್ ಸಿಗ್ನಲ್

ಕಲಬುರಗಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಬರುವ ಜೇವರ್ಗಿ ತಾಲೂಕಿನ ಮಲ್ಲಾಬಾದ್ ಏತ ನೀರಾವರಿ ಯೋಜನೆಯ ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಸದರಿ ಯೋಜನೆಯ ಬಾಕಿ ಉಳಿದ ಕಾಮಗಾರಿಗಳ ಅನುಷ್ಠಾನಕ್ಕೆ ಕೃಷ್ಣಾ ಭಾಗ್ಯ ಜಲ ನಿಗಮದಿಂದ ಹಸಿರು ನಿಶಾನೆ ದೊರಕಿದೆ ಎಂದು ತಿಳಿದುಬಂದಿದೆ. ಬುಧವಾರ ಸಿಎಂ ಕೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೆಬಿಜೆಎನ್‌ಎಲ್‌ ನಿರ್ದಶಕರ ಮಂಡಳಿಯ 142 ನೇ ಸಭೆಯಲ್ಲಿ ಮಲ್ಲಾಬಾದ್‌ ಏತ ನೀರಾವರಿ ಯೋಜನೆಯ ಸದರಿ ಪ್ರಸ್ತಾವನೆ ಪ್ರಧಾನವಾಗಿ …

Read More »

ಜೈನ ಸಮುದಾಯದ ಅಭಿವೃದ್ದಿಗೆ ನಿಗಮ ಸ್ಥಾಪಿಸುವುದು ಖಚಿತ: ಡಿಸಿಎಂ ಡಿಕೆ ಶಿವಕುಮಾರ್

ಹುಬ್ಬಳ್ಳಿ: ಸತ್ಯ, ಧರ್ಮ, ಅಹಿಂಸೆ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿರುವ ಜೈನ ಸಮಾಜದ ಅಭಿವೃದ್ಧಿಗೆ ನಿಗಮ ಸ್ಥಾಪಿಸುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ತೀರ್ಥಂಕರರ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಚಾರ್ಯ ಗುಣಧರನಂದಿ ಮಹಾರಾಜರು ಹಾಗೂ ಸಮಾಜದ ಹಿರಿಯರು ಜೈನ ಸಮಾಜ ಅಭಿವೃದ್ಧಿಗೆ ನಿಗಮ ಸ್ಥಾಪನೆಗೆ ಬೇಡಿಕೆ ಇಟ್ಟಿದ್ದು, ಇದಕ್ಕೆ ಸರ್ಕಾರದಿಂದ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಬಜೆಟ್ ನಲ್ಲಿ ಜೈನ …

Read More »