Breaking News

Breaking News

ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ

ಕಲಬುರಗಿ: ಹಲವು ದಶಕಗಳ ಬೇಡಿಕೆಯಾಗಿರುವ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರವಾಗಿರುವ ಕಲಬುರಗಿಯಲ್ಲಿ ರೈಲ್ವೇ ವಿಭಾಗೀಯ ಕಚೇರಿ ಸ್ಥಾಪನೆಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ ಕೈಗೊಳ್ಳಲು ವಾಣಿಜ್ಯೋದ್ಯಮಿಗಳು, ವಿವಿಧ ಸಂಘ- ಸಂಸ್ಥೆಗಳು ಹಾಗೂ ಹೋರಾಟಗಾರರು ಮುಂದಾಗಿದ್ದು, ಇದೇ ಜ.24 ರಂದು ಇಲ್ಲಿನ ರೈಲ್ವೇ ನಿಲ್ದಾಣದಲ್ಲಿ ರೈಲು ತಡೆ ಚಳವಳಿ ಮೂಲಕ ನಾಂದಿ ಹಾಡಲು ನಿರ್ಧರಿಸಿದ್ದಾರೆ. ಕಲಬುರಗಿಯಲ್ಲಿ ರೈಲ್ವೆ ಕಚೇರಿ ಸ್ಥಾಪನೆಯಾಗುವವರೆಗೂ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಕೆಕೆಸಿಸಿಐ) …

Read More »
Featured Video Play Icon

ಹುಬ್ಬಳ್ಳಿ ಯಲ್ಲೊಂದು ಘನಘೋರ ಘಟನೆ‌: ವಿವಾಹಿತ ಮಹಿಳೆ ಜೊತೆ ಮಾತಾಡಿದ್ದಕ್ಕೆ ಬೆತ್ತಲೆ ಮಾಡಿ ಹಲ್ಲೆ…

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲೊಂದು ಘನಘೋರ ಘಟನೆ‌ ನಡೆದಿದ್ದು, ವಿವಾಹಿತ ಮಹಿಳೆ ಜೊತೆ ಮಾತಾಡಿದ್ದಕ್ಕೆ ಬೆತ್ತಲೆ ಮಾಡಿ ಹಲ್ಲೆ ಮಾಡಿದ ಘಟನೆ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಕಸಬಾ ಪೇಟೆ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು, ನಿನ್ನೆ ಮಹಿಳೆ ಜೊತೆ ಫೋನ್ ನಲ್ಲಿ ಮಾತಾಡಿದ್ದ ಮುಜಾಫಿರ್ ನನ್ನು ಅಪಹರಣ ಮಾಡಿ ಬೆತ್ತಲೆಗೊಳಿಸಿ ಮಹಿಳೆಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಸಿಕ್ಕ ಸಿಕ್ಕಲ್ಲಿ ಬ್ಲೇಡ್ …

Read More »

ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ನ್ನು ಮುಂದಿನ 5 ವರ್ಷಗಳಿಗೆ ವಿಸ್ತರಿಸಲು ನಿರ್ಧಾರ

ನವದೆಹಲಿ: ಮೋದಿ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್​ಎಚ್​ಎಂ) ಅನ್ನು ಮುಂದಿನ 5 ವರ್ಷಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಹೇಳಿದರು. NHMಗೆ 5 ವರ್ಷಗಳ ವಿಸ್ತರಣೆಯನ್ನು ಘೋಷಿಸಲಾಗಿದ್ದು, ಈ ಯೋಜನೆಗೆ ಯಾವುದೇ ಬಜೆಟ್ ನಿರ್ಬಂಧಗಳಿಲ್ಲ ಎಂದು …

Read More »

ಗ್ರಾಮ ಆಡಳಿತ ಅಧಿಕಾರಿಗಳನ್ನು ತಕ್ಷಣ ಅವರ ಮೂಲ ಸ್ಥಾನಗಳಿಗೆ ಮರು ನಿಯೋಜಿಸುವಂತೆ ಕಂದಾಯ ಇಲಾಖೆ ಆದೇಶ

ಬೆಂಗಳೂರು : ಜಿಲ್ಲಾಧಿಕಾರಿಗಳು, ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು ಮತ್ತು ತಹಶೀಲ್ದಾರ್‌ಗಳ ಕಚೇರಿಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು (VAOs) ತಕ್ಷಣ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ನಿರ್ದೇಶಿಸಿದೆ, ಅವರು ತಮ್ಮ ಮೂಲ ಹುದ್ದೆಗಳಿಗೆ ಮರಳುವಂತೆ ಸೂಚಿಸಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಮಂಗಳವಾರ ಸುತ್ತೋಲೆ ಹೊರಡಿಸಿ, ಪದೇ ಪದೇ ಸೂಚನೆಗಳಿದ್ದರೂ, ಹಲವಾರು ವಿಎಒಗಳು ತಮ್ಮ ಗೊತ್ತುಪಡಿಸಿದ ಪಾತ್ರಗಳ ಹೊರಗೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ ಎಂದು …

Read More »

ಹೈಕೋರ್ಟ್ ತಡೆಯಾಜ್ಞೆ ಅನ್ವಯ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ನ್ನು ಮುಂದೂಡಿದ ಕಾಲೇಜು ಶಿಕ್ಷಣ ಇಲಾಖೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ನಡೆಯಬೇಕಿದ್ದ ಕೌನ್ಸೆಲಿಂಗ್ ಅನ್ನು ಕಾಲೇಜು ಶಿಕ್ಷಣ ಇಲಾಖೆ ಮುಂದೂಡಿದೆ. ಸಂಸ್ಕೃತ, ಚಿತ್ರಕಲಾ ಕಾಲೇಜುಗಳು ಸೇರಿದಂತೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಅಧ್ಯಾಪಕರಿಗೆ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ 2024- 25 ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಜನವರಿ 2ರಂದು ಅರ್ಜಿ ಆಹ್ವಾನಿಸಲಾಗಿತ್ತು. ವೇಳಾಪಟ್ಟಿಯ ಅನ್ವಯ ಅತಿಥಿ …

Read More »

ನಾಳೆ(ಜ.23) ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರಿಗೆ ಕನ್ನಡದ ಚಿನ್ನ-2024 ಪ್ರಶಸ್ತಿ ಪ್ರದಾನ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜ.23ರ ಬೆಳಗ್ಗೆ 11.30 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ 2024ನೇ ಸಾಲಿನ ‘ಕನ್ನಡ ಚಿನ್ನ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ. ಕನ್ನಡ ನಾಡು-ನುಡಿ, ನೆಲ-ಜಲಗಳ ತುಡಿತ ಹೊಂದಿರುವ ಮತ್ತು ಮಾತೃ ಭಾಷೆಯ ಕಳಕಳಿಯನ್ನು ಹೊಂದಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರನ್ನು ಕನ್ನಡದ ಚಿನ್ನ-2024 ಗೌರವ …

Read More »

ಬೆಂಗಳೂರಿನ ದೇವನಹಳ್ಳಿಯಲ್ಲಿ 1,500 ಕೋಟಿ ವೆಚ್ಚದಲ್ಲಿ ರೈಲ್ವೆ ಟರ್ಮಿನಲ್ ಅಧ್ಯಯನಕ್ಕಾಗಿ ನೈರುತ್ಯ ರೈಲ್ವೆ ವಲಯ ಸಿದ್ಧತೆ

ಬೆಂಗಳೂರು: ವಿಸ್ತಾರವಾಗುತ್ತಿರುವ ಬೆಂಗಳೂರಿಗೆ ಪೂರಕವಾಗಿ ಹೊರವಲಯದ ದೇವನಹಳ್ಳಿಯಲ್ಲಿ ಸರಿಸುಮಾರು 1,500 ಕೋಟಿ ವೆಚ್ಚದಲ್ಲಿ ಬೃಹತ್ತಾಗಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೆ ಟರ್ಮಿನಲ್‌ಗಾಗಿ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ನೈಋತ್ಯ ರೈಲ್ವೆ ವಲಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಕೆಎಸ್‌ಆರ್ ರೈಲ್ವೇ ನಿಲ್ದಾಣ ಮರು ನಿರ್ಮಾಣಕ್ಕಾಗಿ ₹1200 ಕೋಟಿ ಯೋಜನೆಯ ನೀಲನಕ್ಷೆ ಸಿದ್ದವಾಗಿದೆ. ಇದಕ್ಕೂ ಮುನ್ನ ಬೈಯಪ್ಪನಹಳ್ಳಿಯಲ್ಲಿ ತಲೆ ಎತ್ತಿರುವ ಸರ್‌ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಸದ್ಯದ ಬೆಂಗಳೂರಿನ ಅತ್ಯಾಧುನಿಕ ರೈಲ್ವೇ ನಿಲ್ದಾಣ ಎನ್ನಿಸಿಕೊಂಡಿದೆ. ಯಶವಂತಪುರ, ಕಂಟೋನ್ಸೆಂಟ್ ರೈಲು …

Read More »

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ರಸ್ತೆ ಅಪಘಾತ ಪ್ರಕರಣ: ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಿಮ್ಸ್ ಹಿಂದೇಟು ಆರೋಪ

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ರಸ್ತೆ ಅಪಘಾತದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಿಮ್ಸ್‌ ಹಿಂದೇಟು ಹಾಕಿದ್ದು, ಬೆಳಿಗ್ಗೆ 6 ಗಂಟೆಗೆ ಕಿಮ್ಸ್ ಸರಿಯಾಗಿ ಚಿಕಿತ್ಸೆ ನೀಡಲಿಲ್ಲ ಚಿಕಿತ್ಸೆ ನೀಡಿದ್ರೆ ಇವತ್ತು ಒಂದು ಸಾವು ಆಗುತ್ತಿರಲಿಲ್ಲ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಮೊದಲು ಚೀಟಿ ಮಾಡಿಕೊಂಡು ಬನ್ನಿ, ಆಮೇಲೆ ಚಿಕಿತ್ಸೆ ಕೊಡುತ್ತೆವೆಂದು ಕಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಕ್ಕೆ ಮತ್ತೊಂದು ಸಾವಾಗಿದೆ ಎನ್ನುತ್ತಿರುವ ಮೃತರ ಸಂಬಂಧಿ ಇಸ್ಮಾಯಿಲ್ ಅಕ್ಕಿ ಉಳಿದ …

Read More »

ಯಲ್ಲಾಪುರ ಬಳಿ ರಸ್ತೆ ಅಪಘಾತ ಪ್ರಕರಣ: ಮೃತರ ಸ್ನೇಹಿತ ಇಮ್ರಾನ್ ಪರಿಹಾರಕ್ಕಾಗಿ ಆಗ್ರಹ

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಬೆಳಗಿನ ಸುಮಾರು 4 ಗಂಟೆಗೆ ರಸ್ತೆ ಅಪಘಾತ ನಡೆದಿದೆ. ವಾರಕ್ಕೊಮ್ಮೆ ದುಡಿಮೆಗಾಗಿ ನಾವು ಹೋಗ್ತಾ ಇದ್ವಿ ಇವತ್ತು ನಮಗೆ ಹಣ್ಣುಗಳು ಇಲ್ಲ ಅಂತ ನಾನು ಹೋಗಿಲ್ಲ ಆದರೆ ನನ್ನ ಸ್ನೇಹಿತರೆಲ್ಲ ಹೋಗಿದ್ರು. ಸಾವನ್ನಪ್ಪಿದವರಲ್ಲಿ ಇತ್ತೀಚೆಗೆ ಮದುವೆಯಾದವರು ಸಹ ಇದ್ದಾರೆ. ಎರಡು ತಿಂಗಳು ಹಾಗೂ ಒಂದು ವರ್ಷದ ಹಿಂದೆ ಮದುವೆಯಾದ ನನ್ನ ಸ್ನೇಹಿತರಿದ್ದರು ಅವರೆಲ್ಲ ಬಹಳ ಬಡತನದಲ್ಲಿದ್ದವರು ಅವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ …

Read More »

ಸರ್ಕಾರಿ, ಅರೆ ಸರ್ಕಾರಿ ನೇಮಕಾತಿ; ಅಹಿಂದ ನ್ಯಾಯವಾದಿಗಳಿಗೆ ಆದ್ಯತೆ ಸಿಗಲಿ: ಸಚಿವ ಸತೀಶ್ ಜಾರಕಿಹೊಳಿಗೆ ಮನವಿ

ಹುಕ್ಕೇರಿ: ಅಹಿಂದ ಸಮುದಾಯಕ್ಕೆ ಸೇರಿದ ವಕೀಲರು ಆರ್ಥಿಕ ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರಿ, ಅರೆ ಸರ್ಕಾರಿ ಹಾಗೂ ಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರರನ್ನು ನೇಮಕ ಮಾಡುವಾಗ ಅವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಜಿಲ್ಲಾ ಅಹಿಂದ ನ್ಯಾಯವಾದಿಗಳ ಸಂಘದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯದ ವಕೀಲರಿಗೆ ಪ್ರತಿ ತಿಂಗಳು ₹10 ಸಾವಿರದಂತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಕೀಲರಿಗೆ ಪ್ರತಿ …

Read More »