Breaking News

Breaking News

ಕಲಬುರಗಿ: ಶೆರಿಭೀಕನಳ್ಳಿ ತಾಂಡಾ ಪುನರ್ವಸತಿ ಕುರಿತು ಅಧಿಕಾರಿಗಳೊಂದಿಗೆ ಡಿಸಿ ಫೌಜಿಯಾ ತರನ್ನುಮ್ ಸಭೆ

ಕಲಬುರಗಿ : ಜಿಲ್ಲೆಯ ಚಿಂಚೋಳಿ ವನ್ಯಜೀವಿ ಪ್ರದೇಶದಲ್ಲಿರುವ ಶೆರಿಭೀಕನಳ್ಳಿ ತಾಂಡಾ ಪುನರ್ವಸತಿ ಕುರಿತಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರಣ್ಯ, ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಶೆರಿಭೀಕನಳ್ಳಿ ತಾಂಡಾ ನಿವಾಸಿಗಳನ್ನು ಸ್ಥಾಳಾಂತರಿಸುವ ಸಂಬಂಧ ಸುದೀರ್ಘವಾಗಿ ಚರ್ಚಿಸಲಾಯಿತು. ಇದಲ್ಲದೆ ಮಾಡಬೂಳ ಬಳಿ ಅರಣ್ಯ ಇಲಾಖೆಯಿಂದ ಸ್ಥಾಪಿಸಲಾಗುತ್ತಿರುವ ಮೃಗಾಲಯ ಕಾಮಗಾರಿ ಕುರಿತು ಸಹ ಡಿ.ಸಿ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, …

Read More »

ಬಡತನ ನಿರ್ಮೂಲನೆ ಅಭಿವೃದ್ದಿಗೆ ಸ್ವಾಮಿತ್ವ ಯೋಜನೆ ನೆರವು: ಪ್ರಧಾನಿ ಮೋದಿ

ನವದೆಹಲಿ: ಗ್ರಾಮೀಣ ಪ್ರದೇಶದ ಜನರಿಗೆ ಆಸ್ತಿ ಹಕ್ಕು ದೃಢಪಡಿಸುವ “ಸ್ವಾಮಿತ್ವ’ ಯೋಜನೆ ಆಸ್ತಿ ಸಂಬಂಧಿ ವ್ಯಾಜ್ಯ ಬಗೆಹರಿಸುವ ಮೂಲಕ ಬಡತನ ನಿರ್ಮೂಲನೆ, ಅಭಿವೃದ್ಧಿಗೆ ಸಹಕಾರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಶನಿವಾರ ಯೋಜನೆ ಅನ್ವಯ ಸುಮಾರು 65 ಲಕ್ಷ ಆಸ್ತಿ ಕಾರ್ಡ್‌ಗಳನ್ನು ವರ್ಚುವಲ್‌ ಆಗಿ ಮೋದಿ ಫ‌ಲಾನುಭವಿಗಳಿಗೆ ವಿತರಿಸಿದ್ದಾರೆ. 10 ರಾಜ್ಯಗಳ ಫ‌ಲಾನುಭವಿಗಳಿಗೆ ಕಾರ್ಡ್‌ ವಿತರಿಸಿದ್ದು, ಈ ಮೂಲಕ ಫ‌ಲಾನುಭವಿಗಳ ಒಟ್ಟು ಸಂಖ್ಯೆ 2.24 ಕೋಟಿ ಆಗಿದೆ. 2020ರಲಿ ಮೋದಿ …

Read More »

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ: ಏಪ್ರಿಲ್ ನಿಂದ 10,000 ಮುಂಗಡ ಪಾವತಿಗೆ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಏಪ್ರಿಲ್ ನಿಂದ ಪ್ರತಿ ತಿಂಗಳು 10,000 ಮುಂಗಡ ಪಾವತಿಗೆ ಸರ್ಕಾರ ನಿರ್ಧರಿಸಿದೆ. ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪುಂಜಾ ವೇದಿಕೆಯ ಮೇಲಿದ್ದ ಸಚಿವ ದಿನೇಶ್ ಗುಂಡೂರಾವ್ ಎದುರು ಎರಡು ಬೇಡಿಕೆಯನ್ನ ಮುಂದಿಟ್ಟರು. ನಾನೊಬ್ಬ ಆಶಾ ಕಾರ್ಯಕರ್ತೆಯರ ಕುಟುಂಬದಿಂದ ಬಂದವನಾಗಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರ …

Read More »

ಮುಡಾ ಹಗರಣ: ಸಿಎಂ ಆಸ್ತಿಯನ್ನು ಇ.ಡಿ ಜಪ್ತಿ ಮಾಡಿದ ಬೆನ್ನಲ್ಲೇ ಸಿದ್ಧರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ಭವಿಷ್ಯದಲ್ಲಿ ಭಾರೀ ಕಾನೂನು ಸಂಕಷ್ಟ ತಂದೊಡ್ಡಲಾಗುತ್ತದೆ ಎಂದು ಹೇಳಲಾಗುತ್ತಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ (ಇಡಿ) 300 ಕೋಟಿ ರೂ.ಆಸ್ತಿ ಜಪ್ತಿ ಮಾಡುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಇಡಿ ಮುಡಾಗೆ ಸೇರಿದ ಸುಮಾರು 300 ಕೋಟಿ ಮೌಲ್ಯದ 142 ಚಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಇದರಲ್ಲಿ ಅಕ್ರಮ ವಹಿವಾಟು, ಬೇನಾಮಿ ಆಸ್ತಿ ಸಂಪಾದನೆ, ಬೇರೆಯವರ ಹೆಸರಿನಲ್ಲಿ ಆಸ್ತಿ ಖರೀದಿ …

Read More »

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಜನಾಂಗದವರಿಗೆ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್‍ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ …

Read More »

ಆಶಾ ಕಾರ್ಯಕರ್ತೆಯರ ಗೌರವಧನವನ್ನು ಕೇಂದ್ರ ಸರ್ಕಾರವು ಹೆಚ್ಚಿಸಲಿ: ಸಚಿವ ದಿನೇಶ್ ಗುಂಡೂರಾವ್

ಬೆಳ್ತಂಗಡಿ: ‘ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಬೆನ್ನೆಲುಬಾಗಿದ್ದು, ಅವರಿಗೆ ಮಾಸಿಕ ಕನಿಷ್ಠ ₹ 10 ಸಾವಿರ ಗೌರವ ಧನವನ್ನು ಏಪ್ರಿಲ್‌ನಿಂದ ನೀಡುವ ಕುರಿತು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಕೇಂದ್ರ ಸರ್ಕಾರವೂ ಆಶಾ ಕಾರ್ಯಕರ್ತೆಯರಿಗೆ ನೀಡುವ ಗೌರವಧನದ ಪಾಲನ್ನು ಹೆಚ್ಚಿಸಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ₹ 4 ಕೋಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ …

Read More »

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಂಧ್ರ ಪ್ರದೇಶಕ್ಕೆ ಆಗಮಿಸಿದ ಕೇಂದ್ರ ಸಚಿವ ಅಮಿತ್‌ ಶಾ

ವಿಜಯವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಆಂಧ್ರಪ್ರದೇಶಕ್ಕೆ ಆಗಮಿಸಿದರು. ಅವರು ಇಂದು ವಿಜಯವಾಡದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅವರು ಎನ್‌ಡಿಆರ್‌ಎಫ್‌ನ 20 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹೈದರಾಬಾದ್‌ನ ರಾಷ್ಟ್ರೀಯ ಪೊಲೀಸ್ …

Read More »

ಮನೆಗಳ್ಳನ ಬಂಧನ: 6,45,000 ರೂ‌. ಮೌಲ್ಯದ ಆಭರಣ ವಶ

ಧಾರವಾಡ: ಇತ್ತೀಚಿಗೆ ಧಾರವಾಡದ ರಾಹುಲ್ ಗಾಂಧಿ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಮೂಲದ ಸುನೀಲ ಮುಳಗುಂದ ಎಂಬಾತನನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 6,09,000 ರೂ. ಮೌಲ್ಯದ 87 ಗ್ರಾಂ ಬಂಗಾರದ ಆಭರಣಗಳು ಮತ್ತು 36,000 ರೂ. ಮೌಲ್ಯದ 507 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಸೇರಿದಂತೆ ಒಟ್ಟು 6,45,500 ರೂ. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಧಾರವಾಡ ಉಪ …

Read More »

ರೈತರಿಗೆ ಗುಡ್ ನ್ಯೂಸ್: ಶೇ.50 ರಷ್ಟು ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

ಕೊಡಗು: ಪ್ರಸಕ್ತ 2024-25 ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ 100 ರೂ.ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು …

Read More »

ಎಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿರಿ, ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಸೂಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳಿಂದ ಕೆಂಡಾಮಂಡಲಗೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಎಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿರಿ. ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ’ ಎಂದು ಖಡಕ್ ಸೂಚನೆ ನೀಡಿದ್ದಾರೆ. ಜತೆಗೆ, ‘ಹೈಕಮಾಂಡ್ ಸೂಚನೆ ಮೀರಿ ಮಾತನಾಡಿದರೆ ಹೈಕಮಾಂಡ್ ದುರ್ಬಲ ಅಲ್ಲ ಎಂಬುದನ್ನು ತೋರಿಸಬೇಕಾಗುತ್ತದೆ. ಶತಮಾನಕ್ಕೂ ಹೆಚ್ಚು ಇತಿಹಾಸ ವಿರುವ ಪಕ್ಷ ಕಾಂಗ್ರೆಸ್. ಯಾರೋ ಒಬ್ಬರು ಇಬ್ಬರನ್ನು ಅವಲಂಬಿಸಿ ಪಕ್ಷ ಕಟ್ಟಿಲ್ಲ’ ಎಂದೂ ಎಚ್ಚರಿಸಿದ್ದಾರೆ. …

Read More »