Breaking News

Breaking News

ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ ಭಾಗದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಒತ್ತು: ಕೇಂದ್ರ ಸಚಿವ ಸೋಮಣ್ಣ

ಕೊಪ್ಪಳ: ರೈಲ್ವೆ ಇಲಾಖೆಯಿಂದ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ ಭಾಗದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ ಎಂದು ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಹೇಳಿದ್ದಾರೆ. ಕೊಪ್ಪಳ ನಗರದ ಕುಷ್ಟಗಿ ರಸ್ತೆಯಲ್ಲಿ ನೈಋತ್ಯ ರೈಲ್ವೆ ವತಿಯಿಂದ ಆಯೋಜಿಸಲಾಗಿದ್ದ ರೈಲ್ವೆ ಮೇಲ್ಸೇತುವೆಯ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದರು. ದೇಶದ ವಿವಿಧೆಡೆ 10, 15, 20 ವರ್ಷದ ಬಹುತೇಕ ರೈಲ್ವೆ ಕಾಮಗಾರಿಗಳು ನೆನಗುದಿಗೆ ಬಿದ್ದಿದ್ದವು. ನರೇಂದ್ರ …

Read More »

ಕೆಪಿಎಸ್‌ಸಿ ಗ್ರೂಪ್ ಬಿ ಹುದ್ದೆಗಳ ನೇಮಕಾತಿ: ಜ.19 ಮತ್ತು 25 ರಂದು ಪರೀಕ್ಷೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ …

Read More »

ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ನವದೆಹಲಿ: ನಾಳೆ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಮಂಡಿಸುತ್ತಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಾಳಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿಯೇ ಹೇಳಲಾಗುತ್ತಿತ್ತು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಕೂಡ ನಾಳಿನ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿಯೂ ತಿಳಿಸಿದ್ದರು. ಆದರೇ ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸುತ್ತಿಲ್ಲ. ಮುಂದಿನ …

Read More »

ಪಂಚಮಸಾಲಿ ಮೀಸಲಾತಿ ಹೋರಾಟ ಇನ್ನಷ್ಟು ಗಟ್ಟಿಗೊಳಿಸಲು ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನಕ್ಕೆ ಚಾಲನೆ

ಬಾಗಲಕೋಟೆ: ಪಂಚಮಸಾಲಿಗರಿಗೆ 2ಎ ಮೀಸಲಾತಿ ಹೋರಾಟ ಇನ್ನಷ್ಟು ಗಟ್ಟಿಗೊಳಿಸಲು ಹಾಗೂ ರಾಜ್ಯ ಸರ್ಕಾರದ ದೌರ್ಜನ್ಯ ಖಂಡಿಸಿ ರಾಜ್ಯದ ಪ್ರತಿ ಗ್ರಾಮದಲ್ಲಿ ‘ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕೂಡಲ ಸಂಗಮ ಪಂಚಮಸಾಲಿ ಪೀಠವು ಈ ಜಾಗೃತಿ ಅಭಿಯಾನ ಆರಂಭಿಸಿದೆ. ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಸಂವಾದ ಮಾಡಿ, ಜಾಗೃತಿ ಮೂಡಿಸಲಾಗುವುದು. ತಾಲ್ಲೂಕು ಕೇಂದ್ರಗಳಲ್ಲೂ ಸಭೆ ನಡೆಸಿ ಜನರ ಸಲಹೆ-ಸೂಚನೆಗಳನ್ನು ಕ್ರೋಡೀಕರಿಸಿ ಮುಂದಿನ ಹೋರಾಟ ನಿರ್ಧರಿಸಲಾಗುತ್ತದೆ. ಪಂಚಮಸಾಲಿಗಳು ವಾಸಿಸುವ ಸುಮಾರು …

Read More »

ಆರ್.ಬಿ.ತಿಮ್ಮಾಪುರ ಸಿಎಂ ಆಕಾಂಕ್ಷಿ ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ಆರ್‌ಬಿ ತಿಮ್ಮಾಪೂರ ನಾನು ಸಿಎಂ ಆಕಾಂಕ್ಷಿ ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ. ಅವರು 30 ವರ್ಷ ರಾಜಕೀಯ ಮಾಡಿದ್ದಾರೆ. ಅವರಿಗೂ ಸಾಮರ್ಥ್ಯ ಇದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಆಗಲು ತಿಮ್ಮಾಪೂರ ಅವರು ರೆಡಿ ಇದ್ದೇನೆ ಎಂದಿದ್ದರು. ಸಿಎಂ ಸ್ಥಾನವನ್ನು ಯಾರು ಬೇಕಾದರೂ ಕೇಳಬಹುದು. ಅವರು ಆಕಾಂಕ್ಷಿಯಾಗಬಹುದು. ಅದನ್ನು ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

Read More »

ವಿವಿ ಸಾಗರ ಜಲಾಶಯ: ನೀರಿನ ಪಾಲು ಕೇಳಿದ ಹೊಸದುರ್ಗ ತಾಲೂಕಿನ ಜನರು

ಚಿತ್ರದುರ್ಗ: ವಿವಿ ಸಾಗರ ಜಲಾಶಯ ಮೈದುಂಬಿಕೊಂಡಿದ್ದರೂ ಜಲರಾಶಿಯನ್ನು ಹಿಡಿದಿಟ್ಟುಕೊಂಡಿರುವ ಹೊಸದುರ್ಗ ತಾಲ್ಲೂಕಿನ ಹಿನ್ನೀರು ಪ್ರದೇಶದ ಜನರಿಗೇ ಆ ನೀರು ಸಿಕ್ಕಿಲ್ಲ. ಜಲಾಶಯಕ್ಕೆ ಮುಖ್ಯಮಂತ್ರಿ ಭೇಟಿ ನೀಡುವ ಹೊತ್ತಿನಲ್ಲಿ, ಬಾಗಿನ ಅರ್ಪಿಸುತ್ತಿರುವ ಸಂದರ್ಭದಲ್ಲಿ ಹೊಸದುರ್ಗ ತಾಲ್ಲೂಕಿನ ಜನರು ನೀರಿನ ಪಾಲು ಕೇಳುತ್ತಿದ್ದಾರೆ. ಬಯಲುಸೀಮೆಯ ಜೀವನಾಡಿ ಎಂದೇ ಪ್ರಖ್ಯಾತಿ ಪಡೆದಿರುವ ವಿವಿ ಸಾಗರ ಜಲಾಶಯ ಕೆಳಭಾಗದಲ್ಲಿರುವ 25,000 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುತ್ತದೆ. ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ ತಾಲ್ಲೂಕಿನ ಜನರಿಗೆ …

Read More »

ಮೈಸೂರು: ನೀರು ಪೂರೈಕೆಗೆ ಅಮೃತ್ 2.0 ಯೋಜನೆಯಡಿ ₹455 ಕೋಟಿಯಲ್ಲಿ 10 ಕಾಮಗಾರಿಗಳ ಅನುಷ್ಠಾನ

ಮೈಸೂರು: ನಗರಕ್ಕೆ ಹೊಂದಿಕೊಂಡಿರುವ ಹಾಗೂ ಹೊರವಲಯದ ಪ್ರದೇಶಗಳು ಮತ್ತು ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಕುಡಿಯುವ ನೀರು ಪೂರೈಕೆ ‘ಜಾಲ’ ಬಲಗೊಳಿಸಲು ‘ಅಮೃತ್ 2.0’ ಯೋಜನೆಯಡಿ ಅನುದಾನದ ‘ಶಕ್ತಿ’ ದೊರೆತಿದೆ. ಅಂದಾಜು ಮೊತ್ತ ₹455.66 ಕೋಟಿಯಲ್ಲಿ ಒಟ್ಟು 10 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೇಂದ್ರ ಪುರಸ್ಕೃತವಾದ ಈ ಯೋಜನೆಯಡಿ ಲಭ್ಯ ಅನುದಾನದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಎಲ್ಲವೂ ಅಂದುಕೊಂಡಂತೆಯೇ …

Read More »

ರಾಜ್ಯದ 15 ಶಾಸಕರಿಗೆ ದೆಹಲಿಯಲ್ಲಿ ಎರಡು ದಿನಗಳ ತರಬೇತಿ ಕಾರ್ಯಾಗಾರ

ಬೆಂಗಳೂರು: ನವದೆಹಲಿಯ ಪಿಆರ್‌ಲೆಜಿಸ್‌‍ ಶಾಸಕಾಂಗ ಸಂಶೋಧನಾ ಸಂಸ್ಥೆಯು ದೇಶದ ವಿವಿಧ ರಾಜ್ಯಗಳ ವಿಧಾನಸಭೆಯ ಸದಸ್ಯರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ. ನವದೆಹಲಿಯಲ್ಲಿ ಜ.16 ಮತ್ತು 17ರಂದು ನಡೆಯುವ ಈ ಕಾರ್ಯಾಗಾರದಲ್ಲಿ ಭಾಗವಹಿಸಲು ರಾಜ್ಯದ 15 ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ನಿಯೋಜಿಸಿದ್ದಾರೆ. ಶಾಸಕರಾದ ರಾಜಾ ವೇಣುಗೋಪಾಲ್‌ ನಾಯಕ್‌, ಡಾ.ಮಂತರಗೌಡ, ಕೆ.ಎಸ್‌‍.ಬಸವಂತಪ್ಪ, ಎ.ಸಿ.ಶ್ರೀನಿವಾಸ್‌‍, ಬಿ.ಬಿ.ಚಿಮನಕಟ್ಟಿ, ಪ್ರಕಾಶ್‌ ಕೋಳಿವಾಡ, ಬಾಬಾ ಸಾಹೇಬ್‌ ಪಾಟೀಲ್‌, ಹೆಚ್‌.ವಿ.ವೆಂಕಟೇಶ, ಶರಣಗೌಡ ಕಂದಕೂರು, ದರ್ಶನ್‌ ಪುಟ್ಟಣ್ಣಯ್ಯ, ಉಮಾನಾಥ್‌ …

Read More »

ಕೊಪ್ಪಳ ಗವಿಮಠ ಜಾತ್ರಾ ಮಹೋತ್ಸವ: ದಾಸೋಹಕ್ಕೆ 210 ಕ್ವಿಂಟಲ್ ಅಕ್ಕಿ ದೇಣಿಗೆ

ಕಾರಟಗಿ: ಕೊಪ್ಪಳದ ಗವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ದಾಸೋಹಕ್ಕೆ ಭತ್ತದ ಕಣಜ ಕಾರಟಗಿಯಿಂದ 210 ಕ್ವಿಂಟಲ್ ಅಕ್ಕಿಯನ್ನು ಕಳುಹಿಸಿಕೊಡಲಾಯಿತು. ಈ ವರ್ಷವೂ ಪಟ್ಟಣದ ಅಕ್ಕಿಗಿರಣಿ ಮಾಲೀಕರು, ದಲಾಲಿ ವರ್ತಕರು, ವಿವಿಧ ದಾನಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ರೈತರು, ಭಕ್ತರಿಂದ ಸಂಗ್ರಹಿಸಿದ 210 ಕ್ವಿಂಟಲ್ ಅಕ್ಕಿ ಚೀಲಗಳನ್ನು ತುಂಬಿದ ಲಾರಿಗೆ ಪೂಜೆ ಬೀಳ್ಕೊಡಲಾಯಿತು. ಇಲ್ಲಿನ ವಿಶೇಷ ಎಪಿಎಂಸಿ ಆವರಣದಿಂದ ಲಾರಿಗೆ ಪೂಜೆ ಸಲ್ಲಿಸಿ ಅಕ್ಕಿ ಚೀಲಗಳನ್ನು ತುಂಬಿ ವಿದ್ಯುಕ್ತವಾಗಿ ಕಳುಹಿಸಿಕೊಡಲಾಯಿತು. ಈ …

Read More »

ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಬಂದು ಹಣ ಕಳ್ಳತನ ಮಾಡಿ ಎಸ್ಕೇಪ್

ಹುಬ್ಬಳ್ಳಿ: ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಮಳ್ಳರಂತೆ ಬಂದ ಇಬ್ಬರು ಕಪಲ್ಸ್ ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿರುವ ಘಟನೆ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿರುವ ಫ್ಲೈಯಿಂಗ್ ಮಷಿನ್ ಬಟ್ಟೆ ಅಂಗಡಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಟ್ಟೆ ಖರೀದಿಗೆಂದು ಫುಲ್ ಟಿಪ್‌ಆಫ್ ಆಗಿ ಬಂದ ಹುಡುಗ ಹುಡುಗಿ, ಯಾರು ಇಲ್ಲದ ಅಂಗಡಿಗೆ ನುಗ್ಗಿ ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡುವುದೇ ಇವರ ವೃತ್ತಿಯಾಗಿದೆ. ಅದೇ ರೀತಿ ಇಂದು ಇಬ್ಬರು ಫ್ಲೈಯಿಂಗ್ …

Read More »