Breaking News

Breaking News

ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ: ಸಚಿವ ಆರ್.ಬಿ.ತಿಮ್ಮಾಪುರ ಸ್ಪೋಟಕ ಹೇಳಿಕೆ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಗುಸು ಗುಡು ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡುವೆ ಅಧಿಕಾರ ಹಂಚಿಕೆ ಸಂಬಂಧ ಕೈ ಪಾಳಯದಲ್ಲಿ ಚರ್ಚೆ ಹುಟ್ಟುವಂತೆ ಮಾಡಿದ್ದು, ಈ ನಡುವೆ ದಲಿತ ಸಿಎಂ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಡಿ ಕೆ ಶಿವಕುಮಾರ್ ವಿದೇಶಿ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಇದರ ಮಧ್ಯ ಅಧಿಕಾರ ಹಂಚಿಕೆ …

Read More »

ಭದ್ರಾ ಮೇಲ್ದಂಡೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ: ಕೇಂದ್ರ ಸಚಿವ ಸೋಮಣ್ಣ

ತುಮಕೂರು: ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ನೀರು ಒದಗಿಸುವ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಕಾಲುವೆ ನಿರ್ಮಾಣಕ್ಕಾಗಿ ಅರಣ್ಯ ಭೂಮಿ ಬಳಕೆ ಮಾಡಿಕೊಳ್ಳಲು ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯಡಿ ತುಮಕೂರು ಜಿಲ್ಲೆಯಲ್ಲಿ ಕಾಲುವೆ ನಿರ್ಮಾಣಕ್ಕಾಗಿ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ ಬಳಿ …

Read More »

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ

ಬೆಳಗಾವಿ: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್​ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಿಎಲ್​ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. …

Read More »

ರಾಜ್ಯದ ಎಲ್ಲ ಶಾಸಕರಿಗೆ ತಲಾ ₹10 ಕೋಟಿ ಅನುದಾನ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಬಿಜೆಪಿ, ಜೆಡಿಎಸ್ ಶಾಸಕರು ಸೇರಿ ಎಲ್ಲಾ ಶಾಸಕರಿಗೂ ತಲಾ ₹10 ಕೋಟಿ ಅನುದಾನ ಬಿಡು ಗಡೆಗೆ ಸಹಿ ಹಾಕಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇತ್ತೀಚೆಗೆ ಬೆಳಗಾವಿ ವಿಧಾನಸಭೆ ಅಧಿವೇಶನ ದಲ್ಲಿ ಶಾಸಕರು ‘ಗ್ಯಾರಂಟಿ ಯೋಜನೆ ಸೇರಿ ವಿವಿಧ ಕಾರಣಗಳಿಂದ ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಸೋಮವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು …

Read More »

ಏಪ್ರಿಲ್, ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್ ಚುನಾವಣೆ: ಚುನಾವಣಾ ಆಯೋಗ

ಬೆಳಗಾವಿ: ಏಪ್ರಿಲ್, ಮೇ ತಿಂಗಳಿನಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ನಡೆಸುವ ಸಾಧ್ಯತೆಯಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ‌ಚುನಾವಣೆ ನಡೆಸಲು ಚರ್ಚೆ ನಡೆಯುತ್ತಿದೆ ಎಂದು ರಾಜ್ಯ‌ ಚುನಾವಣಾ ಆಯೋಗದ ಆಯುಕ್ತ ‌ಜಿ.ಎಸ್ ಸಂಗ್ರೇಶಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಂಗ್ರೇಶಿ, ಜಿಲ್ಲಾ ಪುನರ್ ವಿಂಗಡಣಾ ವರದಿ ಪಡೆಯುವುದು ಸೇರಿದಂತೆ ವಿವಿಧ ಕಾರಣಕ್ಕಾಗಿ ಚುನಾವಣೆ ವಿಳಂಬವಾಗಿದೆ. ಹಾಗಾಗಿ ಏಪ್ರಿಲ್, ಮೇ ತಿಂಗಳಲ್ಲಿ ಚುನಾವಣೆ ಬಹುತೇಕ ಖಚಿತವಾಗಿದೆ ಎಂದರು. …

Read More »

ಗ್ರಾ.ಪಂ. ವ್ಯಾಪ್ತಿಯ ಸುಮಾರು 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಿ ಆಸ್ತಿ ತೆರಿಗೆ ಅಭಿಯಾನ ಕೈಗೊಳ್ಳಲು ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್ ರಾಜ್) ಉಮಾ ಮಹದೇವನ್ …

Read More »

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ಉದ್ಘಾಟಿಸಿದ ಡಿಸಿಎಂ ಡಿಕೆ ಶಿವಕುಮಾರ್

ಕನಕಪುರ: ಹೊಸ ಮಾದರಿಯಲ್ಲಿ ಸರ್ವೆ ಕಾರ್ಯ ಆರಂಭಿಸುವ ಮೂಲಕ ಯಾವುದೇ ಗೊಂದಲ ಇಲ್ಲದೆ, ರೈತರು ತಾಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬದಲಾವಣೆಯ ಪರ್ವ ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ ನಮ್ಮ ಹೋಬಳಿಯಿಂದ ಹೊಸ ಸರ್ವೆ ಕಾರ್ಯವನ್ನು ಪ್ರಾರಂಭಿಸಿದ್ದು, ಅಲ್ಲದೇ …

Read More »

ರಾಜ್ಯದ ಪರೀಕ್ಷಾರ್ಥಿಗಳಿಗೆ ಸಿಹಿಸುದ್ದಿ: ಒಮ್ಮೆ ಸಲ್ಲಿಸುವ ದಾಖಲೆಗಳು ಇನ್ಮುಂದೆ ಎಲ್ಲ ಪರೀಕ್ಷೆಗಳಿಗೂ ಅನ್ವಯ

ಬೆಂಗಳೂರು: ರಾಜ್ಯದ ಎಲ್ಲಾ ಪರೀಕ್ಷಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕೆ-ಸೆಟ್ ಪರೀಕ್ಷೆ ಸೇರಿ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ಸಲ್ಲಿಸುವ ದಾಖಲೆಗಳು ಮುಂದಿನ ಎಲ್ಲಾ ಪರೀಕ್ಷೆಗಳಿಗೂ ಅನ್ವಯವಾಗುವಂತೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಕೆ – ಸೆಟ್ 2024 ಅರ್ಹ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ …

Read More »

ಜಮ್ಮು ಕಾಶ್ಮೀರದಲ್ಲಿ ಝಡ್ ಮೋರ್ಹ್ ಸುರಂಗ ಮಾರ್ಗವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ಗೆ ವರ್ಷಪೂರ್ತಿ ಸಂಪರ್ಕವನ್ನು ಕಲ್ಪಿಸುವ ಝಡ್-ಮೋರ್ಹ್ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಜಮ್ಮು ಮತ್ತು ಕಾಶ್ಮೀರದ ಗಂಡರ್‌ಬಾಲ್ ಜಿಲ್ಲೆಯಲ್ಲಿ ಇಂದು 6.5 ಕಿ.ಮೀ ಉದ್ದದ ಝಡ್-ಮೋರ್ಹ್ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇದು ಸೋನಾಮಾರ್ಗ್ ಪ್ರವಾಸಿ ರೆಸಾರ್ಟ್‌ಗೆ ವರ್ಷಪೂರ್ತಿ ಪ್ರವೇಶವನ್ನು ಒದಗಿಸುತ್ತದೆ. ಹಾಗೇ, ಈ ಹಿಂದೆ ಉಗ್ರರ ದಾಳಿಗೆ ಬಲಿಯಾದವರಿಗೆ ಗೌರವ ಸಲ್ಲಿಸಿದರು. ಸುರಂಗದ ಉದ್ಘಾಟನೆಯ ನಂತರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ …

Read More »

ರಾಯಚೂರು: ಭತ್ತ, ಜೋಳ ಖರೀದಿ ಕೇಂದ್ರ ತೆರೆಯದ ಕಾರಣ ಜಿಪಿಎಸ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿರುವ ರೈತರು

ರಾಯಚೂರು: ಜಿಲ್ಲೆಯಲ್ಲಿ ಭತ್ತ ಹಾಗೂ ಜೋಳ ಚೆನ್ನಾಗಿ ಬೆಳೆದಿದೆ. ಸಕಾಲದಲ್ಲಿ ಕೆಲವು ಕಡೆ ಖರೀದಿ ಕೇಂದ್ರಗಳನ್ನು ತೆರೆಯದ ಕಾರಣ ಹಾಗೂ ಜೆಪಿಎಸ್‌ ಸಮಸ್ಯೆಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶೇಕಡ 60ರಷ್ಟು ರೈತರು ಭತ್ತ ಮಾರಾಟ ಮಾಡಿದ್ದಾರೆ. ಅವರು ಮಾರಾಟ ಮಾಡಿದ ವೇಳೆಯಲ್ಲಿ ಬೆಲೆ ಕಡಿಮೆ ಇತ್ತು. ಜಿಲ್ಲೆಯಲ್ಲಿ ಭತ್ತದ ಬೆಲೆ ₹ 2300 ಇದ್ದಾಗ ತೆಲಂಗಾಣ ಸರ್ಕಾರ ಅಲ್ಲಿನ ರೈತರಿಗೆ ₹ 500 ಪ್ರೋತ್ಸಾಹಧನ ನೀಡಿ ಖರೀದಿಸಿತು. ಇಲ್ಲಿಯ …

Read More »