BigTv News
January 12, 2025
Breaking News, ರಾಯಚೂರು
ಹಟ್ಟಿ ಚಿನ್ನದ ಗಣಿ: 2024-25ನೇ ಆರ್ಥಿಕ ವರ್ಷದ ಡಿಸೆಂಬರ್ ಅಂತ್ಯಕ್ಕೆ ಕಂಪನಿಯು ₹239 ಕೋಟಿ ಲಾಭ ಗಳಿಸಿದೆ. ಇದರಲ್ಲಿ ಶೇ 30ರಷ್ಟನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ನೀಡಿದ್ದೇವೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷ ಜಿ.ಟಿ.ಪಾಟೀಲ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸಕ್ತ ಆರ್ಥಿಕ ಸಾಲಿನಲ್ಲಿ 1,800 ಕೆ.ಜಿ ಚಿನ್ನ ಉತ್ಪಾದನೆಯ ಗುರಿ ಹೊಂದಲಾಗಿತ್ತು. ಡಿಸೆಂಬರ್‌ವರೆಗೂ 1,700 ಕೆ.ಜಿ. ಉತ್ಪಾದನೆ ಮಾಡಲಾಗಿದೆ. ಜನವರಿ ಕೊನೆಯಲ್ಲಿ ಗುರಿ ತಲುಪಲಿದ್ದೇವೆ’ ಎಂದರು. …
Read More »
BigTv News
January 12, 2025
Breaking News, ಮೈಸೂರು
ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಅವರೇ ಮುಂದುವರಿಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ನಮ್ಮಲ್ಲಿ ಯಾವುದೇ ಚರ್ಚೆ ಆಗುತ್ತಿಲ್ಲ. ನಾವು ಯಾರೂ ಒಬ್ಬರಿಗೊಬ್ಬರು ಗುಂಪುಗಾರಿಕೆ ಮಾಡುತ್ತಿಲ್ಲ. ಒಟ್ಟಿಗೆ ಕುಳಿತು ಊಟ ಮಾಡುವುದು ಅಪರಾಧವೇ’ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಬದಲಾವಣೆಗೂ ಕಾಂಗ್ರೆಸ್ ಶಾಸಕಾಂಗ …
Read More »
BigTv News
January 12, 2025
Breaking News
ಜಾಲಹಳ್ಳಿ: ಕನಕ ಗುರು ಪೀಠದಲ್ಲಿಯೇ ಶಿವಸಿದ್ಧ ಯೋಗ ವಿದ್ಯಾಮಂದಿರ ನಿರ್ಮಾಣಕ್ಕೆ ನಗರಾಭಿವೃದ್ಧಿ ಸಚಿವ ಕೆ.ಎಸ್ ಸುರೇಶ ಬೈರತಿ ಅವರು ವೈಯಕ್ತಿಕವಾಗಿ ₹50ಲಕ್ಷ ದೇಣಿಗೆ ನೀಡಲು ಘೋಷಣೆ ಮಾಡಿದರು. ಇಂದು ಸಮೀಪದ ತಿಂಥಣಿ ಬ್ರಿಜ್ ಹತ್ತಿರದ ಕಲಬುರಗಿ ವಿಭಾಗದ ಕನಕಗುರು ಪೀಠದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಮೂರು ದಿನಗಳ ವರೆಗೆ ಹಮ್ಮಿಕೊಂಡ ಹಾಲುಮತ (ಸಿದ್ಧ-ನಾಥ) ಸಂಸ್ಕೃತಿ ವೈಭವದ ಮೊದಲ ದಿನದ ಕಾರ್ಯಕ್ರಮ ದಲ್ಲಿ ವಿದ್ಯಾಮಂದಿರದ ಶಿಲಾನ್ಯಾಸ ಮಾಡಿ ಮಾತನಾಡಿದರು. 12ನೇ …
Read More »
BigTv News
January 12, 2025
Breaking News, ಬೀದರ್
ಬೀದರ್ : ವಿದ್ಯಾರ್ಥಿಗಳು ಅಧ್ಯಯನ ಮಾಡುವ ಸಂದರ್ಭದಲ್ಲಿ ಆನ್ ಲೈನ್ ಗೇಮ್ ಮತ್ತು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಸಾಧನೆಯ ಗುರಿಯೆಡೆಗೆ ಸಾಗಬೇಕು ಎಂದು ಖ್ಯಾತ ಚಿತ್ರನಟ ಹಾಗೂ ನಿರ್ಮಾಪಕ ಸೋನು ಸೂದ್ ತಿಳಿಸಿದರು. ನಗರದ ನೆಹರೂ ಮೈದಾನದಲ್ಲಿ ಗುರುನಾನಕ್ ದೇವ್ ಶಾಲೆಯು ಐವತ್ತನೇ ವರ್ಷ ಪೂರೈಸಿರುವ ಪ್ರಯುಕ್ತ ಶಾಲೆ ವತಿಯಿಂದ ಆಯೋಜಿಸಿದ ಬೀದರ್ ಮ್ಯಾರಥಾನ್ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಾಧನೆ ಮಾಡಬೇಕು ಎನಿಸಿದರೆ ಇಂದೇ ಉತ್ಸಾಹದಿಂದ ಪ್ರಾರಂಭ …
Read More »
BigTv News
January 12, 2025
Breaking News
ನವದೆಹಲಿ: ಈ ಬಾರಿ ದೆಹಲಿ ಚುನಾವಣೆಯಲ್ಲಿ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ. ಆಮ್ ಆದ್ಮಿ ಪಕ್ಷ ಮೊದಲು ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಿತು. ನಂತರ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಕೂಡ ದೊಡ್ಡ ಘೋಷಣೆಗಳನ್ನು ಮಾಡಲು ಪ್ರಾರಂಭಿಸಿದೆ. ಇಂದು ಕಾಂಗ್ರೆಸ್ ಪಕ್ಷವು ದೆಹಲಿಯ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ 8500 ರೂ.ಗಳನ್ನು ನೀಡುವುದಾಗಿ ಘೋಷಿಸಿದೆ. ಇದಕ್ಕೂ ಮುಂಚೆಯೇ, ಕಾಂಗ್ರೆಸ್ ಪಕ್ಷವು ದೆಹಲಿಯ ಜನರಿಗೆ ಅನೇಕ ಚುನಾವಣಾ …
Read More »
BigTv News
January 12, 2025
Breaking News, ಮಡಿಕೇರಿ
ಮಡಿಕೇರಿ: ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ಆದರೆ, ವರದಿ ಜಾರಿ ಕುರಿತು ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದರು. ಈ ಕುರಿತು ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು. ವೈಯಕ್ತಿಕ ಅಭಿಪ್ರಾಯಗಳು ಏನೇ ಇದ್ದರೂ ಅದು ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆಯಾಗುತ್ತದೆ. ವರದಿ ಜಾರಿ ಸಂಬಂಧ ಸಂಪುಟ ಉಪಸಮಿತಿ ರಚಿಸಬೇಕೇ ಅಥವಾ ಸದನಕ್ಕೆ ಬಿಡಬೇಕೇ ಎಂಬ …
Read More »
BigTv News
January 12, 2025
Breaking News
ರಾಯಪುರ: ಕೈಗಾರಿಕೋದ್ಯಮಿ ಗೌತಮ್ ಅದಾನಿ ಹಾಗೂ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಭಾನುವಾರ ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದಲ್ಲಿ ಇಂಧನ ಹಾಗೂ ಸಿಮೆಂಟ್ ಕ್ಷೇತ್ರದಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಅದಾನಿ ಘೋಷಿಸಿದ್ದಾರೆ. ರಾಜ್ಯ ರಾಜಧಾನಿ ರಾಯಪುರದಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ನಡೆಯಿತು ಎಂದು ರಾಜ್ಯ ಸಾರ್ವಜನಿಕ ಸಂಪರ್ಕ ಇಲಾಖೆ ಹೇಳಿದೆ. ರಾಯ್ಪುರ, ಕೊರ್ಬಾ ಹಾಗೂ ರಾಯಗಢದಲ್ಲಿರುವ ವಿದ್ಯುತ್ ಸ್ಥಾವರಗಳ ವಿಸ್ತರಣೆಗೆ ₹60 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ …
Read More »
BigTv News
January 12, 2025
Breaking News, ಬೆಂಗಳೂರು
ಬೆಂಗಳೂರು : ಬಹು ಮುಖ್ಯವಾದಂತಹ ಜಾತಿಗಣತಿ ವರದಿ ಜಾರಿ ಮಾಡುವ ಕುರಿತಂತೆ ಮುಂದಿನ ಸಂಪುಟ ಸಭೆಯಲ್ಲಿ ಅಂದರೆ ಜನೆವರಿ 16 ರಂದು ಈ ಒಂದು ಜಾದಿಗಣತಿ ವರದಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದು, ಬಹುತೇಕ ಮುಂದೆ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರೊಂದಿಗೆ ಚರ್ಚಿಸಿ ಜಾತಿಗಣತಿ ವರದಿ ಜಾರಿಯಾಗುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಹೌದು ಮುಂದಿನ ಕ್ಯಾಬಿನೆಟ್ ನಲ್ಲಿ ಜಾತಿಗಣತಿ ವರದಿ ಜಾರಿ ಕುರಿತು ಚರ್ಚೆ …
Read More »
Shaikh BigTv
January 12, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅವಳಿ ನಗರದಲ್ಲಿ ಕಳ್ಳತನ ಪ್ರಕಣಗಳು ಸೇರಿದಂತೆ ಒಂದಿಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ, ಹುಬ್ಬಳ್ಳಿಯ ಕಾರವಾರ ರೋಡ್ ಬ್ರಿಡ್ಜ್ ನಿಂದ ನಾಪತ್ತೆಯಾಗಿದ್ದ ಟ್ರಕ್ ಕೊನೆಗೂ ಪೊಲೀಸರ ಕೈಯಲ್ಲಿ ಸಿಕ್ಕಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಲಿ ಶೇಕ್, ಪಿಎಸ್‌ಐ ವಿಶ್ವನಾಥ, ಪಿಎಸ್‌ಐ ಸಾತನಹಳ್ಳಿ ಮತ್ತು ಅವರ ತಂಡದ ನೇತೃತ್ವದಲ್ಲಿ ನಾಪತ್ತೆಯಾಗಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಭಾಗಿಯಾದ ಕಳ್ಳನ ಬಗ್ಗೆ …
Read More »
BigTv News
January 12, 2025
Breaking News, ಕೊಪ್ಪಳ
ಕೊಪ್ಪಳ: ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (ಎನ್ ಟಿಪಿಸಿಎಲ್) ಉದ್ದೇಶಿಸಿದ್ದು, ಈ ಕುರಿತು ಜಾಗ ಗುರುತಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಆದರೆ, ಇದುವರೆಗೂ ವರದಿ ಸಲ್ಲಿಸಿಲ್ಲವಾದ್ದರಿಂದ ಸ್ಥಳ ಲಭ್ಯತೆ ಕುರಿತು ಕೂಡಲೇ ವರದಿ ನೀಡುವಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗೆ ಸೂಚಿಸಿದೆ. ಈ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ಜಗದೀಶ್ ಅವರು ಕೊಪ್ಪಳ ಜಿಲ್ಲಾಧಿಕಾರಿಗೆ ಪತ್ರ ಬರೆದು, ತುರ್ತು ಕ್ರಮ …
Read More »