BigTv News
January 12, 2025
Breaking News, ಬೆಂಗಳೂರು
ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆಯನ್ನು ಮುಂದೂಡಿ. ಈ ವಿಚಾರವಾಗಿ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ಧಿಗಾರರ ಜತೆ ಇಂದು ಮಾತನಾಡಿದ ಅವರು, ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜತೆ ಸಭೆ ಮಾಡಿದ್ದೀರಿ ಎಂದು ಕೇಳಿದಾಗ, ನಾನು ಯಾವುದೇ ಸಭೆ ಮಾಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ಇಂದು ಜಾತಿ ಗಣತಿ …
Read More »
BigTv News
January 12, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಇದೇ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ. ಬಹಳಷ್ಟು ತಳ ಸಮುದಾಯಗಳು ಸ್ವಾಗತಿಸಿರುವ ಹಾಗೂ ಮೇಲ್ವರ್ಗದ ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯಗಳು ಪ್ರಬಲವಾಗಿ ವಿರೋಧಿಸಿರುವ ಜಾತಿ ಗಣತಿ ವರದಿ ವಿಚಾರದಲ್ಲಿ ಸರಕಾರ ಯಾವ ಹೆಜ್ಜೆ ತುಳಿಯಬೇಕು ಎಂಬುದು ಸಂಪುಟದಲ್ಲಿ ತೀರ್ಮಾನವಾಗಲಿದೆ. ಸಮೀಕ್ಷಾ ವರದಿ ಸಮರ್ಪಕವಾಗಿಲ್ಲ ಮತ್ತು ದಶಕಗಳ ಹಿಂದಿನ ದತ್ತಾಂಶ ಆಧರಿಸಿದ ಇದು …
Read More »
BigTv News
January 12, 2025
Breaking News
ನವದೆಹಲಿ: ಸ್ಥಿರವಾದ ಜಾಗತಿಕ ಬೆಳವಣಿಗೆಯ ಹೊರತಾಗಿಯೂ 2025ರಲ್ಲಿ ಭಾರತದ ಆರ್ಥಿಕತೆಯು ದುರ್ಬಲಗೊಳ್ಳುವ ನಿರೀಕ್ಷೆಯಿದೆ ಎಂದು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಎಚ್ಚರಿಕೆ ನೀಡಿದ್ದಾರೆ. ಮುಖ್ಯವಾಗಿ ಅಮೆರಿಕದ ವ್ಯಾಪಾರ ನೀತಿಯ ಸುತ್ತ ಈ ವರ್ಷ ಜಗತ್ತಿನಲ್ಲಿ ಸಾಕಷ್ಟು ಅನಿಶ್ಚಿತತೆಯನ್ನು ನಿರೀಕ್ಷಿಸುವುದಾಗಿ ಜಾರ್ಜೀವಾ ಹೇಳಿದರು. ಜಾಗತಿಕ ಬೆಳವಣಿಗೆಯು 2025ರಲ್ಲಿ ಸ್ಥಿರವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ, ಆದರೆ ಪ್ರಾದೇಶಿಕ ಮಟ್ಟದಲ್ಲಿ ಸಾಕಷ್ಟು ವ್ಯತ್ಯಾಸಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು. 2025ರಲ್ಲಿ ಭಾರತದ ಆರ್ಥಿಕತೆಯು ದುರ್ಬಲವಾಗಲಿದೆ …
Read More »
BigTv News
January 12, 2025
Breaking News, ವಿಜಯನಗರ
ವಿಜಯನಗರ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಸಿದ್ದರಾಮಯ್ಯ ಅವರೇ ಪೂರ್ತಿ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರ ವಿರುದ್ಧ ಪರೋಕ್ಷವಾಗಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಗುಡುಗಿದ್ದಾರೆ. ಈ ಕುರಿತು ಸಿರಸಂಗಿ ಲಿಂಗರಾಜ ದೇಸಾಯಿ ಅವರ 164ನೇ ಜಯಂತ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ …
Read More »
BigTv News
January 12, 2025
Breaking News, ಬೆಂಗಳೂರು
ಬೆಂಗಳೂರು: ಹೈದರಾಬಾದ್-ಕರ್ನಾಟಕ ಮತ್ತು ಇತರೆ ಕೋಟಾಗಳ ಅಡಿಯಲ್ಲಿ ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) ಮತ್ತು ಸಹಾಯಕ ಎಂಜಿನಿಯರ್(ಮೆಕ್ಯಾನಿಕಲ್) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ‘ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್)ಕ್ಕೆ ಆದೇಶಿಸಿದೆ. ನೇಮಕಾತಿ ಅಧಿಸೂಚನೆಯು ಕನ್ನಡ ಭಾಷಾ ಪರೀಕ್ಷೆಗೆ ಗರಿಷ್ಠ 150 ಅಂಕಗಳನ್ನು ಸ್ಪಷ್ಟವಾಗಿ ಸೂಚಿಸಿದ್ದರೂ, ಈಗಾಗಲೇ ನಡೆಸಲಾದ ಪರೀಕ್ಷೆಯ ನಂತರ ಅರ್ಹತಾ ಅಂಕಗಳಾಗಿ ಕನಿಷ್ಠ 50 ಅಂಕಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸಿರುವುದು ನ್ಯಾಯಯುತವಾಗಿಲ್ಲ ಅಥವಾ ಪಾರದರ್ಶಕ ಕ್ರಮವಲ್ಲ” …
Read More »
BigTv News
January 12, 2025
Breaking News, ಬೆಂಗಳೂರು
ಬೆಂಗಳೂರು : ನಾಳೆ ಬೆಂಗಳೂರಲ್ಲಿ ಖಾಸಗಿ ಹೋಟೆಲ್‌ನಲ್ಲಿ ಸಿ ಎಲ್ ಪಿ ಸಭೆ ಹಿನ್ನೆಲೆ ಇಂದು ರಾಜ್ಯಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಮಿಸಲಿದ್ದಾರೆ. ನಾಳೆ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಿ ಎಲ್ ಪಿ ಸಭೆ ಹಾಗೂ ಜ. 21ರಂದು ನಡೆಯಲಿರುವ ಬೆಳಗಾವಿಯಲ್ಲಿ ಗಾಂಧಿ ಸಮಾವೇಶದ ಕುರಿತು ಚರ್ಚೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು …
Read More »
BigTv News
January 12, 2025
Breaking News, ಮಂಡ್ಯ
ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ‘ಬೌದ್ಧ ಅಂಬೇಡ್ಕರ್ ಮಹಾದ್ವಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ …
Read More »
BigTv News
January 12, 2025
Breaking News, ಯಾದಗಿರಿ
ವಡಗೇರಾ: ತಾಲ್ಲೂಕು ಕೇಂದ್ರವಾಗಿ ಏಳು ವರ್ಷಗಳ ಬಳಿಕ ನಂತರ ವಡಗೇರಾ ಪಟ್ಟಣದಲ್ಲಿ ಮಿನಿವಿಧಾನ ಸೌಧ ನಿರ್ಮಾಣಕ್ಕೆ ಸಿದ್ಧತೆ ನಡೆದಿದ್ದು, ಇದರಿಂದಾಗಿ ತಾಲ್ಲೂಕಿನ ಜನರ ಬಹುದಿನಗಳ ಕನಸು ನನಸಾಗುತ್ತಿದೆ. 2018ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರಾಜ್ಯದಲ್ಲಿ ಸುಮಾರು 44 ನೂತನ ತಾಲ್ಲೂಕು ಕೇಂದ್ರಗಳನ್ನು ಘೋಷಣೆ ಮಾಡಿದ್ದರು. ಅದರಲ್ಲಿ ವಡಗೇರಾ ಸಹ ಒಂದು. ಜಮೀನು ಮಂಜೂರು: ಇಲ್ಲಿನ ತುಮಕೂರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಇರುವ ಮೊರಾರ್ಜಿ ವಸತಿ ಶಾಲೆಯ ಪಕ್ಕದ ಸ.ನಂ.581ರಲ್ಲಿ …
Read More »
BigTv News
January 12, 2025
Breaking News, ಮಧ್ಯಪ್ರದೇಶ
ಗುನಾ: ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುವುದು ಎಂದು ಟೆಲಿಕಾಂ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಹೇಳಿದ್ದಾರೆ. ಸಂಸತ್ತಿನಲ್ಲಿ ತಾವು ಪ್ರತಿನಿಧಿಸುವ ಮಧ್ಯಪ್ರದೇಶದ ಗುನಾದಲ್ಲಿ ನೂತನ ಕೇಂದ್ರಕ್ಕೆ ಚಾಲನೆ ನೀಡಿದ ವೇಳೆ ಈ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅವರು, ರಾಜ್ಯದಲ್ಲಿ ಇನ್ನೂ ಆರು ಹೊಸ ಪಾಸ್‌ಪೋರ್ಟ್ ಕೇಂದ್ರಗಳು 2025ರಲ್ಲೇ ಆರಂಭವಾಗಲಿವೆ ಎಂದು ತಿಳಿಸಿದ್ದಾರೆ. ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಸಂಸತ್ತಿನ ಪ್ರತಿಯೊಂದು ಕ್ಷೇತ್ರದಲ್ಲೂ ಸೇವಾ ಕೇಂದ್ರ ತೆರೆಯಲು …
Read More »
BigTv News
January 12, 2025
Breaking News
ಲಾಸ್ ಏಂಜಲೀಸ್: ಬಹುತೇಕ ಶ್ರೀಮಂತರೇ ನೆಲೆಸಿದ್ದ ಲಾಸ್ ಏಂಜಲೀಸ್ ನಲ್ಲಿ ಮಹಾಮಾರಿಯಂತೆ ಕಾಡ್ಗಿಚ್ಚು ವ್ಯಾಪಿಸುತ್ತಲೇ ಇದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಮೆರಿಕ ಇತಿಹಾಸದಲ್ಲೇ ಅತ್ಯಂತ ಭೀಕರ ಎನ್ನಬಹುದಾದ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಲಾಸ್ ಏಂಜಲೀಸ್ ಕರಾವಳಿ ತೀರದಲ್ಲಿ ಮೊದಲ ಬಾರಿ ಕಾಣಿಸಿಕೊಂಡ ಕಾಡ್ಗಿಚ್ಚು 5 ದಿನಗಳಾದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರಿಂದ ಸುಮಾರು 12 ಸಾವಿರ ಕಟ್ಟಡಗಳು ಆಹುತಿಯಾಗಿದ್ದು, ಲಕ್ಷಾಂತರ ಜನ ಮನೆ ಮಠ …
Read More »