Breaking News

Breaking News

ಷೇರುಗಳ ಮಾರಾಟ ₹14 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸುವ ನಿರೀಕ್ಷೆ: ಸೆಬಿ ಅಧ್ಯಕ್ಷೆ ಮಾಧವಿ ಪುರಿ

ಮುಂಬೈ: 2024-25ನೇ ಆರ್ಥಿಕ ವರ್ಷದಲ್ಲಿ ಕಂಪನಿಗಳು ಷೇರುಗಳ ಮಾರಾಟ ಹಾಗೂ ಸಾಲಪತ್ರಗಳ ಮೂಲಕ ₹14.27 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಹೇಳಿದ್ದಾರೆ. 2023-24ರಲ್ಲಿ ₹11.8 ಲಕ್ಷ ಕೋಟಿ ಸಂಗ್ರಹವಾಗಿತ್ತು. ಇದಕ್ಕೆ ಹೋಲಿಸಿದರೆ ಬಂಡವಾಳ ಸಂಗ್ರಹ ಪ್ರಮಾಣವು ಶೇ 21ರಷ್ಟು ಹೆಚ್ಚಳವಾಗುವ ಅಂದಾಜಿದೆ ಎಂದು ಹೇಳಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಈಕ್ವಿಟಿ …

Read More »

ಬೆಳಗಾವಿಯಲ್ಲಿ ಎನ್ ಐ ಎಫ್ ಟಿ ಇ ಎಂ ಸ್ಥಾಪನೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಿಗೆ ಸಂಸದ ಜಗದೀಶ್ ಶೆಟ್ಟರ್ ಮನವಿ

ಬೆಳಗಾವಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಭೇಟಿ ಮಾಡಿದ್ದು, ಬೆಳಗಾವಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಟ್ ಟೆಕ್ನಾಲಜಿ ಎಂಟರ್ ಪ್ರೆನರ್ಶಿಪ್ ಆಯಂಡ್ ಮ್ಯಾನೇಜ್ ಮೆಂಟ್ ಸ್ಥಾಪನೆಗೆ ಮನವಿ ಮಾಡಿದರು. ಇದಕ್ಕೂ ಮುನ್ನ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮ ಸಚಿವರಾದ ಚಿರಾಗ್ ಪಾಸ್ವಾನ್ ಅವರನ್ನು ಭೇಟಿ ಮಾಡಿ, ಅವರಿಗೂ ಮನವಿ ಸಲ್ಲಿಸಿದರು. ಈ ಪ್ರಸ್ತಾವನೆ ಅನುಮೋದನೆ, ಅಗತ್ಯ ಅನುದಾನ ಮಂಜೂರಾತಿಗಾಗಿ ಕೇಂದ್ರ ಹಣಕಾಸು …

Read More »

ಇಂದು ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್: ಸಿಎಂ ಸಿದ್ದರಾಮಯ್ಯರಿಂದ ಸ್ವಾಗತ

ಬೆಂಗಳೂರು: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಅವರ ಪತ್ನಿ ಶ್ರೀಮತಿ ಸುದೇಶ ಧನಕರ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಮ್ ಸಿ ಸುಧಾಕರ್ ಸೇರಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಎಲ್ಲಾ …

Read More »

2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಎಲ್ಲ ಗ್ರಾ.ಪಂ.ಗಳಿಗೆ ಸೂಚನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯತ್‌ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟನೆ ನೀಡಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 309(ಬಿ)ರಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ …

Read More »
Featured Video Play Icon

ಕುರ್ಚಿ ಕಿತ್ತಾಟದ ಗದ್ದಲ ಬೀದಿಗೆ: ಸಿಎಂ, ಡಿಸಿಎಂ ಜಟಾಪಟಿಯಿಂದ ಸರ್ಕಾರ ಜಟಿಲ..

ಹುಬ್ಬಳ್ಳಿ: ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,‌ಕಾಂಗ್ರೆಸ್ ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿವೆ. ಒಂದಲ್ಲ ಒಂದು ದಿನ ಹೊರ ಬರುತ್ತೆ ಅಂತ ಹೇಳಿದ್ದೆ.‌ ಈಗಾಗಲೇ ಔತಣಕೂಟ ಆರಂಭವಾಗಿದೆ.‌ಕೆಲ ಸಚಿವರು ಸೇರಿ ಔತಣಕೂಟ ಮಾಡಿದರು. ಎಸ್ ಸಿ, ಎಸ್ಟಿ ಶಾಸಕರು, ಮಂತ್ರಿಗಳ ಔತಣ ಕೂಟಕ್ಕೆ ಅಡ್ಡಗಾಲು …

Read More »

ಕರ್ತವ್ಯ ಲೋಪ ಹಿನ್ನಲೆ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳು ಅಮಾನತು

ಬೆಳಗಾವಿ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಮಾಡಿ ಆದೇಶ ಹೊರಡಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸರ್ವೇಯರ್ ಮೇಲ್ವಿಚಾರಕ ಆರ್.ಸಿ.ಪತ್ತಾರ್, ಸರ್ವೇಯರ್ ಎಂ.ಐ ಮುತ್ತಗಿ ಸೇರಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಖಾನಾಪುರ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂಮಾಪನ ಇಲಾಖೆ ಆಯುಕ್ತ ಜೆ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಹುಳಗುಂದ ಗ್ರಾಮದಲ್ಲಿ ಸರ್ವೆ ನಂಬರ್ 3ರಲ್ಲಿರುವ 508 ಎಕರೆ 20 ಗುಂಟೆ ಜಮೀನಿನ ಅಳತೆ ಭೂಮಿಯ 11ಎ ನಕ್ಷೆ …

Read More »

ಬಗರ್ ಹುಕುಂ ಅಡಿಯಲ್ಲಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್ ಹುಕುಂ ಅಡಿಯಲ್ಲಿ ಈ ತಿಂಗಳು 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು. ಶುಕ್ರವಾರ ತಹಶೀಲ್ದಾರ್‌ಗಳು ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಸಚಿವರು, ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ …

Read More »

ಕೇಂದ್ರದಿಂದ ರಾಜ್ಯಕ್ಕೆ 6310 ಕೋಟಿ ರೂ. ತೆರಿಗೆ ಹಣ ಬಿಡುಗಡೆ

ನವದೆಹಲಿ: ಕರ್ನಾಟಕಕ್ಕೆ 6310.40 ಕೋಟಿ ರೂ.ಗಳ ತೆರಿಗೆ ಹಂಚಿಕೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ. ಒಟ್ಟಾರೆಯಾಗಿ, ಕೇಂದ್ರ ಸರ್ಕಾರವು 2024 ರ ಡಿಸೆಂಬರ್ನಲ್ಲಿ 89,086 ಕೋಟಿ ರೂ.ಗಳ ವಿಕೇಂದ್ರೀಕರಣದ ವಿರುದ್ಧ ರಾಜ್ಯಗಳಿಗೆ 1,73,030 ಕೋಟಿ ರೂ.ಗಳ ತೆರಿಗೆ ವಿಕೇಂದ್ರೀಕರಣವನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರಕಾರವು ಡಿಸೆಂಬರ್ ತಿಂಗಳಲ್ಲಿ 28 ರಾಜ್ಯಗಳಿಗೆ 89,086 ಕೋಟಿ ಬಿಡುಗಡೆ ಮಾಡಬೇಕಿತ್ತು. ಬದಲಾಗಿ, ರಾಜ್ಯ ಸರಕಾರಗಳಿಗೆ 1,73,030 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ”ರಾಜ್ಯಗಳು …

Read More »

ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಪೈಕಿ ಮೃತಪಟ್ಟವರಿಗೂ ಭೂಮಿ ಮಂಜೂರು: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಬಗರ್‌ ಹುಕುಂ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ಗಳಿಗೆ ಸೂಚಿಸಿದರು. ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ …

Read More »

ಕೇಂದ್ರ ಸರ್ಕಾರದಿಂದ ಕರ್ನಾಟಕ ಜನರಿಗೆ ಸಿಹಿಸುದ್ದಿ: ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕದ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಬಳಕೆ ಮಾಡಲು ಷರತುಬದ್ಧ ಒಪ್ಪಿಗೆ ನೀಡಿದೆ. 128 ಎಕರೆ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಶಿರಾ ತಾಲೂಕಿನ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ 128 ಎಕರೆ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಬಳಕೆ ಮಾಡಬೇಕು. …

Read More »