BigTv News
January 8, 2025
Breaking News, ಹಾವೇರಿ
ಹಾವೇರಿ: ಜಿಲ್ಲೆಯ ಸವಣೂರು ತಾಲ್ಲೂಕಿನ ಕುರುಬರಮಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಒಟ್ಟು ₹ 40 ಲಕ್ಷ ದುರುಪಯೋಗವಾಗಿದ್ದು ಈ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಪಿಡಿಒ ಅನ್ನಪೂರ್ಣ ಸಿಂಪಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ₹ 40 ಲಕ್ಷ ಅಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷರೂ ಶಾಮೀಲಾಗಿರುವ ಆರೋಪವಿರುವುದರಿಂದ, ಅವರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಿ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ್ ಶ್ರೀಧರ್ ಅವರು …
Read More »
BigTv News
January 8, 2025
Breaking News, ಬೆಂಗಳೂರು
ಬೆಂಗಳೂರು: ತಾಯಂದಿರ ಮರಣ ತಡೆಗೆ ತಮ್ಮ ಸರ್ಕಾರ ಶೀಘ್ರದಲ್ಲೇ ಕೇಂದ್ರೀಕೃತ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018-20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ ಎಂದು ಹೇಳಿದರು. …
Read More »
BigTv News
January 8, 2025
Breaking News
ನವದೆಹಲಿ: ದೇಶದ ಜನಸಂಖ್ಯೆಯ 35% ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. 2047 ರ ವೇಳೆಗೆ ಈ ಈ ಸಂಖ್ಯೆಯು 50% ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ” ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಇಂದು(ಜ8) ಹೇಳಿಕೆ ನೀಡಿದ್ದಾರೆ. ಬದಲಾವಣೆಗಾಗಿ ಸಾಮರ್ಥ್ಯ ಕಾರ್ಯಕ್ರಮವನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅರ್ಬನ್ ಡೆವಲಪ್ಮೆಂಟ್ ಪ್ರಾರಂಭಿಸುತ್ತಿದೆ. ಬೆಳೆಯುತ್ತಿರುವ ನಗರಗಳನ್ನು ಸುಂದರಗೊಳಿಸಲು ಮತ್ತು ಜೀವನಮಟ್ಟವನ್ನು ಉತ್ತಮಗೊಳಿಸಲು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಹಳೆಯ …
Read More »
BigTv News
January 8, 2025
Breaking News, ಬೆಂಗಳೂರು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಜನ ಕೊಟ್ಟ ತೀರ್ಪನ್ನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ಈಗಾಗಲೇ ಸಿಎಂ ಸ್ಥಾನದಲ್ಲಿ ಒಬ್ಬರು ಕೂತಿದ್ದಾರೆ. ಪಕ್ಷದ ಅದ್ಯಕ್ಷ ಸ್ಥಾನದಲ್ಲಿ ಮತ್ತೊಬ್ಬರು ಕೂತಿದ್ದಾರೆ. ಆ ಸ್ಥಾನಗಳು ಖಾಲಿಯಾಗುವ ಸಂದರ್ಭದಲ್ಲಿ ಪಕ್ಷ ಅದರ ಬಗ್ಗೆ ಚರ್ಚೆ ಮಾಡಲಿದೆ’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು-ನೀವು ಇಲ್ಲಿ ಕೂತು ಚರ್ಚೆ ಮಾಡಿದರೆ ಅರ್ಥವಿಲ್ಲ. ಏನೇ …
Read More »
BigTv News
January 8, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರವು ‘ಸಂತ ಸೇವಾಲಾಲ್ ಪ್ರಶಸ್ತಿ’ ಸ್ಥಾಪಿಸಿ ಆದೇಶ ಹೊರಡಿಸಿದೆ. ಈ ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಬಂಜಾರಾ ಸಮುದಾಯದಲ್ಲಿ ವಿಶೇಷ ಸಾಧನೆ ಮಾಡಿದ ಹಿರಿಯ ಸಾಧಕರೊಬ್ಬರಿಗೆ ಈ ಪ್ರಶಸ್ತಿ ನೀಡಿ, ಗೌರವಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಪ್ರಶಸ್ತಿ ಸ್ಥಾಪಿಸುವಂತೆ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದ ಸ್ವಾಮಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು.
Read More »
BigTv News
January 8, 2025
Breaking News, ಬೆಂಗಳೂರು
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಗೆ ಮಂಜೂರಾದ ಹಣವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸರಕಾರ ನಿಗಮಗಳಿಗೆ 446 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಅದರಲ್ಲಿ ಕೇವಲ 260 ಕೋಟಿ …
Read More »
BigTv News
January 8, 2025
Breaking News, ಬೆಂಗಳೂರು
ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾವಿರಾರು ಆಶಾ (ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರು) ಕಾರ್ಯಕರ್ತೆಯರು ಮಂಗಳವಾರದಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗೆ ಮುಖ್ಯವಾಗಿರುವ ಈ ಕಾರ್ಯಕರ್ತರು, ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಪೂರೈಸಲು ಹೆಚ್ಚುವರಿ 2,000 ರೂ.ಗಳ ಜೊತೆಗೆ ರೂ 15,000 ನಿಗದಿತ ಮಾಸಿಕ ಗೌರವಧನವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ. ಬೇಡಿಕೆಗಳನ್ನು ಸರಕಾರ ಈಡೇರಿಸುವವರೆಗೆ ಪ್ರತಿಭಟನೆ ಹಿಂಪಡೆಯುವ …
Read More »
BigTv News
January 8, 2025
Breaking News, ಮಂಡ್ಯ
ಮಂಡ್ಯ: ಈ ಬಾರಿ ಕೃಷಿ ಪ್ರದೇಶ ವಿಸ್ತರಣೆಯಾಗಿರುವ ಕಾರಣ ಜನವರಿಯಿಂದ ಮೇ ತಿಂಗಳವರೆಗೆ ಹೆಚ್ಚುವರಿ ವಿದ್ಯುತ್ ಅಗತ್ಯವಿದೆ. ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಇಂಧನ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿ, ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ತಲಾ 1 ಸಾವಿರ ಮೆ.ವ್ಯಾ.ವಿದ್ಯುತ್ ಖರೀದಿಗೆ ಯೋಜನೆ ರೂಪಿಸಲಾಗಿದೆ. ದೀರ್ಘಾವಧಿ ವಿದ್ಯುತ್ …
Read More »
BigTv News
January 8, 2025
Breaking News, ಬೆಂಗಳೂರು
ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್ ಐಎಲ್ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್ ಪ್ಯಾಕೇಜುಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಇಂದು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ …
Read More »
BigTv News
January 8, 2025
Breaking News, ದಕ್ಷಿಣ ಕನ್ನಡ
ದಕ್ಷಿಣ ಕನ್ನಡ: ಭಾರತ ಹಿಂದೆಂದಿಗಿಂತಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವಾಗ, ಕೆಲವು ಶಕ್ತಿಗಳು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಅಂತಹ ಶಕ್ತಿಗಳ ಕುರಿತು ಜನ ಎಚ್ಚರವಾಗಿರಬೇಕು’ ಎಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಹೇಳಿದರು. ಧರ್ಮಸ್ಥಳ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಬರುವ ಭಕ್ತರು ಸರತಿ ಸಾಲಿನಲ್ಲಿ ಸಾಗುವುದಕ್ಕಾಗಿ ನಿರ್ಮಿಸಿರುವ ಸುಧಾರಿತ ಸೌಲಭ್ಯಗಳನ್ನು ಒಳಗೊಂಡ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಜಗತ್ತೇ ನಮ್ಮ ದೇಶದತ್ತ ಮುಖಮಾಡಿದೆ. ಇನ್ನೊಂದೆಡೆ ಈ ಅಭಿವೃದ್ಧಿಯನ್ನು …
Read More »