Breaking News

Breaking News

ಮಂಡ್ಯ: ಕೃಷಿ ಪಂಪ್ ಸೆಟ್ ಗಳಿಗೆ ಹೆಚ್ಚುವರಿಯಾಗಿ 2 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧ; ಸಚಿವ ಕೆ.ಜೆ.ಜಾರ್ಜ್

ಮಂಡ್ಯ: ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ 7 ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ 2 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಮಂಡ್ಯದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಧನ ಇಲಾಖೆಯ ಅಧಿಕಾಗಳೊಂದಿಗೆ ನಡೆದ ಸಭೆಯಲ್ಲಿ ವಿದ್ಯುತ್ ಬೇಡಿಕೆ …

Read More »

ಭೂ ಸುರಕ್ಷಾ ಯೋಜನೆ 209 ತಾಲೂಕುಗಳಿಗೆ ವಿಸ್ತರಣೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದ 31 ತಾಲೂಕುಗಳಲ್ಲಿ ಭೂ ದಾಖಲೆಗಳನ್ನು ಗಣಕೀಕರಣಗೊಳಿಸುವ ‘ಭೂ ಸುರಕ್ಷಾ’ ಯಶಸ್ಸು ಕಂಡಿರುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ. 2ನೇ ಹಂತದಲ್ಲಿ 209 ತಾಲೂಕುಗಳಲ್ಲಿ ಗಣಕೀಕರಣ ನಡೆಸುವ ಉದ್ದೇಶ ಹೊಂದಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಗುಡಿಬಂಡೆಯಲ್ಲಿ ಇಂದು ಚಾಲನೆ ನೀಡಲಿದ್ದಾರೆ. ಆ ಮೂಲಕ 2ನೇ ಹಂತದ ಭೂ ದಾಖಲೆಗಳ ಗಣಕೀಕರಣಕ್ಕೆ ಚಾಲನೆ ದೊರೆಯಲಿದೆ. ಈ ತಾಲೂಕುಗಳಿಗೆ ಉಳಿದ 209 ಕಚೇರಿಗಳಲ್ಲಿ ಗಣಕೀಕರಣಕ್ಕೆ ತಲಾ 6 ಡೆಸ್ಕ್ …

Read More »

ಬೀದರ್-ಕಮಲನಗರ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ

ಔರಾದ್: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಬೀದರ್-ಕಮಲನಗರ ಹೆದ್ದಾರಿ ಕಾಮಗಾರಿ ವೀಕ್ಷಣೆ ಮಾಡಿದರು. ಕಮಲನಗರ, ಡಿಗ್ಗಿ, ಸಂಗಮ ಬಳಿ ರಸ್ತೆ ವೀಕ್ಷಿಸಿದ ಸಚಿವರು ಅಲ್ಲಲ್ಲಿ ರಸ್ತೆ ಬಿರುಕು ಬಿಟ್ಟಿದ ಕುರಿತು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮೆತ್ತನೆ ಹಾಗೂ ಕಪ್ಪು ಮಣ್ಣು ಇರುವುದರಿಂದ ರಸ್ತೆಯಲ್ಲಿ ಬಿರುಕು ಬಿಡುತ್ತಿದೆ ಎಂದು ಅಧಿಕಾರಿಗಳು ಸಮಜಾಯಿಸಿ ನೀಡಲು ಯತ್ನಿಸಿದರು. ಇದಕ್ಕೆ ಆಕ್ಷೇಪಿಸಿದ ಶಾಸಕ ಪ್ರಭು ಚವಾಣ್ ಇವರು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. …

Read More »

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ವೇತನ ಪರಿಷ್ಕರಣೆಗೆ ಹೊಸ ವ್ಯವಸ್ಥೆ ಜಾರಿ

ನವದೆಹಲಿ: ಭಾರತದಲ್ಲಿ ಕೇಂದ್ರ ಸರ್ಕಾರಿ ನೌಕರರು 2025 ರಲ್ಲಿ ಗಮನಾರ್ಹ ವೇತನ ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದಾರೆ. ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗಲಿದೆ. ಅಕ್ಟೋಬರ್ 2024 ರವರೆಗಿನ ಎಐಸಿಪಿಐ ಸೂಚ್ಯಂಕ ಅಂಕಿಅಂಶಗಳನ್ನು ಬಿಡುಗಡೆ ಮಾಡಲಾಗಿದ್ದು, ನವೆಂಬರ್ ನ ದತ್ತಾಂಶವೂ ಲಭ್ಯವಿದೆ. ಡಿಸೆಂಬರ್ ಅಂಕಿಅಂಶಗಳನ್ನು ಇನ್ನೂ ನಿರೀಕ್ಷಿಸಲಾಗುತ್ತಿದೆ. ಇವುಗಳು ಹೊರಬಂದ ನಂತರ, ಜನವರಿ 2025 ರ ದರ ಹೆಚ್ಚಳದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಪ್ರಸ್ತುತ ಪ್ರವೃತ್ತಿಗಳು ಜನವರಿಯಲ್ಲಿ ತುಟ್ಟಿಭತ್ಯೆಯಲ್ಲಿ …

Read More »

ಧರ್ಮಸ್ಥಳದ ಸಂಕೀರ್ಣ ಶ್ರೀ ಸಾನಿಧ್ಯವನ್ನು ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ದಕ್ಷಿಣ ಕನ್ನಡ: ‘ಭಾರತ ಹಿಂದೆಂದಿಗಿಂತಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವಾಗ, ಕೆಲವು ಶಕ್ತಿ ಗಳು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಅಂತಹ ಶಕ್ತಿಗಳ ಕುರುತು ಜನ ಎಚ್ಚರವಾಗಿರಬೇಕು’ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಬರುವ ಭಕ್ತರು ಸರತಿ ಸಾಲಿನಲ್ಲಿ ಸಾಗುವುದಕ್ಕಾಗಿ ಕಲ್ಪಿಸಿರುವ ಸುಧಾರಿತ ಸೌಲಭ್ಯಗಳನ್ನು ಒಳಗೊಂಡ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ವನ್ನು ಇಂದು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಜಗತ್ತೇ ನಮ್ಮ ದೇಶದತ್ತ ಮುಖ‌ಮಾಡಿದೆ. …

Read More »

ಮೃತ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಮನೆಗೆ ಸಿಐಡಿ ಡಿಐಜಿಪಿ ಭೇಟಿ

ಬೀದರ್: ಮೃತ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಅವರಿಗೆ ಸೇರಿದ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ ಗ್ರಾಮಕ್ಕೆ ಸಿಐಡಿ ಡಿಐಜಿಪಿ ಶಾಂತನು ಸಿನ್ಹಾ ಅವರು ಇಂದು ಭೇಟಿ ನೀಡಿದರು. ಸಚಿನ್‌ ಆತ್ಮಹತ್ಯೆಗೂ ಮುನ್ನ ಬರೆದ ಡೆತ್‌ನೋಟ್‌, ಪೊಲೀಸರಿಗೆ ದೂರು ಕೊಡಲು ಹೋದಾಗ ನಡೆದುಕೊಂಡ ರೀತಿಯನ್ನು ವಿಚಾರಿಸಿ ಮಾಹಿತಿ ಪಡೆದರು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಕುಟುಂಬದವರನ್ನು ವಿಚಾರಿಸಿದರು ಎಂದು ಗೊತ್ತಾಗಿದೆ. ಇದಕ್ಕೂ ಮುನ್ನ ಅವರು ಸಚಿನ್‌ ಆತ್ಮಹತ್ಯೆ ಮಾಡಿಕೊಂಡ ಬೀದರ್‌-ಹೈದರಾಬಾದ್‌ …

Read More »

ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿಯೆ ಕಾರಣ, ಗ್ಯಾರಂಟಿ ಯೋಜನೆಗಳ ಜಾರಿಯಿಂದಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೀದರ್:‌ ಬಿಜೆಪಿ ಸರ್ಕಾರದ ಕೊನೆಯ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಆರ್ಥಿಕ ನೆರವಿಲ್ಲದೆ ಕಾಮಗಾರಿ ಮಾಡಿರುವುದೇ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಕಾರಣವೇ ಹೊರತು ಗ್ಯಾರಂಟಿ ಯೋಜನೆಗಳ ಜಾರಿಯಿಂದಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗುತ್ತಿಗೆದಾರರ ಬಿಲ್ ಬಾಕಿ ಸಮಸ್ಯೆ ಪ್ರತಿ ಜಿಲ್ಲೆಗಳಲ್ಲಿಯೂ ಇದೆ. ಅವರು ಕೆಲಸ ಮಾಡಿದ್ದು, ಬಿಲ್ ಪಾವತಿಸಬೇಕಿರುವುದು ನಿಜ. ಈ ಸಮಸ್ಯೆಗೆ ಮೂಲ ಕಾರಣವನ್ನು …

Read More »

ಪ್ರಥಮ ದರ್ಜೆ ಕಾಲೇಜು ಹೊರಗುತ್ತಿಗೆ ಸಿಬ್ಬಂದಿ ಸೊಸೈಟಿ ಸ್ಥಾಪಿಸಲು ಆಗ್ರಹ

ಕಾರವಾರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಡೇಟಾ ಎಂಟ್ರಿ ಆಪರೇಟರ್, ಡಿ ದರ್ಜೆಯ ಸಿಬ್ಬಂದಿ ಸೊಸೈಟಿ ರಚಿಸಬೇಕು ಮತ್ತು ಹೊರಗುತ್ತಿಗೆ ಏಜೆನ್ಸಿಗಳ ಶೋಷಣೆ ತಪ್ಪಿಸಬೇಕು ಎಂದು ಆಗ್ರಹಿಸಿ ಉನ್ನತ ಶಿಕ್ಷಣ ಇಲಾಖೆ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಮತ್ತು ಗ್ರುಪ್-ಡಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಹೊರಗುತ್ತಿಗೆ ಸಿಬ್ಬಂದಿ ನೇಮಿಸಿಕೊಂಡಿರುವ ಏಜೆನ್ಸಿ ಕಳೆದ ಕೆಲವು ವರ್ಷಗಳಿಂದ ಕನಿಷ್ಠ …

Read More »

ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಅನುಮೋದನೆ ನೀಡಲು ಕೇಂದ್ರ ಸಚಿವ ಸಿ.ಆರ್.ಪಾಟೀಲ್ ರಿಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ನವದೆಹಲಿ: ಜಲಜೀವನ ಮಿಷನ್ ಕಾರ್ಯಕ್ರಮದ ಅಡಿಯಲ್ಲಿ ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಅನುಮೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ. ನವದೆಹಲಿಯ ಜಲಶಕ್ತಿ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಮಹತ್ವದ ಕುರಿತು ಕೇಂದ್ರ ಸಚಿವರಿಗೆ ಮನವರಿಕೆ …

Read More »

ಇಂದು ಮಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್

ಮಂಗಳೂರು : ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಉಪ ರಾಷ್ಟ್ರ ಪತಿ ಧನಕರ್ ಅವರು ತನ್ನ ಪತ್ನಿಯನ್ನು ಹತ್ತಿರಕ್ಕೆ ಕರೆದು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಪರಿಚಯಿಸಿ ಮುಂದಕ್ಕೆ ಧರ್ಮಸ್ಥಳಕ್ಕೆ ಹೋಗುವಾಗಲೂ ಚೌಟ ಅವರನ್ನು ತಮ್ಮ ಹೆಲಿಕಾಪ್ಟರ್ ನಲ್ಲಿ ಬರುವಂತೆ ಕೈ ಹಿಡಿದು …

Read More »