BigTv News
January 7, 2025
Breaking News, ಮಂಡ್ಯ
ಮಂಡ್ಯ : ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಈ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್)ಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ …
Read More »
BigTv News
January 7, 2025
Breaking News, ಮಂಡ್ಯ
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ತಾಲೂಕುಗಳಿಗೆ ಮೊಬೈಲ್ ವ್ಯಾನ್‌ಗಳ ವ್ಯವಸ್ಥೆ ಮಾಡಲಾಗುವುದು. ಇದರಿಂದ ಗ್ರಾಮೀಣ ಪ್ರದೇಶದ ಜನತೆಗೆ ಆರೋಗ್ಯ ತಪಾಸಣೆ ಮತ್ತು ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ ನೀಡಲು ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿಗೆ ತೆರಳುತ್ತಿದ್ದ ವೇಳೆ ಇಲ್ಲಿನ ವಿಶ್ವೇಶ್ವರಯ್ಯ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಅಭಿನಂದನೆಯನ್ನು ಸ್ವೀಕರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಆರೋಗ್ಯ …
Read More »
BigTv News
January 7, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ಎಸ್ಕಾಂ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಎಸ್ಕಾಂ ಸಿಬ್ಬಂದಿಗಳಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಎಂಜಿನಿಯರ್ ಗಳ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ …
Read More »
BigTv News
January 7, 2025
Breaking News, ಮೈಸೂರು
ಮೈಸೂರು: ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು. ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿದ ಸಂಸದರು ಮನವಿ ಸಲ್ಲಿಸಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃವೃದ್ಧಿ ಯೋಜನೆಗಳು ಹಾಗೂ ಇತರೆ …
Read More »
BigTv News
January 7, 2025
Breaking News, ಯಾದಗಿರಿ
ಯಾದಗಿರಿ : ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸಂಬಂಧ ಪಟ್ಟಂತೆ ಪುನರ್ ಟೆಂಡರ್ ಕರೆಯುವ ಬಗ್ಗೆ ಚಿಂತನೆ ನಡೆಸುವಂತೆ ಲೋಕೋಪಯೋಗಿ ಖಾತೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ʼಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆʼ ನಡೆಸಿ ಅವರು ಮಾತನಾಡಿದರು. ಯಾದಗಿರಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 136.29 ಕೋಟಿ ರೂ.ಗಳ ಅನುದಾನ ಮಂಜೂರು ಆಗಿದೆ. 104.04 ಕೋಟಿ ರೂ.ಗಳ ಅನುದಾನಕ್ಕೆ ಟೆಂಡರ್ …
Read More »
BigTv News
January 7, 2025
Breaking News
ನವದೆಹಲಿ: ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಸಕ್ಕರೆಯ ಎಂಎಸ್ಪಿ ಪ್ರತಿ ಕೆಜಿಗೆ 31ರೂ. ಇದೆ. ಈ ದರವನ್ನು 2019ರ ಫೆಬ್ರವರಿಯಲ್ಲಿ ನಿಗದಿಪಡಿಸಲಾಗಿತ್ತು. ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಮತ್ತು ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಆರ್ಥಿಕ ಒತ್ತಡದಿಂದಾಗಿ ದರವನ್ನು ಹೆಚ್ಚಿಸಬೇಕೆಂದು ಉದ್ಯಮ ಸಂಸ್ಥೆಗಳು ನಿರಂತರವಾಗಿ ಒತ್ತಾಯಿಸುತ್ತಿವೆ. ಈ ವಿಷಯ ಇಲಾಖೆಗೆ ತಿಳಿದಿದೆ. ಅದನ್ನು ಹೆಚ್ಚಿಸಬೇಕೇ ಅಥವಾ ಬೇಡವೇ …
Read More »
BigTv News
January 7, 2025
Breaking News, ಬೆಂಗಳೂರು
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜನವರಿ 2 ರಂದು ವಿದೇಶದಲ್ಲಿದ್ದಾಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೋಟೆಲ್‌ನಲ್ಲಿ ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲಿದ್ದಾರೆ. ಡಿ.ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಎದುರಿಸಲು ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ …
Read More »
BigTv News
January 7, 2025
Breaking News, ಬೆಂಗಳೂರು
ಬೆಂಗಳೂರು : ಅರಣ್ಯ ಅಪರಾಧ ತಡೆಗೆ ರಾಜ್ಯ ಸರ್ಕಾರ ಇದೀಗ ಮಹತ್ವದ ಅಕ್ರಮ ಕೈಗೊಂಡಿದ್ದು, ಅರಣ್ಯ ಅಪರಾಧ ತಡೆಗೆ ಆನ್ಲೈನ್ ಎಫ್‌ಐಆರ್ ವ್ಯವಸ್ಥೆಗೆ ಚಾಲನೆ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ಇಂದು ಚಾಲನೆ ನೀಡಿದರು. ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್ / ಡಿಜಿಟಲ್ FIR ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಆಧುನಿಕ …
Read More »
BigTv News
January 7, 2025
Breaking News, ಬೆಂಗಳೂರು
ಬೆಂಗಳೂರು: ಮಾರ್ಚ್ ಎರಡು ಅಥವಾ ಮೂರನೇ ವಾರದಲ್ಲಿ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಲು ಉದ್ದೇಶಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ. ಹೊಸ ವರ್ಷದ ಮೊದಲ ದಿನ ತಮ್ಮನ್ನು ಭೇಟಿಯಾದ ಉನ್ನತಾಧಿಕಾರಿಗಳ ಜತೆಗೆ ಸಮಾಲೋಚನೆ ನಡೆಸಿದ್ದ ಅವರು ಮಾರ್ಚ್‌ನಲ್ಲಿ ಬಜೆಟ್ ಮಂಡನೆ ಸುಳಿವು ನೀಡಿದ್ದರು. ಅಲ್ಲದೆ ಜ. 2ರ ಗುರುವಾರವೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ …
Read More »
BigTv News
January 7, 2025
Breaking News
ಕೋಲಾರ: ನಗರದ ತಾಲ್ಲೂಕು ಕಚೇರಿಯಲ್ಲಿ ಡಿಜಿಟಲೀಕರಣ ವ್ಯವಸ್ಥೆಗಾಗಿ ‘ಅಭಿಲೇಖಾಲಯ’ವನ್ನು ಉಸ್ತುವಾರಿ ಸಚಿವ ಬೈರತಿ ಸುರೇಶ್ ಸೋಮವಾರ ಉದ್ಘಾಟಿಸಿದರು. ತ್ವರಿತಗತಿಯಲ್ಲಿ ಸೇವೆ ಒದಗಿಸಲು, ದಾಖಲೆಗಳನ್ನು ರಕ್ಷಿಸಿಡಲು ಕಂದಾಯ ಇಲಾಖೆಯು ‘ಭೂ ಸುರಕ್ಷಾ’, ‘ಭೂ ದಾಖಲೆಗಳ ಇ-ಖಜಾನೆ’ ವ್ಯವಸ್ಥೆ ಮೂಲಕ ತಾಲ್ಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ವ್ಯವಸ್ಥೆ ಜಾರಿ ಮಾಡುತ್ತಿದೆ. ಹಳೆಯ ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತನೆಯಾಗಲಿದ್ದು, ರೆಕಾರ್ಡ್ ರೂಂಗಳಿಂದ …
Read More »