Breaking News

Breaking News

ಬೀದರ್: ಪ್ರತಿ ಕ್ವಿಂಟಾಲ್ ತೊಗರಿಗೆ ₹12 ಸಾವಿರ ನೀಡಿ; ರಾಜ್ಯ ರೈತ ಸಂಘದಿಂದ ಮನವಿ

ಬೀದರ್‌: ‘ಪ್ರತಿ ಕ್ವಿಂಟಲ್‌ ತೊಗರಿಗೆ ಕೇಂದ್ರ ಸರ್ಕಾರ ₹7,550 ನೀಡುತ್ತಿದೆ. ರಾಜ್ಯ ಸರ್ಕಾರ ಅದಕ್ಕೆ ₹4,500 ಸಹಾಯ ಧನ ಸೇರಿಸಿ, ಒಟ್ಟು ₹12,050 ನೀಡಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಂಘದ ಮುಖಂಡರು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು. ಜಿಲ್ಲೆಯಲ್ಲಿ ಮಳೆಗೆ ತೊಗರಿ ಬೆಳೆ ಸಂಪೂರ್ಣ ಹಾಳಾಗಿದೆ. …

Read More »

ಮೈಯಾನ್ ಸಮ್ಮಾನ್ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್‌

ನವದೆಹಲಿ: ತಮ್ಮ ಚುನಾವಣಾ ಭರವಸೆಯನ್ನು ಈಡೇರಿಸಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಸೋಮವಾರ ನಮ್ಕುಮ್ ನಲ್ಲಿ ಆಯೋಜಿಸಲಾಗಿದ್ದ ‘ಮೈಯಾನ್ ಸಮ್ಮಾನ್ ಯೋಜನೆ’ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ, 56.61 ಲಕ್ಷ ಮಹಿಳಾ ಫಲಾನುಭವಿಗಳಿಗೆ ಎರಡು ತಿಂಗಳ ಆರ್ಥಿಕ ನೆರವಾದ 5,000 ರೂ.ಅನ್ನು ವರ್ಗಾಯಿಸಿದರು. ಈ ಕಾರ್ಯಕ್ರಮದಲ್ಲಿ ಮಹಿಳಾ ಫಲಾನುಭವಿಗಳ ಖಾತೆಗಳಿಗೆ 1,415.44 ಕೋಟಿ ರೂ. ಮೊತ್ತದ ಆರ್ಥಿಕ ನೆರವನ್ನು ಅವರು ವರ್ಗಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೇಮಂತ್ ಸೊರೇನ್, “ನಾವು …

Read More »

ಕಂದಾಯ ಜಮೀನಿನಲ್ಲಿ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್‌ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ‌ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು. ನಗರ …

Read More »

ಸಾರಿಗೆ ನೌಕರರ ಆರೋಗ್ಯ ಸರ್ಕಾರದ ಜವಾಬ್ದಾರಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗದುರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಬೇಕೆಂಬ ಸಾರಿಗೆ ನಿಗಮದ ನೌಕರರ ಬಹು ವರ್ಷಗಳ ಬೇಡಿಕೆ ಈಡೇರಿದ್ದು, ಸಿಬ್ಬಂದಿಗೂ ಸಂತೃಪ್ತಿ ತಂದಿದೆ. ಸಾರಿಗೆ ನಿಗಮಗಳ ಆದಾಯ ಹೆಚ್ಚಿಸಲು ದುಡಿಯುತ್ತಿರುವ ನೌಕರರ ಆರೋಗ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಆರೋಗ್ಯ ಯೋಜನೆಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು 275 ಆಸ್ಪತ್ರೆಗಳ ಜತೆಗೆ ಒಪ್ಪಂದ ಮಾಡಿಕೊಂಡಿದ್ದು, …

Read More »

ದೇಶದ ವಿವಿಧ ರೈಲ್ವೆ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಶಂಕುಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ದೇಶದ ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಅವರು, ಜಮ್ಮು ವಿಭಾಗದಲ್ಲಿ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ಉಪಕ್ರಮವಾಗಿ ಜಮ್ಮು ರೈಲ್ವೆ ವಿಭಾಗ, ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಸಹ ಉದ್ಘಾಟಿಸಿದರು ಹಾಗೂ ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗದ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಜಮ್ಮು ರೈಲ್ವೇ ವಿಭಾಗದ ರಚನೆಯಿಂದಾಗಿ ಜಮ್ಮು …

Read More »

ಪೊಲೀಸ್ ಇಲಾಖೆಗೆ ನಕಲಿ ದಾಖಲೆ ನೀಡಿದ ಪ್ರಕರಣ: ಪಿಎಸ್ಐ ಅಮಾನತುಗೊಳಿಸಿ ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣೆ ಸಬ್​ಇನ್ಸ್​​ಪೆಕ್ಟರ್​ ಕಾಶಿಲಿಂಗೇಗೌಡರನ್ನು ಅಮಾನತು ಮಾಡಿ, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್​ ಆದೇಶ ಹೊರಡಿಸಿದ್ದಾರೆ. ನಕಲಿ ದಾಖಲೆ ನೀಡಿದ ಸಂಬಂಧ ವಿಧಾನಸೌಧ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಸಬ್​ಇನ್ಸ್​​ಪೆಕ್ಟರ್​ ಕಾಶಿಲಿಂಗೇಗೌಡ ಜಾಮೀನು‌ ಪಡೆದುಕೊಂಡಿದ್ದರು. ನಂತರ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಇದೀಗ ಪಿಎಸ್​ಐ ಅಮಾನತು ಮಾಡಲಾಗಿದೆ. ನಕಲಿ ಜನ್ಮ ದಿನಾಂಕ ಹೊಂದಿರುವ ದಾಖಲೆಯನ್ನು …

Read More »

2025-26 ಬಜೆಟ್ ಮಂಡನೆಗೆ ದಿನಗಣನೆ ಆರಂಭ: ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿಗೆ ನಿರೀಕ್ಷೆ

ಬೆಂಗಳೂರು: 2025-26 ನೇ ಸಾಲಿನ ಬಜೆಟ್‌ ಅನ್ನು ಹಣಕಾಸು ಇಲಾಖೆಯ ಜವಾಬ್ದಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 14 ರಂದು ಮಂಡಿಸಲಿದ್ದು, ಇದು ಸಿದ್ದರಾಮಯ್ಯ ಅವರ 16ನೇ ದಾಖಲೆಯ ಬಜೆಟ್‌ ಮಂಡನೆಯಾಗಿರಲಿದೆ. ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್‌ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್‌ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್‌ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್‌ ಆಗಿತ್ತು. …

Read More »

ದೆಹಲಿಯಲ್ಲಿ ಕಾಂಗ್ರೆಸ್ ನಿಂದ ಮಹಿಳೆಯರಿಗೆ ಪ್ರತಿ ತಿಂಗಳು ₹2,500: ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ಘೋಷಿಸಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಜನರಿಗೆ ನೀಡಲಿರುವ ಗ್ಯಾರಂಟಿ ಯೋಜನೆಯನ್ನು ಅನಾವರಣಗೊಳಿಸಿದರು. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ಅವರು, ದೆಹಲಿಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ಯಾರಿ ದೀದಿ ಯೋಜನೆ ಜಾರಿ ಮಾಡಲಿದ್ದೇವೆ. ಇದರ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು ₹2,500 ನೀಡುತ್ತೇವೆ‌. ಪಕ್ಷ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಾಡಿದ ಹಾಗೆಯೇ ಮೊದಲ ಸಚಿವ …

Read More »

ಬೀದರ್: ಪಿಎಂಎವೈ-ಜಿ ಮನೆ ಮಂಜೂರಾತಿ ತಿಳುವಳಿಕೆ ಪತ್ರ ವಿತರಿಸಿದ ಸಂಸದ ಸಾಗರ್ ಖಂಡ್ರೆ

ಬೀದರ್ : ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಯೋಗದ 2024-25 ವರ್ಷದ ಪಿ.ಎಂ.ಎ.ವೈ (ಜಿ) ಮನೆ ಮಂಜೂರಾತಿ ಪಡೆದ ಫಲಾನುಭವಿಗಳಿಗೆ ಸಂಸದ ಸಾಗರ್ ಖಂಡ್ರೆ ಅವರು ಭಾಲ್ಕಿಯಲ್ಲಿ ಮನೆ ಮಂಜೂರಾತಿ ತಿಳುವಳಿಕೆ ಪತ್ರ ವಿತರಿಸಿದರು. ತಿಳುವಳಿಕೆ ಪತ್ರ ವಿತರಿಸಿ ಮಾತನಾಡಿದ ಅವರು, ನಾವು ಫಲಾನುಭವಿಗಳಿಗೆ ಮನೆ ಮಂಜೂರಾತಿ ತಿಳುವಳಿಕೆ ಪತ್ರ ವಿತರಿಸುತ್ತಿದ್ದೇವೆ. ಪಿ.ಎಂ.ಎ.ವೈ (ಜಿ) ಯೋಜನೆಯ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ಇಲ್ಲ. ಹಾಗಾಗಿ ಫಲಾನುಭವಿಗಳಿಗೆ ಯಾವುದೇ ರೀತಿಯ ವಂಚನೆಯಾಗಬಾರದು …

Read More »

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ. ಡೀಸೆಲ್, ಪೆಟ್ರೋಲ್ ದರ ಹೆಚ್ಚಳವಾದಾಗ ಎಲ್ಲ ವಸ್ತುಗಳೂ ದುಬಾರಿ ಆಗುತ್ತವೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಸಹ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ 1 ಲೀಟರ್ ಡೀಸೆಲ್ ಅನ್ನು ₹30ರಿಂದ ₹40ಕ್ಕೆ ಕೊಡಬಹುದು. ರಿಲಯನ್ಸ್ ಪೆಟ್ರೋಲ್ ಬಂಕ್ ಉಳಿಯಬೇಕು ಎನ್ನುವ ಉದ್ದೇಶದಿಂದ ಪೆಟ್ರೋಲ್, ಡಿಸೇಲ್ …

Read More »