BigTv News
January 6, 2025
Breaking News, ಬೆಂಗಳೂರು
ಬೆಂಗಳೂರು: ತಮ್ಮ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿರುವ ಮೇಲ್ಮನೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಈಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಿದ್ದಾರೆ. ಈ ಕುರಿತು ಆಯೋಗಕ್ಕೆ 14 ಪುಟಗಳ ಪತ್ರ ಬರೆದಿರುವ ಅವರು, 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದು, ಈ ಪೈಕಿ ನಾಲ್ಕು ಬೇಡಿಕೆಗಳನ್ನು ತತ್‌ಕ್ಷಣ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ. ಜತೆಗೆ ನಕಲಿ ಎನ್‌ಕೌಂಟರ್ ಮಾಡಿ ನನ್ನ ತವರೂರಿಗೆ ಶವ ಕಳುಹಿಸಲು ಯೋಜಿಸಿದ್ದರು, ಬೆಳಗಾವಿಯ …
Read More »
BigTv News
January 6, 2025
Breaking News, ಬೆಂಗಳೂರು
ಬೆಂಗಳೂರು : ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನವರನ್ನು ಸಂಸದ ಯದುವೀರ್ ಕೃಷ್ಣ ಚಾಮರಾಜ ಒಡೆಯರ್ ಅವರು ಭೇಟಿಯಾಗಿದ್ದು, ಹೂಗುಚ್ಛ ನೀಡಿ ಗೌರವಿಸಲಾಯಿತು. ಈ ವೇಳೆ ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು. ಬಳಿಕ ಮೈಸೂರು ಹಾಗೂ ಕೊಡಗು ಅಭಿವೃದ್ದಿಯ ಬಗ್ಗೆ ಕೆಲ ಕಾಲ ಮಾತನಾಡಿದ್ದಾರೆ. ಕಳೆದ ಎರಡ್ಮೂರು …
Read More »
BigTv News
January 6, 2025
Breaking News, ಬೆಂಗಳೂರು
ಬೆಂಗಳೂರು: ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದರು. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಸಾರಿಗೆ ನೌಕರರು ತಮ್ಮ ದುಡಿಮೆಯ ಮೂಲಕ ಸಂಸ್ಥೆಯ ಮತ್ತು ನಿಗಮದ ಆದಾಯ ಹೆಚ್ಚಿಸುತ್ತಿದ್ದಾರೆ. ಇವರ ಆರೋಗ್ಯ …
Read More »
BigTv News
January 6, 2025
Breaking News
ನವದೆಹಲಿ: 2030 ರ ವೇಳೆಗೆ ಜವಳಿ ಉದ್ಯಮವು 300 ಬಿಲಿಯನ್ ಡಾಲರ್ ಮಾರುಕಟ್ಟೆ ಗಾತ್ರವನ್ನು ತಲುಪಲು ಮತ್ತು ಜವಳಿ ಮೌಲ್ಯ ಸರಪಳಿಯಲ್ಲಿ 6 ಕೋಟಿ ಜನರಿಗೆ ಉದ್ಯೋಗವನ್ನು ಒದಗಿಸಲು ಜವಳಿ ಉದ್ಯಮಕ್ಕೆ ಸಹಾಯ ಮಾಡಲು ಜವಳಿ ಸಚಿವಾಲಯ ಬದ್ಧವಾಗಿದೆ ಎಂದು ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜವಳಿ ಸಚಿವ ಸಿಂಗ್ ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಹೊಸ …
Read More »
BigTv News
January 6, 2025
Breaking News, ಮಂಗಳೂರು
ಮಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಇಂದು ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥಾ ನಡೆಯಿತು. ವೇಳೆ ಅಮಿತ್ ಶಾ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ರಾಜೀನಾಮೆಗೆ ಒತ್ತಾಯಿಸಿದರು. ಬೆಳಗ್ಗೆ ನಗರದ ಅಂಬೇಡ್ಕರ್ ವೃತ್ತದಿಂದ (ಹಳೆ ಜ್ಯೋತಿ ಸರ್ಕಲ್) ಮಿನಿ ವಿಧಾನಸೌಧದ ವರೆಗೆ ‘ಸಂವಿಧಾನ ಸಂರಕ್ಷಣಾ …
Read More »
BigTv News
January 6, 2025
Breaking News
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷವು ಇದೀಗ ದೆಹಲಿಯಲ್ಲೂ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್, ‘ಪ್ಯಾರಿ ದೀದಿ’ ಯೋಜನೆಗೆ ಚಾಲನೆ ನೀಡಲು ಬಂದಿದ್ದೇನೆ, ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತದೆ ಮತ್ತು ಮಹಿಳೆಯರಿಗೆ 2,500 ರೂಪಾಯಿ ನೀಡುತ್ತೇವೆ ಎಂಬ ವಿಶ್ವಾಸವಿದೆ ಮತ್ತು ಅದನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ನಾವು …
Read More »
BigTv News
January 6, 2025
Breaking News, ರಾಯಚೂರು
ರಾಯಚೂರು: ಸದ್ಯಕ್ಕೆ ಮುಖ್ಯಮಂತ್ರಿಗಳು ಇದ್ದಾರೆ ಸಿಎಂ ಬದಲಾವಣೆ ವಿಚಾರ ಬರುವುದಿಲ್ಲ. 2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ ಕಾದು ನೋಡಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಹಸ್ಯ ಸಭೆ ಏನು ಇರಲಿಲ್ಲ. ಎಲ್ಲರೂ ಕೂಡಿಯೇ ಸಭೆ ಮಾಡಿದ್ದು, ರಹಸ್ಯ ಸಭೆ ಎನ್ನುವ ಪ್ರಶ್ನೆಯೇ ಇಲ್ಲ. ಅದು ಊಟದ ಸಭೆ ಅಷ್ಟೇ. ಸಭೆಯಲ್ಲಿ ಅಂಥದ್ದೇನು ಚರ್ಚೆ ಯಾವುದು ಆಗಿಲ್ಲ. ಸಂಪುಟ ವಿಸ್ತರಣೆಯೂ ಇಲ್ಲ …
Read More »
BigTv News
January 6, 2025
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕಕ್ಕೂ HMPV ವೈರಸ್ ಕಾಲಿಟ್ಟಿದೆ ಎನ್ನಲಾಗಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ. ಇಂದು ಸಚಿವರು ಸಭೆ ಕರೆದಿದ್ದು, ವೈರಸ್ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ. ವೈರಸ್ ಬಗ್ಗೆ ಜಾಗೃತಿ ವಹಿಸಲು ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆ …
Read More »
BigTv News
January 6, 2025
Breaking News, ಮಹಾರಾಷ್ಟ್ರ
ಮುಂಬೈ: ಮಹಾರಾಷ್ಟ್ರ ಸರಕಾರವು ಮುಖ್ಯಮಂತ್ರಿ ʼಮಾಝಿ ಲಾಡ್ಕಿ ಬಹೀಣʼ ಯೋಜನೆಯ 2.63 ಕೋಟಿ ಫಲಾನುಭವಿಗಳ ಪಟ್ಟಿಯನ್ನು ಪುನರ್‌ಪರಿಶೀಲಿಸಲು ಮತ್ತು ಇತರ ಕಲ್ಯಾಣ ಯೋಜನೆಗಳಡಿ ಲಾಭಗಳನ್ನು ಪಡೆಯುತ್ತಿರುವವರನ್ನು ಪಟ್ಟಿಯಿಂದ ಕೈಬಿಡಲು ನಿರ್ಧರಿಸಿದೆ. ಹಿಂದಿನ ಏಕನಾಥ ಶಿಂದೆ ನೇತೃತ್ವದ ಸರಕಾರವು ಕಳೆದ ವರ್ಷದ ಆಗಸ್ಟ್‌ನಲ್ಲಿ ಆರಂಭಿಸಿದ್ದ ಲಾಡ್ಕಿ ಬಹೀಣ ಯೋಜನೆಯಡಿ ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂ.ಗಳ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ. ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಮಹಾಯುತಿ ಮೈತ್ರಿಕೂಟವು ತಾನು ಅಧಿಕಾರಕ್ಕೆ ಮರಳಿದರೆ …
Read More »
BigTv News
January 6, 2025
Breaking News, ಬೆಂಗಳೂರು
ಬೆಂಗಳೂರು: ಪ್ರವರ್ಗ-1ರಲ್ಲಿರುವ ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಲ್ಲಿನ ಅರಮನೆ ಮೈದಾನದಲ್ಲಿ ಭಾನುವಾರ ಬೆಂಗಳೂರಿನ ಮೊಗವೀರ ಸಂಘ ಆಯೋಜಿಸಿದ್ದ ‘ಬೃಹತ್ ಮೊಗವೀರ ಸಮಾವೇಶ- ಸುವರ್ಣ ಪಥ’ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮೊಗವೀರ ಅಥವಾ ಕೋಲಿ ಸಮಾಜ, ಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕು ಎಂದು ಕುಲಾಶಾಸ್ತ್ರ ಅಧ್ಯಯನ ಮಾಡಿಸಿದ್ದೆ. ಕೇಂದ್ರಕ್ಕೆ ಶಿಫಾರಸು ಮಾಡಿದ್ದೆ. ಆದರೆ ಕೇಂದ್ರ …
Read More »