Breaking News

Breaking News

ಇದೇ 7 ರಿಂದ ಆಶಾ ಕಾರ್ಯಕರ್ತೆಯರ ಮುಷ್ಕರ: ರಜೆ ನೀಡದಿರಲು ಸೂಚನೆ

ಬೆಂಗಳೂರು: ‘ಆಶಾ’ ಕಾರ್ಯಕರ್ತೆಯರು ಇದೇ 7ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವುದರಿಂದ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯು ತನ್ನ ಅಧಿಕಾರಿಗಳಿಗೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಕಾನೂನುಬಾಹಿರವಾಗಿ ಆಶಾ ಕಾರ್ಯಕರ್ತೆಯರು ಹೋರಾಟದಲ್ಲಿ ಭಾಗವಹಿಸದಂತೆ ಜಿಲ್ಲಾಡಳಿತ ಮನವೊಲಿಸಬೇಕು. 7 ರಿಂದ ಕರ್ತವ್ಯಕ್ಕೆ ಗೈರಾಗುವ ಆಶಾ ಕಾರ್ಯಕರ್ತೆಯರ ಮಾಹಿತಿಯನ್ನು ಪಡೆಯಬೇಕು. ಸೇವೆ ಒದಗಿಸಲು ತೊಡಕಾದ ಸ್ಥಳಗಳಲ್ಲಿ ಈಗಾಗಲೇ ಇಲಾಖೆಯಿಂದ ನೀಡಿರುವ ಮಾನದಂಡದಂತೆ …

Read More »

ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ನರೇಂದ್ರ ಮೋದಿ ರವಿವಾರ ಭರವಸೆ ನೀಡಿದ್ದಾರೆ. ಆದರೆ, ಆ ಯೋಜನೆಗಳ ಅನುಷ್ಠಾನದಲ್ಲಿ ನಡೆಯುವ ಭ್ರಷ್ಟಾಚಾರವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ತನ್ನ ಸರಕಾರ ಕಾರ್ಯ ನಿರ್ವಹಿಸಲಿದೆ ಎಂದು ಅವರು ಹೇಳಿದರು. ದಿಲ್ಲಿಯ ರೋಹಿಣಿ ಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯ ಸಂದರ್ಭ ನರೇಂದ್ರ ಮೋದಿ ಅವರು ಈ ಹೇಳಿಕೆ ನೀಡಿದ್ದಾರೆ. ದಿಲ್ಲಿಯ ಆಮ್ ಆದ್ಮಿ ಪಕ್ಷದ ಸರಕಾರವನ್ನು ಕಟುವಾಗಿ …

Read More »

ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು: ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಹಾಗೂ ಓರ್ವ ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಹೆಚ್ಚುವರಿ ಹೊಣೆಗಾರಿಕೆ: ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಏಕ್‍ರೂಪ್ ಕೌರ್ ಅವರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕೆಪಿಎಸ್‌ಸಿ ಕಾರ್ಯದರ್ಶಿ ರಮಣ್‍ದೀಪ್ ಚೌಧರಿ …

Read More »

ನಮ್ಮ ಸರ್ಕಾರದಿಂದ ಜಾತಿ ಗಣತಿ ಜಾರಿ ಮಾಡೇ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ ಮಾಡಿದ್ದು, ತಮ್ಮ ಹಳೇ ಖದರ್‌ನಲ್ಲಿ ಜಾತಿ ಗಣತಿ ಜಾರಿ ಮಾಡೇ ಮಾಡ್ತೀವಿ ಎಂದಿದ್ದಾರೆ. ಕನಕ ಜಯಂತೋತ್ಸವದಲ್ಲಿ ಮಾತನಾಡಿದ ಮುಖ್ಯಮಂತ್ರಿ ನಾನು ಯಾವಾಗಲು ಜಾತಿಗಣತಿ ಪರವಾಗಿರುವವನು. ಸಮ ಸಮಾಜದ ನಿರ್ಮಾಣ ಮಾಡಬೇಕೆಂಬುದು ನನ್ನ ಕನಸು ಎಂದು ಹೇಳಿದರು. ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಕನಕ ಜಯಂತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತಾಡಿದ ಸಿಎಂ, ಟೇಬಲ್ ಕುಟ್ಟಿ ಕಾಂತರಾಜು ವರದಿ ಅನುಷ್ಠಾನಕ್ಕೆ ನಾನು …

Read More »

ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್: 15,000 ಪ್ರೋತ್ಸಾಹಧನಕ್ಕೆ ಅವಕಾಶವಿಲ್ಲವೆಂದು ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ …

Read More »

ಕೋರ್ಟ್ ತೀರ್ಪಿನ ಬಳಿಕ ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳ ಚುನಾವಣೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: 60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಹೇಳಿದ್ದಾರೆ. ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. …

Read More »

ಒಳ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. …

Read More »

ತೆಲಂಗಾಣ: ಒಂದೇ ವರ್ಷದಲ್ಲಿ 55 ಸಾವಿರ ಸರ್ಕಾರಿ ನೌಕರರ ನೇಮಕ; ಮುಖ್ಯಮಂತ್ರಿ ರೇವಂತ್ ರೆಡ್ಡಿ

ಹೈದರಾಬಾದ್: ಒಂದೇ ವರ್ಷದಲ್ಲಿ 55,143 ಸರ್ಕಾರಿ ನೌಕರರನ್ನು ನೇಮಕ ಮಾಡುವ ಮೂಲಕ ತಮ್ಮ ಸರ್ಕಾರ ದೇಶದಲ್ಲಿಯೇ ಅಭೂತಪೂರ್ವ ಸಾಧನೆ ಮಾಡಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ ಹೇಳಿದ್ದಾರೆ. ರಾಜೀವ್‌ ಗಾಂಧಿ ನಾಗರಿಕ ಸೇವಾ ಅಭಯ ಹಸ್ತಂ’ ಯೋಜನೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗೆ ₹1 ಲಕ್ಷ ಚೆಕ್‌ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗ ನೇಮಕಾತಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದ …

Read More »

ಚಿತ್ರದುರ್ಗ: ಬೆಳೆವಿಮೆ ಯೋಜನೆಯಡಿ ರೈತರಿಗೆ ₹23.33 ಕೋಟಿ ರೂ. ವಿಮಾ ಮೊತ್ತ ಬಿಡುಗಡೆ

ಚಿತ್ರದುರ್ಗ: 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆವಿಮೆ ಯೋಜನೆಯಡಿ ಜಿಲ್ಲೆಯ 3,584 ರೈತರಿಗೆ ₹ 23.33 ಕೋಟಿ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿ ವತಿಯಿಂದ ವಿಮಾದಾರರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ತೋಟಗಾರಿಕೆ ಬೆಳೆಗಳಾದ ಅಡಿಕೆ, ಮಾವು ಮತ್ತು ದಾಳಿಂಬೆ ಬೆಳೆಗೆ ಜಿಲ್ಲೆಯ 3,648 ರೈತರು₹ 2.26 ಕೋಟಿ ಪ್ರೀಮಿಯಂ ಪಾವತಿಸಿ ನೋಂದಾಯಿಸಿಕೊಂಡಿದ್ದರು. ಈ ಪೈಕಿ 3584 ರೈತರಿಗೆ ₹ …

Read More »

ಹುಬ್ಬಳ್ಳಿ ವಿಭಾಗೀಯ ರೈಲ್ವೆ ನೂತನ ವ್ಯವಸ್ಥಾಪಕರಾಗಿ ಬೇಲಾ ಮೀನಾ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ ವಿಭಾಗೀಯ ರೈಲ್ವೆ ನೂತನ ವ್ಯವಸ್ಥಾಪಕರಾಗಿ ಬೇಲಾ ಮೀನಾ ಅವರು ಅಧಿಕಾರ ಸ್ವೀಕರಿಸಿದರು. ಈ ಮೂಲಕ ಹುಬ್ಬಳ್ಳಿಯ ವಿಭಾಗೀಯ ನೈರುತ್ಯ ರೈಲ್ವೆಯ ವ್ಯವಸ್ಥಾಪಕರಾಗಿ ಬೇಲಾ ಮೀನಾ ಗದ್ದುಗೆಗೇರಿದ್ದಾರೆ. ಬೇಲಾ ಮೀನಾ ಅವರು ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ನೂತನ ವ್ಯವಸ್ಥಾಪಕರಾಗಿ (DRM) ಅಧಿಕಾರ ಸ್ವೀಕರಿಸಿದರು. ಇವರು 1996ರ ಬ್ಯಾಚ್‌ನ ಭಾರತೀಯ ರೈಲ್ವೆ ಸಂಚಾರ ಸೇವೆಯ (IRTS) ಅಧಿಕಾರಿಯಾಗಿದ್ದು, 1997ರ ಸೆಪ್ಟೆಂಬರ್ 4ರಂದು ಭಾರತೀಯ ರೈಲ್ವೆಯಲ್ಲಿ ತಮ್ಮ ವೃತ್ತಿ ಜೀವನ …

Read More »