BigTv News
January 4, 2025
Breaking News
ನವದೆಹಲಿ: ಬಜೆಟ್ ಅಂಗವಾಗಿ ಶನಿವಾರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ವರ್ಚುವಲ್ ಸಭೆಯ ಮೂಲಕ ಕೃಷಿ ಯೋಜನೆಗಳ ಬಗ್ಗೆ ಪರಾಮರ್ಶೆ ನಡೆಸಿದರು. ಹಾಲಿ ಇರುವ ಯೋಜನೆಗಳು ಮತ್ತು ಬಜೆಟ್‌ನಲ್ಲಿ ಕೃಷಿಗೆ ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳ ಕೃಷಿ ಸಚಿವರಿಂದ ಸಲಹೆ ಪಡೆದರು. ಸರ್ಕಾರವು ಕೃಷಿ ವಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಆರು ಅಂಶಗಳ ಕಾರ್ಯತಂತ್ರ ರೂಪಿಸಿದೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ (ಐಸಿಎಆರ್) ಹೊಸ ತಳಿ …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು: ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ 2022-23 ರಿಂದ 2024-25 ನೇ ಸಾಲಿನವರೆಗೆ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಮೀನುಗಾರಿಕಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ. ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.90 ಹೆಕ್ಟೇರ್ಗೆ ಸಾಮಾನ್ಯ 3.10 ಹೆಕ್ಟೇರ್ …
Read More »
BigTv News
January 4, 2025
Breaking News, ಬೀದರ್
ಬೀದರ್ : ಭಾಲ್ಕಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತೋಟಗಾರಿಕೆ ಇಲಾಖೆಯ ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ ರೈತರ ಆರ್ಥಿಕ ಪ್ರಗತಿಗೆ ಮಹತ್ವದ ಕಾರಣವಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ತೋಟಗಾರಿಕೆ ಮಾದರಿ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆಹಾಕಬೇಕು. ಸರ್ಕಾರ ಈ ಮೂಲಕ ರೈತರ ಕೈಗೆ ಪ್ರೋತ್ಸಾಹ ಹಾಗೂ ಬೆಂಬಲ ನೀಡುತ್ತಿದೆ …
Read More »
BigTv News
January 4, 2025
Breaking News, ಮೈಸೂರು
ಮೈಸೂರು: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಮಾಡಬೇಕು’ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ತಮ್ಮ ಅಧ್ಯಕ್ಷತೆಯಲ್ಲಿ ಮೊದಲಿಗೆ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ’ (ದಿಶಾ) ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರದಿಂದ ದೇಶದ ಪ್ರಗತಿಗೆ ಪೂರಕವಾದ ಹಲವು …
Read More »
BigTv News
January 4, 2025
Breaking News
ನವದೆಹಲಿ: ಗ್ರಾಮೀಣ ಜನರಿಗೆ ಗೌರವಯುತ ಜೀವನವನ್ನು ಒದಗಿಸುವ ಆದ್ಯತೆಯೊಂದಿಗೆ ಕೇಂದ್ರ ಸರ್ಕಾರವು ಗ್ರಾಮೀಣ ಭಾರತಕ್ಕೆ 2014 ರಿಂದ ನಿರಂತರವಾಗಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ನವದೆಹಲಿಯಲ್ಲಿ ನಡೆದ ಗ್ರಾಮೀಣ ಭಾರತ ಮಹೋತ್ಸವ -2025 ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ಕಾರ್ಯಕ್ರಮಗಳು ರೈತರು, ಬಡವರು ಮತ್ತು ಯುವ ಜನಾಂಗದ ಸಬಲೀಕರಣಕ್ಕೆ ಪೂರಕವಾಗಿವೆ. ಗ್ರಾಮೀಣ ಮೂಲಸೌಕರ್ಯಗಳನ್ನು ಹೆಚ್ಚಿಸಲು, ಸ್ವಾವಲಂಬಿ ಆರ್ಥಿಕತೆಯನ್ನು ಸೃಷ್ಟಿಸಲು …
Read More »
BigTv News
January 4, 2025
Breaking News
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ (ಜನವರಿ 5) ದೆಹಲಿಯಲ್ಲಿ 12,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದು, ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸುವ ಮೂಲಕ ನಾಳೆಯ ದಿನವನ್ನು ಪ್ರಾರಂಭಿಸುತ್ತಾರೆ. ಇದು ಸಾಹಿಬಾಬಾದ್ ಆರ್‌ಆರ್‌ಟಿಎಸ್ ನಿಲ್ದಾಣದಿಂದ ಬೆಳಿಗ್ಗೆ 11 ಗಂಟೆಗೆ ಹೊರಟು ನ್ಯೂ ಅಶೋಕ್ ನಗರ ಆರ್‌ಆರ್‌ಟಿಎಸ್ ನಿಲ್ದಾಣಕ್ಕೆ ಪ್ರಯಾಣಿಸುತ್ತದೆ. ಸಾಹಿಬಾಬಾದ್ ಮತ್ತು ನ್ಯೂ ಅಶೋಕ್ …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ ಲೈನ್ ಮೂಲಕ ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಕೌನ್ಸೆಲಿಂಗ್ ಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಜನವರಿ- ಫೆಬ್ರವರಿಯಲ್ಲಿ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಪ್ರಾಧ್ಯಾಪಕರಿಗೆ ಹಂಚಿಕೆಯಾಗಿ ಉಳಿಕೆಯಾಗುವ ಕಾರ್ಯಭಾರಕ್ಕೆ ಅನುಕೂಲವಾಗಿ ನೇಮಕ ಮಾಡುವಂತೆ ಸೂಚನೆ …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಜವಳಿ ಉದ್ದಿಮೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ವೈಯಕ್ತಿಕ ಫಲಾನುಭವಿ/ ಪಾಲುದಾರಿಕೆ ಸಂಸ್ಥೆ / ಕಂಪನಿ/ ಜವಳಿ ಸಹಕಾರ ಸಂಘ / ಸಂಸ್ಥೆಯ …
Read More »
BigTv News
January 4, 2025
Breaking News, ಜೈಪುರ
ಜೈಪುರ: ಸೂಫಿ ಸಂತ ಅಜ್ಮೀರ್‌ನ ಖಾಜಾ ಮೊಯಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ ‘ಚಾದರ್’ ಅನ್ನು ಅವರ ಪರವಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ದರ್ಗಾಕ್ಕೆ ಇಂದು ಸಮರ್ಪಿಸಿದರು. ಅಜ್ಮೀರ್ ಷರೀಫ್ ಉರುಸ್: ದರ್ಗಾಕ್ಕೆ ಅರ್ಪಿಸಲು ಚಾದರ್ ನೀಡಿದ ಪ್ರಧಾನಿ ಮೋದಿ, ಭಾರಿ ಭದ್ರತೆಯೊಂದಿಗೆ ಸಚಿವರು ದರ್ಗಾಕ್ಕೆ ಆಗಮಿಸಿದರು. ದೆಹಲಿಯಿಂದ ಜೈಪುರಕ್ಕೆ ವಿಮಾನದಲ್ಲಿ ಬಂದ ಅವರು, ಬಳಿಕ ಅಲ್ಲಿಂದ ರಸ್ತೆ ಮಾರ್ಗದ ಮೂಲಕ …
Read More »
Shaikh BigTv
January 4, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಧಾರವಾಡ ಮಹಾನಗರ ಪಾಲಿಕೆ ಸ್ಥಾಪನೆಗೆ ಸಂಪುಟದಲ್ಲಿ ಅನುಮೋದನೆ ನೀಡಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಅಭಿವೃದ್ಧಿಗೆ ಒತ್ತು, ಮಹತ್ವದ ಘೋಷಣೆಗಳು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ ಎನ್ನುವುದಕ್ಕೆ ಧಾರವಾಡ ಪ್ರತ್ಯೇಕ ಪಾಲಿಕೆ ನಿರ್ಣಯ ಮತ್ತೊಂದು ನಿದರ್ಶನ’ ಎಂದು ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಪರ ಮತ್ತು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಬಿಜೆಪಿ …
Read More »