BigTv News
August 14, 2026
Breaking News, Crime
ದೊಡ್ಡಬಳ್ಳಾಪುರ: ಸರ್ಕಾರಿ ಖಾಲಿ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಭೀಕರ ಗಲಾಟೆ ನಡೆದಿದ್ದು, ಮಹಿಳೆಯರ ಮೇಲೆ ಮಚ್ಚು ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಮಾಕಳಿದುರ್ಗದಲ್ಲಿ ನಡೆದಿದೆ. ಮುನಿಲಕ್ಷ್ಮಮ್ಮ ಅವರ ಮನೆಯ ಪಕ್ಕದ ಸರ್ಕಾರಿ ಜಾಗ ತಮ್ಮದೆಂದು ಕುಮಾರ್ ಮತ್ತು ಸುರೇಶ್ ವಾದಿಸಿದ್ದು, ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಮನೆಯಲ್ಲಿದ್ದ ಮಹಿಳೆಯರಾದ ಮುನಿರತ್ನಮ್ಮ ಹಾಗೂ ವರಲಕ್ಷ್ಮಿ ಮೇಲೆ ಆರೋಪಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. …
Read More »
BigTv News
August 14, 2026
Breaking News, Crime
ಶಿಗ್ಗಾಂವ: ಇಲ್ಲಿಯ ಸರ್ ಎಂ. ವಿಶ್ವೇಶ್ವರಯ್ಯ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂಡಿದ್ದರಿಂದ ಬೇಸತ್ತು ಉಪಾಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ಇಲ್ಲಿಯ ಶಿಗ್ಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚನ್ನಬಸಪ್ಪ ಬಸಪ್ಪ ಅಡರಕಟ್ಟಿ (67) ಮೃತ ಉಪಾಧ್ಯಕ್ಷ. ಇವರು ತಮ್ಮ ಸಂಘದ ಅಧ್ಯಕ್ಷ ಹಾಗೂ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂಡಿದ್ದರಿಂದ ಬೇಸತ್ತಿದ್ದರು. ಅಲ್ಲದೆ ಠೇವಣಿದಾರರು ಹಣ ವಾಪಸ್ ಕೊಡುವಂತೆ ಕೇಳುತ್ತಿದ್ದ ಕಾರಣ ಬೇಸತ್ತು ಮನೆಯಲ್ಲಿಯೆ …
Read More »
BigTv News
August 14, 2026
Breaking News
ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಜಿಮ್ ತರಬೇತುದಾರ ರಾಘವೇಂದ್ರ (35)ನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ಹಾಗೂ ಯುವತಿ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಯುವತಿ ಆರೋಪಿಸಿದ್ದಾರೆ. ಬಳಿಕ ರಾಘವೇಂದ್ರಗೆ ಮದುವೆಯಾಗಿ ಮಗು ಇರುವ ವಿಚಾರ ತಿಳಿದು ಅಂತರ ಕಾಯ್ದುಕೊಳ್ಳಲು ಮುಂದಾದಾಗ, ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. …
Read More »
BigTv News
August 13, 2026
Breaking News
ಕೋಲಾರದಿಂದ ಬಂಗಾರಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಮಹಿಳೆಯೊಬ್ಬರಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆ ಹಾಗೂ ಸಹಪ್ರಯಾಣಿಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಆಕೆಯ ಕೈ ಮುಟ್ಟಿ, ಮುತ್ತು ನೀಡಲು ಮುಂದಾಗಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆ ಬಸ್‌ನಲ್ಲೇ ಆತನನ್ನು ಥಳಿಸಿದ್ದು, ಬಳಿಕ ಇತರ ಪ್ರಯಾಣಿಕರೂ ಆತನಿಗೆ ಬುದ್ಧಿ ಹೇಳಿದ್ದಾರೆ. ಕೊನೆಗೆ ಬಂಗಾರಪೇಟೆ ತಲುಪುತ್ತಿದ್ದಂತೆ ವ್ಯಕ್ತಿ ಬಸ್‌ನಿಂದ ಇಳಿದು ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ …
Read More »
BigTv News
August 13, 2026
Breaking News
ಕಡಬ: ಪ್ರೀತಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ್ದಲ್ಲದೆ, ಆಕೆಯ ಮನೆಯವರಿಗೆ ಕೊಲೆ ಬೆದರಿಕೆ ಹಾಗೂ ಆತ್ಮಹತ್ಯೆಯ ಬೆದರಿಕೆಯೊಡ್ಡಿದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದಲ್ಲಿ ಸಂಭವಿಸಿದ್ದು ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತ ಆರೋಪಿ. 18 ವರ್ಷದ ಯುವತಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆ ಮನೆಗೆ ಬರುವಾಗ ಸಂಬಂಧಿ ಪದ್ಮನಾಭ ಎಂಬಾತ ನಿರಂತರ …
Read More »
BigTv News
August 13, 2026
Breaking News
ಮೀಸಲಾತಿ ಹಾಗೂ ಅದರ ಫಲಾನುಭವಿಗಳ ಕುರಿತು ಅವಹೇಳನಕಾರಿ ಮತ್ತು ಸಮಾಜದಲ್ಲಿ ದ್ವೇಷ, ವಿಭಜನೆಗೆ ಕಾರಣವಾಗುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಖಾಸಗಿ ವಾಹಿನಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಅವರು ಮೀಸಲಾತಿ ಕುರಿತು ಪೂರ್ವಾಗ್ರಹಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನೆಲಮಂಗಲ ನಿವಾಸಿ ಅನಂತಕುಮಾರ್ ಡಿ.ಆರ್. ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಅರುಣ್ ಬಡಿಗೇರ್ …
Read More »
BigTv News
August 13, 2026
Breaking News
ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಮಂಜುನಾಥ್ ಅವರು ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಘಟ್ಟದಹಳ್ಳಿ ಗ್ರಾಮದ ಸಂತೋಷ್ ಎಂಬುವವರ ಕೆಲಸ ಮಾಡಿಕೊಡಲು ಪಿಎಸ್‌ಐ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಸಂತೋಷ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಸಂತೋಷ್ ಅವರಿಂದ ₹20 ಸಾವಿರ ಪಡೆಯುತ್ತಿದ್ದ ವೇಳೆ ಮಂಜುನಾಥ್ ಅವರನ್ನು ರೆಡ್‌ಹ್ಯಾಂಡ್ …
Read More »
BigTv News
August 13, 2026
Breaking News
ಮೈಸೂರು: ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಲೆವೆಲ್-1 ಪರೀಕ್ಷೆಯಲ್ಲಿ ಅಂಗವಿಕಲ ಅಭ್ಯರ್ಥಿ ಎಂದು ನಕಲಿ ದಾಖಲೆ ನೀಡಿ ಬೇರೆಯವರಿಂದ ಪರೀಕ್ಷೆ ಬರೆಸಲು ಯತ್ನಿಸಿದ ಆರೋಪದ ಮೇಲೆ ಹೆಬ್ಬಾಳು ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ರಾಜಸ್ಥಾನದ ವಿಕಾಸ್ ಮೀನಾ, ವಿಜಯ್ ಮೀನಾ ಹಾಗೂ ಬಿಹಾರದ ಸುಮಿತ್ ಕುಮಾರ್ ಸಿಂಗ್ ಬಂಧಿತರು. ಆ.6ರಂದು ಹೆಬ್ಬಾಳಿನ ಪರೀಕ್ಷಾ ಕೇಂದ್ರಕ್ಕೆ ವಿಕಾಸ್ ಹಾಗೂ ಸುಮಿತ್ ಬಂದಿದ್ದು, ಸುಮಿತ್ ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಬರಹ ಸಹಾಯಕನಾಗಿ ಪರೀಕ್ಷೆ ಬರೆಯಲು …
Read More »
BigTv News
August 13, 2026
Breaking News
ಮಂಗಳೂರು: ನಗರ ಹೊರವಲಯದ ವಳಚ್ಚಿಲ್ ಬಳಿಯ ಹೊಸ ಪೆಟ್ರೋಲ್ ಪಂಪ್ ಎದುರು ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸೂರಲ್ಪಾಡಿಯ ಹ್ಯಾರಿಸ್ ಎಂದು ಗುರುತಿಸಲಾಗಿದೆ. ರಾತ್ರಿ 10ರ ಸುಮಾರಿಗೆ ಘಟನೆ ನಡೆದಿದ್ದು, ಕಾರಿನ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ದೂರಕ್ಕೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಘಟನೆ ಕುರಿತು ಕಂಕನಾಡಿ ಟ್ರಾಫಿಕ್ ಪೊಲೀಸರು ಅಜಾಗರೂಕ ಚಾಲನೆ ಹಾಗೂ ಅಪಘಾತ ಪ್ರಕರಣ ದಾಖಲಿಸಿಕೊಂಡು …
Read More »
BigTv News
August 13, 2026
Breaking News
ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದಾಗ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಸಾನಿಧ್ಯ ಫೈನಾನ್ಸ್‌ನ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಕುಂಜಾಲಿನಲ್ಲಿ ಸಾಲದ ಕಂತು ಬಾಕಿ ಉಳಿದ ಹಿನ್ನೆಲೆಯಲ್ಲಿ ಗಣೇಶ್ ಗಾಣಿಗ ಅವರ ಮೋಟಾರ್‌ಸೈಕಲ್‌ನ್ನು ಬಲವಂತವಾಗಿ ತೆಗೆದುಕೊಂಡು ಹೋಗಿ, ಜಾಮೀನುದಾರ ರಾಜೇಶ್ ನಾಯ್ಕ್ ಅವರಿಗೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂದೀಪ್ ಶೆಟ್ಟಿ ಹಾಗೂ …
Read More »