BigTv News
January 3, 2025
Breaking News
ಹೊಸಪೇಟೆ: ಈ ಬಾರಿಯ ಹಂಪಿ ಉತ್ಸವವನ್ನು ಫೆಬ್ರುವರಿ 28ರಿಂದ ಮೂರು ದಿನಗಳ ಕಾಲ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದ್ದು, ಒಂದು ತಿಂಗಳು ವಿಳಂಬವಾಗಿ, ಬಿರು ಬೇಸಿಗೆಯಲ್ಲಿ ಉತ್ಸವ ನಡೆಸುವುದು ಇದೀಗ ಅನಿವಾರ್ಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಸಿ.ಎಂ ಸಮ್ಮತಿಯ ಮೇರೆಗೆ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದ್ದಾರೆ. ಈ ಬಾರಿಯೂ ಅದ್ಧೂರಿ …
Read More »
BigTv News
January 2, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ಹಾಗೂ ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. ಅದೇ ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳಿಗೆ ಟರ್ಮ್ ಇನ್ಸೂರೆನ್ಸ್ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ( KSHCOEA) ಮಾಹಿತಿ …
Read More »
BigTv News
January 2, 2025
Breaking News, ಬೆಂಗಳೂರು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಿಗ್ಗೆ ಬೆಂಗಳೂರಿನ ನಿಮ್ಹಾನ್ಸ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಜ್ಯೋತಿರಾಧಿತ್ಯ ಸಿಂಧಿಯಾ ಮತ್ತಿತತರು ಪಾಲ್ಗೊಳ್ಳಲಿದ್ದಾರೆ. ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು, ಬೆಳಗಾವಿಗೆ ಭೇಟಿ ನೀಡಲಿದ್ದು, ಅಲ್ಲಿ ಕೆ.ಎಲ್.ಇ. ಸಂಸ್ಥೆಯ ಜಾಗತಿಕ ಗುಣಮಟ್ಟದ ಸಮಗ್ರ ಚಿಕಿತ್ಸೆಯನ್ನು ಒಳಗೊಂಡ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯೊಂದಿಗೆ ನಿರ್ಮಿಸಿರುವ …
Read More »
BigTv News
January 2, 2025
Breaking News, ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ: ಇನ್ಫೋಸಿಸ್ ಸಂಸ್ಥೆ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್)ಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲಾ ಕಟ್ಟಡಗಳ ನವೀಕರಣ ಮತ್ತು ಅಭಿವೃದ್ಧಿಪಡಿಸಲು ಮುಂದೆ ಬಂದಿರುವುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿಎಸ್‌ಆರ್ ಅನುದಾನದಡಿ ಸರ್ಕಾರಿ ಶಾಲಾ ಕಟ್ಟಡಗಳ ಅಭಿವೃದ್ಧಿ ಪಡಿಸುವ ಸಲುವಾಗಿ ಚರ್ಚಿಸಲು …
Read More »
BigTv News
January 2, 2025
Breaking News
ನವದೆಹಲಿ : ನೀಟ್-ಯುಜಿ ಪರೀಕ್ಷೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸುವುದಾಗಿ ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಕಳೆದ ವರ್ಷ, NEET-UG ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಸರ್ಕಾರವು ಏಳು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತ್ತು. ಕಳೆದ ವರ್ಷ ಆಗಸ್ಟ್ 2 ರಂದು, NEET-UG ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ …
Read More »
BigTv News
January 2, 2025
Breaking News
ನವದೆಹಲಿ: ರೈತರ ಕಲ್ಯಾಣವನ್ನು ಹೆಚ್ಚಿಸಲು ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 2021-22 ರಿಂದ 2025-26 ರವರೆಗೆ ಒಟ್ಟಾರೆ 69,515.71 ಕೋಟಿ ರೂ.ಗಳ ವೆಚ್ಚದೊಂದಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು 2025-26 ರವರೆಗೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಡಿಎಪಿಯ ಸುಸ್ಥಿರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಇಂದಿನಿಂದ …
Read More »
BigTv News
January 2, 2025
Breaking News, ಬೆಂಗಳೂರು
ಬೆಂಗಳೂರು: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನ ನಡೆಯುತ್ತಿದ್ದರೂ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಹಿರಿಯ ಐಎಎಸ್, ಐಪಿಎಸ್, ಅರಣ್ಯ ಇಲಾಖೆ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭ್ರಷ್ಟಾಚಾರ ತಡೆಯುವ ಬದಲು ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಭ್ರಷ್ಟಾಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದ ಮುಖ್ಯಮಂತ್ರಿ, ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. ನಾವೆಲ್ಲರೂ ನಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಿದರೆ, ನಾವು ಗುರಿಯನ್ನು ತಲುಪಬಹುದು ಅಥವಾ ಕನಿಷ್ಠ ಆ ದಿಕ್ಕಿನಲ್ಲಿ ನಡೆಯಲು ಪ್ರಾಮಾಣಿಕ …
Read More »
BigTv News
January 2, 2025
Breaking News
ಚಿಕ್ಕ ಮಗಳೂರು: ಶರಣಾಗುವ ನಕ್ಸಲರಿಗೆ ಜೀವನ ಕಟ್ಟಿಕೊಳ್ಳಲು 7.50 ಲಕ್ಷ ರೂ. ನೆರವು ನೀಡಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ ಘೋಷಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರ ಹಿಡಿದು ನಕ್ಸಲ್ ಹೋರಾಟ ಮಾಡುವವವರು ಸಮಾಜಮುಖಿ ಆಗಲು ರಾಜ್ಯ ಸರಕಾರ ಹಲವು ಯೋಜನೆಗಳನ್ನು ಪ್ರಕಟಿಸಿದೆ ಎಂದರು. ಸಮಾಜದಲ್ಲಿ ಗೌರವಯುತವಾಗಿ ಬದುಕಲು ಶರಣಾಗುವ ನಕ್ಸಲರಿಗೆ 7.50 ಲಕ್ಷ ರೂ. ನೀಡಲಾಗುವುದು. ಹೊರರಾಜ್ಯದ ನಕ್ಸಲರಿಗೆ 4 ಲಕ್ಷ ರೂ. …
Read More »
BigTv News
January 2, 2025
Breaking News, ಹಾವೇರಿ
ಹಾವೇರಿ: ವಿಜಯಪುರ – ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬಸವರಾಜ ಬೊಮ್ಮಾಯಿ ರೈಲ್ವೆ ಇಲಾಖೆಗೆ ಧನ್ಯವಾದವನ್ನು ತಿಳಿಸಿದ್ದಾರೆ. ವಿಜಯಪುರ ಮಂಗಳೂರು ರೈಲಿನ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಯಲವಿಗಿ ರೈಲು …
Read More »
BigTv News
January 2, 2025
Breaking News, ಬೆಂಗಳೂರು
ಬೆಂಗಳೂರು: 2025-26ರ ಬಜೆಟ್‌ಗಾಗಿ ಇಲಾಖಾವಾರು ಪರಿಶೀಲನಾ ಸಭೆಗಳನ್ನು ಆರಂಭಿಸಲು ಸಿದ್ಧರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದಿಂದ ಆದಾಯ ಕೊರತೆ ಅನುದಾನವನ್ನು ಪಡೆಯಲು 16 ನೇ ಹಣಕಾಸು ಆಯೋಗದ ಗಮನ ಸೆಳೆಯಲು ಯೋಜನೆಯನ್ನು ನಿಖರವಾಗಿ ರೂಪಿಸುವ ಸಾಧ್ಯತೆಯಿದೆ. ಅವರು ಹೆಚ್ಚುವರಿ ಬಜೆಟ್ ಮಂಡಿಸಲು ಅಂಟಿಕೊಳ್ಳದೇ ಇರಬಹುದು, ಆದರೆ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಕೇಂದ್ರದಿಂದ ಆದಾಯ ಕೊರತೆ ಅನುದಾನವನ್ನು ಪಡೆಯಲು ಸಹಾಯ ಮಾಡಲು ರಾಜ್ಯದ ಆದಾಯ ಮತ್ತು ವೆಚ್ಚದಲ್ಲಿನ ಅಂತರವನ್ನು ತೋರಿಸುತ್ತಾರೆ …
Read More »