BigTv News
January 1, 2025
Breaking News
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗಾಹ್ ಎಂಬ ಹಳ್ಳಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 1932ರಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗಾಹ್ ಎಂಬ ಹಳ್ಳಿಯಲ್ಲಿ ಜನಿಸಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಿ. 26ರಂದು ದೆಹಲಿಯಲ್ಲಿ ನಿಧನರಾದರು. ಈ ಬೆನ್ನಲ್ಲೇ ಅಲ್ಲಿನ ಗ್ರಾಮಸ್ಥರು ಶ್ರದ್ಧಾಂಜಲಿ ಸಭೆ ನಡೆಸಿದರು. ಈ ವೇಳೆ ಮನಮೋಹನ್ ಸಿಂಗ್ ಅವರ ನಷ್ಟಕ್ಕೆ ಶೋಕ ವ್ಯಕ್ತಪಡಿಸಿದರು. …
Read More »
BigTv News
January 1, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಳೇ ಪಿಂಚಣಿ ಯೋಜನೆ ಜಾರಿ ಸೇರಿ ಹಲವು ವಿಚಾರಗಳ ಕುರಿತಂತೆ ಸಮಾಲೋಚನೆ ನಡೆಸಿತು. ರಾಜ್ಯ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಂಬಂಧ ಸರಕಾರದಿಂದ ರಚಿತವಾಗಿರುವ ಅಧಿಕಾರಿಗಳ ಸಮಿತಿಯಿಂದ ಶೀಘ್ರ ವರದಿ …
Read More »
BigTv News
January 1, 2025
Breaking News, ಉಡುಪಿ
ಹಿರಿಯಡಕ: ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳಿಲ್ಲದ ಕಾರಣ ಪಂಚಾಯತ್ ಬಾಗಿಲು ಮುಚ್ಚಲಾಗಿದೆ. ಡಿ. 19 ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ ಒತ್ತಡ, ಮಾನಸಿಕ ಕಿರುಕುಳದಿಂದ ಕಾರ್ಯನಿರ್ವಹಿಸಲು ಸಂಕಷ್ಟವಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರ ಸಲ್ಲಿಸಿದ್ದರು. ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ, ಮೇಲಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಜ.1ರ ಇಂದು …
Read More »
BigTv News
January 1, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಎಂಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಗುಂಪು ವಿಮಾ ಯೋಜನೆಯ ಪರಿಹಾರದ ಮೊತ್ತವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು 17 ಮೃತ ನೌಕರರ ಅವಲಂಬಿತರಿಗೆ ಗುಂಪು ವಿಮಾ ಯೋಜನೆಯ ಪರಿಹಾರದ ಹಣವಾಗಿ ರೂ.10.00 ಲಕ್ಷ ವಿತರಣೆಯನ್ನು ಮಾಡಿದರು. ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಂಸ್ಥೆಯಲ್ಲಿ ಸೇವೆ …
Read More »
Shaikh BigTv
January 1, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟ ದುರ್ಘಟನೆಯಲ್ಲಿ ಈವರೆಗೆ 8 ಜನ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದು, ಒಬ್ಬ ಮಾಲಾಧಾರಿ ಮಾತ್ರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಮಾಲಾಧಾರಿ ವಿನಾಯಕ್ ಬಾರಕೇರ ಬಹುತೇಕ ಚೇತರಿಸಿಕೊಂಡಿದ್ದು, ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ. 12 ವರ್ಷದ ವಿನಾಯಕ್ ಆರೋಗ್ಯದ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಡಿಸ್ಚಾರ್ಜ್ ಮಾಡಲಾಗುವುದು ಎಂದು ಕಿಮ್ಸ್ ನಿರ್ದೇಶಕ ಡಾ. ಎಸ್ಎಫ್ ಕಮ್ಮಾರ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 22 …
Read More »
BigTv News
January 1, 2025
Breaking News
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2025 ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ 4.73 ಲಕ್ಷ ಕೋಟಿ ರೂ.ಗಳ ಸರ್ಕಾರಿ ಬಾಂಡ್ಗಳನ್ನು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರಾಟ ಮಾಡಲಿದೆ. ತ್ರೈಮಾಸಿಕದಲ್ಲಿ ನಡೆಯಲಿರುವ ಹರಾಜಿನ ಸಾಪ್ತಾಹಿಕ ವೇಳಾಪಟ್ಟಿ ಮತ್ತು ಭಾಗವಹಿಸುವಿಕೆಯನ್ನು ದೃಢಪಡಿಸಿದ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಹೆಸರುಗಳು ಎಂದು ಆರ್ಬಿಐ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ನಿಜವಾದ ಸಾಲದ ಮೊತ್ತ ಮತ್ತು ಭಾಗವಹಿಸುವ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ವಿವರಗಳನ್ನು …
Read More »
BigTv News
January 1, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯಾದ್ಯಂತ 2024 ಕ್ಕೆ ಗುಡ್ ಬೈ ಹೇಳಿದ್ದು, 2025 ರ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಈ ನಡುವೆ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ. ಜಾತಿ, ಧರ್ಮಗಳ ದ್ವೇಷ ತೊರೆದು …
Read More »
BigTv News
January 1, 2025
Breaking News, ರಾಯಚೂರು
ರಾಯಚೂರು: ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೂದು ನೀರು ನಿರ್ವಹಣೆ ಮಾಡಲು ರಾಯಚೂರು ಜಿಲ್ಲೆಯಲ್ಲಿ 15 ಘಟಕಗಳನ್ನು ನಿರ್ಮಿಸುವ ಕಾರ್ಯ ಭರದಿಂದ ಸಾಗಿದೆ. ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಪಾತ್ರೆ ಹಾಗೂ ಬಟ್ಟೆ ತೊಳೆದ ನೀರು, ಬಚ್ಚಲು ನೀರು ಸೇರಿದಂತೆ ಗೃಹ ಬಳಕೆ ಬೂದು ನೀರು ಹಳ್ಳಕೊಳ್ಳ ಸೇರಿ ಜಲಮೂಲಗಳು ಮಾಲಿನ್ಯಕ್ಕೊಳಗಾಗುತ್ತಿದೆ. ಜಲ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಬೂದು ನೀರಿನ ಶುದ್ದೀಕರಣ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಸ್ವಚ್ಛ …
Read More »
BigTv News
January 1, 2025
Breaking News, ರಾಯಚೂರು
ರಾಯಚೂರು: ಸಿರವಾರ ತಾಲೂಕಿನ ಸಿಸಿ ಕ್ಯಾಮರಾ ದೃಶ್ಯಾವಳಿ ಮಾಹಿತಿ ಕೋರಿದ್ದನ್ನು ವಿಳಂಬ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ‘ಮಾಹಿತಿ ಹಕ್ಕು’ ಕಾಯ್ದೆಯ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಮೂವರು ಪಿಎಸ್‌ಐಗಳಿಗೆ ಮಾಹಿತಿ ಹಕ್ಕು ಆಯೋಗದ ಕಲುಬುರ್ಗಿ ಪೀಠವು ರೂ.75 ಸಾವಿರ ದಂಡ ವಿಧಿಸಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಪವನ್ ಕುಮಾರ್ ಕೋರಿಪಳ್ಳಿ 2022 ಜೂನ್ 4 ರಂದು ಮಾಹಿತಿ ಹಕ್ಕು ಕಾಯ್ದೆಯಡಿ ಸಿರವಾರ ಸಿಸಿ ಟಿವಿ ದೃಶ್ಯಾವಳಿಗಳನ್ನು …
Read More »
BigTv News
January 1, 2025
Breaking News
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ. ಇಂದು ಕೇಂದ್ರ ಸಂಪುಟ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಅನೇಕ ಯೋಜನೆಗಳು ಮತ್ತು ಹೊಸ ಯೋಜನೆಗಳಿಗೆ ಹಣವನ್ನು ಚರ್ಚಿಸುವ ಸಾಧ್ಯತೆಯಿದೆ. ಹೊಸ ವರ್ಷದಲ್ಲಿ ಕೇಂದ್ರ …
Read More »