Breaking News

Breaking News

ಹುಬ್ಬಳ್ಳಿ: ಚಾಕು ಇರಿತಕ್ಕೆ ಒಳಗಾಗಿದ್ದ ಯುವಕ ಸಾವು…

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆಯಲ್ಲಿ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಆನಂದ ನಗರದ ಗೋಡಕೆ ಪ್ಲಾಟ್ ಬಳಿ ನಡೆದಿತ್ತು. ಸಮೀರ್ ಶೇಖ್(18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಮುಜಾಮಿಲ್ ಎಂಬ ಆರೋಪಿ ತನ್ನ ಸಹಚರರೊಂದಿಗೆ ಸಮೀರ್ ಹಾಗೂ ಜಾವೀದ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದನು. ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಸಮೀರ್ ಶೇಖ್ (18) ಮೃತಪಟ್ಟಿದ್ದಾನೆ…

Read More »
Featured Video Play Icon

ಹೊಸ ವರ್ಷಾಚರಣೆ: ಆರೋಪಿಗಳು ಒಳ್ಳೆಯ ಜವಾಬ್ದಾರಿಯುತ ನಾಗರಿಕರಾಗಿ; ಕಮಿಷನರ್ ಎನ್. ಶಶಿಕುಮಾರ್.

ಕ್ರೈಂ ನಿಂದ ಜೀವನ ಖುಷ್ ಇರಲ್ಲ.. ಸಜ್ಜನಿಕೆಯಿಂದ ಬಾಳಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಮಾಧ್ಯಮ ಮಿತ್ರರಿಗೆ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಇಲಾಖೆ, ಜಿಲ್ಲಾಡಳಿತದಿಂದ ಹೊಸ ವರ್ಷದ ಶುಭಾಶಯ ತಿಳಿಸಿದ ಕಮಿಷನರ್ ಎನ್.ಶಶಿಕುಮಾರ್….ಹುಬ್ಬಳ್ಳಿ: ಹೊಸ ವರ್ಷದ ಹಿನ್ನಲೆಯಲ್ಲಿ ಡ್ರಗ್ ಪೆಡ್ಲರ್ಸ್, ರೌಡಿ ಶಿಟರ್ ಗಳ ಬಗ್ಗೆ ಪರೇಡ್ ನಡೆಸಿ ಅತ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅವರಿಗೆ ಎಚ್ಚರಿಕೆ ನೀಡಲಾಗಿದ್ದು, ಸುಮಾರು 2000 ಸಿಬ್ಬಂದಿಗಳ ಸುಸಜ್ಜಿತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ ಇನ್ನು …

Read More »

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಸಿಎಂಗೆ ಧೈರ್ಯ ಇಲ್ಲ: ಶಾಸಕ ಜನಾರ್ಧನ ರೆಡ್ಡಿ

ಬಳ್ಳಾರಿ: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮತಹ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಹುಗುರುವಾಗಿ ಮಾತನಾಡುತ್ತಾ, ದುರಹಂಕಾರದ ವರ್ತನೆ ತೋರುತ್ತಿದ್ದಾರೆ. ಅವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಧೈರ್ಯ ಇಲ್ಲದಂತಾಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ‘ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆಯು ಗಂಭೀರ ಪ್ರಕರಣ. ಡೆತ್‌ನೋಟ್‌ನಲ್ಲಿ ಅವರು ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಎಂಬುವರ ಹೆಸರು ಬರೆದಿಟ್ಟಿದ್ದಾರೆ. ಅವರಿಗಾದ ಕಿರುಕುಳ, ಶೇ 5ರ …

Read More »

ಹಾವು ಕಚ್ಚಿ ಮೂರು ವರ್ಷದ ಬಾಲಕಿ ಸಾವು

ಹುಬ್ಬಳ್ಳಿ: ಅಂಗನವಾಡಿಗೆ ತೆರಳಿದ್ದ ವೇಳೆ ಮೂರು ವರ್ಷದ ಮಗು ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಕಾರವಾರ ಜಿಲ್ಲೆಯ ಮುಂಡಗೋಡು ಅಳೂರು ಓಣಿಯಲ್ಲಿ ನಡೆದಿದೆ. ಮಯೂರಿ(3) ಮೃತ ಬಾಲಕಿ, ಸ್ಥಳಿಯ ಮಾರಿಕಾಂಬ ಅಂಗನವಾಡಿ ತೆರಳಿದ್ದ ಮಯೂರಿ ಹೊರಬದಿಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಮಯೂರಿ ಕಾಲಿಗೆ ಹಾವು ಕಚ್ಚಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಯೂರಿ ಸಾವನ್ನಪ್ಪಿದ್ದಾಳೆ. ಅಂಗನವಾಡಿ ಶಿಕ್ಷಕಿ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬ ಆರೋಪ ಕೇಳಿ ಬರುತ್ತಿದೆ.

Read More »

ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ: ಗುತ್ತಿಗೆ ಆಧಾರದಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯ ಕಾನೂನು ನೆರವು ಅಭಿರಕ್ಷಕರ ಹುದ್ದೆ 01, ಉಪ ಕಾನೂನು ನೆರವು ಅಭಿರಕ್ಷಕರ ಹುದ್ದೆ 01 ಮತ್ತು ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆ 01 ಇವುಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಮಾಹೆಯಾನ ಮುಖ್ಯ ಕಾನೂನು ನೆರವು ಅಭಿರಕ್ಷಕರ …

Read More »

ಹೊಸ ವರ್ಷಾಚರಣೆ: ವಿದೇಶ ಪ್ರವಾಸಕ್ಕೆ ತೆರಳಿದ ಡಿಸಿಎಂ ಡಿಕೆಶಿ

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ವಿದೇಶದಲ್ಲಿ ಈ ಬಾರಿ ನ್ಯೂ ಇಯರ್ ಸೆಲೆಬ್ರೇಟ್ ಮಾಡಲಿದ್ದಾರೆ. ಇಂದು ಮುಂಜಾನೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ನಾಲ್ಕು ದಿನಗಳಕಾಲ ಡಿಸಿಎಂ ವಿದೇಶದಲ್ಲಿರಲಿದ್ದಾರೆ. ಕೆನಡಾ, ಟರ್ಕಿ …

Read More »

ಶಿರಾದಲ್ಲೂ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ: ಸಚಿವ ಕೆ.ಜೆ.ಜಾರ್ಜ್‌

ಶಿರಾ: ತಾಲ್ಲೂಕಿನ ಗೌಡಗೆರೆ ‌ಹೋಬಳಿಯ ಚೆಂಗಾವರ, ಹುಲಿಕುಂಟೆ ಹೋಬಳಿಯ ಚಿಕ್ಕಬಾಣಗೆರೆ ಗ್ರಾಮದ ಬಳಿ ಸೋಲಾರ್ ಘಟಕ ನಿರ್ಮಿಸಿದ್ದು, ಎರಡೂ ಕಡೆಯಿಂದ ಒಟ್ಟು 8.9 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಸೋಲಾರ್ ಘಟಕ ನಿರ್ಮಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ, ‘ಉತ್ಪಾದಿಸಿದ ವಿದ್ಯುತ್‌ಅನ್ನು ಸ್ಥಳೀಯವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ಸರಬರಾಜು ಮಾಡಲಾಗುತ್ತಿದೆ. ಪಿಎಂ- ಕುಸುಮ್ ಯೋಜನೆಯಲ್ಲಿ ಸೋಲಾರ್ ಘಟಕ ನಿರ್ಮಿಸಿ ವಿದ್ಯುತ್ ಉತ್ಪಾದನೆ …

Read More »

ಕರ್ನಾಟಕ ಪರೀಕ್ಷಾ ಪ್ರಾಧಿಕಾರ: 6,052 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನಲ್ಲಿ ಎರಡು ಪಿಎಸ್‌ಐ, ಕೆ-ಸೆಟ್‌ ಸೇರಿದಂತೆ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ. ಪ್ರಾಧಿಕಾರವು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ, ಸೀಟು ಹಂಚಿಕೆ, ಪ್ರವೇಶ ಪ್ರಕ್ರಿಯೆ ಇತ್ಯಾದಿಗಳನ್ನು ನಿರ್ವಹಿಸುತ್ತಿದೆ. ಇದರ ಜೊತೆಗೆ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳನ್ನೂ ನಿಭಾಯಿಸುತ್ತಿದೆ. ಕಳೆದ ಒಂದು ವರ್ಷದಲ್ಲಿ 20 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು …

Read More »

ಶಿವಮೊಗ್ಗ: ಜ.2 ರಿಂದ 30 ರವರಿಗೆ ಶಾಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಬೃಹತ್ ಆಂದೋಲನ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಎಸ್‌ಸಿ ಸರ್ವೀಸರ್ ಇಂಡಿಯಾ ಲಿಮಿಟೆಡ್, ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಜ. 2 ರಿಂದ 30 ರವರೆಗೆ ಶಿವಮೊಗ್ಗ ತಾಲ್ಲೂಕಿನ ಶಾಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜನವರಿ 02 ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಕಾಚಿನಕಟ್ಟೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ …

Read More »

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಪಕ್ಷದ ನಾಯಕರು, ಕಾರ್ಯಕರ್ತರು ಇಂದು (ಮಂಗಳವಾರ) ಪ್ರತಿಭಟನೆ ನಡೆಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಸೇರಿ ಇತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ …

Read More »