Breaking News

Breaking News

ಆದಾಯ ತೆರಿಗೆ ಇಲಾಖೆಯ ವಿವಾದ್ ಸೇ ವಿಶ್ವಾಸ್ ಯೋಜನೆಯ ಗಡುವು ಜ.31 ರವರಿಗೆ ವಿಸ್ತರಣೆ

ನವದೆಹಲಿ : ಇಂದು 2024 ವರ್ಷದ ಕೊನೆಯ ದಿನವಾಗಿದ್ದು, ನಾಳೆಯಿಂದ ಹೊಸ ವರ್ಷ (ಹೊಸ ವರ್ಷ 2025) ಪ್ರಾರಂಭವಾಗಲಿದೆ, ಈ ನಡುವೆ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಆದಾಯ ತೆರಿಗೆ ಇಲಾಖೆಯು ವಿವಾದ್ ಸೇ ವಿಶ್ವಾಸ್ ಯೋಜನೆಯ ಗಡುವನ್ನು ಕೊನೆಯ ಕ್ಷಣದಲ್ಲಿ ವಿಸ್ತರಿಸಿದೆ. ಈ ಯೋಜನೆಯ ಕೊನೆಯ ದಿನಾಂಕವನ್ನು ಡಿಸೆಂಬರ್ 31 ಎಂದು ನಿಗದಿಪಡಿಸಲಾಗಿದೆ, ಅದನ್ನು ಈಗ ಜನವರಿ 31 ರವರೆಗೆ ವಿಸ್ತರಿಸಲಾಗಿದೆ. ಇದರರ್ಥ ಇನ್ನೂ ಒಂದು …

Read More »

ಬಸ್ ಗಳಲ್ಲಿ ವಿಕಲಚೇತನರಿಗಾಗಿ ಲೌಡ್ ಸ್ಪೀಕರ್ ವ್ಯವಸ್ಥೆ ಕಲ್ಪಿಸಲು ಸಾರಿಗೆ ಸಂಸ್ಥೆಗಳಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ವಿಕಲಚೇತನರ ಅನುಕೂಲಕ್ಕಾಗಿ ಬಸ್‌ಗಳಲ್ಲಿ ಆಡಿಯೋ ಅನೌನ್ಸ್‌ಮೆಂಟ್ ಸಿಸ್ಟಂ (ಎಎಎಸ್) ಕಾರ್ಯನಿರ್ವಹಿಸುವಂತೆ ರಾಜ್ಯ ಸಾರಿಗೆ ಸಂಸ್ಥೆಗಳಿಗೆ ನಿರ್ದೇಶನ ನೀಡಿರುವ ಹೈಕೋರ್ಟ್, ವಿವಿಧ ಬಸ್ ನಿಲ್ದಾಣಗಳಲ್ಲಿ ವಿಶೇಷ ಚೇತನರು ಬಸ್ ಹತ್ತುವಾಗ ಮತ್ತು ಇಳಿಯುವಾಗ ಅವರಿಗೆ ಮಾರ್ಗದರ್ಶನ ನೀಡಲು ಲೌಡ್ ಸ್ಪೀಕರ್ ವ್ಯವಸ್ಥೆ ಅಳವಡಿಸಬೇಕು ಎಂದು ಹೇಳಿದೆ. ಈ ನಿಟ್ಟಿನಲ್ಲಿ ಸುಧಾರಿತ ತಾಂತ್ರಿಕ ಉಪಕರಣಗಳು ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಮತ್ತು ಯೋಜನೆಯು ನಿರಂತರವಾಗಿ ಕಾರ್ಯನಿರ್ವಹಿಸಲು ಸ್ಥಳೀಯ ಅಧಿಕಾರಿಗಳು ಸಾಕಷ್ಟು ಹಣವನ್ನು ಬಜೆಟ್ …

Read More »

ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಆರಂಭ

ಬೆಂಗಳೂರು: ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ ಗ್ರಾಮಸಭೆʼ, ಮಕ್ಕಳ ಜನನ ನೋಂದಣಿ, ಪೌಷ್ಟಿಕತೆಯ ಕುರಿತು ಜಾಗೃತಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಅಭಿಯಾನಗಳು, ಮಕ್ಕಳ ಕ್ರೀಡಾಕೂಟಗಳು, ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಜೊತೆಗೆ ಮಕ್ಕಳ ಬೇಡಿಕೆ / ಪ್ರಶ್ನೆ / …

Read More »

ಮಹಾರಾಷ್ಟ್ರದಲ್ಲಿ 15 ವರ್ಷಗಳ ಹಳೆಯ 13,000 ಸರ್ಕಾರಿ ವಾಹನಗಳ ವಿಲೇವಾರಿ

ಮುಂಬೈ: ಸಾರಿಗೆ ಇಲಾಖೆಯನ್ನು ಆಧುನೀಕರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿರ್ಧರಿಸಿದ್ದು, 15 ವರ್ಷ ಹಳೆಯ ಬಸ್‌ಗಳು ಮತ್ತು ಹಳತಾದ ಸರ್ಕಾರಿ ವಾಹನಗಳನ್ನು ರದ್ದುಗೊಳಿಸುವಂತೆ ಆದೇಶಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 15 ವರ್ಷಗಳ ಹಳೆಯ ಬಸ್‌ಗಳನ್ನು ರದ್ದುಗೊಳಿಸುವಂತೆ ಆದೇಶಿಸಿದ್ದಾರೆ. 13,000 ಹಳೆಯದಾದ ಸರ್ಕಾರಿ ವಾಹನಗಳನ್ನು ವಿಲೇವಾರಿ ಮಾಡುವುದಾಗಿ ಘೋಷಿಸಿದ್ದಾರೆ. ಹಳೆಯ ವಾಹನಗಳನ್ನು ರದ್ದುಗೊಳಿಸಿದ ನಂತರ ರಾಜ್ಯ ಸಾರಿಗೆಯಲ್ಲಿ ಉಳಿದಿರುವ ಬಸ್‌ಗಳನ್ನು ಎಲ್‌ಎನ್‌ಜಿ ಮತ್ತು ಸಿಎನ್‌ಜಿ ವ್ಯವಸ್ಥೆಗಳೊಂದಿಗೆ ಮರುಹೊಂದಿಸಲಾಗುತ್ತದೆ. …

Read More »

ಕೇಂದ್ರದಿಂದ ಬಡವರಿಗೆ ಹೊಸ ವರ್ಷದ ಉಡುಗೊರೆ: 2 ಕೋಟಿ ಮನೆ ನಿರ್ಮಿಸಲು ಸಮೀಕ್ಷೆ ಆರಂಭ

ನವದೆಹಲಿ: ಬಡವರಿಗೆ ಹೊಸ ವರ್ಷದ ಉಡುಗೊರೆಯಾಗಿ, ನರೇಂದ್ರ ಮೋದಿ ಸರ್ಕಾರವು ದೇಶದ ಬಡವರಿಗೆ ಇನ್ನೂ ಎರಡು ಕೋಟಿ ಮನೆಗಳನ್ನು ನೀಡಲು ಮನೆ ಸಮೀಕ್ಷೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಮತ್ತು ಮುಂದಿನ ಮೂರು ತಿಂಗಳಲ್ಲಿ ಈ ಕಾರ್ಯವನ್ನು ಮಾರ್ಚ್ 31, 2025 ರೊಳಗೆ ಪೂರ್ಣಗೊಳಿಸಲಿದೆ. ಇದು 2024 ರಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಭರವಸೆಯಾಗಿತ್ತು. ಈ ಸಂಬಂಧ ಡಿಸೆಂಬರ್ 27ರಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೇಳಿಕೆಯ ಪ್ರತಿ ಕಳುಹಿಸಿದೆ. ಅರ್ಹ ಕುಟುಂಬಗಳನ್ನು …

Read More »

ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲೂ ಸೋಲಾರ್ ಪಾರ್ಕ್ ನಿರ್ಮಾಣ: ಇಂಧನ ಸಚಿವ ಕೆ.ಜೆ.ಜಾರ್ಜ್

ಶಿರಾ: ರೈತರ ಪಂಪ್ ಸೆಟ್ ಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತಿ ಜಿಲ್ಲೆಯ, ಪ್ರತಿ ತಾಲೂಕಿನಲ್ಲಿ ಎಲ್ಲೆಲ್ಲಿ ಅವಶ್ಯಕತೆ ಇದೆ ಅಲ್ಲಿ ಸೋಲಾರ್‌ಪಾರ್ಕ್ ನಿರ್ಮಾಣ ಮಾಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಅವರು ಸೋಮವಾರ ತಾಲೂಕಿನ ಚಂಗಾವರ ಮತ್ತು ಚಿಕ್ಕಬಾಣಗೆರೆ ಗ್ರಾಮದ ಬಳಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣ ಮಾಡಲಾಗಿರುವ ಸೋಲಾರ್‌ ಪಾರ್ಕ್ ವೀಕ್ಷಣೆ ಮಾಡಿ ರೈತರು ಮತ್ತು ಅಧಿಕಾರಿಗಳ ಜೊತೆ ಸಂವಾದ …

Read More »

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಉಡುಪಿ: ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿದೆ. ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 22 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು 1:3 ಅನುಪಾತದಲ್ಲಿ ಮೂಲ ದಾಖಲೆ ಗಳ ಪರಿಶೀಲನೆಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡಿ.20 …

Read More »

ರಾಜ್ಯದಲ್ಲಿ ಕುಸುಮ್ ಬಿ ಯೋಜನೆಯಡಿ ಪಂಪ್‌ಸೆಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್‌

ತುಮಕೂರು: ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯ ಮೊದಲ ಹಂತದಲ್ಲಿ ಮಾರ್ಚ್ 15ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕುಸುಮ್-ಸಿ ಯೋಜನೆಯಡಿ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಾಂಗವರ ಬಳಿ ಮತ್ತು ಚಿಕ್ಕಬಾಣಗೆರೆ ಬಳಿ ನಿರ್ಮಿಸಿರುವ ಸೋಲಾರ್ ಪಾರ್ಕ್ ಗಳು ಹಾಗೂ ಚಿತ್ರದುರ್ಗ …

Read More »

ಅಕ್ರಮ-ಸಕ್ರಮ ಯೋಜನೆಯಡಿ ಪಂಪ್‌ಸೆಟ್ ಗಳಿಗೆ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ.ಜಾರ್ಜ್‌

ಚಿತ್ರದುರ್ಗ: ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿ, ಇನ್ನೂ 2 ಲಕ್ಷ ಪಂಪ್ ಸೆಟ್‍ ಗಳಿಗೆ ಸಂಪರ್ಕ …

Read More »

ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ನಿಗದಿ: ಮಾ.14 ರಂದು ಸಿಎಂ ಸಿದ್ದರಾಮಯ್ಯರಿಂದ ದಾಖಲೆಯ ಬಜೆಟ್ ಮಂಡನೆ

ಬೆಂಗಳೂರು : ರಾಜ್ಯ ಬಜೆಟ್ ಮಂಡಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಹೌದು, ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾರ್ಚ್ 10ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಜಂಟಿ ಅಧಿವೇಶನದ ಮುಂದುವರೆದ ಭಾಗವಾಗಿ ಬಜೆಟ್ ಅಧಿವೇಶನ …

Read More »