Shaikh BigTv
December 30, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ನಿನ್ನೆ ಒಬ್ಬರು ಹಾಗೂ ಇಂದು ಒಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 7ಕ್ಕೇರಿದೆ. 9 ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತಿಬ್ಬರು ಗಾಯಾಳುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ …
Read More »
Shaikh BigTv
December 30, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೋರ್ವ ಮಾಲಾಧಾರಿ ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ ಏಳಕ್ಕೇರಿದೆ. ತೇಜಸ್ ಸತಾರೆ ಎಂಬ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, ತೇಜಸ್ ಹೊಟೇಲ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿಯೂ ಗಂಭೀರವಾಗಿದೆ. ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಕುಟುಂಬಕ್ಕೆ ಸರಕಾರ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.
Read More »
Shaikh BigTv
December 30, 2024
Breaking News, Crime, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಆನಂದ ನಗರದ ಗೋಡಕೆ ಪ್ಲಾಟ್ ಬಳಿ ನಡೆದಿದೆ. ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ… ಹಳೇ ಹುಬ್ಬಳ್ಳಿ ಠಾಣೆಯ ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು.. ತಂಡ ದೌಡಾಯಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ…
Read More »
BigTv News
December 30, 2024
Breaking News, ಕೊಪ್ಪಳ
ಕೊಪ್ಪಳ: 2025ನೇ ಜನವರಿ 15 ರಂದು ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಲಕ್ಷ್ಯಾಂತರ ಭಕ್ತರು ಬರುವುದರಿಂದ ಟ್ರಾಫಿಕ್ ಸಮಸ್ಯೆಗಳಾಗದಂತೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇತರೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚನೆ ನೀಡಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಕಳೆದ …
Read More »
BigTv News
December 30, 2024
Breaking News
ಅಡಿಸ್ ಅಬಾಬಾ : ಮದುವೆಗೆ ಹೋಗುವಾಗ ನದಿಗೆ ಟ್ರಕ್ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿದಂತೆ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಠನೆ ಆಫ್ರಿಕಾದ ಇಥಿಯೋಪಿಯಾದಲ್ಲಿ ನಡೆದಿದೆ. ಇಥಿಯೋಪಿಯಾದಲ್ಲಿ ಪ್ರಯಾಣಿಕರು ತುಂಬಿದ್ದ ಟ್ರಕ್ ನದಿಗೆ ಬಿದ್ದಿದೆ. ಅಪಘಾತದಲ್ಲಿ 60 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಕ್ಷಿಣ ಸಿಡಾಮಾ ಪ್ರದೇಶದ ಅಧಿಕಾರಿಗಳ ಪ್ರಕಾರ, ಬೋನಾ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರು ಬೋನಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕೂ ಸರಿ ಇರುವುದಿಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ …
Read More »
BigTv News
December 30, 2024
Breaking News, ಶಿವಮೊಗ್ಗ
ಶಿವಮೊಗ್ಗ: ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ 300 ರಿಂದ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ ಇನ್ನೆರಡು ತಿಂಗಳಲ್ಲಿ ಕಟ್ಟಡ ನಿರ್ಮಿಸಲಾಗುವುದು. ಸರ್ಕಾರಿ ನೌಕರರಿಗೆ ದಿನವೊಂದಕ್ಕೆ 100ರೂ. ಬಾಡಿಗೆ ದರದಲ್ಲಿ …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು: ಜನವರಿ 2 ರಂದುರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಮಾಡಿದ್ದು, ಈ ವೇಳೆ ಹಲವು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 02.01.2025, ಗುರುವಾರ ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 1ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಡಿ ಎಲ್(KSDL) ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಕೆಎಸ್ ಡಿ ಎಲ್ ಅಧಿಕಾರಿ ಅಮೃತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. KSDL’ ನ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ್ ಕೈಯಲ್ಲೇ ಡೆತ್ ನೋಟ್ ಹಿಡಿದುಕೊಂಡು ನೇಣಿಗೆ ಶರಣಾಗಿದ್ದಾರೆ. ಡಿ.28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ …
Read More »
BigTv News
December 30, 2024
Breaking News
ನವದೆಹಲಿ: ಮುಂಬರುವ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತೆ ಅಧಿಕಾರಕ್ಕೆ ಬಂದರೆ ದೇವಾಲಯಗಳ ಅರ್ಚಕರು ಮತ್ತು ಗುರುದ್ವಾರಗಳ ಅನುದಾನಗಳಿಗೆ ಮಾಸಿಕ 18,000 ರೂ.ಗಳ ವೇತನ ನೀಡುವುದಾಗಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಡಿಸೆಂಬರ್ 30) ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಕೇಜ್ರಿವಾಲ್, “ಪುರೋಹಿತರು ಮತ್ತು ಗ್ರಂಥಿಗಳು ನಮ್ಮ ಧಾರ್ಮಿಕ ಪದ್ಧತಿಗಳ ರಕ್ಷಕರಾಗಿದ್ದು, ಸಮಾಜಕ್ಕೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದುರದೃಷ್ಟವಶಾತ್, ಅವರ ಆರ್ಥಿಕ ಯೋಗಕ್ಷೇಮದ ಬಗ್ಗೆ …
Read More »