Breaking News

Breaking News

ವಿಶ್ವದ ಹೈಸ್ಪೀಡ್ ಬುಲೆಟ್ ರೈಲನ್ನು ಪರಿಚಯಿಸಿದ ಚೀನಾ

ಚೀನಾ: ಚೀನಾ ತನ್ನ ಹೈಸ್ಪೀಡ್ ಬುಲೆಟ್ ರೈಲಿನ ನವೀಕರಿಸಿದ ಮಾದರಿಯನ್ನು ಭಾನುವಾರ ಪರಿಚಯಿಸಿದೆ. ಪರೀಕ್ಷೆಯ ಸಮಯದಲ್ಲಿ ಅದರ ವೇಗವು ಗಂಟೆಗೆ 450 ಕಿಲೋಮೀಟರ್‌ಗಳನ್ನು ತಲುಪಿದೆ ಎಂದು ಅದರ ತಯಾರಕರು ಹೇಳಿದ್ದಾರೆ. ಇದು ವಿಶ್ವದ ಅತ್ಯಂತ ವೇಗದ ಹೈ-ಸ್ಪೀಡ್ ರೈಲು. ಚೀನಾ ಸ್ಟೇಟ್ ರೈಲ್ವೇ ಗ್ರೂಪ್ ಕಂ (ಚೀನಾ ರೈಲ್ವೇಸ್) ಪ್ರಕಾರ, CR450 ಮೂಲಮಾದರಿ ಎಂದು ಕರೆಯಲ್ಪಡುವ ಹೊಸ ಮಾದರಿಯು ಪ್ರಯಾಣದ ಸಮಯವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ, …

Read More »

ಹಾಲು ಉತ್ಪಾದಕರ ಪ್ರೋತ್ಸಾಹಧನದ ಬಾಕಿ ₹622 ಕೋಟಿ: ಸಂಕಷ್ಟದಲ್ಲಿ ರೈತರು

ಬೆಂಗಳೂರು: ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪಾವತಿಸಬೇಕಾಗಿರುವ ಹಾಲಿನ ಪ್ರೋತ್ಸಾಹ ಧನದ ಬಾಕಿ ಮೊತ್ತ ಸುಮಾರು ₹622.54 ಕೋಟಿಗೆ ಏರಿದೆ. ಕಳೆದ ಜೂನ್‌ನಿಂದ ಪ್ರೋತ್ಸಾಹ ಧನ ಬಿಡುಗಡೆ ಆಗಿಲ್ಲ. ರಾಜ್ಯದಲ್ಲಿ ದೊಡ್ಡ ಸಂಖ್ಯೆಯ ರೈತರು ಹಾಲು ಉತ್ಪಾದನೆಯನ್ನು ಉಪ ಕಸುಬನ್ನಾಗಿಸಿಕೊಂಡಿದ್ದಾರೆ. ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರು ಪ್ರೋತ್ಸಾಹ ಧನ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿದ ಪೂರಕ ಅಂದಾಜು ಎರಡನೇ ಕಂತಿನಲ್ಲಿ 2024ರ ಆಗಸ್ಟ್‌ನಿಂದ 2025ರ …

Read More »

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ: ಹೊಸ ಸದಸ್ಯರ ನೋಂದಣಿಗೆ ನಾಳೆಯವರೆಗೆ ಅವಕಾಶ

ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದೆ. ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು. ಸಹಕಾರ ಸಂಘಗಳ ನಿಬಂಧಕರ ಪ್ರಸ್ತಾವನೆಯಲ್ಲಿ …

Read More »

ಕಲಬುರಗಿ: ಕೆಎಎಸ್ ಪರೀಕ್ಷೆಗೆ ಶೇ.50 ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಗೈರು

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗವು 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆಸಿದ ಪೂರ್ವಭಾವಿ ಮರು ಪರೀಕ್ಷೆಗೆ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಅಭ್ಯರ್ಥಿಗಳು ಗೈರಾಗಿದ್ದರು. ಮರು ಪರೀಕ್ಷೆಯು ನಗರದ 38 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಯಿತು. ಮೊದಲ ಪ್ರಶ್ನೆ ಪತ್ರಿಕೆ-1ಕ್ಕೆ 12,202 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 5,684 ಅಭ್ಯರ್ಥಿಗಳು ಹಾಜರಾಗಿದ್ದರು. 6518 ಅಭ್ಯರ್ಥಿಗಳು ಗೈರಾದರು. ಮಧ್ಯಾಹ್ನ ನಡೆದ ಎರಡನೇ ಪತ್ರಿಕೆ ಪರೀಕ್ಷೆಯಲ್ಲಿ 5,665 ಅಭ್ಯರ್ಥಿಗಳು ಹಾಜರಾಗಿ, 6,537 ಅಭ್ಯರ್ಥಿಗಳು ಪರೀಕ್ಷೆಯಿಂದ …

Read More »

ಬೆಂಗಳೂರಲ್ಲಿ ಹೊಸ ವರ್ಷಾಚರಣೆ: ಬಿಗಿ ಬಂದೋಬಸ್ತ್ ಗಾಗಿ 11,830 ಪೊಲೀಸ್ ಸಿಬ್ಬಂದಿಗಳ ನಿಯೋಜನೆ

ಬೆಂಗಳೂರು: ಹೊಸ ವರ್ಷ ಸ್ವಾಗತಕ್ಕೆ ಸಿಲಿಕಾನ್‌ ಸಿಟಿ ಸಜ್ಜಾಗುತ್ತಿದ್ದು, ಭದ್ರತಾ ದೃಷ್ಟಿಯಿಂದ ಪೊಲೀಸರು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ಸ್ಟ್ರೀಟ್‌ ಮುಂತಾದ ರಸ್ತೆಗಳಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಹ ಅದ್ಧೂರಿ ವರ್ಷಾಚರಣೆ ಸಂಭ್ರಮ ನಡೆಯಲಿದ್ದು, ಸಾರ್ವಜನಿಕರ ಭದ್ರತಾ ದೃಷ್ಟಿಯಿಂದ ಸಿ.ಸಿ.ಕ್ಯಾಮೆರಾಗಳ ಅಳವಡಿಕೆ, ವಾಚ್‌ ಟವರ್‌, ವುಮೆನ್ಸ್ ಸೇಫ್ಟಿಲ್ಯಾಂಡ್‌, ಹೆಲ್ತ್‌ ಸೆಂಟರ್‌ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ನಗರದ ಪ್ರಮುಖ ಆಕರ್ಷಣೆ ಸ್ಥಳಗಳಾದ ಬ್ರಿಗೇಡ್‌ ರಸ್ತೆ, ಚರ್ಚ್‌ …

Read More »

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕ್ಷೇತ್ರ ತನಿಖಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ: ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಕ್ಷೇತ್ರ ತನಿಖಾಧಿಕಾರಿ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 13, 2025 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಮಾಹಿತಿಗಾಗಿ 0836-2214234 www.uasd. edu ವನ್ನು ಸಂಪರ್ಕಿಸಬಹುದೆಂದು ಕೃವಿವಿ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ …

Read More »

ನರೇಗಾ ಹಾಜರಾತಿಯಲ್ಲಿ ಭಾರೀ ಗೋಲ್ ಮಾಲ್: ಕಲಬುರಗಿಯಲ್ಲಿ ಅತಿ ಹೆಚ್ಚು ಅಕ್ರಮ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯಡಿ ರಾಜ್ಯದಲ್ಲಿ 2024ನೇ ಸಾಲಿನಲ್ಲಿ ಕೈಗೊಂಡಿದ್ದ 1,218 ಸಮುದಾಯ ಕಾಮಗಾರಿಯಲ್ಲಿ ಲೋಪದೋಷ ಇರುವುದನ್ನು ಜಿಲ್ಲಾ ಮಟ್ಟದ ಓಂಬುಡ್ಸ್‌ಮನ್‌ಗಳು ಪತ್ತೆ ಹಚ್ಚಿ 2.34 ಲಕ್ಷ ದಂಡ ವಿಧಿಸಿದ್ದಾರೆ. ನರೇಗಾದಡಿ ನಿರ್ವಹಿಸುವ ಸಮುದಾಯ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುತ್ತಿಲ್ಲ ಎಂದು ಸಾರ್ವಜನಿಕರಿಂದ ಆಯಾ ಜಿಲ್ಲೆಗಳ ಓಂಬುಡ್ಸ್‌ ಮನ್‌ಗಳಿಗೆ ಸಲ್ಲಿಕೆಯಾದ ದೂರುಗಳನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ಎನ್ ಎಂಎಂಎಸ್ (ನ್ಯಾಷನಲ್ ಮೊಬೈಲ್ ಮಾನಿಟ ರಿಂಗ್ ಸಿಸ್ಟಂ) …

Read More »

ಕೆಪಿಎಸ್‌ಸಿ ಮರು ಪರೀಕ್ಷೆಯಲ್ಲಿ ಯಡವಟ್ಟು: ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಡಿಸೆಂಬರ್ 29ರಂದು ನಡೆದ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ ಮಾಡಿದ್ದ ಕೆಪಿಎಸ್‌ಸಿ ಕನ್ನಡ ಭಾಷೆಯಲ್ಲಿರುವ ಯಾವುದೇ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಗೊಂದಲವಾದಲ್ಲಿ …

Read More »

ಹಳೇ ಪಿಂಚಣಿ ಯೋಜನೆ 2025 ರಲ್ಲಿಯೇ ಮರು ಜಾರಿ

ಬೆಂಗಳೂರು: ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ವರದಿ ಜಾರಿ ಬಳಿಕ ಕರ್ನಾಟಕದ ಸರ್ಕಾರಿ ನೌಕರರ ಮತ್ತೊಂದು ಪ್ರಮುಖ ಬೇಡಿಕೆ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿ. ಸದ್ಯ ಇರುವ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಎಂದು ಸರ್ಕಾರಿ ನೌಕರರು ಬೇಡಿಕೆ ಇಡುತ್ತಲೇ ಇದ್ದಾರೆ. ಸರ್ಕಾರ ಈ ಕುರಿತು ವರದಿ ನೀಡಲು ಸಮಿತಿಯೊಂದನ್ನು ರಚನೆ ಮಾಡಿದೆ. 2025ರಲ್ಲಿ ನೌಕರರ ಈ ಬೇಡಿಕೆ ಈಡೇರುವ ವಿಶ್ವಾಸವಿದೆ. …

Read More »
Featured Video Play Icon

ಹುಬ್ಬಳ್ಳಿಯ ರೌಡಿಗಳಿಗೆ ಕಮಿಷನರ್ ಎನ್. ಶಶಿಕುಮಾರ್ ಖಡಕ್‌ ವಾರ್ನಿಂಗ್‌…!

ಹುಬ್ಬಳ್ಳಿ : ಅವಳಿ ನಗರದಲ್ಲಿ ಹಳಿ ತಪ್ಪಿದ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಸಾಲು ಸಾಲು ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇನ್ನು ಈ ಸಂಬಂಧ ಹುಬ್ಬಳ್ಳಿ – ಧಾರವಾಡ ಪೊಲೀಸ್‌ ಕಮಿಷನರ್‌ ಎನ್‌ ಶಶಿಕುಮಾರ್‌ ಪುಡಿ ರೌಡಿಗಳಿಗೆ ಖಡಕ್‌ ವಾರ್ನಿಂಗ್‌ ನೀಡಿ, ತರಾಟೆಗೆ ತೆಗೆದುಕೊಂಡರು.

Read More »