Breaking News

Breaking News

ನರೇಗಾ ಹಾಜರಾತಿಯಲ್ಲಿ ಭಾರೀ ಗೋಲ್ ಮಾಲ್: ಕಲಬುರಗಿಯಲ್ಲಿ ಅತಿ ಹೆಚ್ಚು ಅಕ್ರಮ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯಡಿ ರಾಜ್ಯದಲ್ಲಿ 2024ನೇ ಸಾಲಿನಲ್ಲಿ ಕೈಗೊಂಡಿದ್ದ 1,218 ಸಮುದಾಯ ಕಾಮಗಾರಿಯಲ್ಲಿ ಲೋಪದೋಷ ಇರುವುದನ್ನು ಜಿಲ್ಲಾ ಮಟ್ಟದ ಓಂಬುಡ್ಸ್‌ಮನ್‌ಗಳು ಪತ್ತೆ ಹಚ್ಚಿ 2.34 ಲಕ್ಷ ದಂಡ ವಿಧಿಸಿದ್ದಾರೆ. ನರೇಗಾದಡಿ ನಿರ್ವಹಿಸುವ ಸಮುದಾಯ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುತ್ತಿಲ್ಲ ಎಂದು ಸಾರ್ವಜನಿಕರಿಂದ ಆಯಾ ಜಿಲ್ಲೆಗಳ ಓಂಬುಡ್ಸ್‌ ಮನ್‌ಗಳಿಗೆ ಸಲ್ಲಿಕೆಯಾದ ದೂರುಗಳನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ಎನ್ ಎಂಎಂಎಸ್ (ನ್ಯಾಷನಲ್ ಮೊಬೈಲ್ ಮಾನಿಟ ರಿಂಗ್ ಸಿಸ್ಟಂ) …

Read More »

ಕೆಪಿಎಸ್‌ಸಿ ಮರು ಪರೀಕ್ಷೆಯಲ್ಲಿ ಯಡವಟ್ಟು: ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಡಿಸೆಂಬರ್ 29ರಂದು ನಡೆದ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ ಮಾಡಿದ್ದ ಕೆಪಿಎಸ್‌ಸಿ ಕನ್ನಡ ಭಾಷೆಯಲ್ಲಿರುವ ಯಾವುದೇ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಗೊಂದಲವಾದಲ್ಲಿ …

Read More »

ಹಳೇ ಪಿಂಚಣಿ ಯೋಜನೆ 2025 ರಲ್ಲಿಯೇ ಮರು ಜಾರಿ

ಬೆಂಗಳೂರು: ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ವರದಿ ಜಾರಿ ಬಳಿಕ ಕರ್ನಾಟಕದ ಸರ್ಕಾರಿ ನೌಕರರ ಮತ್ತೊಂದು ಪ್ರಮುಖ ಬೇಡಿಕೆ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿ. ಸದ್ಯ ಇರುವ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಎಂದು ಸರ್ಕಾರಿ ನೌಕರರು ಬೇಡಿಕೆ ಇಡುತ್ತಲೇ ಇದ್ದಾರೆ. ಸರ್ಕಾರ ಈ ಕುರಿತು ವರದಿ ನೀಡಲು ಸಮಿತಿಯೊಂದನ್ನು ರಚನೆ ಮಾಡಿದೆ. 2025ರಲ್ಲಿ ನೌಕರರ ಈ ಬೇಡಿಕೆ ಈಡೇರುವ ವಿಶ್ವಾಸವಿದೆ. …

Read More »
Featured Video Play Icon

ಹುಬ್ಬಳ್ಳಿಯ ರೌಡಿಗಳಿಗೆ ಕಮಿಷನರ್ ಎನ್. ಶಶಿಕುಮಾರ್ ಖಡಕ್‌ ವಾರ್ನಿಂಗ್‌…!

ಹುಬ್ಬಳ್ಳಿ : ಅವಳಿ ನಗರದಲ್ಲಿ ಹಳಿ ತಪ್ಪಿದ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಸಾಲು ಸಾಲು ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇನ್ನು ಈ ಸಂಬಂಧ ಹುಬ್ಬಳ್ಳಿ – ಧಾರವಾಡ ಪೊಲೀಸ್‌ ಕಮಿಷನರ್‌ ಎನ್‌ ಶಶಿಕುಮಾರ್‌ ಪುಡಿ ರೌಡಿಗಳಿಗೆ ಖಡಕ್‌ ವಾರ್ನಿಂಗ್‌ ನೀಡಿ, ತರಾಟೆಗೆ ತೆಗೆದುಕೊಂಡರು.

Read More »

ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಮೂಲಭೂತ ಅಭಿವೃದ್ದಿಗಾಗಿ 200 ಕೋಟಿ ರೂ. ಬಿಡುಗಡೆ: ಸಚಿವ ಪರಮೇಶ್ವರ್

ತುಮಕೂರು: ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ 200 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, …

Read More »
Featured Video Play Icon

ಕೊಲೆ ಪ್ರಕರಣವನ್ನು ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ಯಶಸ್ವಿಯಾದ ಬೆಂಡಿಗೇರಿ ಠಾಣೆಯ ಪೊಲೀಸರು

ಹುಬ್ಬಳ್ಳಿ ಖಡಕ್ ಖಾಕಿ ಕಾರ್ಯಾಚರಣೆ: ಕೊಲೆಗಡುಕರ ಹೆಡೆಮುರಿ.. ಕ್ರೌರ್ಯ ಮೆರೆದಿದ್ದವರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ ಕಹಾನಿ.. ಹುಬ್ಬಳ್ಳಿ: ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದ್ದ ಕೊಲೆ ಪ್ರಕರಣವನ್ನು ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಮಂಟೂರ ರಸ್ತೆಯ ನಿವಾಸಿ ಸ್ಯಾಮ್ಯುಯೆಲ್ ಮಬ್ಬು (38) ಎಂಬಾತನನ್ನು ನಗರದ ಹೊರವಲಯದ ರಿಂಗ್ ರೋಡ್ ಬಳಿಯಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆ …

Read More »

ಹಳ್ಳಿಯಿಂದ ದಿಲ್ಲಿವರೆಗೂ ನಂದಿನಿ ಕ್ಷೀರಧಾರೆ: ತಿಂಗಳಿಗೆ ₹75 ಕೋಟಿ ವಹಿವಾಟು

ಮಂಡ್ಯ: ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವ ‘ನಂದಿನಿ ಹಾಲು’ ಈಗ ರಾಜ್ಯದ ಆಚೆಗೂ ಕಾಲಿರಿಸಿದ್ದು, 6 ರಾಜ್ಯಗಳಲ್ಲಿ ತನ್ನ ಮಾರುಕಟ್ಟೆ ವಿಸ್ತರಿಸಿಕೊಂಡು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಹೌದು, ಈಗ ಹಳ್ಳಿಯಿಂದ ದಿಲ್ಲಿವರೆಗೂ ‘ನಂದಿನಿ’ ಕ್ಷೀರಧಾರೆ ಹರಿಯುತ್ತಿದೆ. ರಾಷ್ಟ್ರದ ರಾಜಧಾನಿ’ ದೆಹಲಿಗೆ ಮಂಡ್ಯದಿಂದ ನಂದಿನಿ ಹಾಲು ಪೂರೈಕೆಯಾದರೆ, ‘ವಾಣಿಜ್ಯ ರಾಜಧಾನಿ’ ಮುಂಬೈಗೆ ತುಮಕೂರಿನಿಂದ ಹಾಲು ಸಾಗಣೆಯಾಗುತ್ತಿದೆ. ಮುತ್ತುಗಳ ನಗರ’ ಹೈದರಾಬಾದ್‌ಗೆ ಹಾಸನದಿಂದ, ಚೆನ್ನೈ ಮತ್ತು ಕೇರಳಕ್ಕೆ ಮೈಸೂರಿನಿಂದ, ತಮಿಳುನಾಡಿನ ನೀಲಗಿರಿ ಮತ್ತು ಕೇರಳಕ್ಕೆ ಚಾಮರಾಜನಗರದಿಂದ, …

Read More »

ಸಿಲಿಂಡ‌ರ್ ಸ್ಪೋಟದಿಂದ ಗಾಯಗೊಂಡಿದ್ದ ಮತ್ತೊಬ್ಬ ಮಾಲಾಧಾರಿ ಸಾವು: ಮೃತರ ಸಂಖ್ಯೆ 6ಕ್ಕೆ ಏರಿಕೆ

ಹುಬ್ಬಳ್ಳಿ: ಸಿಲಿಂಡ‌ರ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಂದು 22 ವರ್ಷದ ಮಂಜುನಾಥ ಎಂಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಣಕಲ್‌ನಲ್ಲಿ ಕಳೆದ ರವಿವಾರ ನಡುರಾತ್ರಿ ಸಿಲಿಂಡರ್‌ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಈಗಾಗಲೇ 5 ಜನ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಬೆಳ್ಳಿಗ್ಗೆ 10.15ಕ್ಕೆ ಮಂಜುನಾಥ ವಾಗಮೋಡೆ ಎಂಬ …

Read More »

ಗ್ಯಾಸ್ ಸಿಲಿಂಡ‌ರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಮೃತರ ಸಂಖ್ಯೆ 5ಕ್ಕೆ ಏರಿಕೆ

ಹುಬ್ಬಳ್ಳಿ: ಗ್ಯಾಸ್ ಸಿಲಿಂಡ‌ರ್ ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಶನಿವಾರ ರಾತ್ರಿ ಶಂಕರ್ (30) ವರ್ಷದ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಣಕಲ್‌ನಲ್ಲಿ ರವಿವಾರ ಮಧ್ಯರಾತ್ರಿ ಗ್ಯಾಸ್ ಸಿಲಿಂಡರ್‌ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ 4 ಜನ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದೆರಡು ದಿನದಲ್ಲಿ ಮೃತಪಟ್ಟಿದ್ದರು. ಶನಿವಾರ ತಡರಾತ್ರಿ ಶಂಕರ …

Read More »

ಹುಬ್ಬಳ್ಳಿಯ ಹಳೆ ಸಿಎಆರ್ ಮೈದಾನದಲ್ಲಿ ಮಾದಕ ವಸ್ತು ಪೆಡ್ಲರ್ಸ್ ಪರೇಡ್..

ಹುಬ್ಬಳ್ಳಿ: ದುಷ್ಕರ್ಮಿಗಳ ವಿರುದ್ಧದ ನಿರಂತರ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಳೆದ 10 ವರ್ಷಗಳಲ್ಲಿ ದಾಖಲಾದ ಮಾದಕ ದ್ರವ್ಯ ಮತ್ತು ಮಾನಸಿಕ ಮಾದಕ (ಎನ್‌ಡಿಪಿಎಸ್) ಪ್ರಕರಣಗಳ ಆರೋಪಿಗಳ ಒಟ್ಟು 200 ಕ್ಕೂ ಹೆಚ್ಚು ವ್ಯಕ್ತಿಗಳ ಪರೇಡ್ ಅನ್ನು ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃದಲ್ಲಿ ನಡೆಸಿದರು. ಎಲ್ಲಾ ಆರೋಪಿಗಳನ್ನು ನಗರದ ಕಾರವಾರ ರಸ್ತೆಯಲ್ಲಿರುವ ಸಿಎಆರ್ ಮೈದಾನಕ್ಕೆ ಕರೆಸಿ ಪೆಡ್ಲರ್ಸ್ ಗಳಿಗೆ ಕಮಿಷನರ್ ಖಡಕ್ ವಾರ್ನಿಂಗ್ ನೀಡಿದರು …

Read More »